ರಾಜ್ಯ ಬಜೆಟ್ ನಲ್ಲಿ ಮದ್ಯಪ್ರಿಯರಿಗೆ ಶಾಕ್..!
– ಯುದ್ಧದ ಎಫೆಕ್ಟ್, ಸಿಲಿಂಡರ್ ದರದಲ್ಲಿ ಭಾರೀ ಏರಿಕೆ
– ದಿನ ಬಳಕೆಯ ಗ್ಯಾಸ್ ಸಿಲಿಂಡರ್ 60, ವಾಣಿಜ್ಯ ಸಿಲಿಂಡರ್ 115 ರೂ ಏರಿಕೆ
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ ಶುಕ್ರವಾರದಂದು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಮಂಡಿಸಿದ್ದು, ಈ ಸಂದರ್ಭದಲ್ಲಿ ಮದ್ಯದ ಮೇಲೆ ಹೊಸ ರೂಪದ ತೆರಿಗೆಯನ್ನು ವಿಧಿಸಿದ್ದಾರೆ. ಪಾನೀಯಗಳಲ್ಲಿರುವ ಮದ್ಯದ ಅಂಶವನ್ನು ಆಧಾರವಾಗಿಟ್ಟಕೊಂಡು ಏಪ್ರಿಲ್ 2026ರಿಂದ ಅಬಕಾರಿ ಸುಂಕ ವ್ಯವಸ್ಥೆಯನ್ನು ಜಾರಿಗೆ ತರುವ ಘೋಷಣೆಯನ್ನು ಮಾಡಿದ್ದಾರೆ.
ಇದರೊಂದಿಗೆ ಮದ್ಯಪಾನದ ದುಷ್ಪರಿಣಾಮಗಳು, ಇದರಿಂದ ಸಮಾಜಕ್ಕೆ ಸಂಭವಿಸಬಹುದಾದ ಹಾನಿ ಮತ್ತೆ ಜಾಗತಿಕ ಮಟ್ಟದಲ್ಲಿ ಮದ್ಯದ ಅಂಶವನ್ನು ಆಧರಿಸಿ ತೆರಿಗೆ ಪದ್ಧತಿಯಲ್ಲಿ ಬದಲಾವಣೆಯನ್ನು ತರಲಾಗಿದೆ. ಅಲ್ಲದೆ ಈ ತೆರಿಗೆ ಪದ್ಧತಿಯು ಗೋಲ್ಡ್ ಸ್ಟ್ಯಾಂಡರ್ಡ್ ಕೂಡ ಆಗಿದೆ. ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಏರಿಕೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಬೆಂಗಳೂರಿನ ನಿಮ್ಹಾನ್ಸ್ ಹಾಗೂ ಧಾರವಾಡದ ನಿಮ್ಹಾನ್ಸ್ ಸಂಸ್ಥೆಗಳಲ್ಲಿ ಮಾದಕ ವ್ಯಾಸನಿಗಳ ಪುನರ್ವಸತಿ ಕೇಂದ್ರಗಳನ್ನು ಹಾಗೂ ಮುಖ್ಯವಾಗಿ ಮಾದಕ ವ್ಯಸನಕ್ಕೆ ಒಳಗಾಗಿರುವ 18 ವರ್ಷದೊಳಗಿನ ಮಕ್ಕಳಿಗಾಗಿ ಪ್ರಾಯೋಗಿಕವಾಗಿ ಈ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ಘೋಷಿಸಿದ್ದಾರೆ. ಮದ್ಯದ ಮೇಲಿನ ತೆರಿಗೆಯಿಂದಾಗಿ ಮದ್ಯಪ್ರಿಯರಿಗೆ ಬೇಸರವುಂಟಾಗಿದೆ ಎನ್ನುವ ಸಂಗತಿ ತಿಳಿದುಬಂದಿದೆ.
ಯುದ್ಧದ ಎಫೆಕ್ಟ್, ಸಿಲಿಂಡರ್ ದರದಲ್ಲಿ ಭಾರೀ ಏರಿಕೆ!
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಅಮೆರಿಕಾ ಮತ್ತು ಇರಾನ್ ದೇಶಗಳ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಪರಿಣಾಮ ಇಡಿ ಪ್ರಪಂಚದ ಮೇಲಾಗುತ್ತಿದೆ. ಭಾರತಕ್ಕೆ ಶೇ 50 ಕ್ಕಿಂತಲೂ ಅಧಿಕ ತೈಲ ಸಾಗಾಟವಾಗುತ್ತಿದ್ದ ಹಾರ್ಮೊಸ್ ಜಲಸಂಧಿಯನ್ನು ಇರಾನ್ ಮುಚ್ಚಿರುವ ಪರಿಣಾಮ ಭಾರತದ ತೈಲ ಮಾರುಕಟ್ಟೆ ಮೇಲೆ ಭಾರೀ ಪರಿಣಾಮ ಬೀರಿದೆ.
ಯುದ್ಧದ ಪರಿಣಾಮ ಭಾರತದ ತೈಲ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಬಿಸಿತಟ್ಟಿದ್ದು, ದಿನ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 60 ರೂಪಾಯಿಯಷ್ಟು ಏರಿಕೆಯಾಗಿದೆ. ಅಲ್ಲದೆ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲೂ ಭಾರೀ ಏರಿಕೆಯಾಗಿದ್ದು 115 ರೂ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಪೆಟ್ರೋಲ್ ಡೀಸೆಲ್ ದರದಲ್ಲೂ ಏರಿಕೆಯಾಗುವ ಸಾಧ್ಯತೆ ಇದ್ದು, ಇದರಿಂದ ಅಗತ್ಯ ವಸ್ತುಗಳ ಬೆಲೆಯಲ್ಲೂ ಏರಿಕೆ ಆಗುವ ಸಾಧ್ಯತೆ ಇದೆ.
