-ತಡರಾತ್ರಿ ನಾಲ್ವರು ಕಿಡಿಗೇಡಿಗಳಿಂದ ಕೃತ್ಯ
-3 ನಿಮಿಷಗಳಲ್ಲಿ ಬೆಂಕಿ ಹಚ್ಚಿ ಪರಾರಿ!
-ಗೃಹಸಚಿವ ಜ್ಞಾನೇಂದ್ರ ಬೇಟಿ, ಪರಿಶೀಲನೆ
NAMMUR EXPRESS
ಬೆಂಗಳೂರು:ಬೆಂಗಳೂರಿನ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ನಿವಾಸದ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಬೊಮ್ಮನಹಳ್ಳಿಯ ನಿವಾಸದಲ್ಲಿ ತಡರಾತ್ರಿ 1.25 ರ ಸುಮಾರಿಗೆ ಘಟನೆ ನಡೆದಿದ್ದು, ಫಾರ್ಚೂನರ್ ಕಾರು ಹಾಗೂ ಮಹೀಂದ್ರಾ ಥಾರ್ ಜೀಪ್ ಬೆಂಕಿಗಾಹುತಿಯಾಗಿವೆ. ನಾಲ್ವರು ದುಷ್ಕರ್ಮಿಗಳು ಪೆಟ್ರೋಲ್ ಕ್ಯಾನ್ ತಂದು ಕಾರುಗಳಿಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ. ಬೆಂಕಿ ಹಚ್ಚಿರುವುದು ಯಾರು ಎಂಬುದು ತನಿಖೆಯಿಂದ ಗೊತ್ತಾಗಬೇಕಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಶಿ ತಿಳಿಸಿದ್ದಾರೆ. ಇನ್ನು, ಘಟನೆಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಶಾಸಕ ಸತೀಶ್ ರೆಡ್ಡಿ, ರಾತ್ರಿ 1:25ಕ್ಕೆ ಬೈಕ್ನಲ್ಲಿ ಬಂದವರು ಕೇವಲ 3 ನಿಮಿಷದಲ್ಲಿ ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. 1:30ಕ್ಕೆ ಬ್ಯಾಟರಿ ಸ್ಫೋಟದ ಶಬ್ಧ ಕೇಳಿ ನಮಗೆ ಎಚ್ಚರವಾಗಿದೆ. ಹಿಂದಿನ ಗೇಟ್ನಿಂದ ಆರೋಪಿಗಳು ಪರಾರಿ ಆಗಿದ್ದಾರೆ. ಇದು ರಾಜಕೀಯ ದ್ವೇಷ ಅಲ್ಲ. ಹೀಗಾಗಿ ಇದನ್ನು ರಾಜಕೀಯ ದೃಷ್ಟಿಯಲ್ಲಿ ನೋಡುವುದಿಲ್ಲ ಎಂದು ಹೇಳಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ ಎಂದಿದ್ದಾರೆ.
ಸತೀಶ್ ರೆಡ್ಡಿ ಮನೆಗೆ ಗೃಹಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿ, ಶೀಘ್ರ ಆರೋಪಿಗಳ ಪತ್ತೆಗೆ ಕ್ರಮವಹಿಸುವುದಾಗಿ ಹೇಳಿದ್ದಾರೆ. ರಾಜ್ಯದ, ಮಲೆನಾಡಿನ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು.