Categories
ಬೆಂಗಳೂರು

ಎಸ್ಸೆಸ್ಸೆಲ್ಸಿ ಫಲಿತಾಂಶ: ಶೇಕಡಾ 99.9% ರಿಸೆಲ್ಟ್, ಓರ್ವ ಫೇಲ್!

  • 150 ವಿದ್ಯಾರ್ಥಿಗಳಿಗೆ 625 ಕ್ಕೆ 625
  • ಬೇರೆಯವರಿಂದ ಪರೀಕ್ಷೆ ಬರೆಸಿದ್ದವ ಫೇಲ್!
  • ಪರೀಕ್ಷೆ ಬರೆದ ಎಲ್ಲರೂ ಉತ್ತೀರ್ಣ

NAMMUR EXPRESS
ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದರು. ಒಟ್ಟು 157 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. 289 ವಿದ್ಯಾರ್ಥಿಗಳು 623 ಅಂಕ, ಇಬ್ಬರು 622 ಅಂಕ, 449 ವಿದ್ಯಾರ್ಥಿಗಳು 621, 28 ವಿದ್ಯಾರ್ಥಿಗಳು 620 ಅಂಕ ಪಡೆದಿದ್ದಾರೆ. 
ಜುಲೈ 19 ಮತ್ತು 22ರಂದು ನಡೆದಿದ್ದ ಎಸ್ ಎಸ್ಎಲ್ ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಂದು ವಿದ್ಯಾರ್ಥಿ ಹೊರತುಪಡಿಸಿ  ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ. ಆತ ತನ್ನ ಬದಲು ಬೇರೆಯವರಿಂದ ಪರೀಕ್ಷೆ ಬರೆಸಿದ್ದ. ಹೀಗಾಗಿ ಆತನನ್ನು ಅನುತ್ತೀರ್ಣ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. ಕೋವಿಡ್ ಕಾರಣದಿಂದ ಈ ಬಾರಿ ವಿಶಿಷ್ಟ ರೀತಿಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಮೂರು ವಿಷಯಗಳನ್ನೊಳಗೊಂಡ ಒಂದು ಪತ್ರಿಕೆಯಂತೆ ಒಟ್ಟು ಎರಡು ದಿನ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ ಬರೆದಿರುವ ಎಲ್ಲರನ್ನೂ ಉತ್ತೀರ್ಣಗೊಳಿಸುವುದಾಗಿ ಸರ್ಕಾರ ಘೋಷಣೆ ಮಾಡಿತ್ತು. ಅಂಕ ಆಧಾರಿತ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿ ಒಟ್ಟು 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಎಸ್​ಎಸ್‌ಎಲ್​ಸಿ ಫಲಿತಾಂಶವು ಇಡೀ ರಾಜ್ಯದಲ್ಲಿ ಒಂದೇ ಪ್ರಮಾಣದಲ್ಲಿದೆ. ಬಹುತೇಕ ಎಲ್ಲಾ ಜಿಲ್ಲೆಗಳ ಫಲಿತಾಂಶವೂ ಸಮಾನವಾಗಿದೆ! ಆದರೂ ಬಳ್ಳಾರಿಗೆ ಕೊನೆಯ ಸ್ಥಾನ ಪ್ರಾಪ್ತಿಯಾಗಿದೆ. ಬೆಂಗಳೂರು ಉತ್ತರ ಪ್ರಥಮ ಸ್ಥಾನ, ಬೆಂಗಳೂರು ದಕ್ಷಿಣ ದ್ವಿತೀಯ ಹಾಗೂ ರಾಮನಗರಕ್ಕೆ ತೃತೀಯ ಸ್ಥಾನ ಲಭಿಸಿದೆ. 91-100 ಮಾರ್ಕ್ಸ್ = A+ ಗ್ರೇಡ್, 81-90 ಮಾರ್ಕ್ಸ್ = A ಗ್ರೇಡ್, 71-80 ಮಾರ್ಕ್ಸ್ = B+ ಗ್ರೇಡ್, 61-60 ಮಾರ್ಕ್ಸ್ = B ಗ್ರೇಡ್, 51-60 ಮಾರ್ಕ್ಸ್= C+ ಗ್ರೇಡ್, 35-50 ಮಾರ್ಕ್ಸ್ = C ಗ್ರೇಡ್ ನಂತೆ ಫಲಿತಾಂಶ ನೀಡಲಾಗಿದೆ. 626ಕ್ಕೆ 625 ಅಂಕವನ್ನು 157 ವಿದ್ಯಾರ್ಥಿಗಳು ಪಡೆದಿದ್ದಾರೆ. 625ಕ್ಕೆ 623 ಅಂಕವನ್ನು 289 ವಿದ್ಯಾರ್ಥಿಗಳು ಪಡೆದಿದ್ದಾರೆ. ಶೇ.9 ರಷ್ಟು ಮಕ್ಕಳನ್ನು ಗ್ರೇಸ್ ಮಾರ್ಕ್ ನೀಡಿ ಪಾಸ್ ಮಾಡಲಾಗಿದೆ. 13 ವಿದ್ಯಾರ್ಥಿಗಳಿಗೆ ಗರಿಷ್ಠ 28 ಗ್ರೇಸ್ ಮಾರ್ಕ್ ನೀಡಲಾಗಿದೆ. ರಾಜ್ಯದ, ಮಲೆನಾಡಿನ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.