- ಬೇಜವಾಬ್ದಾರಿ ನೌಕರರ ವಿರುದ್ಧ ಶಿಸ್ತು ಕ್ರಮ
- ಬೆಳಗ್ಗೆ 10 ಗಂಟೆ ಕಡ್ಡಾಯ: ಹೊರಗೆ ಹೋಗಬೇಕಾದ್ರೆ ಪರ್ಮಿಷನ್ ತಗೋಬೇಕು!
NAMMUR EXPRESS NEWS
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗದಿದ್ದರೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಎಚ್ಚರಿಸಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಕಡ್ಡಾಯವಾಗಿ ಕಚೇರಿಗೆ ಆಗಮಿಸಬೇಕು’ ಎಂದು ಅವರು ಹೊರಡಿಸಿರುವ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ‘ನೌಕರರು ಕಚೇರಿ ವೇಳೆ ಪೂರ್ಣಗೊಳ್ಳುವವರೆಗೂ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸಬೇಕು. ಅನ್ಯ ಕರ್ತವ್ಯದ ಮೇಲೆ ಹೊರಗೆ ತೆರಳಬೇಕಾದಲ್ಲಿ ಚಲನ-ವಲನ ವಹಿಯಲ್ಲಿ ನಮೂದಿಸಿ ಮೇಲಾಧಿಕಾರಿಗಳ ಪೂರ್ವಾನುಮತಿ ಪಡೆಯಬೇಕು. ಇಲ್ಲದಿದ್ದಲ್ಲಿ ಸಂಬಂಧಿಸಿದ ಸಕ್ಷಮ ಪ್ರಾಧಿಕಾರ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಲಾಗಿದೆ.
ಸರ್ಕಾರದ ಈ ನಿಯಮ ಜನರಲ್ಲಿ ನಿಟ್ಟುಸಿರು ಬಿಡುವಂತೆ ಮಾಡಿದೆ. ಸರ್ಕಾರಿ ಕಚೇರಿಗಳಲ್ಲಿ ಮೇಲಿನ ಅಧಿಕಾರಿಗಳಿಂದ ಹಿಡಿದು ಸಣ್ಣ ನೌಕರ ಕೂಡ ಕಚೇರಿ ಸಮಯದಲ್ಲಿ ಸರಿಯಾಗಿ ಇರುವುದಿಲ್ಲ. ಇದರಿಂದಜನತೆಗೆ ಭಾರೀ ತೊಂದರೆ ಆಗುತ್ತಿತ್ತು. ಈಗ ಸರ್ಕಾರ ಇತ್ತ ಗಮನ ಹರಿಸಿದ್ದು ಸಂತಸ ತಂದಿದೆ.