Categories
ತೀರ್ಥಹಳ್ಳಿ ಬೆಂಗಳೂರು

ಕೆಲಸದಿಂದ ತೆಗೆದಿದಕ್ಕೆ ಮಹಿಳಾ ಅಧಿಕಾರಿ ಕೊಲೆ!

ಕೆಲಸದಿಂದ ತೆಗೆದಿದಕ್ಕೆ ಮಹಿಳಾ ಅಧಿಕಾರಿ ಕೊಲೆ!
– ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿ ಕೊಲೆ ಸತ್ಯ ಬಯಲು
– ತೀರ್ಥಹಳ್ಳಿಯಲ್ಲಿ ಅಂತ್ಯ ಸಂಸ್ಕಾರ: ಕುಟುಂಬದ ಕಣ್ಣೀರು

NAMMUR EXPRESS NEWS
ಬೆಂಗಳೂರು: ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಕಾರಣ ಸಿಕ್ಕಿದೆ. ಪ್ರತಿಮಾ ಕಾರು ಚಾಲಕನಾಗಿದ್ದ ಕಿರಣ್ ತನ್ನನ್ನು ಕೆಲಸದಿಂದ ತೆಗೆದಿದ್ದಕ್ಕೆ ಈ ಕೊಲೆ ಮಾಡಲಾಗಿದೆ. ಬೆಂಗಳೂರಲ್ಲಿ ಸೇಡಿನಿಂದ ಪ್ರಾಣ ತೆಗೆದು ಕಿರಣ್ ಪರಾರಿ ಆಗಿದ್ದ. ಈಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, ವಿಚಾರಣೆಯ ವೇಳೆ ತಪೊಪ್ಪಿಕೊಂಡಿದ್ದು, ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕನನ್ನು ಬಂಧಿಸಲಾಗಿದೆ.

ಸೇಡು ಯಾಕೆ?

4 ವರ್ಷದಿಂದ ಕಾರು ಚಾಲಕನಾಗಿದ್ದ ಕಿರಣ್, ಬೇಜವಾಬ್ದಾರಿಯಿಂದ ಕಾರು ಓಡಿಸುತ್ತಿದ್ದನು. ಗುತ್ತಿಗೆ ಆಧಾರದ ಮೇಲೆ ಚಾಲಕ ವೃತ್ತಿ ಮಾಡುತ್ತಿರುವ ಕಿರಣ್ ಕಳೆದ ತಿಂಗಳು ಹೊಸ ಸರ್ಕಾರಿ ಕಾರು ಅಪಘಾತ ಮಾಡಿದ್ದನು. ಅಪಘಾತದ ನಂತರ ಕಚೇರಿಯಲ್ಲಿಯೇ ಕಾರು ಬಿಟ್ಟು ತೆರಳಿದ್ದನು. ಪ್ರತಿಮಾ ಕಲ್ಲು ಗಣಿಗಳಿಗೆ ಹೋಗುವ ವಿಚಾರ ಲೀಕ್ ಮಾಡುತ್ತಿರುವ ಬಗ್ಗೆ ಮಾಹಿತಿ ಇತ್ತು. ಈ ಕಾರಣಕ್ಕೆ ಪ್ರತಿಮಾ ವಾರ್ನ್ ಕೂಡ ಮಾಡಿದ್ದರು. ಈ ವೇಳೆ ಬೈದಾಗ ತಪ್ಪಾಗಿದೆ,, ಕೆಲಸದಿಂದ ತೆಗೆಯಬೇಡಿ ಎಂದು ಕೇಳಿದ್ದನಂತೆ.ಆದರೆ ಆಕೆ ಅದನ್ನು ತಿರಸ್ಕರಿಸಿದರು. ಶನಿವಾರ ಮನೆ ಬಳಿಯೇ ಕಾದು ಕುಳಿತು ಹೊಂಚು ಹಾಕಿ ಕೊಲೆ ಮಾಡಿ ಕಿರಣ್ ಎಸ್ಕೆಪ್ ಆಗಿದ್ದ. ಇದೀಗ ಆತನನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಮತ್ತೆ ಯಾರ ಕೈ ಇದು ಎಂಬ ಬಗ್ಗೆ ತನಿಖೆ ನಡೆಯುತ್ತದೆ.

ತೀರ್ಥಹಳ್ಳಿಯಲ್ಲಿ ಅಂತ್ಯ ಸಂಸ್ಕಾರ!

ತೀರ್ಥಹಳ್ಳಿಗೆ ಭಾನುವಾರ ರಾತ್ರಿಯೆ ಮೃತ ದೇಹ ಬಂದಿದ್ದು ಅವರ ಪತಿಯ ತೀರ್ಥಹಳ್ಳಿ ಸಮೀಪದ ಮನೆಯಲ್ಲಿ ಇಡಲಾಗಿತ್ತು. ಸೋಮವಾರ ಬೆಳಗ್ಗೆ ತೀರ್ಥಹಳ್ಳಿ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಿತು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.