ಎಲ್ಲಾ ದೇವಾಲಯಗಳಲ್ಲಿ ವಿಶೇಷ ‘ಗೋವಿನ ಪೂಜೆ’
– ನ.14ರಂದು ಸಂಜೆ ಪೂಜೆ:ರಾಜ್ಯ ಸರ್ಕಾರ ಆದೇಶ
– ದೇವಾಲಯದಲ್ಲಿ ಜನವೋ ಜನ…!
– ಕುಕ್ಕೆಯಲ್ಲಿ ವಿಶೇಷ ಪೂಜೆಗೆ ಸಿದ್ಧತೆ
NAMMUR EXPRESS NEWS
ಬೆಂಗಳೂರು: ನವೆಂಬರ್ 14ರ ಮಂಗಳವಾರ ಎಲ್ಲಾ ದೇವಾಲಯಗಳಲ್ಲಿ ಸಂಜೆ ವಿಶೇಷವಾಗಿ ಗೋವಿನ ಪೂಜೆ ಮಾಡುವುದಕ್ಕೆ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಇದೇ ವೇಳೆ ಬಲಿಪಾಡ್ಯಮಿಯಂದು ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಪೂಜಿಸುವ ಸಲುವಾಗಿ ಆ ದಿನ ಗೋವುಗಳಿಗೆ ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತರಬೇಕು. ನಂತರ ಗೋವುಗಳನ್ನು ಅರಿಶಿಣ, ಕುಂಕುಮ ಹಚ್ಚಿ ಹೂವುಗಳಿಂದ ಅಲಂಕರಿಸಬೇಕು. ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗೋಗ್ರಾಸವನ್ನು ಅವುಗಳಿಗೆ ನೀಡಬೇಕು. ಸಂಜೆ 5.30 ರಿಂದ 6.30 ರವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ನೆರವೇರಿಸಬೇಕು ಎಂದು ಮುಜರಾಯಿ ಇಲಾಖೆ ದೇವಾಲಯಗಳ ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ.
ಕುಕ್ಕೆ ಸುಬ್ರಮಣ್ಯದಲ್ಲಿ ವಿಶೇಷ ಗೋ ಪೂಜೆ
ನಾಗಾರಾಧನೆಯ ಪ್ರಸಿದ್ಧ ಪುಣ್ಯ ತಾಣ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ರಾಜ್ಯ ಸರಕಾರದ ಆದೇಶದ ಮೇರೆಗೆ ಗೋಪೂಜೆಯನ್ನು ನ.14ರಂದು ಮಂಗಳವಾರ ನೆರವೇರಲಿದೆ.ಶ್ರೀ ದೇವಳದ ಮುಂಭಾಗದಲ್ಲಿ ಸಂಜೆ 5.30ರಿಂದ 6.30ರ ನಡುವಿನ ಗೋಧೂಳಿ ಲಗ್ನದಲ್ಲಿ ಗೋಪೂಜೆ ನಡೆಯಲಿದೆ.ಈ ಕಾರ್ಯಕ್ರಮಕ್ಕೆ ಸರ್ವ ಭಕ್ತರು ಆಗಮಿಸಿ ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಬೇಕಾಗಿ ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.
ದೇವಾಲಯದಲ್ಲಿ ಜನವೋ ಜನ…!
ದೀಪಾವಳಿ ಹಿನ್ನೆಲೆ ದೇವಾಲಯಗಳಲ್ಲಿ ಜನರು ಸಾಲು ನಿಂತು ದೇವರ ದರ್ಶನ ಪಡೆಯುವ ಮೂಲಕ ಹಬ್ಬದಲ್ಲಿ ದೇವರಲ್ಲಿ ವಿಶೇಷ ಪ್ರಾರ್ಥನೆ ಮಾಡುತ್ತಿದ್ದಾರೆ.