ರಾಜ್ಯದಲ್ಲಿ ಮತ್ತೆ ಸುದ್ದಿ ಮಾಡಿದ ತೀರ್ಥಹಳ್ಳಿ ಪ್ರತೀಕ್ ಗೌಡ ಕೇಸ್!
– ಉಡುಪಿ ಪ್ರಕರಣದಲ್ಲಿ ಇಲಿ ಹೋಗಿದನ್ನೇ ಹುಲಿ ಹೋದಂತೆ ಬಿಂಬಿಸುತ್ತಿದ್ದಾರೆ
– ಪ್ರತೀಕ್ ಸ್ಥಾನದಲ್ಲಿ ‘ಅತೀಕ್’ ಇದ್ದರೆ ಮಾತ್ರ ಇವರ ಹೋರಾಟವೇ?: ಸಚಿವ ದಿನೇಶ್ ಗುಂಡೂರಾವ್
NAMMUR EXPRESS NEWS
ಬೆಂಗಳೂರು: ತೀರ್ಥಹಳ್ಳಿಯಲ್ಲಿ ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟ ( Pratheek gowda ) ಪ್ರತೀಕ್ ಪ್ರಕರಣ ಇದೀಗ ಮತ್ತೆ ಸುದ್ದಿಗೆ ಬಂದಿದೆ. ಪ್ರತೀಕ್ ಸ್ಥಾನದಲ್ಲಿ ‘ಅತೀಕ್’ ಇದ್ದರೆ ಮಾತ್ರ ಇವರ ಹೋರಾಟವೇ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ( Dinesh Gundu Rao ) ಬಿಜೆಪಿಗರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಜಿ ಸಿಎಂ ಬೊಮ್ಮಾಯಿ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು, ಉಡುಪಿ ಪ್ರಕರಣದಲ್ಲಿ ಇಲಿ ಹೋಗಿದನ್ನೇ ಹುಲಿ ಹೋದಂತೆ ಬಿಂಬಿಸುತ್ತಿದ್ದಾರೆ. ಉಡುಪಿ ಪ್ರಕರಣದಲ್ಲಿ ಇಷ್ಟು ಬಟ್ಟೆ ಹರಿದುಕೊಳ್ಳುತ್ತಿರುವ ನೀವು, ಪ್ರತೀಕ್ ಗೌಡ ಎಂಬ ತೀರ್ಥಹಳ್ಳಿಯ ಎಬಿವಿಪಿ ಘಟಕದ ಅಧ್ಯಕ್ಷ ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟಾಗ ಎಲ್ಲಿದ್ದಿರೀ?” ಎಂದು ಪ್ರಶ್ನೆ ಮಾಡಿದ್ದಾರೆ.
3
ಪ್ರತೀಕ್ ಗೌಡ ಎಂಬ ABVPಯವನೊಬ್ಬ ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟಾಗ ಬೊಮ್ಮಾಯಿ ಸೇರಿದಂತೆ BJPಯ ಎಲ್ಲಾ ನಾಯಕರ ನವರಂದ್ರಗಳೂ ಬಂದ್ ಆಗಿತ್ತು.ಈಗ ಧರ್ಮರಕ್ಷಕರ ಮುಖವಾಡ ತೊಟ್ಟು ಅಖಾಡಕ್ಕಿಳಿದಿದ್ದಾರೆ.
ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟ 'ಪ್ರತೀಕ್' ನ ಸ್ಥಾನದಲ್ಲಿ 'ಅತೀಕ್' ಇದ್ದರೆ ಮಾತ್ರ ಇವರ ಹೋರಾಟವೇ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 26, 2023
ಪ್ರತೀಕ್ ಗೌಡ ಎಂಬ ಎಬಿವಿಪಿಯವನೊಬ್ಬ ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟಾಗ ಬೊಮ್ಮಾಯಿ ಸೇರಿದಂತೆ ಬಿಜೆಪಿಯ ಎಲ್ಲಾ ನಾಯಕರ ನವರಂದ್ರಗಳೂ ಬಂದ್ ಆಗಿತ್ತು. ಈಗ ಧರ್ಮರಕ್ಷಕರ ಮುಖವಾಡ ತೊಟ್ಟು ಅಖಾಡಕ್ಕಿಳಿದಿದ್ದಾರೆ. ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟ ‘ಪ್ರತೀಕ್’ ನ ಸ್ಥಾನದಲ್ಲಿ ‘ಅತೀಕ್’ ಇದ್ದರೆ ಮಾತ್ರ ಇವರ ಹೋರಾಟವೇ?” ಎಂದು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
“ಬೊಮ್ಮಾಯಿಯವರೇ, ಪೊಲೀಸರು ನಿಮ್ಮ ಆಡಳಿತದಲ್ಲಿ ರಾಜಕೀಯದ ಒತ್ತಡಕ್ಕೆ ಮಣಿದಿರಬಹುದು. ಆದರೆ ನಾವು ಪೋಲಿಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ. ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟ ಪ್ರತೀಕ್ ಗೌಡ ಎಂಬಾತನನ್ನು ನಮ್ಮ ಪೊಲೀಸರು ಒದ್ದು ಒಳಗಾಕ್ಕಿದ್ದಾರೆ. ಬಹುಶಃ ಧರ್ಮ ರಕ್ಷಣೆಯ ಗ್ರಾಫ್ ನಿಮಗಿಂತ ನಮ್ಮದ್ದೇ ಜಾಸ್ತಿ ಇದೆಯಲ್ಲವೇ?’ ಎಂದು ದಿನೇಶ್ ಗುಂಡೂರಾವ್ ಟ್ವಿಟ್ ಮಾಡಿದ್ದಾರೆ.
4
ಬೊಮ್ಮಾಯಿಯವರೇ, ಪೊಲೀಸರು ನಿಮ್ಮ ಆಡಳಿತದಲ್ಲಿ ರಾಜಕೀಯದ ಒತ್ತಡಕ್ಕೆ ಮಣಿದಿರಬಹುದು.ಆದರೆ ನಾವು ಪೋಲಿಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ.
ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟ ಪ್ರತೀಕ್ ಗೌಡ ಎಂಬಾತನನ್ನು ನಮ್ಮ ಪೊಲೀಸರು ಒದ್ದು ಒಳಗಾಕ್ಕಿದ್ದಾರೆ.
ಬಹುಶಃ ಧರ್ಮ ರಕ್ಷಣೆಯ ಗ್ರಾಫ್ ನಿಮಗಿಂತ ನಮ್ಮದ್ದೇ ಜಾಸ್ತಿ ಇದೆಯಲ್ಲವೇ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 26, 2023
1
ಉಡುಪಿ ವಿಡಿಯೋ ಪ್ರಕರಣವನ್ನು BJP ಉದ್ದೇಶಪೂರ್ವಕವಾಗಿ ರಾಜಕೀಯಗೊಳಿಸುತ್ತಿದ್ದಾರೆ.ಈ ಪ್ರಕರಣದಲ್ಲಿ ಯಾವುದೇ ವಿಡಿಯೋ ಹರಿದಾಡಿಲ್ಲ.
ಹರಿದಾಡುತ್ತಿರುವ ವಿಡಿಯೋ ಕೂಡ ನಕಲಿ.ಪೊಲೀಸರು ವಿದ್ಯಾರ್ಥಿನಿಯರ ಮೊಬೈಲ್ ರಿಟ್ರೀವ್ ಮಾಡಿದ್ದಾರೆ.
ಅಲ್ಲಿ ಯಾವುದೇ ವಿಡಿಯೋಗಳಿಲ್ಲ.
ಮತ್ಯಾಕೆ ಈ ರಾದ್ಧಾಂತ? https://t.co/gmo3ghnZ2H
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 26, 2023
2
ಬೊಮ್ಮಾಯಿ, ಸೇರಿದಂತೆ ರಾಜ್ಯ BJP ನಾಯಕರು, ಉಡುಪಿ ಪ್ರಕರಣದಲ್ಲಿ ಇಲಿ ಹೋಗಿದನ್ನೇ ಹುಲಿ ಹೋದಂತೆ ಬಿಂಬಿಸುತ್ತಿದ್ದಾರೆ.ಬೊಮ್ಮಾಯಿಯವರಿಗೊಂದು ಪ್ರಶ್ನೆ.
ಉಡುಪಿ ಪ್ರಕರಣದಲ್ಲಿ ಇಷ್ಟು ಬಟ್ಟೆ ಹರಿದುಕೊಳ್ಳುತ್ತಿರುವ ನೀವು, ಪ್ರತೀಕ್ ಗೌಡ ಎಂಬ ತೀರ್ಥಹಳ್ಳಿಯ ABVP ಘಟಕದ ಅಧ್ಯಕ್ಷ ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಬಿಟ್ಟಾಗ ಎಲ್ಲಿದ್ದಿರೀ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 26, 2023
5
ಪ್ರಾಜ್ಞರಾದ ಬೊಮ್ಮಾಯಿಯವರು BJPಯ ಟೂಲ್ಕಿಟ್ನ ಭಾಗವಾಗಬಾರದು.ಉಡುಪಿ ಪ್ರಕರಣ ವಯೋಸಹಜ ಚೇಷ್ಟೆ ಮತ್ತು ಹುಡುಗಾಟ ಎಂದು ಬೊಮ್ಮಾಯಿಯವರಿಗೂ ಕೂಡ ತಿಳಿದಿದೆ.
ಆದರೂ ಪಾಪ BJPಯಲ್ಲಿ ತಮ್ಮ ಅಸ್ತಿತ್ವಕ್ಕಾಗಿ ಬೊಮ್ಮಾಯಿಯವರು ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ.
ಕುತೂಹಲವೆಂದರೆ CM ಆದವರು ವಿಪಕ್ಷ ಸ್ಥಾನ ಪಡೆಯಲು ಇಷ್ಟೆಲ್ಲಾ ಮಾಡಬೇಕೆ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 26, 2023
ಇದನ್ನೂ ಓದಿ : ಖಾಸಗಿ ಚಾನಲ್ ವಿರುದ್ದ ಕಿಮ್ಮನೆ 5 ಕೋಟಿ ಕೇಸ್!?
HOW TO APPLY : NEET-UG COUNSELLING 2023