- ಬಿಬಿಎಂಪಿ ವಾರ್ ಶುರು: ಮೀಸಲಾತಿ ಪ್ರಕಟ
- ವಾರ್ಡ್ ಮೀಸಲಾತಿಯಲ್ಲಿ ಬದಲಾವಣೆ ಇಲ್ಲ
- ರಾಜಧಾನಿಯಲ್ಲಿ ರಾಜಕೀಯ ಜಿದ್ದಾಜಿದ್ದು?
NAMMUR EXPRESS NEWS
ಬೆಂಗಳೂರು: ಅಂತೂ ಇಂತೂ ಬಿಬಿಎಂಪಿ ವಾರ್ಡ್ವಾರು ಕ್ಷೇತ್ರಗಳನ್ನು ಪುನರ್ ವಿಂಗಡಣೆ ಮಾಡಲಾಗಿದ್ದು, ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ. ಇದೀಗ ರಾಜ್ಯದಲ್ಲಿ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಏನಾಗಲಿದೆ ಎಂಬ ಚರ್ಚೆ ಕೇಳಿ ಬಂದಿದೆ. ಬಿಬಿಎಂಪಿ ಮೀಸಲಾತಿ ಮತ್ತು ವಾರ್ಡ್
2011ರ ಜನಗಣತಿಯ ಆಧಾರದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 243 ವಾರ್ಡ್ವಾರು ಮೀಸಲಾತಿಯನ್ನು ಅಂತಿಮಗೊಳಿಸಿದೆ. 243 ವಾರ್ಡ್ ಗಳ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡದೇ ಆದೇಶ ಹೊರಬಿದ್ದಿದೆ.
ಇದರ ಕರಡು ಅಧಿಸೂಚನೆಯನ್ನು ಆಗಸ್ಟ್ 3 ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಲಾಗಿತ್ತು. ಬಂದ ಆಕ್ಷೇಪಣಿಗಳನ್ನು ಪರಿಶೀಲಿಸಿ ಈಗ ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ.
ಕೋರ್ಟ್ ಹೇಳಿದ್ದೇನು?: ಬಿಬಿಎಂಪಿ ಚುನಾವಣೆ ಸಂಬಂಧ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಈ ಹಿಂದೆ 8 ವಾರಗಳಲ್ಲಿ ಚುನಾವಣೆ ನಡೆಸಲು ಸೂಚನೆ ನೀಡಿತ್ತು. ಇದನ್ನು ಪಾಲಿಸದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೆ ಒಂದು ವಾರದ ಒಳಗೆ ಮೀಸಲಾತಿ ಪ್ರಕಟಿಸುವಂತೆ ಸೂಚಿಸಿತ್ತು. ಹೀಗಾಗಿ ಆಗಸ್ಟ್ 3ರ ಬುಧವಾರ ಸಂಜೆ ಈ ಮೀಸಲಾತಿಯ ಕರಡು ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದರಿಂದಾಗಿ ಚುನಾವಣಾ ಆಯೋಗಕ್ಕೆ ಇದ್ದ ಅಡ್ಡಿ ನಿವಾರಣೆಯಾಗಿತ್ತು.
ಅಂತೆಯೇ ಈಗ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪರಿಶೀಲನಾ ಸಮಿತಿಯು ಮಾಡಿರುವ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಂಡಿದೆ. ಬಿಬಿಎಂಪಿ ಅಧಿನಿಯಮ 2020 ಕಲಂ 8(3)ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ, 2011ರ ಜನಗಣತಿಯ ಆಧಾರದ ಮೇರೆಗೆ ಬಿಬಿಎಂಪಿ ವಾರ್ಡ್ವಾರು ಮೀಸಲಾತಿಯನ್ನು ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಿದೆ.
ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸದ್ಯಕ್ಕಿಲ್ಲ
ಮೀಸಲಾತಿ ಕೋರ್ಟ್ ಅಲ್ಲಿದೆ, ಸರಕಾರ ಮತ್ತು ಚುನಾವಣೆ ನಿಗದಿ ಮಾಡಬೇಕು. ಆದರೆ ಸದ್ಯಕ್ಕೆ ಚುನಾವಣೆ ನಡೆಯುವ ಯಾವುದೇ ಲಕ್ಷಣ ಕಾಣುತ್ತಿಲ್ಲ.
ಏಪ್ರಿಲ್ ವಿಧಾನ ಸಭೆ!
ರಾಜ್ಯದಲ್ಲಿ ಏಪ್ರಿಲ್ ತಿಂಗಳು ವಿಧಾನ ಸಭಾ ಚುನಾವಣೆ ನಡೆಯಲಿದೆ. ಬಹುತೇಕ ಅಭ್ಯರ್ಥಿಗಳು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಸಮಾವೇಶ, ಸಿದ್ಧತೆ ನಡೆಯುತ್ತಿವೆ.