ಸಿಲಿಕಾನ್ ಸಿಟಿಗೆ ತಂಪೆರೆದ ವರುಣ!
– ಸಿಡಿಲು ಮಳೆಗೆ ವಿಮಾನ ಹಾರಾಟದಲ್ಲಿ ವಿಳಂಬ
– ಬಿಸಿಲಿನ ಬೇಗೆಯಿಂದ ನಿಟ್ಟುಸಿರು ಬಿಟ್ಟ ಬೆಂಗಳೂರು ಜನ!
NAMMUR EXPRESS NEWS
ಬೆಂಗಳೂರು: ಬಿಸಿಲಿಗೆ ಕಾದು ಕೆಂಪಗಾಗಿದ್ದ ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯಾಗುತ್ತಿದೆ. ಅರ್ಧ ಗಂಟೆಯಿಂದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಹೆಬ್ಬಾಳ, ಬ್ಯಾಟರಾಯನಪುರ, ಯಲಹಂಕ, ಕೆಂಪೇಗೌಡ ವಿಮಾನ ನಿಲ್ದಾಣದ ಕಡೆ ಭಾರಿ ಮಳೆಯಾಗುತ್ತಿದೆ.
ಭಾರೀ ಗುಡುಗು, ಸಿಡಿಲು ಮಳೆಗೆ ವಿಮಾನ ಹಾರಾಟದಲ್ಲಿ ವಿಳಂಬವಾದ ಹಿನ್ನೆಲೆ ಪ್ರಯಾಣಿಕರು ಪರದಾಡುತ್ತಿದ್ದಾರೆ. ಒಂದು ವಾರದಲ್ಲಿ ಬೆಂಗಳೂರಿನಲ್ಲಿ 38 ಡಿಗ್ರಿ ತಾಪಮಾನ ಇರುತ್ತದೆ. ಬೆಂಗಳೂರಿನ ನಾಗರೀಕರು ಬಿಸಿಲಿನ ಬೇಗೆಗೆ ತತ್ತರಿಸಿ ಹೋಗಿದ್ದರು. ಆದರೆ ಮಾ. 22ಅಂದರೆ ಇಂದು ಬೆಂಗಳೂರಿನಲ್ಲಿ ಭಾರಿ ಮಳೆ ಆಗುತ್ತಿರುವ ಪರಿಣಾಮ ತಕ್ಕ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ. ಮಳೆಯಾಗಿದೆ ಅಲ್ಲಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ, ಜನ ಆಶ್ಚರ್ಯಗೊಂಡಿದ್ದಾರೆ. ಮಳೆಯ ನಿರೀಕ್ಷೆಯಲ್ಲಿಲ್ಲದ ಬೆಂಗಳೂರಿಗರು ಕಚೇರಿ ಬಿಟ್ಟು ಮನೆಗೆ ತೆರಳಲು ಪರದಾಡುವ ಪರಿಸ್ಥಿತಿ ಎದುರಾಗಿದೆ.