ಬೆಂಕಿಯಾದ ಬಿಸಿಲು: ಮಳೆಗೆ ಜನರ ಮೊರೆ!
– ಏ.8ರಿಂದ 25 ಜಿಲ್ಲೆಯಲ್ಲಿ ಮಳೆ
– ಕೆಲವು ಕಡೆ ಮಳೆ: ಮೋಡ ಕವಿದ ವಾತಾವರಣ
NAMMUR EXPRESS NEWS
ಬೆಂಗಳೂರು: ಇಡೀ ರಾಜ್ಯದಲ್ಲಿ ಬಿಸಿಲು ಜನರನ್ನು ಕಂಗಾಲು ಮಾಡಿದೆ. ಜನ ಮಳೆ ಬರಲಿ ಎಂದು ಪ್ರಾರ್ಥನೆ ಮಾಡುತ್ತಿದ್ದಾರೆ. ಈ ನಡುವೆ ಏಪ್ರಿಲ್ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 6ರಂದು ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಏಪ್ರಿಲ್ 8 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಳಿದಂತೆ ಏಪ್ರಿಲ್ 9ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಯಾದಗಿರಿ, ಹಾವೇರಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ. ಮುಂದಿನ 3 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತಷ್ಟು ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ.