- ತುಂಗಾ ಕಾಲುವೆಯಲ್ಲಿ ಕಾರಲ್ಲಿತ್ತು ಶವ
- ಕೊಲೆಯೋ…ಆತ್ಮಹತ್ಯೆಯೋ… ಅನುಮಾನ
NAMMUR EXPRESS NEWS
ದಾವಣಗೆರೆ: ಕಳೆದ ಐದು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಶವ ಪತ್ತೆಯಾಗಿದೆ.
ದಾವಣಗೆರೆಯ ಕಡದಕಟ್ಟೆ ಬಳಿ ತುಂಗಾ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಮೊದಲಿಗೆ ಕಡದಕಟ್ಟೆಯ ತುಂಗಾ ಕಾಲುವೆ ಬಳಿ ಕಾರು ಸಂಚರಿಸಿರುವ ಕುರುಹುಗಳು ಪತ್ತೆಯಾಗಿದ್ದವು,. ಇದನ್ನು ಪೊಲೀಸರು ಪರಿಶೀಲನೆ ಮಾಡಿದ ಬಳಿಕ ಕಾರು ಸಹ ತುಂಗ ಕಾಲುವೆಯಲ್ಲಿ ಪತ್ತೆಯಾಗಿದೆ. ಅಲ್ಲದೇ ಕಾರಿನಲ್ಲಿ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಮೃತದೇಹ ಸಿಕ್ಕಿದೆ.
ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ರೇಣುಕಾಚಾರ್ಯರ ಸಹೋದರನ ಮಗ ಚಂದ್ರು
ಗೌರಿಗದ್ದೆ ಆಶ್ರಮಕ್ಕೆ ಹೋಗಿ ಬರುತ್ತೇನೆ ಎಂದು ಹೋಗಿದ್ದ ಚಂದ್ರು ಮತ್ತೆ ಕಂಡುಬಂದಿಲ್ಲ. ಹೀಗಾಗಿ ಈ ಸಂಬಂಧ ಹೊನ್ನಾಳಿ ಪೊಲೀಸರಿಗೆ ದೂರು ನೀಡಲಾಗಿತ್ತು. ಚಂದ್ರಶೇಖರ್ ಕಳೆದ ಭಾನುವಾರ ಗೌರಿಗದ್ದೆಗೆ ತಮ್ಮ ಕ್ರೇಟಾ ಕಾರಿನಲ್ಲಿ ಹೋಗಿದ್ದಾರೆ.
ಅವಧೂತ ವಿನಯ್ ಗುರೂಜಿಯವರ ಆಶೀರ್ವಾದ ಪಡೆದು ಬಂದಿದ್ದಾರೆ. ಇಲ್ಲಿಂದ ಹೊನ್ನಾಳಿಗೆ ಹೊರಟವರು ನಾಪತ್ತೆಯಾಗಿದ್ದರು. ರೇಣುಕಾಚಾರ್ಯ ಸಹೋದರ ಎಂ.ಪಿ ರಮೇಶ್ ರವರ ಪುತ್ರನಾಗಿದ್ದು, ರೇಣುಕಾಚಾರ್ಯರಿಗೆ ಅಚ್ಚುಮೆಚ್ಚಿನವನಾಗಿದ್ದ.
ಆತನನ್ನು ನೆನೆದು ಕಣ್ಣೀರು ಇಡುತ್ತಿರುವ ಎಂ.ಪಿ.ರೇಣುಕಾಚಾರ್ಯರ ಚುನಾವಣೆಯಲ್ಲಿ ಸೋತಾಗಲೂ ಇಷ್ಟು ನೋವು ಆಗಿರಲಿಲ್ಲ. ಆದರೆ ಮಗ ಕಾಣಿಸುತ್ತಿಲ್ಲ ಎಂಬ ಸುದ್ದಿ ಕೇಳಿದಾಗಿನಿಂದ ಆತಂಕ ಉಂಟಾಗುತ್ತಿದೆ ಎಂದು ಕಣ್ಣೀರು ಹಾಕಿದ್ದರು. ಇದೀಗ ಶವ ಪತ್ತೆಯಾಗಿದ್ದು ಕೊಲೆಯೋ ಆತ್ಮಹತ್ಯೆಯೋ ತಿಳಿದು ಬರಬೇಕಿದೆ.