ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ
* ಮೂರು ಬಾರಿ ಹೃದಯಾಘಾತಗಿ, 500 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ
* ಕನ್ನಡ ಚಿತ್ರರಂಗ ಕಂಡ ಖ್ಯಾತ ಹಾಸ್ಯ ನಟರಲ್ಲೊಬ್ಬರು
NAMMMUR EXPRESS NEWS
ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಅಪರೂಪದ ಕಲಾವಿದ, ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ಅವರು ನಿಧನರಾಗಿದ್ದಾರೆ.
ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್ ಜನಾರ್ಧನ್ ಅವರು ಕೊನೆಯುಸಿರೆಳೆದಿದ್ದಾರೆ.
ನಟ ಬ್ಯಾಂಕ್ ಜನಾರ್ಧನ್ ಅವರು 1948ರಲ್ಲಿ ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಜನಿಸಿದರು.
ಬ್ಯಾಂಕ್ ಜನಾರ್ಧನ್ ಅವರು ಹೊಳಲ್ಕೆರೆಯಲ್ಲೇ ತಮ್ಮ ಬಾಲ್ಯ ಕಳೆದಿದ್ದರು. ಬಳಿಕ ಅಲ್ಲಿಯೇ ಬ್ಯಾಂಕ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಶಾಲೆ ಹಾಗೂ ಕಾಲೇಜು ದಿನಗಳಲ್ಲೇ ನಾಟಕದ ಗೀಳು ಅಂಟಿಸಿಕೊಂಡಿದ್ದರು. ನಾಟಕಗಳಲ್ಲಿ ಅಭಿನಯ ಮಾಡುತ್ತಾ 1991ರಿಂದ ಸಿನಿಮಾರಂಗದ ಕಡೆ ಮುಖ ಮಾಡಿದ್ದರು. ಬ್ಯಾಂಕ್ ಜನಾರ್ಧನ್ ಕನ್ನಡದ ಖ್ಯಾತ ಹಾಸ್ಯನಟರಲ್ಲಿ ಒಬ್ಬರಾಗಿದ್ದಾರೆ.
ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ನಟ ಚಿಕಿತ್ಸೆ ಫಲಸದೇ ಮಣಿಪಾಲ್ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ, ಸಹ ನಟರು ಹಾಗೂ ಸಂಬಂಧಿಕರು ಬ್ಯಾಂಕ್ ಜನಾರ್ಧನ್ ಅವರ ನಿವಾಸಕ್ಕೆ ದೌಡಾಯಿಸುತ್ತಿದ್ದಾರೆ.
ಈ ಹಿಂದೆ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತವಾಗಿತ್ತು.
ಹೀಗಾಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಟ ಬ್ಯಾಂಕ್ ಜನಾರ್ಧನ್ ಆಸ್ಪತ್ರೆಗೆ ದಾಖಲಾದ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಹಾಗೂ ರಂಗಭೂಮಿ ಕಲಾವಿದರು ಯೋಗಕ್ಷೇಮ ವಿಚಾರಿಸಿದ್ದರು. ಇನ್ನು ಹಾಸ್ಯನಟ ಬ್ಯಾಂಕ್ ಜನಾರ್ಧನ್ ಅವರಿಗೆ ಮೂರನೇ ಬಾರಿ ಹೃದಯಾಘಾತ ಆಗಿತ್ತಂತೆ.
ಇಂದು ಬೆಳಗ್ಗೆ 10 ಗಂಟೆಗೆ ನಟ ಬ್ಯಾಂಕ್ ಜನಾರ್ಧನ್ ಅವರ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಬ್ಯಾಂಕ್ ಜನಾರ್ಧನ್ ಪುತ್ರ ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ.