Categories
ಬೆಂಗಳೂರು

ಗಣರಾಜ್ಯೋತ್ಸವ: ಭಾರತೀಯರ ಪಾಲಿಗೆ ಹೆಮ್ಮೆಯ ದಿನ..!

ಗಣರಾಜ್ಯೋತ್ಸವ: ಭಾರತೀಯರ ಪಾಲಿಗೆ ಹೆಮ್ಮೆಯ ದಿನ..!
– ಅತಿ ಎತ್ತರದಲ್ಲಿ ಹಾರಲಿದೆ ತ್ರಿವರ್ಣ ಧ್ವಜ

NAMMUR EXPRESS NEWS
ಬೆಂಗಳೂರು: ವಿಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಚಂದ್ರಾಲೇಔಟ್‌ನಲ್ಲಿರುವ ನಗರದ ಅತಿ ಎತ್ತರದ ಧ್ವಜಸ್ತಂಭದಲ್ಲಿ ಜ.26ರಂದು ತ್ರಿವರ್ಣ ಧ್ವಜ ಹಾರಲಿದೆ. ಅಂದು ಬೆಳಿಗ್ಗೆ 8ಕ್ಕೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಅವರು ರಾಷ್ಟ್ರಧ್ವಜ ಸ್ತಂಭವನ್ನು ಲೋಕಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಲಿದ್ದಾರೆ. ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಅಧ್ಯಕ್ಷತೆವಹಿಸಲಿದ್ದಾರೆ.

ಗೋವಿಂದರಾಜನಗರ ಶಾಸಕ ಪ್ರಿಯ ಕೃಷ್ಣ ಪಾಲ್ಗೊಳ್ಳಲಿದ್ದಾರೆ. ಆರಂಭದಲ್ಲಿ ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ವಾದ್ಯಗೋಷ್ಠಿ ಸಹಿತವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಲಿದೆ. ಬೆಳಿಗ್ಗೆ 10ರಿಂದ ನಾಡಪ್ರಭು ವಾಣಿಜ್ಯ ಸಂಕೀರ್ಣ ಆವರಣದಲ್ಲಿ ರಕ್ತದಾನ ಶಿಬಿರ ಹಾಗೂ ಕ್ಯಾನ್ಸ‌ರ್ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಸಂಜೆ 6.30ಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರ ನೇತೃತ್ವದಲ್ಲಿ ಗಾಯಕಿ ಶಮಿತಾ ಮಲ್ನಾಡ್ ತಂಡ ರಾಷ್ಟ್ರ ನಮನ ಸಂಗೀತ ಸಂಜೆ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಇದೇ ಸಂದರ್ಭದಲ್ಲಿ ಲೇಸರ್ ಶೋ ಪ್ರದರ್ಶನವನ್ನು ಆಯೋಜಿಸಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.