Categories
ಬೆಂಗಳೂರು ರಾಜ್ಯ

ಯುವತಿ ಅಪಹರಿಸಿ, ಸಾಮೂಹಿಕ ಅತ್ಯಾಚಾರ!

ಯುವತಿ ಅಪಹರಿಸಿ, ಸಾಮೂಹಿಕ ಅತ್ಯಾಚಾರ!
– ರಾಜಧಾನಿಯಲ್ಲಿ ನಡೆದ ಪೈಶಾಚಿಕ ಕೃತ್ಯ
– ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ
– ಒಂಟಿ ಮಹಿಳೆಯ ಸರ ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿ!
– ಬೆಂಗಳೂರು: ಮನೆಗೆ ನುಗ್ಗಿ ಗನ್ ತೋರಿಸಿ 40 ಲಕ್ಷ ಹಣ ದರೋಡೆ!

NAMMUR EXPRESS NEWS
ಬೆಂಗಳೂರು: ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, ಯುವತಿಯನ್ನ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. 23 ವರ್ಷದ ಯುವತಿಯನ್ನು ಕಿಡ್ನಾಪ್ ಮಾಡಿ ಅತ್ಯಾಚಾರ ಎಸಗಿರುವ ಘಟನೆ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ ಕಾವು ಆರುವ ಮುನ್ನವೇ ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣ ವರದಿಯಾಗಿದೆ. ಐತಿಹಾಸಿಕ ಕರಗ ಮಹೋತ್ಸವದ ಮೆರವಣಿಗೆಯಲ್ಲಿ ನಡೆದಿದ್ದ ಗಲಾಟೆಯಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮತ್ತೊಂದೆಡೆ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆದಿದೆ.

ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ!

ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. 25 ವರ್ಷದ ಆಸುಪಾಸಿನ ಮೂವರು ಯುವಕರ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಅಥವಾ ಹಳಿ ದಾಟುವಾಗ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರಾ ಎನ್ನುವುದನ್ನು ಪೊಲೀಸರು ತನಿಖೆ ನಡೆಸಿದ್ದಾರೆ.
25 ವರ್ಷದ ಆಸುಪಾಸಿನಮೂವರು ಯುವಕರ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಅಥವಾ ಹಳಿ ದಾಟುವಾಗ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರಾ ಎನ್ನುವುದನ್ನು ಪೊಲೀಸರು ತನಿಖೆ ನಡೆಸಿದ್ದಾರೆ.

ಇನ್ನು ಈ ಬಗ್ಗೆ ರೈಲ್ವೆ ಎಎಸ್​ಪಿ ಡಾ. ಸೌಮ್ಯಲತಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನಿನ್ನೆ ರಾತ್ರಿ ಯಶವಂತಪುರ ಕಣ್ಣೂರು ಎಕ್ಸ್ಪ್ರೆಸ್ ರೈಲು ಪಾಸ್ ಆಗುವ ವೇಳೆ ಅಡ್ಡಬಂದಿದ್ದಾರೆ. ಮಾರತ್ತಹಳ್ಳಿ ಬ್ರಿಡ್ಜ್ ಪಕ್ಕದಲ್ಲಿ ಈ ಘಟನೆ ನಡೆದಿದೆ. ಶಶಿಕುಮಾರ್ ಲೋಕೇಶ್ ಸೇರಿ ಮೂವರು ಮೃತರಾಗಿದ್ದಾರೆ. ಮೃತ ಮೂವರು ಆಂಧ್ರಪ್ರದೇಶದ ಚಿತ್ತೂರಿನವರು. ಲೋಕೇಶ್ ಕ್ಯಾಬ್ ಡ್ರೈವರ್. ಶಶಿಕುಮಾರ್ ಪಿಜಿಯಲ್ಲಿ ವಾಸವಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿದ್ದರು ಎಂದು ಮಾಹಿತಿ ನೀಡಿದರು.

ಒಂಟಿ ಮಹಿಳೆಯ ಸರ ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿ!

ಬೆಂಗಳೂರು: ವಾಕಿಂಗ್ ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬೆಂಗಳೂರಿನ ವಿಜಯ ನಗರದ 7th c ಮುಖ್ಯರಸ್ತೆ ಹಂಪಿನಗರದಲ್ಲಿ ಈ ಘಟನೆ ನಡೆದಿದೆ. ಮಹಿಳೆ ವಾಕಿಂಗ್ ಹೋಗುವ ಸಮಯದಲ್ಲಿ ಇಬ್ಬರು ಬೈಕ್​ನಲ್ಲಿ ಬಂದ ಖದೀಮರು ಆಕೆಯ ಕುತ್ತಿಗೆಯಲ್ಲಿದ್ದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸರಗಳ್ಳತನದ ಕೃತ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದ್ದು, ಈ ಬಗ್ಗೆ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಮನೆಗೆ ನುಗ್ಗಿ ಗನ್ ತೋರಿಸಿ 40 ಲಕ್ಷ ಹಣ ದರೋಡೆ!

ಬೆಂಗಳೂರು: ಮನೆಗೆ ನುಗ್ಗಿ ಗನ್ ತೋರಿಸಿ ಬರೊಬ್ಬರಿ 40 ಲಕ್ಷ ಹಣ ದರೋಡೆ ಮಾಡಿದ ಘಟನೆ ಇಂದು ರಾತ್ರಿ ಎಂಟು ಗಂಟೆಗೆ ಬೆಂಗಳೂರಿನಲ್ಲಿ ನಡೆದಿದೆ. ವರ್ಣ ಕಾರಿನಲ್ಲಿ ಬಂದ ಖದೀಮರು, ನೇರವಾಗಿ ಮನೆಗೆ ನುಗ್ಗಿದ್ದಾರೆ. ಬಳಿಕ ಗನ್ ತೋರಿಸಿ ಮನೆಯಲ್ಲಿದ್ದವರಿಗೆ ಹೆದುರಿಸಿ ಕಳ್ಳತನ ಮಾಡಿದ್ದಾರೆ. ಘಟನೆಯ ಬಳಿಕ ದೂರುದಾರರು ಪೊಲೀಸರಿಗೆ ಮಾಹಿತಿ ನೀಡಿದ್ದು,ಸ್ಥಳಕ್ಕೆ ಕೊಡಿಗೆಹಳ್ಳಿ ಪೊಲೀಸರು ಭೇಟಿ ನೀಡಿದ್ದಾರೆ. ಈ ವೇಳೆ ಸುಮಾರು ನಲವತ್ತು ಲಕ್ಷ ಹಣ ಮನೆಯಲ್ಲಿ ಯಾಕೆ ಇಟ್ಟಿದ್ದರೂ ಎನ್ನುವ ಪ್ರಶ್ನೆ? ಮೂಡಿದೆ. ಸದ್ಯ ದುಷ್ಕರ್ಮಿಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಘಟನೆ ನಡೆದ ಅಕ್ಕ ಪಕ್ಕ ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.