Categories
ಬೆಂಗಳೂರು

ಆರ್‌ಸಿಬಿ ಸಂಭ್ರಮೋತ್ಸವದ ವೇಳೆ ಕಾಲ್ತುಳಿತ, ಏಳು ಮೃತ

ಆರ್‌ಸಿಬಿ ಸಂಭ್ರಮೋತ್ಸವದ ವೇಳೆ ಕಾಲ್ತುಳಿತ, ಏಳು ಮೃತ

* ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಘಟನೆ
* ಲಕ್ಷಾಂತರ ಅಭಿಮಾನಿಗಳ ಸಾಗರ,ಏಳು ಜನರ ದುರ್ಮರಣ 20 ಕ್ಕೂ ಹೆಚ್ಚು ಜನರಿಗೆ ಗಾಯ

NAMMMUR EXPRESS NEWS
ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ನಡೆಯಲಿದೆ. ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ ನಾಲ್ವರು ಆರ್‌ಸಿಬಿ ಅಭಿಮಾನಿ ಮೃತಪಟ್ಟಿದ್ದಾರೆ.​
ಕಾಲ್ತುಳಿತದಲ್ಲಿ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ ಮಹಿಳೆ ಸೇರಿ ಆರು ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ. ಬೌರಿಂಗ್​ ಆಸ್ಪತ್ರೆ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್​ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಗೇಟ್ ನಂಬರ್ 12ರಲ್ಲಿ ಮಹಿಳಾ ಅಭಿಮಾನಿಯೊಬ್ಬರು ಕುಸಿದುಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇದೇ ವೇಳೆ ಬ್ಯಾರಿಕೇಡ್​ ಬಿದ್ದು ಮೂವರ ಕಾಲು ಮುರಿದಿದೆ. ಆರಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.