ಸರ್ಕಾರಿ ಶಾಲಾ ಮಕ್ಕಳಿಗೂ ಸ್ಕೂಲ್ ಬಸ್!
* ಗ್ರಾಮೀಣ ಭಾಗಕ್ಕೆ ಸೂಕ್ತ ವ್ಯವಸ್ಥೆ ನೀಡಲು ಸಜ್ಜು
* ಮಕ್ಕಳನ್ನು ಶಾಲೆಗೆ ಕರೆತರುವ ಸರ್ಕಾರದ ಪ್ರಯತ್ನ
NAMMUR EXPRESS NEWS
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೂ ಸ್ಕೂಲ್ ಬಸ್ ನಲ್ಲಿ ಬರುವ ಯೋಗ ಸಿಗಲಿದೆ. ಇಂಥಹದ್ದೊಂದು ಯೋಜನೆ ಜಾರಿಗೆ ತರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಸರ್ಕಾರಿ ಶಾಲೆಗಳಿಂದ ಮಕ್ಕಳು ದೂರವುಳಿಯುತ್ತಿದ್ದಾರೆ.
ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿ ಸೂಕ್ತ ವ್ಯವಸ್ಥೆಯಿಲ್ಲದ ಕಾರಣ ಮಕ್ಕಳು ಶಾಲೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಮರಳಿ ಶಾಲೆಗೆ ಕರೆತರಲು ಶಿಕ್ಷಣ ಇಲಾಖೆ ಈಗ ಬಸ್ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ.
ಕರ್ನಾಟಕ ಪಬ್ಲಿಕ್ ಶಾಲೆಗೆ ಬರುವ ಮಕ್ಕಳಿಗೆ ಪಿಕ್ ಅಪ್ ಮತ್ತು ಡ್ರಾಪ್ ವ್ಯವಸ್ಥೆ ಮಾಡಲು ಬಸ್ ವ್ಯವಸ್ಥೆ ಮಾಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ವಿನೂತನ ಪ್ರಯೋಗವಾಗಿದ್ದು, ಮಕ್ಕಳಿಗೆ ಶಾಲೆಗೆ ಕರೆತರುವ ಪ್ರಯತ್ನವಾಗಿದೆ.
4 ರಿಂದ 5 ಕಿ.ಮೀ. ವ್ಯಾಪ್ತಿಯ ಮಕ್ಕಳಿಗೆ ಶಾಲೆಗೆ ಕರೆತರಲು ಈ ಬಸ್ ವ್ಯವಸ್ಥೆ ಮಾಡಲಾಗಿದೆ. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಬೆಂಗಳೂರಿನ ಶಾಲೆಗಳಲ್ಲಿ ಈ ಯೋಜನೆ ಜಾರಿಗೆ ತರಲಾಗಿದೆ.
ಬಳಿಕ ಹಂತ ಹಂತವಾಗಿ ಬೇರೆ ಬೇರೆ ಿ್ಲೆಗಳಿಗೂ ಈ ಯೋಜನೆ ವಿ್ತರಿಲು ಚಿಂತನೆ ನಡೆಸಲಾಗಿದೆ.