ಸಿದ್ದರಾಮಯ್ಯ ಬಜೆಟ್ ಯಾರಿಗೆ ಏನು ಸಿಗುತ್ತೆ?
– ಗ್ಯಾರಂಟಿ ಯೋಜನೆಗಳಿಗೆ ಹೇಗೆ ಹಣ ವರ್ಕ್ ಆಗುತ್ತೆ?
– ಉದ್ಯೋಗ ಸೃಷ್ಟಿ, ಕೃಷಿ, ಉದ್ಯಮ ಬೆಳೆಸುತ್ತಾರಾ?
– ಶಾಸಕಾಂಗ ಸಭೆ ಬಳಿಕ ಬಜೆಟ್ ಶುರು
NAMMUR EXPRESS NEWS
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು ಇಡಿ ರಾಜ್ಯದ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗಳ ಜಾರಿಗೆ ಹೊರಟಿದ್ದು, ಗ್ಯಾರಂಟಿ ಜೊತೆಗೆ ಯಾವೆಲ್ಲಾ ಯೋಜನೆ ಜಾರಿ ಮಾಡಲಿವೆ ಎಂಬ ಕುತೂಹಲ ಇದೆ. ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರು 3.09 ಲಕ್ಷ ಕೋಟಿ ರೂಪಾಯಿಗಳ ಪೂರಕ ಬಜೆಟ್ ಮಂಡಿಸಿದ್ದರು. ಈ ಬಾರಿ ಐದು ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂಪಾಯಿ ವೆಚ್ಚವಾಗುವುದರಿಂದ ಈ ಬಾರಿಯ ಬಜೆಟ್ ಗಾತ್ರವು 3.39 ಲಕ್ಷ ಕೋಟಿಗೆ ಏರಿಕೆ ಆಗಬಹುದು ಎನ್ನಲಾಗುತ್ತಿದೆ.
ಗ್ಯಾರಂಟಿ ಹೇಗೆ ವರ್ಕ್ ಔಟ್ ಆಗುತ್ತೆ?:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಈಗಾಗಲೇ ಗೃಹಲಕ್ಷ್ಮೀ ಯೋಜನೆ ಜಾರಿಗೆ ಸಿದ್ದತೆ ನಡೆದಿದೆ. ಈ ಯೋಜನೆಯ ಮೂಲಕ ಮನೆಯ ಯಜಮಾನಿಗೆ ಪ್ರತೀ ತಿಂಗಳು 2 ಸಾವಿರ ರೂಪಾಯಿ ದೊರೆಯಲಿದೆ. ಇನ್ನು ಸಾರಿಗೆ ಇಲಾಖೆ ಮಹಿಳೆಯರಿಗೆ ಸರಕಾರಿ ಸಾಮಾನ್ಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಈಗಾಗಲೇ ಅವಕಾಶವನ್ನು ಕಲ್ಪಿಸಿದೆ. ಅನ್ನಭಾಗ್ಯ ಯೋಜನೆಯ ಮೂಲಕ ಜನರಿಗೆ ಹತ್ತು ಕೆಜಿ ಅಕ್ಕಿ ನೀಡುವ ಯೋಜನೆ ಪ್ರಗತಿಯಲ್ಲಿದೆ. ಆದರೆ ಅಕ್ಕಿಯ ಅಲಭ್ಯತೆಯಿಂದ ಪಡಿತರ ಖಾತೆದಾರರ ಬ್ಯಾಂಕ್ ಖಾತೆಗೆ ಹಣ ಜಮೆ ಆಗಲಿದೆ. ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ ಜನರಿಗೆ 200 ಯೂನಿಟ್ ವಿದ್ಯುತ್ ಲಭ್ಯವಾಗುತ್ತಿದ್ದು, ಈ ಯೋಜನೆ ಜುಲೈ ತಿಂಗಳಿನಿಂದಲೇ ಜಾರಿಗೆ ಬಂದಿದೆ. ಯುವನಿಧಿ ಯೋಜನೆಯ ಕುರಿತು ಸರಕಾರ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಈ ಯೋಜನೆಯ ಮೂಲಕ ಪದವೀಧರ ನಿರುದ್ಯೋಗಿಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ ಅನುಕೂಲವಾಗಲಿದೆ. ರಾಜ್ಯದಲ್ಲಿ ಮುಚ್ಚಿರುವ ಇಂದಿರಾ ಕ್ಯಾಂಟೀನ್ಗಳು ಮತ್ತೆ ಕಾರ್ಯಾರಂಭ ಮಾಡಲಿವೆ. ಹೀಗೆ ಹಲವು ಮಹತ್ವದ ಯೋಜನೆಗೆ ಹಣ ಹೊಂದಾಣಿಕೆ ಮಾಡಬೇಕಿದೆ.
ಸಿದ್ದರಾಮಯ್ಯ ಬಜೆಟ್:
ಗ್ಯಾರಂಟಿಗಳ ಭರವಸೆಯೊಂದಿಗೆ ರಚನೆಯಾಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರವು ಶುಕ್ರವಾರ (ಜುಲೈ7) ತನ್ನ ಮೊದಲ ಬಜೆಟ್ ಮಂಡಿಸಲಿದ್ದು, ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯವ್ಯಯ ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸಾಸಕಾಂಗ ಪಕ್ಷದ ಸಭೆ ನಡೆಸಲಾಯಿತು. ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು ಸಭೆಯಲ್ಲಿ ಭಾಗವಹಿಸಿ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ಸಿಎಂ ಸಿದ್ದರಾಮಯ್ಯ 14ನೇ ಬಜೆಟ್ ಮಂಡನೆ ಮಾಡುವ ಮೂಲಕ ರಾಜ್ಯದಲ್ಲಿ ಅತೀ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಖ್ಯಾತಿಗೆ ಪಾತ್ರರಾಗಲಿದ್ದಾರೆ.
ಇದನ್ನೂ ಓದಿ : ಅಡಿಕೆ ದರ ಎಷ್ಟಿದೆ..ಕಾಳು ಮೆಣಸು ದರ ಎಷ್ಟು?
HOW TO APPLY : NEET-UG COUNSELLING 2023