Categories
ಬೆಂಗಳೂರು ರಾಜ್ಯ

ಯುವನಿಧಿ: ಪ್ರತಿ ತಿಂಗಳು ಪ್ರಮಾಣ ಪತ್ರ ಸಲ್ಲಿಕೆ ಷರತ್ತು!

ಯುವನಿಧಿ: ಪ್ರತಿ ತಿಂಗಳು ಪ್ರಮಾಣ ಪತ್ರ ಸಲ್ಲಿಕೆ ಷರತ್ತು!
– ಮಾರ್ಚ್‌ ಅಂತ್ಯದೊಳಗೆ 4 ಲಕ್ಷ ಮಂದಿ ನೋಂದಣಿ ಗುರಿ
– ಸರ್ಕಾರದಿಂದ ಪ್ರತಿ ಜಿಲ್ಲೆಯಲ್ಲಿ ಉದ್ಯೋಗ ಮೇಳ

NAMMUR EXPRESS NEWS
ಬೆಂಗಳೂರು: ನಿರುದ್ಯೋಗಿ ಯುವಕರಿಗೆ ನೆರವು ನೆರವು ನೀಡುವ ಯುವನಿಧಿ ಯೋಜನೆಗೆ ರಾಜ್ಯದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ನೋಂದಾಯಿಸಿಕೊಂಡಿದ್ದಾರೆ. ಮಾರ್ಚ್ ಅಂತ್ಯದೊಳಗೆ 4 ಲಕ್ಷ ನೋಂದಣಿ ಗುರಿ ಹೊಂದಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್‌ ಮಾಹಿತಿ ನೀಡಿದ್ದಾರೆ. ನ್ಯಾಷನಲ್ ಅಕಾಡೆಮಿಕ್ ಡಿಪಾಸಿಟರಿಯಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಪದವೀಧರರ ಪ್ರಮಾಣ ಪತ್ರಗಳಿದ್ದು, ಅಲ್ಲಿಂದಲೂ ಮಾಹಿತಿ ಪಡೆಯಲಾಗುತ್ತಿದೆ. ದಾಖಲೆಗಳು ಹೊಂದಾಣಿಕೆಯಾಗಿ ಫಲಿತಾಂಶ ಬಂದು ಆರು ತಿಂಗಳು ಆದ ಅಭ್ಯರ್ಥಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಅಭ್ಯರ್ಥಿಗಳು ಪ್ರತಿ ತಿಂಗಳು ಕೆಲಸ ಸಿಕ್ಕಿಲ್ಲ, ಉನ್ನತ ಶಿಕ್ಷಣಕ್ಕೆ ಹೋಗಿಲ್ಲ ಎಂದು ಸ್ವಯಂ ಘೋಷಿತ ಪ್ರಮಾಣ ಪತ್ರವನ್ನು ಅಪ್ಲೋಡ್ ಮಾಡಬೇಕಿದೆ ಎಂದಿದ್ದಾರೆ.

ಪ್ರತಿ ಜಿಲ್ಲೆಯಲ್ಲೂ ಉದ್ಯೋಗ ಮೇಳ!

ಸರ್ಕಾರದಿಂದ ಪ್ರತಿ ಜಿಲ್ಲೆಯಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗುತ್ತದೆ. ಉದ್ಯೋಗ ಮೇಳ ಆಯೋಜನೆ ಉದ್ದೇಶದಿಂದ ರಚನೆಯಾದ ಉನ್ನತ ಸಮಿತಿ ಸಭೆ ಜನವರಿ 25ರಂದು ನಡೆಯಲಿದ್ದು, ಬೆಂಗಳೂರಿನಲ್ಲಿ ಫೆಬ್ರವರಿ ಎರಡು ಅಥವಾ ಮೂರನೇ ವಾರ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು. 50,000 ಅಭ್ಯರ್ಥಿಗಳು, ಕನಿಷ್ಠ 500 ಕಂಪನಿಗಳು ಭಾಗವಹಿಸಬೇಕೆಂಬುದು ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.