Categories
ಬೆಂಗಳೂರು

ಚಿನ್ನ ಬೆಳ್ಳಿ ದರ ಇಳೀತು..!

ಚಿನ್ನ ಬೆಳ್ಳಿ ದರ ಇಳೀತು..!
– ಆಭರಣ ಪ್ರಿಯರಿಗೆ ಸಿಹಿ ಸುದ್ದಿ
– ಮಾರುಕಟ್ಟೆಯಲ್ಲಿ ಚಿನ್ನ ಬೆಳ್ಳಿಯ ದರ ಇಳಿಕೆ

NAMMUR EXPRESS NEWS
ಬೆಂಗಳೂರು: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದೆ. ಅದರಲ್ಲೂ ಈ ವಾರದಲ್ಲಿ ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ಭವಿಷ್ಯಕ್ಕಾಗಿ ತಮ್ಮ ಆದಾಯ ಸ್ವಲ್ಪ ಭಾಗವನ್ನು ಚಿನ್ನದಲ್ಲಿ ಹೂಡಿಕೆ ಮಾಡುವವರಿಗೆ ಸಹಾಯವಾಗಲಿದೆ.
ಭಾರತದಲ್ಲಿ ಸದ್ಯ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 55,000 ರೂ.ಆಗಿದೆ. 24 ಕ್ಯಾರೆಟ್‌ನ ಚಿನ್ನದ ಬೆಲೆ 60,000 ರೂ.ಆಗಿದೆ.

ಇನ್ನು 100 ಗ್ರಾಮ್ ಬೆಳ್ಳಿ ಬೆಲೆ 7,400 ರೂ. ಆಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 55,000 ರೂ. ಆಗಿದ್ದು ಬೆಳ್ಳಿ ಬೆಲೆ 7,475 ರೂ.ಗಳಲ್ಲಿ ಲಭ್ಯವಿದೆ. ಸದ್ಯ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದ್ದರೂ ಮುಂದಿನ ದಿನಗಳಲ್ಲಿ ಏರಿಕೆ ಆಗುವ ಸಾಧ್ಯತೆ ಕೂಡ ಇರುತ್ತದೆ. ಇನ್ನುಳಿದಂತೆ ದೇಶದ ವಿವಿಧ ವಾಣಿಜ್ಯ ನಗರಗಳಲ್ಲಿ ಇಂದಿನ ಚಿನ್ನ ಹಾಗೂ ಬೆಳ್ಳಿ ಬೆಲೆಗಳನ್ನು ಈ ಕೆಳಗೆ ತಿಳಿಸಲಾಗಿದೆ.

ಇನ್ನು ಅನ್ವಯವಾಗುವ ಎಲ್ಲಾ ತೆರಿಗೆಗಳು ಮತ್ತು ಶುಲ್ಕಗಳು ಸೇರಿದಂತೆ ನಿಜವಾದ ದರಗಳನ್ನು ಪಡೆಯಲು ಗ್ರಾಹಕರು ತಮ್ಮ ಸ್ಥಳೀಯ ಆಭರಣ ಅಂಗಡಿಗಳಿಗೆ ಭೇಟಿ ನೀಡಲು ಸಲಹೆ ನೀಡಲಾಗುತ್ತದೆ. ಗ್ರಾಹಕರು ಚಿನ್ನ ಅಥವಾ ಬೆಳ್ಳಿಯನ್ನು ಖರೀದಿಸಲು ಪಾವತಿಸಬೇಕಾದ ಅಂತಿಮ ಬೆಲೆಯ ಬಗ್ಗೆ ಉತ್ತಮ ತಿಳುವಳಿಕೆಯನ್ನು ಪಡೆಯಲು ಇದು ಸಹಾಯ ಮಾಡುತ್ತದೆ. ಚಿನ್ನ ಬೆಳ್ಳಿ ದರ ಕಡಿಮೆ ಆಗುತ್ತಿದ್ದಂತೆ ಚಿನ್ನದ ಅಂಗಡಿಗಳಲ್ಲಿ ಗ್ರಾಹಕ ಸಂಖ್ಯೆ ಹೆಚ್ಚಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.