Categories
ಬೆಂಗಳೂರು ರಾಜ್ಯ

ಚಂಡ ಮಾರುತ ಎಫೆಕ್ಟ್ : 7 ದಿನ ಭಾರೀ ಮಳೆ!

ಚಂಡ ಮಾರುತ ಎಫೆಕ್ಟ್ : 7 ದಿನ ಭಾರೀ ಮಳೆ!
– ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಿಗೆ ಮಳೆ ಅಲರ್ಟ್
– ಹವಾಮಾನ ವೈಫಲ್ಯದಿಂದ ರೈತರ ಬದುಕು ಗೋಳು
– ಅಡಿಕೆ ಬಂದರೂ ಅಡಿಕೆ ಸುಲಿತಕ್ಕೆ ತೊಂದರೆ

NAMMUR EXPRESS NEWS
ಬೆಂಗಳೂರು: ಮಳೆ ಮಳೆ ಮಳೆ… ಈ ವರ್ಷ ಏಪ್ರಿಲ್ ಇಂದ ಒಂದೇ ಸಮನೆ ಸುರಿಯುತ್ತಿರುವ ಮಳೆ ರೈತರು ಮತ್ತು ಜನ ಸಾಮಾನ್ಯರ ಬದುಕನ್ನು ಈ ವರ್ಷ ಬಲಿ ಪಡೆದಿದೆ. ಭಾರೀ ಮಳೆ ಕಾರಣ ವ್ಯವಹಾರ ಕ್ಷೇತ್ರಕ್ಕೂ ಮಂಕು ಕವಿದಿದೆ. ಈಗಾಗಲೇ ಮಳೆ ಬಿಟ್ಟು 2 ತಿಂಗಳಾಗಬೇಕಿದ್ದರೂ ಇನ್ನು ಮಳೆ ಬಿಟ್ಟಿಲ್ಲ.
ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಮೋಂಥಾ ಚಂಡಮಾರುತ ಪರಿಣಾಮ ರಾಜ್ಯದಲ್ಲಿ 7 ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಇಂದಿನಿಂದ 7 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಾಗರಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಸುರಕ್ಷಿತರಾಗಿರಿ ಎಂದು ಹವಾಮಾನ ಇಲಾಖೆ ಮನವಿ ಮಾಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಆಂಧ್ರದ ಉತ್ತರ ಭಾಗ ಹಾಗೂ ಒಡಿಶಾಗೆ ಅಪ್ಪಳಿಸಿದ್ದು. ಇದರ ಪರಿಣಾಮವಾಗಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಮುಂದಿನ 7 ದಿನ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಳಗಾವಿ, ಧಾರಾವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಂಭವವಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡದಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೀದ‌ರ್, ಗದಗ, ಬಾಗಲಕೋಟೆ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲೂ ಭಾರೀ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ದಾವಣಗೆರೆ, ಕೊಡಗು, ಮಂಡ್ಯ, ರಾಮನಗರ, ಮೈಸೂರು, ವಿಜಯನಗರ, ತುಮಕೂರು ಜಿಲ್ಲೆಯಲ್ಲೂ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.