ಮಕ್ಕಳಿಗೆ ಬ್ಯಾಗ್ ಭಾರ ಇಳಿಸಿದ ಸರ್ಕಾರ!
– ತರಗತಿವಾರು ಬ್ಯಾಗ್ ಭಾರ ನಿಗದಿಪಡಿಸಿದ ಇಲಾಖೆ
– ಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳಿಗೆಗುಡ್ ನ್ಯೂಸ್
– ಯಾವ ತರಗತಿಗೆ ಎಷ್ಟು ತೂಕ ನಿಗದಿ.. ಇಲ್ಲಿದೆ ಮಾಹಿತಿ
NAMMUR EXPRESS NEWS
ಬೆಂಗಳೂರು: ಶಾಲಾ ಮಕ್ಕಳಿಗೆ ಇನ್ಮುಂದೆ ಬ್ಯಾಗ್ ಭಾರ ಕಡಿಮೆ ಆಗಲಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಹೊರೆಯಿಲ್ಲದ ಕಲಿಕೆ ಅನುಸಾರ 1ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ತಗ್ಗಿಸುವ ಬಗ್ಗೆ ಯಶಪಾಲ ಶರ್ಮಾ ಸಮಿತಿಯ ಶಿಫಾರಸ್ಸಿನ ಮೇರೆಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊರೆಯಿಲ್ಲದೇ ಸಂತಸದಾಯಕವಾಗಿ ಕಲಿಯುವ ವಾತಾವರಣವನ್ನು ರೂಪಿಸುವ ಸಲುವಾಗಿ ಹೊಸ ನಿಯಮ ಜಾರಿಗೆ ತರಲಾಗಿದೆ. ಇದರಿಂದಾಗಿ ಹೆಚ್ಚು ಭಾರ ಹೊರುವ ಅವಶ್ಯಕತೆ ಇಲ್ಲ.
ಎಷ್ಟನೇ ತರಗತಿ ಮಕ್ಕಳಿಗೆ ಎಷ್ಟು ತೂಕ?
– 1 -2 ನೇ ತರಗತಿ ಮಕ್ಕಳಿಗೆ ಶಾಲಾ ಬ್ಯಾಗ್ ತೂಕ 1.5 ರಿಂದ 2 ಕೆಜಿ.
– 3 -5 ನೇ ತರಗತಿ ಮಕ್ಕಳಿಗೆ ಶಾಲಾ ಬ್ಯಾಗ್ ತೂಕ 2 ರಿಂದ 3 ಕೆಜಿ
– 6-8 ನೇ ತರಗತಿ ಮಕ್ಕಳಿಗೆ ಶಾಲಾ ಬ್ಯಾಗ್ ತೂಕ 3 ರಿಂದ 5 ಕೆಜಿ.
– 9-10 ನೇ ತರಗತಿ ಮಕ್ಕಳಿಗೆ ಶಾಲಾ ಬ್ಯಾಗ್ ತೂಕ 4 ರಿಂದ 5 ಕೆಜಿ.
ನಿಯಮ ಪಾಲನೆ ಕಡ್ಡಾಯ
ಶಾಲಾ ಎಸ್.ಎಂ.ಸಿ./ ಎಸ್.ಡಿ.ಎಂ.ಸಿ ಹಾಗೂ ಶಾಲಾ ಮುಖ್ಯಸ್ಥರು ಮೇಲ್ಕಂಡ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು. ಹಾಗೂ ಈ ಬಗ್ಗೆ ನಿಗಾವಹಿಸಲು ಶಾಲೆಗಳಿಗೆ ಭೇಟಿ ನೀಡಿ ತಪಾಸಣೆ ಮಾಡಲು ವಿಶೇಷ ತಂಡವನ್ನು ರಚಿಸತಕ್ಕದ್ದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
HOW TO APPLY : NEET-UG COUNSELLING 2023