ಸಿದ್ದರಾಮಯ್ಯಗೆ ಸಂಕಷ್ಟ: ರಾಜ್ಯದಲ್ಲಿ ಇಂದು ಹೋರಾಟ
– ಕರ್ನಾಟಕದಾದ್ಯಂತ ಕಾಂಗ್ರೆಸ್ ಪ್ರತಿಭಟನೆಗೆ ಕರೆ
– ವಾಹನ ಸಂಚಾರ ಅಸ್ತವ್ಯಸ್ತ ಸಾಧ್ಯತೆ
NAMMUR EXPRESS NEWS
ಬೆಂಗಳೂರು: ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿದೆ. ಹೀಗಾಗಿ ಇಂದು ರಾಜ್ಯದ ಜಿಲ್ಲೆ, ತಾಲೂಕು ಕೇಂದ್ರದಲ್ಲೂ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಕಾಂಗ್ರೆಸ್ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಕೂಡಾ ಬೆಂಬಲ ನೀಡಿವೆ.
ಸಿಎಂ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿದ್ದೇ ತಡ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದು ಬೆಂಬಲಿಗರು ರೊಚ್ಚಿಗೆದ್ದಿದ್ದರು. . ಇವತ್ತು ಕೂಡಾ ಸಿದ್ದರಾಮಯ್ಯ ತವರು ಮೈಸೂರು ಜಿಲ್ಲೆಯಲ್ಲಿ ದೊಡ್ಡ ಹೋರಾಟ ನಡೆಸಿದ್ದರು. ಇನ್ನು ಇಂದು ಕರ್ನಾಟಕದಾದ್ಯಂತ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. ಹೀಗಾಗಿ ವಾಹನ ಸವಾರರಿಗೆ ಪ್ರತಿಭಟನೆ ಬಿಸಿ ತಟ್ಟಲಿದೆ. ರಾಜ್ಯಪಾಲರ ಹಠಾವೋ ಕರ್ನಾಟಕ ಬಚಾವೋ ಹೆಸರಿನಲ್ಲಿ ಧರಣಿ ನಡೆಯಲಿದೆ. ಈಗಾಗಲೇ ಎಲ್ಲೆಡೆ ಪ್ರತಿಭಟನೆಗೆ ಸಿದ್ಧತೆ ನಡೆದಿದೆ.