- ಕರೋನಾ ನಡುವೆ ಬ್ಲಾಕ್ ಫಂಗಸ್ ಅಬ್ಬರ
- ರಾಜ್ಯದಲ್ಲಿ ವಾಹನ ಸೀಜ್: ಸಮಸ್ಯೆ ಉಲ್ಬಣ
- ಒಂದು ತಿಂಗಳು ಕಾದಿದೆ ಗಂಡಾಂತರ!
- ಜುಲೈನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ?
ಬೆಂಗಳೂರು: ಕರ್ನಾಟಕದಲ್ಲಿ ಕರೋನಾ ವೈರಸ್ ಸೋಂಕಿನ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಾಣುತ್ತಿದೆ. ಆದರೆ ಸಾವಿನ ಪ್ರಮಾಣ ಮಾತ್ರ ಏರಿಕೆ ಯಾಗುತ್ತಿರೋದು ಆತಂಕವನ್ನು ಮೂಡಿಸಿದೆ. ರಾಜ್ಯದಲ್ಲಿ ಇದುವರೆಗೆ ಬರೋಬ್ಬರಿ 25,282 ಸಾವಿನ ಪ್ರಕರಣ ದಾಖಲಾಗಿದೆ. ಈ ನಡುವೆ ಬ್ಲಾಕ್ ಫಂಗಸ್ ಈಗ ರಾಜ್ಯದ ಜನತೆಯ ನಿದ್ದೆಗೆಡಿಸಿದೆ. ಪ್ರತಿ ನಿತ್ಯ 300ಕ್ಕೂ ಹೆಚ್ಚು ಕೇಸ್ ಪತ್ತೆಯಾಗುತ್ತಿದೆ.
ಇನ್ನು ರಾಜ್ಯದಲ್ಲಿ ಸಾವಿರಾರು ವಾಹನಗಳು ಸೀಜ್ ಆಗಿವೆ. ನೂರಾರು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲಾ ಊರಲ್ಲೂ ಪೊಲೀಸರು ಎಲ್ಲಾ ವಾಹನಗಳ ತಪಾಸಣೆ ಮಾಡಲಾಗಿದೆ. ಇನ್ಮೇಲೆ ವಾಹನ ರಸ್ತೆಗಿಳಿದ್ರೆ ಸೀಜ್ ಗ್ಯಾರಂಟಿ.
ದಾಖಲೆಯ ಸಾವು!: ರಾಜ್ಯದಲ್ಲಿ ಭಾನುವಾರ 626 ಮಂದಿ ಕರೋನಾದಿಂದ ಸಾವನ್ನು ಕಂಡಿದ್ದಾರೆ. ಇದು ರಾಜ್ಯದಲ್ಲಿ ದಾಖಲಾದ ಅತ್ಯಧಿಕ ಸಾವಿನ ಸಂಖ್ಯೆಯಾಗಿದೆ. ಕಳೆದೊಂದು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ಬರೋಬ್ಬರಿ 11 ಸಾವಿರ ಮಂದಿ ಕೊರೊನಾ ವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಭಾನುವಾರ 25,979 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 24,24,904ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 4,72,986 ಸಕ್ರೀಯ ಪ್ರಕರಣಗಳಿವೆ. ಕಳೆದೊಂದು ವಾರದಲ್ಲಿ ಕೊರೊನಾ ಸೋಂಕಿನ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗಿದ್ದರೂ ಕೂಡ ಸಾವಿನ ಪ್ರಮಾಣ ಮಾತ್ರ ಏರಿಕೆಯಾಗುತ್ತಿರೋದು ಆತಂಕ ಮೂಡಿಸಿದೆ.
ಬ್ಲಾಕ್ ಫಂಗಸ್ ಅಬ್ಬರ!: ದಿನಕ್ಕೆ 300 ಬ್ಲಾಕ್ ಫಂಗಸ್ ಕೇಸ್ ಹೆಚ್ಚಳವಾಗಿದೆ. ಎಲ್ಲಾ ಜಿಲ್ಲೆಗಳಲ್ಲೂ ಬ್ಲಾಕ್ ಫಂಗಸ್ ಹೆಚ್ಚಾಗಿದ್ದು, ಸಾವುಗಳು ಕೂಡ ಸಂಭವಿಸಿದೆ. ದಿನ ಸಾವಿರ ಕೇಸ್ ಬರುವ ಸಾಧ್ಯತೆ ಇದೆ. ತಾಲೂಕು ಆಸ್ಪತ್ರೆಗಳಲ್ಲಿ ಇದಕ್ಕೆ ಚಿಕಿತ್ಸೆ ಲಭ್ಯ ಇಲ್ಲ. ಲಸಿಕೆ ಇನ್ನು ಸಿಕ್ಕಿಲ್ಲ. ಕೇಂದ್ರ ಸರಕಾರ ಈಗಾಗಲೇ ಒಂದು ಸಾವಿರ ವಯಲ್ಸ್ ಕೊಟ್ಟಿದೆ. ಇನ್ನು ಹೆಚ್ಚಿನ ಲಸಿಕೆ ನೀಡುವ ಭರವಸೆ ನೀಡಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.