ಗ್ರಾಮ ಆಡಳಿತ ಅಧಿಕಾರಿಗಳ ಹೋರಾಟ
– ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ
– ಕ್ಷೇತ್ರಮಟ್ಟದಲ್ಲಿ ಅಧಿಕ ಒತ್ತಡ, ಗ್ರಾಮ ಆಡಳಿತ ಅಧಿಕಾರಿಗಳ ಸಾವು ನೋವು
– 17ಕ್ಕೂ ಅಧಿಕ ಮೊಬೈಲ್/ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ಕಿರಿಕಿರಿ
NAMMUR EXPRESS NEWS
ಬೆಂಗಳೂರು: ರಾಜ್ಯ ಸಂಘದ ಕಾರ್ಯಕಾರಿಣಿ ಸಭೆಯ ನಿರ್ಣಯದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುತ್ತಿರುವ ಬಗ್ಗೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ಸೆ.22ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾ ಭವನ, ಚಿತ್ರದುರ್ಗದಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ನಡೆಸಲಾಯಿತು.
ವಿವಿಧ ಬೇಡಿಕೆಗಳು ಕೋರಿ ಆಗ್ರಹ
ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಷನ್ಗಳ ಮೂಲಕ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಸುಮಾರು 17ಕ್ಕೂ ಅಧಿಕ ಮೊಬೈಲ್/ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್ ಸಾಧನ, ಲ್ಯಾಪ್ ಟಾಪ್ ಹಾಗೂ ಅದಕ್ಕೆ ಅವಶ್ಯಕವಾಗಿರುವ ಇಂಟರ್ ನೆಟ್, ಸ್ಕ್ಯಾನರ್ ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿರುವುದರಿಂದ ಕ್ಷೇತ್ರಮಟ್ಟದಲ್ಲಿ ಅಧಿಕ ಒತ್ತಡದೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳ ಸಾವು ನೋವುಗಳು ಸಂಭವಿಸುತ್ತಿದೆ.
ನಿರಂತರವಾಗಿ ಮಾರಣಾಂತಿಕ ಹಲ್ಲೆ ನಡೆಯುತ್ತಿದೆ.ಎಲ್ಲಾ ಮೊಬೈಲ್ ಆಪ್ ಗಳಲ್ಲಿ ಏಕಕಾಲದಲ್ಲಿ ಪ್ರಗತಿ ಸಾಧಿಸಲು ತೀವ್ರ ಒತ್ತಡ ಹೇರುತ್ತಿರುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ವ್ಯತಿರಿಕ್ತ ಪರಿಣಾಮಗಳು ಹೆಚ್ಚಾಗಿರುತ್ತದೆ.
ಸದರಿ ಕಾರ್ಯಕಾರಿಣಿ ಸಭೆಯಲ್ಲಿ ಹಲವು ಬೇಡಿಕೆಗಳ ಬಗ್ಗೆ ಮನವಿ ಮಾಡಿದ್ದು,ಸೆ.26ರಿಂದ ಎಲ್ಲಾ ಬಗೆಯ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಷನ್ ಅನ್ನು ಸ್ಥಗಿತಗೊಳಿಸಿ, ಲೇಖನಿ ಸ್ಥಗಿತಗೊಳಿಸುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರವನ್ನು ರಾಜ್ಯವ್ಯಾಪಿ ಹಮ್ಮಿಕೊಳ್ಳಲಾಗುವುದು ಎಂಬ ಅಂಶವನ್ನು ಅವಗಾಹನೆಗೆ ತರಬಯಸುತ್ತಾ ಸಮೂಹದ ಬೇಡಿಕೆಗಳನ್ನು ಈಡೇರಿಸಿ ಉತ್ತಮ ಮತ್ತು ಗುಣಮಟ್ಟದ ರೀತಿಯಲ್ಲಿ ಸಾರ್ವಜನಿಕ ಮತ್ತು ಸರ್ಕಾರಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡಬೇಕೆಂದು ಸಂಘವು ಆಗ್ರಹಿಸುತ್ತದೆ.
ರಾಜ್ಯದ 31 ಜಿಲ್ಲೆಯ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರು, ಹಾಗೂ ಸರ್ವ ಸದಸ್ಯರ ಒಪ್ಪಿಗೆಯಂತ ಸರ್ವಾನುಮತದಿಂದ ಈ ಕೆಳಕಂಡ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿರುತ್ತದೆ.