- ಮಕ್ಕಳು, ವಯಸ್ಸಾದವರಿಗೆ ತೊಂದರೆ ಹಿನ್ನೆಲೆ
- ಪೊಲೀಸ್ ಇಲಾಖೆ ಆದೇಶ
ಬೆಂಗಳೂರು: ರಾಜ್ಯಾದ್ಯಂತ ಮಸೀದಿಗಳಲ್ಲಿ ಅಳವಡಿಸಿರುವ ಅನಧಿಕೃತ ಧ್ವನಿವರ್ಧಕಗಳನ್ನು ತೆರವು ಮಾಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಮಾಡಿದ್ದಾರೆ. ಈ ಮೂಲಕ ಇನ್ಮುಂದೆ ಮಸೀದಿಗಳಲ್ಲಿ ಧ್ವನಿ ವರ್ಧಕ ಬಳಕೆಗೆ ನಿಷೇಧ ಹೇರಿದಂತಾಗಿದೆ.
ಕಳೆದ ತಿಂಗಳು ವಕೀಲರಾದ ಹರ್ಷ ಮುತಾಲಿಕ್, ಮಸೀದಿಯಲ್ಲಿನ ಧ್ವನಿ ವರ್ಧಕಗಳಿಂದ ತೊಂದರೆ ಆಗುತ್ತಿದೆ. ದಿನಕ್ಕೆ ಐದಾರು ಬಾರಿ ಪ್ರಾರ್ಥನೆ ಮಾಡಲಾಗುತ್ತದೆ. ಇದ್ದರಿಂದ ಮಕ್ಕಳಿಗೆ, ವಯಸ್ಸಾದವರಿಗೆ, ಹೃದಯ ಸಂಬಂಧಿ ಖಾಯಿಲೆ ಇರುವವರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ. ಹಾಗಾಗಿ ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧ ಮಾಡಬೇಕು ಎಂದು ದೂರು ನೀಡಿದ್ದರು. ಈ ದೂರಿನ ಹಿನ್ನೆಲೆ ಮಹತ್ವದ ಆದೇಶ ಹೊರ ಬಿದ್ದಿದೆ.