- ಅ.21ರ ವರೆಗೆ ಆನ್ ಲೈನ್ ನಲ್ಲಿ ದಾಖಲಿಸಲು ಅವಕಾಶ
NAMMUR EXPRESS NEWS
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಅ.21ರ ವರೆಗೆ ಆನ್ಲೈನ್ನಲ್ಲಿ ಹೆಸರು ದಾಖಲಿಸಲು ಅವಕಾಶ ಮಾಡಿಕೊಡಲಾಗಿದ್ದು, 2023ರ ಮಾರ್ಚ್/ಏಪ್ರಿಲ್ನಲ್ಲಿ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆ ನಡೆಯಲಿದೆ.
ಅಭ್ಯರ್ಥಿಗಳ ನೋಂದಣಿ ಮಾಹಿತಿಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ನಲ್ಲಿ ಪಡೆಯಬೇಕು.
ರಾಜ್ಯದ ಎಲ್ಲ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ತಮ್ಮಶಾಲೆಯಲ್ಲಿ ಮಾರ್ಚ್-2023ರ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳ ವಿವರಗಳನ್ನು ಆನ್ಲೈನ್ ಮೂಲಕ ಅ.21ರೊಳಗೆ ಅಪ್ಲೋಡ್ ಮಾಡಬಹುದು ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕ ಎಚ್. ಎನ್.ಗೋಪಾಲಕೃಷ್ಣ ತಿಳಿಸಿದ್ದಾರೆ.