-ಆರೋಗ್ಯ ಇಲಾಖೆಯಿಂದ ಮಹತ್ವದ ಮಾಹಿತಿ
-ಲಸಿಕೆ ಪಡೆಯಲೂ ನಿಯಮ ಪಾಲನೆ
ಬೆಂಗಳೂರು: ರಾಜ್ಯದಲ್ಲೂ ನಾಳೆಯಿಂದ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಕೋವಿಡ್ ಲಸಿಕೆ ವಿತರಣಾ ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರು ಹೆಸರು ನೋಂದಣಿ ಸಮಯದಲ್ಲಿ ನೀಡಿದ ಗುರುತಿನ ಚೀಟಿ ತೋರಿಸಿದವರಿಗೆ ಮಾತ್ರ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಇಲಾಖೆಯಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ.
ಶನಿವಾರದಿಂದ ಕೋವಿಡ್ ಲಸಿಕೆ ವಿತರಣೆ ಆರಂಭವಾಗಲಿದೆ. ಈಗಾಗಲೇ ಆನ್ ಲೈನ್ ನಲ್ಲಿ ಹೆಸರು ನೋಂದಾಯಿಸಿಕೊಂಡವರ ಮೊಬೈಲ್ ಸಂಖ್ಯೆಗೆ ನಿಗದಿತ ಸ್ಥಳ, ದಿನಾಂಕ ಹಾಗೂ ಸಮಯದ ಮಾಹಿತಿಯ ಸಂದೇಶ ಕಳುಹಿಸಲಾಗುತ್ತದೆ. ಅದರ ಪ್ರಕಾರ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಇಲಾಖೆ ಹೇಳಿದೆ.
ಇನ್ನು ಲಸಿಕೆ ಅಭಿಯಾನ ನಡೆಯುವ ಸ್ಥಳದಲ್ಲಿ ವ್ಯಕ್ತಿಯ ಭಾವಚಿತ್ರ ಇರುವ ಗುರುತಿನ ಚೀಟಿ ತೋರಿಸುವುದು ಕಡ್ಡಾಯವಾಗಿದೆ. ಅದನ್ನು ಕೇಂದ್ರದಲ್ಲಿನ ಸಿಬ್ಬಂದಿ ಪರಿಶೀಲನೆ ನಡೆಸಲಿದ್ದಾರೆ ಎಂದೂ ಇಲಾಖೆ ಮಾಹಿತಿ ನೀಡಿದೆ.