- ಸರ್ಕಾರಗಳ ವರ್ಗಾವಣೆ ರಾಜಕೀಯಕ್ಕೆ ಮುನಿಸು?
- ಐಪಿಎಸ್ ಅಧಿಕಾರಿ ರವೀಂದ್ರನಾಥ್ ರಾಜೀನಾಮೆ
ಬೆಂಗಳೂರು: ರಾಜ್ಯದಲ್ಲಿ ಅಧಿಕಾರಿಗಳ ರಾಜೀನಾಮೆ ಪರ್ವ ಶುರುವಾಗಿದೆ. ಸರ್ಕಾರಗಳ ವರ್ಗಾವಣೆ ರಾಜಕೀಯಕ್ಕೆ ಮುನಿಸುಗೊಂಡ ಹಿರಿಯ ಐಪಿಎಸ್ ಅಧಿಕಾರಿ ರವೀಂದ್ರನಾಥ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮೊನ್ನೆ ತಾನೇ ಹಂಪಿ ಡಿವೈಎಸ್ಪಿ ಕಾಶೀಗೌಡ ರಾಜೀನಾಮೆ ನೀಡಿ ಸುದ್ದಿಯಾಗಿದ್ದರು.
ಕಿರಿಯ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬುಧವಾರ ಬಡ್ತಿ ನೀಡಿದ ಹಿನ್ನೆಲೆಯಲ್ಲಿ ತೀವ್ರ ನೊಂದ ಅವರು ತಡರಾತ್ರಿ ರಾಜ್ಯ ಪೆÇಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಡಿಜಿ ಭೇಟಿಯಾಗಲು ಅವಕಾಶ ದೊರಕದೇ ಇರುವುದರಿಂದ ಕಂಟ್ರೋಲ್ ರೂಂಗೆ ತೆರಳಿ ಅವರು ತ್ಯಾಗ ಪತ್ರ ಸಲ್ಲಿಸಿದ್ದಾರೆ.
ಅಮರ್ ಕುಮಾರ್ ಪಾಂಡೆ ಅವರನ್ನು ಕಾನೂನು ಸುವ್ಯವಸ್ಥೆ ಎಡಿಜಿಪಿ ಹುದ್ದೆಯಿಂದ ಡಿಜಿಪಿ ಪೆÇಲೀಸ್ ತರಬೇತಿ ವಿಭಾಗಕ್ಕೂ, ಟಿ.ಸುನೀಲ್ ಕುಮಾರ್ ಅವರನ್ನು ಎಸಿಬಿ ಎಡಿಜಿಪಿಯಿಂದ ಸಿಐಡಿ ವಿಶೇಷ ಹಾಗೂ ಆರ್ಥಿಕ ಅಪರಾಧ ವಿಭಾಗದ ಡಿಜಿಪಿಯಾಗಿಯೂ, ಸಿ.ಎಚ್.ಪ್ರತಾಪ್ ರೆಡ್ಡಿ ಅವರನ್ನು ಎಡಿಜಿಪಿ ಪೆÇಲೀಸ್ ಸಂಪರ್ಕ ಸಂವಹನ ಹಾಗೂ ಅಧುನೀಕರಣ ಜೊತೆಗೆ ಕಾನೂನು ಸುವ್ಯವಸ್ಥೆಗೆ ವರ್ಗಾಯಿಸಿ ಸರ್ಕಾರ ಬುಧವಾರ ರಾಜ್ಯ ಸರ್ಕಾರ ಆದೇಶಿಸಿ ಜೊತೆಗೆ ಈ ಮೂವರಿಗೂ ಡಿಜಿಪಿ ರ್ಯಾಂಕ್ ಬಡ್ತಿ ನೀಡಿತ್ತು. ಈ ಪಟ್ಟಿಯಲ್ಲಿ ತಮ್ಮ ಹೆಸರು ನಮೂದಿಲ್ಲದರಿಂದ ರವೀಂದ್ರನಾಥ್ ಅವರು ರಾಜೀನಾಮೆ ನೀಡಿದ್ದಾರೆ.
ಭಾರತೀಯ ಪೆÇಲೀಸ್ ಇಲಾಖೆಗೆ ತಾವು ಬುಧವಾರ ರಾತ್ರಿ ರಾಜೀನಾಮೆ ನೀಡಿರುವುದಾಗಿ ಸ್ಪಷ್ಟಪಡಿಸಿದರು. ಕಿರಿಯರಿಗೆ ಪ್ರಮೋಷನ್ ನೀಡುವುದು ಅಸಂವಿಧಾನಿಕ. ನನ್ನ ನಿಷ್ಠೆಗೆ ವಿರುದ್ಧವಾಗಿ ಕೆಲಸ ಮಾಡುವಂತೆ ಒತ್ತಾಯಿಸಲಾಗುತ್ತಿತ್ತು. ಆದ್ದರಿಂದ ರಾಜೀನಾಮೆ ನೀಡಿದ್ದೇನೆ. ತಮ್ಮನ್ನು ಯಾರು ಗುರಿಯಾಗಿಸಿಕೊಂಡಿದ್ದಾರೆ ಎಂಬುದನ್ನು ಬಹಿರಂಗಪಡಿಸುವುದಿಲ್ಲ. ಇಲಾಖೆಯಲ್ಲಿ ಟಾರ್ಗೆಟ್ ಮಾಡುವುದು, ಕಿರುಕುಳ ನೀಡುವುದು ಸಾಮಾನ್ಯ. ಹಾಗಂತ ಎಲ್ಲವನ್ನೂ ಒಪ್ಪಿಕೊಂಡು ಸಾಗಬಾರದು. ಒಂದು ದಿನವಾದರೂ ತಪ್ಪಿನ ವಿರುದ್ಧ ಹೋರಾಡಬೇಕು ಎಂದರು.