ಬಿಎಸ್ವೈ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣ.!
– ಸಿಐಡಿ ತನಿಖೆಗೆ ವರ್ಗಾಯಿಸಿದ ಸರ್ಕಾರ
NAMMUR EXPRESS NEWS
ಬೆಂಗಳೂರು: ಹಿರಿಯ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕೋ ಕಾಯ್ದೆಯಡಿ ದಾಖಲಾಗಿರುವ ಎಫ್ ಐಆರ್ ಗೆ ಸಂಬಂಧಿಸಿದಂತೆ ತನಿಖೆಯ ಹೊಣೆಯನ್ನು ಅಪರಾಧ ತನಿಖಾ ಇಲಾಖೆಗೆ ವರ್ಗಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಬಗ್ಗೆ ಶುಕ್ರವಾರ ಸಂಜೆ ವೇಳೆ ಆದೇಶ ಹೊರಡಿಸುವ ಸಾಧ್ಯತೆ ದಟ್ಟವಾಗಿದೆ. ಅಪ್ರಾಪ್ತಯ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರದ ಬಗ್ಗೆ ಸಹಾಯಯಾಚಿಸಲು ತೆರಳಿದ್ದಾಗ ಘಟನೆ ನಡೆದಿದೆ.
9 ನಿಮಿಷಗಳ ಕಾಲ ಮೊದಲು ಮಾತನಾಡಿದ್ದ ಮಾಜಿ ಸಿಎಂ ಯಡಿಯೂರಪ್ಪ, ಅನಂತರ ಅಪ್ರಪ್ತೆಯನ್ನು ರೂಂ ಒಳಗೆ ಕರೆದು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಅಪ್ರಪ್ತೆಯ ಖಾಸಗಿ ಭಾಗ ಮುಟ್ಟಿರುವ ಬಗ್ಗೆ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ರೂಂನಿಂದ ಹೊರ ಬಂದು ಯಡಿಯೂರಪ್ಪ ಅವರು ಕ್ಷಮೆಯಾಚಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಈ ವಿಚಾರವನ್ನ ಯಾರಿಗೂ ಹೇಳಬಾರದೆಂದು ಹೆದರಿಸಿ ನಮ್ಮನ್ನ ತಡೆದಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ಬಳಿಕ ಅವರನ್ನ ಕಮಿಷನರ್ ಬಳಿ ಕಳಿಸಿಕೊಟ್ಟೆ. ಪ್ರಕರಣ ರಾಜಕೀಯ ಪ್ರೇರಿತ ಅಲ್ಲ. ಇದನ್ನು ಕಾನೂನು ರೀತಿಯಲ್ಲಿ ಎದುರಿಸುತ್ತೇನೆ ಎಂದೂ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದರು.