‘ಡೆಂಗ್ಯೂ ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದ ಸರ್ಕಾರ!
* ಸೊಳ್ಳೆಗಳ ನಿಯಂತ್ರಣಕ್ಕೆ ನಿಯಮಗಳು ಜಾರಿ!
* ನಿಯಮ ಉಲ್ಲಂಘಿಸಿದರೆ ದಂಡ ಖಚಿತ!
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಪಣತೊಟ್ಟಿದ್ದು, ಈ ಹಿನ್ನಲೆ ಡೆಂಗ್ಯೂ ವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಸರ್ಕಾರ ಘೋಷಿಸಿದೆ.
ಇನ್ನು ಮುಂದೆ ನೈರ್ಮಲ್ಯ(ಸ್ವಚ್ಚತೆ) ಕಾಪಾಡದವರಿಗೆ ದಂಡ ಬೀಳಲಿದೆ. ಹೌದು!ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020ಕ್ಕೆ ತಿದ್ದುಪಡಿ ಮಾಡಿ ಆಗಸ್ಟ್ 31ರಂದು ಕರ್ನಾಟಕ ಗೆಜೆಟ್ನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಮನೆ, ಖಾಲಿ ಜಾಗ, ಕಟ್ಟಡದ ಬಳಿ ಸ್ವಚ್ಛತೆ ಕಾಪಾಡಬೇಕು. ಸೊಳ್ಳೆ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡದಂತೆ ಕ್ರಮವಹಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ.
ಸೊಳ್ಳೆಗಳ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕು.ಆಯಾ ಜಾಗದ ಮಾಲೀಕರು ಸೊಳ್ಳೆ ಬಾರದಂತೆ ಕ್ರಮ ವಹಿಸಬೇಕು.
ನಿಯಮವನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುವುದು.ನಿವೇಶನ ಅಥವಾ ಖಾಲಿ ಜಾಗದಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಆ ರೀತಿ ಕಂಡು ಬಂದರೆ ನೋಟೀಸ್ ನೀಡಲಾಗುತ್ತದೆ.
24 ಗಂಟೆಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಬಿಬಿಎಂಪಿ ಹಾಗೂ ಮಂಗಳೂರಿನಲ್ಲಿ ತೆರೆದ ಸ್ಥಳದಲಿ ನಿಂತ ನೀರನ್ನ ತೆರವುಗೊಳಿಲು ಆಯಾ ಮಾಲೀಕರೇ ಹೊಣೆ ಸೊಳ್ಳೆ ಉತ್ಪತ್ತಿಯಾಗುವ ಸ್ಥಳವನ್ನು ಅಧಿಕಾರಿಗಳು ಪರಿಶೀಲನೆ ನಡೆಸಬೇಕು.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಈ ಹಿನ್ನೆಲೆ ಆಗಸ್ಟ್ 26 ರಂದು ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಓವಿ ಟ್ರ್ಯಾಪ್ ಅಳವಡಿಕೆಗೆ ಮುಂದಾಗಿತ್ತು. ಓವಿ ಟ್ರ್ಯಾಪ್ ಅಳವಡಿಕೆಗೆ ಮಾಗಡಿ ರಸ್ತೆಯ ಗೋಪಾಲಪುರದಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದ್ದರು. ಇದೀಗ ಡೆಂಗ್ಯೂವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಸರ್ಕಾರ ಘೋಷಿಸಿ, ಅದರ ನಿಯಂತ್ರಣಕ್ಕೆ ಪಣತೊಟ್ಟಿದೆ.