ಯುವನಿಧಿ: ಸ್ವಯಂ ಘೋಷಣೆ ಪತ್ರ ಕಡ್ಡಾಯ
– ಸೇವಾ ಸಿಂಧು ಪೋರ್ಟಲ್ನಲ್ಲಿ ಅವಕಾಶ
– ನಿರುದ್ಯೋಗಿಗಳಿಗೆ ಸರ್ಕಾರದ ಹಣ: ಪಡೆಯೋದು ಹೇಗೆ?
NAMMUR EXPRESS NEWS
ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಯನ್ನು 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ, 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಪದವಿ ಸ್ನಾತಕೊತ್ತರ ಪದವಿ ಮತ್ತು ಡಿಪ್ಲೊಮಾಗಳ ಅಭ್ಯರ್ಥಿಗಳಿಗೆ ಈಗಾಗಲೇ ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಣಿಯಾಗಿದ್ದು, ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನ ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024ರಿಂದ ನೇರ ನಗದು ವರ್ಗಾವಣೆ ಮಾಡಲಾಗಿದೆ. ಈ ಯೋಜನೆ ಪ್ರತಿ ತಿಂಗಳು ಪಡೆಯಬೇಕಿದ್ದರೆ ಪ್ರತಿ ಮಾಹೆಯಲ್ಲಿ ತಾನು ನಿರುದ್ಯೋಗಿ ಎಂದು, ವ್ಯಾಸಂಗ ಮುಂದುವರಿಸುತ್ತಿಲ್ಲ ಹಾಗೂ ಸ್ವಯಂ ಉದ್ಯೋಗಿಯಲ್ಲ ಎಂದು ಫೆ.29ರವರೆಗೆ ಸೇವಾ ಸಿಂಧು ಪೋರ್ಟಲ್ನಲ್ಲಿ ಸ್ವಯಂ ಘೋಷಣ ಪ್ರಮಾಣ ಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಪ್ರಯೋಜನ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ ಎಂದು ತಿಳಿಸಿದೆ. ಈಗಾಗಲೇ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಜನವರಿ 2024ರಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದೆ. ಮುಂದಿನ ತಿಂಗಳು ಈ ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿದ್ದು, ಎಸ್.ಎಂ.ಎಸ್ ಮೂಲಕ ಅಭ್ಯರ್ಥಿಗಳಿಗೆ ಸಂದೇಶ ರವಾನಿಸಲಾಗುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೋದಿರಬೇಕು. ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು hllt;// sevbsiqghugs.mbwqb|bmb.gov.iq ವೆಬ್ಸೈಟ್ ಮೂಲಕ ವೀಕ್ಷಿಸಬಹುದು.