- ಕರೋನಾ ಹಿನ್ನೆಲೆ ಸರಳ ಆಚರಣೆ
- ಏನೇನು ನಿಷೇಧ..ಏನೇನು ನಿಯಮ..?
ಬೆಂಗಳೂರು: ಮುಸ್ಲಿಂ ಸಮುದಾಯದ ಪವಿತ್ರ ಹಬ್ಬ ಈದ್ ಮಿಲಾದ್ ಅ.30ರಂದು ನಡೆಯಲಿದೆ. ಕರೋನಾ ಎಲ್ಲೆಡೆ ಮತ್ತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಹಬ್ಬದ ಪ್ರಯುಕ್ತ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ, ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ, ಸಾಂಸ್ಕøತಿಕ, ಕಾರ್ಯಕ್ರಮ, ಸಭೆ ಸಮಾರಂಭಗಳನ್ನು ನಿಷೇಧ ಮಾಡಲಾಗಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ ಮತ್ತು ಡಿಜೆ ಬಳಕೆಯನ್ನು, ಖಬರಸ್ತಾನ್ ಒಳಗೊಂಡಂತೆ ಯಾವುದೇ ರೀತಿಯ ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವುದು ಕಡ್ಡಾಯವಾಗಿ ನಿಷೇಧಿಸಿದೆ.
ಏನೇನು ಮಾಡಬೇಕು?: ಮಸೀದಿ/ದರ್ಗಾಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ಮಾಸ್ಕ್ ಉಪಯೋಗಿಸುವುದು, ಸ್ಯಾನಿಟೈಸರ್ ಹಾಗೂ ಸೋಪಿನಲ್ಲಿ ಕೈತೊಳೆಯುವುದು, ದೈಹಿಕ ಅಂತರ ಕಾಪಾಡುವುದು ಮತ್ತು ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ನೀಡಿರುವ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಿ ಶಾಂತಿಯುತವಾಗಿ ಈದ್ ಮಿಲಾದ್ ಹಬ್ಬವನ್ನು ಆಚರಿಸಲು ವಕ್ಫ್ ಅಧಿಕಾರಿಗಳು ಮನವಿ ಮಾಡಿದ್ದಾರೆ.