Categories
ಬೆಂಗಳೂರು

ತೀರ್ಥಹಳ್ಳಿ ಮೂಲದ ಅಧಿಕಾರಿ ರಾಜಧಾನಿಯಲ್ಲಿ ಮರ್ಡರ್!

ತೀರ್ಥಹಳ್ಳಿ ಮೂಲದ ಅಧಿಕಾರಿ ರಾಜಧಾನಿಯಲ್ಲಿ ಮರ್ಡರ್!
– ತೀರ್ಥಹಳ್ಳಿ ಮೂಲದ ಉಪ ನಿರ್ದೇಶಕಿ ಪ್ರತಿಮಾ ಹತ್ಯೆ
– ಅಪಾರ್ಟ್​ಮೆಂಟ್​ನಲ್ಲಿಯೇ ಭೀಕರ ಘಟನೆ: ಗಣಿ ಮಾಫಿಯಾಕ್ಕೆ ಅಧಿಕಾರಿ ಬಲಿ?

NAMMUR EXPRESS NEWS
ಬೆಂಗಳೂರು: ರಾಜಧಾನಿಯಲ್ಲಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಮೂಲದ ಮಹಿಳಾ ಗಣಿ ಇಲಾಖೆ ಅಧಿಕಾರಿಯೊಬ್ಬರನ್ನು ರಾಜಧಾನಿ ಬೆಂಗಳೂರಿನಲ್ಲಿ ಬರ್ಬರವಾಗಿ ಶನಿವಾರ ಕೊಲೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡೈರೆಕ್ಟರ್ ಆಗಿ ತೀರ್ಥಹಳ್ಳಿ ಮೂಲದ ಪ್ರತಿಮಾ ಎಂಬವರು ಕೆಲಸ ಮಾಡುತ್ತಿದ್ದಾರೆ. ಅವರನ್ನ ಅವರ ದೊಡ್ಡಲಕ್ಕಸಂದ್ರದ ಗೋಕುಲ್ ಅಪಾರ್ಟ್ಮೆಂಟ್ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿದೆ.
ಶನಿವಾರ ರಾತ್ರಿ 8.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸ್ಥಳದಲ್ಲಿ ಸುಬ್ರಮಣ್ಯಪುರ ಪೊಲೀಸ್​ ಠಾಣೆ ಪೊಲೀಸರು ದೌಡಾಯಿಸಿದ್ದಾರೆ.

ಒಂಟಿ ಮನೆಯಲ್ಲಿ ಹತ್ಯೆ!

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿಯಾಗಿದ್ದ ಪ್ರತಿಮಾರವರು ತೀರ್ಥಹಳ್ಳಿಯ ಕೊಂಡ್ಲೂರು ಕಲಕಟ್ಟೆಯವರು. ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ದೊಡ್ಡಕಲ್ಲಸಂದ್ರದಲ್ಲಿರುವ ಅಪಾರ್ಟ್​​ಮೆಂಟ್​ವೊಂದರಲ್ಲಿ ವಾಸವಿದ್ದರು. ಗೋಕುಲ್​ ಅಪಾರ್ಟ್​ಮೆಂಟ್​ನಲ್ಲಿ ಏಕಾಂಗಿಯಾಗಿ ವಾಸವಿದ್ದ ಅವರ ಮನೆಯಲ್ಲಿಯೇ ಅವರನ್ನ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಸದ್ಯ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸ್ತಿದ್ದಾರೆ. ಇತ್ತೀಚಿಗೆ ಹೊಸ ಮನೆ ಮಾಡಿದ್ದರು.

ಪತಿ, ಮಗ ತೀರ್ಥಹಳ್ಳಿಯಲ್ಲಿ ವಾಸ

ಪತಿ ರಾಮಣ್ಣ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಾಗಿದ್ದರು. ಇತ್ತೀಚಿಗೆ ಹೊಸ ಮನೆ ಮಾಡಿದ್ದರು. ರಾತ್ರಿ 8 ಗಂಟೆಗೆ ಕಚೇರಿಯಿಂದ ಕಚೇರಿ ವಾಹನದಲ್ಲೇ ಮನೆಗೆ ಬಂದಿದ್ದರು. ಮನೆಯಲ್ಲಿ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ. ಮೇಲ್ನೋಟಕ್ಕೆ ಇದು ಪ್ಲಾನ್ ಮರ್ಡರ್. ಗಣಿ ಇಲಾಖೆಯ ಮಾಫಿಯಾ ಘಟನೆಗೆ ಕಾರಣ ಎನ್ನಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.