ಕನ್ನಡದ ಮೂರು ಚಿತ್ರಗಳು ಕಣದಲ್ಲಿ!
- ರಾಬರ್ಟ್, ಯುವರತ್ನ, ಗರುಡ ಗಮನ ವೃಷಭ ವಾಹನ’ ಪೈಪೋಟಿ
NAMMUR EXPRESS NEWS
ಬೆಂಗಳೂರು: ಪ್ರತಿಷ್ಠಿತ ದಕ್ಷಿಣ ಭಾರತದ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಅಥವಾ ‘ಸೈಮಾ 2021’ನೇ ಸಾಲಿನ ನಾಮನಿರ್ದೇಶನ ಪಟ್ಟಿ ಬಿಡುಗಡೆ ಆಗಿದೆ. ಸೈಮಾ 10ನೇ ಆವೃತ್ತಿ (2021) ಬೆಂಗಳೂರಿನಲ್ಲಿ ಇದೇ ಸೆ.10 ಹಾಗೂ 11ರಂದು ನಡೆಯಲಿದ್ದು, ಬುಧವಾರ ಸೈಮಾ ನಾಮನಿರ್ದೇಶನಗೊಂಡ ಸಿನಿಮಾಗಳ ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಭಾರತದ ವಿವಿಧ ಸಿನಿಮಾಗಳು ಇಲ್ಲಿ ನಾಮನಿರ್ದೇಶನಗೊಂಡಿವೆ. ಕನ್ನಡದಿಂದ ಮೂರು ಚಿತ್ರಗಳು ನಾಮಿನೇಟ್ ಆಗಿವೆ.
ಕನ್ನಡದ ಮೂರು ಚಿತ್ರಗಳು ನಾಮಿನೇಟ್:
ತಮಿಳು, ಮಲಯಾಳಂ, ತೆಲುಗು ಹಾಗೂ ಕನ್ನಡದಲ್ಲಿ ನಾಮನಿರ್ದೇಶನಗೊಂಡ ಸಿನಿಮಾಗಳ ವಿವರವನ್ನು ಸೈಮಾ ತನ್ನ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದೆ. ಕನ್ನಡದಲ್ಲಿ 2021ರಲ್ಲಿ ಬಿಡುಗಡೆಯಾದ ಸಿನಿಮಾಗಳ ಪೈಕಿ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ತರುಣ್ ನಿರ್ದೇಶನದ ರಾಬರ್ಟ್, ನಟ ದಿವಂಗತ ಪುನೀತ್ ರಾಜ್ಕುಮಾರ್ ನಟನೆಯ ‘ಯುವರತ್ನ’, ರಾಜ್ ಬಿ.ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಗರುಡ ಗಮನ ವೃಷಭ ವಾಹನ’, ಚಿತ್ರಗಳು ನಾಮ ನಿರ್ದೇಶನಗೊಂಡಿದೆ.
ರಾಬರ್ಟ್, ಯುವರತ್ನ, ರಾಜ್ ಬಿ.ಶೆಟ್ಟಿ , ನಿರ್ದೇಶಿಸಿರುವ ಗರುಡ ಗಮನ ವೃಷಭ ವಾಹನ ಚಿತ್ರಗಳು ನಾಮ ನಿರ್ದೇಶನಗೊಂಡಿದೆ. ಜನರು www.siima.inಗೆ ಲಾಗ್ಇನ್ ಆಗಿ ತಮ್ಮ ನೆಚ್ಚಿನ ಸಿನಿಮಾಗೆ ವೋಟ್ ಮಾಡಬಹುದಾಗಿದೆ.
ಇನ್ನು ಕನ್ನಡದಲ್ಲಿ ಅತಿ ಹೆಚ್ಚು ವಿಭಾಗಗಳಲ್ಲಿ ನಾಮ ನಿರ್ದೇಶನಗೊಂಡ ಸಿನಿಮಾಗಳ ಪೈಕಿ ರಾಬರ್ಟ್ ಮುಂಚೂಣಿಯಲ್ಲಿದೆ. 10 ವಿಭಾಗಗಳಲ್ಲಿ ಈ ಸಿನಿಮಾ ನಾಮನಿರ್ದೇಶನಗೊಂಡಿದೆ. ಗರುಡ ಗಮನ ವೃಷಭ ವಾಹನ ಸಿನಿಮಾ 8 ವಿಭಾಗಗಳಲ್ಲಿ ಹಾಗೂ ಯುವರತ್ನ ಏಳು ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿವೆ.
ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾ, 12 ವಿಭಾಗಗಳಲ್ಲಿ ನಾಮನಿರ್ದೇಶನಗೊಳ್ಳುವ ಮೂಲಕ, ಅತಿ ಹೆಚ್ಚು ವಿಭಾಗದಲ್ಲಿ ನಾಮನಿರ್ದೇಶನಗೊಂಡ ಸಿನಿಮಾ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.