ಫೆ.16 ರಂದು ರಾಜ್ಯ ಬಜೆಟ್..!
– 15ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಲಿದ್ದಾರೆ ಸಿದ್ದರಾಮಯ್ಯ
– ಮಾರ್ಚ್ ತಿಂಗಳಿಂದ ನೀತಿ ಸಂಹಿತೆ?
NAMMUR EXPRESS NEWS
ಬೆಂಗಳೂರು: ಫೆಬ್ರವರಿ 16 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಫೆಬ್ರವರಿ 12 ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ಹಾಗೂ ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡುವುದಾಗಿ ತೀರ್ಮಾನಿಸಲಾಗಿದೆ. ವಿಧಾನಮಂಡಲ ಅಧಿವೇಶನ ಅಧಿವೇಶನದ ಮೊದಲ ದಿನ ಅಂದರೆ ಫೆ.12 ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಮುಂದೆ ಲೋಕಸಭಾ ಚುನಾವಣೆ ಬರಲಿದೆ. ಹೀಗಾಗಿ ಚುನಾವಣೆ ನೀತಿ ಸಂಹಿತೆ ಇದೇ ಮಾರ್ಚ್ನಿಂದಲೇ ಜಾರಿಯಾಗುವ ಸಾಧ್ಯತೆ ಇದೆ.