ರಾಹುಲ್ ಗಾಂಧಿ ವಿರುದ್ಧ ಟ್ವೀಟ್: ಬಿಜೆಪಿ ಐಟಿ ಸೆಲ್ ಮುಖ್ಯಸ್ಥನ ವಿರುದ್ಧ ಎಫ್ಐಆರ್!
– ರಾಹುಲ್ ಗಾಂಧಿ ವಿರುದ್ಧ ಸುಳ್ಳು ವಿಡಿಯೋ ಶೇರ್
NAMMUR EXPRESS NEWS
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಕಾಂಗ್ರೆಸ್ ಮುಖಂಡ ರಮೇಶ್ ಬಾಬು ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153A, 120b, 505(2), 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 17ರಂದು ಅಮಿತ್ ಮಾಳವಿಯಾ ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಅನಿಮೇಟೆಡ್ ವಿಡಿಯೋವನ್ನು ಪೋಸ್ಟ್ ಮಾಡಿದ್ದರು. ಆ ವಿಡಿಯೋದಲ್ಲಿ ಕಾಂಗ್ರೆಸ್ ಪಕ್ಷ ದೇಶ ವಿರೋಧಿ
ಚಟುವಟಿಕೆಗಳಲ್ಲಿ ತೊಡಗಿದೆ. ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲಾ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗುತ್ತಾರೆ ಎಂದು ಹೇಳಲಾಗಿತ್ತು. ಇದು ಕಾಂಗ್ರೆಸ್ ನಾಯಕರನ್ನು ಕೆರಳಿಸಿದ್ದು ಬಿಜೆಪಿ ನಾಯಕರ ವಿರುದ್ಧ ಜೂನ್ 19ರಂದು ಕಾಂಗ್ರೆಸ್ ನಾಯಕರು ದೂರು ನೀಡಿದ್ದರು
ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!!
HOW TO APPLY : NEET-UG COUNSELLING 2023