Categories
ಬೆಂಗಳೂರು

ರಾಜ್ಯಮಟ್ಟದ ಉದ್ಯೋಗ ಮೇಳ!

ರಾಜ್ಯಮಟ್ಟದ ಉದ್ಯೋಗ ಮೇಳ!
– ಸರಕಾರಿ ಉದ್ಯೋಗ ಮೇಳ ಆಯೋಜನೆ.!
– ನಿರುದ್ಯೋಗ ಶಮನ ಭರವಸೆ ಈಡೇರಿಕೆ.!

NAMMUR EXPRESS NEWS
ಬೆಂಗಳೂರು: ಯುವಜನತೆ ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಕಂಡುಕೊಳ್ಳಲು ಸಹಕಾರಿಯಾಗುವಂತೆ ರಾಜ್ಯ ಸರ್ಕಾರ ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸಲು ಮುಂದಾಗಿದೆ. ರಾಜ್ಯ ಸರ್ಕಾರದ ಭರವಸೆ ಗಳಲ್ಲಿ ಒಂದಾದ ನಿರುದ್ಯೋಗ ಶಮನ ಭರವಸೆ ಈಡೇರಿಕೆ ಅನುಷ್ಠಾನಗೊಳ್ಳಲಿದೆ. ಈ ಬೃಹತ್ ಮೇಳವು ಉದ್ಯೋಗಾಕಾಂಕ್ಷಿಗಳಿಗೆ ಹೇಗೆ ನೆರವಾಗಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜನವರಿ ತಿಂಗಳ ಕೊನೆಯ ವಾರದಲ್ಲಿ ಬೆಂಗಳೂರು ಮಹಾನಗರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳದ ಕುರಿತು ಸಿ ಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಬೃಹತ್ ರಾಜ್ಯಮಟ್ಟದ ಉದ್ಯೋಗ ಮೇಳವನ್ನು ಯಶಸ್ವಿಯಾಗಿ ನಡೆಸಲು ಸಹಾಯವಾಗುವಂತೆ ವಿವಿಧ ಇಲಾಖೆಯ ಸಚಿವರಾದ ಎಂ ಬಿ ಪಾಟೀಲ್‌, ಪ್ರಿಯಾಂಕ್ ಖರ್ಗೆ, ಡಾ. ಶರಣಪ್ರಕಾಶ್‌ ಪಾಟೀಲ್, ಡಾ. ಎಂ ಸಿ ಸುಧಾಕರ್, ಸಚಿವ ಬಿ ನಾಗೇಂದ್ರ, ಸಂತೋಷ್ ಲಾಡ್ ಹಾಗೂ ದಿನೇಶ್ ಗುಂಡೂರಾವ್ ಅವರನ್ನು ಒಳಗೊಂಡ 7 ಜನರ ಸಚಿವ ತಂಡವನ್ನು ರಚಿಸಲು ತೀರ್ಮಾನಿಸಲಾಗಿದೆ.

ಈ ಸಚಿವರ ತಂಡವು ಉದ್ಯೋಗದಾತ ಕಂಪನಿಯವರೊಂದಿಗೆ ಸಭೆ ನಡೆಸಿ, ಚರ್ಚಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮವಹಿಸಲಿದೆ. ಜೊತೆಗೆ ಕೈಗಾರಿಕೆಗಳೊಂದಿಗೆ ಚರ್ಚಿಸಲಿದೆ ಮತ್ತು ವಿದೇಶದಲ್ಲಿರುವ ಉದ್ಯೋಗಾವಕಾಶದ ಕುರಿತು ಪರಿಶೀಲನೆ ನಡೆಸಲಿದೆ. ಪತ್ರಕರ್ತರೊಡನೆ ಮಾತನಾಡಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ಇದೇ ಜನವರಿ ತಿಂಗಳ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲು ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.

ಇದೇ ರೀತಿ ಮುಂಬರುವ ದಿನಗಳಲ್ಲಿ ಪ್ರತಿ ಜಿಲ್ಲಾ ಮತ್ತು ವಲಯವಾರು ಉದ್ಯೋಗ ಮೇಳ ನಡೆಸಲಾಗುವುದು ಎಂದು ತಿಳಿಸಿದ್ದು ನಗರ ಹಾಗೂ ಗ್ರಾಮೀಣ ಭಾಗದ ಯುವ ಜನತೆಗೆ ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಹತೆಗೆ ತಕ್ಕ ಉದ್ಯೋಗಗಳನ್ನು ಒದಗಿಸುವುದು ಈ ಬೃಹತ್ ಉದ್ಯೋಗ ಮೇಳದ ಉದ್ದೇಶವಾಗಿದೆ. ಎಸ್ ಎಸ್ ಎಲ್ ಸಿ ಯಿಂದ ಉನ್ನತ ಶಿಕ್ಷಣದವರೆಗೂ ಎಲ್ಲ ಹಂತದ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳಿಗೂ ಇಲ್ಲಿ ಅವಕಾಶ ಸಿಗಲಿದೆ. ರಾಜ್ಯ, ದೇಶ ಮಾತ್ರವಲ್ಲದೇ ವಿದೇಶಗಳ ಉದ್ಯೋಗಾವಕಾಶಗಳು ಕೂಡ ಈ ಮೇಳದಲ್ಲಿ ಆಯೋಜನೆ ಆಗಲಿವೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.