Categories
ಬೆಂಗಳೂರು

ಕನ್ನಡದ ಹಿರಿಯ ಸಾಹಿತಿ ಜಿ.ಎಸ್. ಸಿದ್ದಲಿಂಗಯ್ಯ ನಿಧನ..!!

ಕನ್ನಡದ ಹಿರಿಯ ಸಾಹಿತಿ ಜಿ.ಎಸ್. ಸಿದ್ದಲಿಂಗಯ್ಯ ನಿಧನ..!!
– ವಯೋಸಹಜ ಅನಾರೋಗ್ಯದಿಂದ ಸಾವು
– ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

NAMMUR EXPRESS NEWS
ಬೆಂಗಳೂರು : ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಜಿ.ಎಸ್.ಸಿದ್ದಲಿಂಗಯ್ಯ (94) ಅವರು ವಯೋ ಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ಸೇರಿ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಚಾಮರಾಜಪೇಟೆಯ ಲಿಂಗಾಯತ ರುದ್ರಭೂಮಿ ಯಲ್ಲಿ ಬುಧವಾರ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಸಾಹಿತಿ ಸಿದ್ದಲಿಂಗಯ್ಯ ಅವರು ತುಮಕೂರು ಜಿಲ್ಲೆ ಬೆಳ್ಳಾವಿಯಲ್ಲಿ 1931ರ ಫೆ.20ರಂದು ಜನಿಸಿದರು. ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿಎ ಆನರ್ಸ್ (ಕನ್ನಡ)ನಲ್ಲಿ ಪ್ರಥಮ ರಾಂಕ್ ಪಡೆದು ಉತ್ತೀರ್ಣರಾಗಿದ್ದರು. ಮೈಸೂರು ವಿವಿಯಲ್ಲಿ ಎಂಎ (ಕನ್ನಡ) ಸ್ನಾತಕ ಪದವಿಯನ್ನೂ ಪ್ರಥಮ ದರ್ಜೆಯಲ್ಲಿ ಪಾಸು ಮಾಡಿದ ಅವರು, ನಂತರ ದಾವಣಗೆರೆ, ತುಮಕೂರು, ಶಿವಮೊಗ್ಗದಲ್ಲಿ ಅಧ್ಯಾಪಕ, ಬೆಂಗಳೂರಿನ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಉಪಪ್ರಾಧ್ಯಾಪಕರಾಗಿ, ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿ ಪ್ರಾಚಾರ್ಯರಾಗಿಯೂ ಸೇವೆ ಸಲ್ಲಿಸಿದ್ದರು.

ಸಾಹಿತ್ಯ ಅಕಾಡೆಮಿಯ ವಿಶೇಷ ಗೌರವ, ರಾಜ್ಯೋತ್ಸವ ಪ್ರಶಸ್ತಿ, ಬಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ ಸೇರಿ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು. ರಸಗಂಗೆ, ಉತ್ತರ, ಚಿತ್ರ-ವಿಚಿತ್ರ, ಐವತರ ನೆರಳು, ಋಷ್ಯ ಶೃಂಗ ಹೀಗೆ ನಾನಾ ಕವನ ಸಂಕನಗಳನ್ನು ಬರೆದಿದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.