- ನ.7ರವರೆಗೂ ರಾಜ್ಯದ ಹಲವೆಡೆ ಮಳೆ
- ಕೃಷಿಕರೇ ಎಚ್ಚರ ಎಚ್ಚರ
ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಳೆಕಾಟ ಆರಂಭವಾಗುವ ಸೂಚನೆ ಇದ್ದು, ಜನತೆಗೆ ಮತ್ತೊಂದು ಸಂಕಟ ಆರಂಭವಾಗಲಿದೆ.
ಮಂಗಳವಾರದಿಂದ ನ.7ರವರೆಗೂ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ಈಗಾಗಲೇ ಮಲೆನಾಡು, ಕರಾವಳಿಯಲ್ಲಿ ಮಳೆ ಆಗುತ್ತಿದ್ದು, ಅಡಿಕೆ, ಭತ್ತ, ಕಾಳು ಮೆಣಸು ಬೆಳೆಗಾರರಿಗೆ ಭಾರಿ ಹಾನಿಯಾಗಿದೆ.
ಏಕೆ ಮಳೆ?: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಈಗಾಗಲೇ ತಮಿಳುನಾಡು, ಆಂಧ್ರ ಪ್ರದೇಶ, ಕೇರಳದಲ್ಲಿ ಮಳೆಯಾಗುತ್ತಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನವೆಂಬರ್ 5ರಿಂದ ನ.7ರವರೆಗೆ ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಮೇಘಾಲಯ, ಕೇರಳ, ತಮಿಳುನಾಡು ರಾಜ್ಯಗಳಲ್ಲಿಯೂ ಮಳೆಯಾಗುತ್ತಿದೆ. ಇದರ ಪರಿಣಾಮದಿಂದ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ನ.7ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ಹೆಚ್ಚಾಗಲಿದೆ. ನ.5ರಿಂದ 7ರವರೆಗೆ ಕರಾವಳಿ ಜಿಲ್ಲೆಗಳ ಜೊತೆಗೆ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮಳೆಯಾಗಲಿದೆ. ನ.5ರ ಬಳಿಕ ರಾಜ್ಯದಲ್ಲಿ 2-3 ದಿನ ಭಾರೀ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕರ್ನಾಟಕದಲ್ಲಿ ಈಗಾಗಲೇ ಹಿಂಗಾರು ಮಳೆ ಆರಂಭವಾಗಿದ್ದು, ಡಿಸೆಂಬರ್ ತಿಂಗಳ ಅಂತ್ಯದವರೆಗೂ ಆಗಾಗ ಮಳೆಯಾಗುವ ಸಾಧ್ಯತೆಯಿದೆ. ನ. 5ರಿಂದ 2 ದಿನಗಳ ಕಾಲ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ನ.5ರಿಂದ ಸಾಧಾರಣ ಮಳೆಯಾಗಲಿದೆ.
ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ನ. 7ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ
ನವೆಂಬರ್ 3 ರಿಂದ 7ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ. ಹಿಂಗಾರು ಮಳೆ ಆರಂಭವಾಗಿದೆ. ಅಲ್ಲದೆ ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ನವೆಂಬರ್ 4ರ ನಂತರ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಮಳೆಯಾಗುವ ಸಾಧ್ಯತೆಗಳಿವೆ. ಅಕ್ಟೋಬರ್ 28ಕ್ಕೆ ನೈರುತ್ಯ ಮುಂಗಾರು ಮರಳುವಿಕೆ ಮುಗಿದಿದ್ದು, ಈಶಾನ್ಯ ಹಿಂಗಾರು ಆರಂಭವಾಗಿದೆ.