- ಬಾಗೇಪಲ್ಲಿ ತಾಲ್ಲೂಕಿನ ಹಲವೆಡೆ ಭೀಕರ ಶಬ್ದ
- ಕಳೆದ ಕೆಲ ವರ್ಷದಿಂದ ಏನಾಗ್ತಿದೆ..?!
NAMMUR EXPRESS NEWS
ಚಿಕ್ಕಬಳ್ಳಾಪುರ: ರಾಜ್ಯದ ಗಡಿಯ ಹತ್ತಾರು ಗ್ರಾಮಗಳಲ್ಲಿ ಪದೇ ಪದೇ ಭೂಮಿಯೊಳಗೆ ಭಾರೀ ಸ್ಫೋಟದ ಸದ್ದು ಕೇಳಿ ಬರ್ತಿದ್ದು ಜನ ಆತಂಕದಿಂದ ಕಾಲ ಕಳೆಯುವಂತಾಗಿದೆ. ಇನ್ನುಭೂಮಿಯ ಒಳಗೆ ಏನಾಗ್ತಿದೆ ಎಂಬ ರಹಸ್ಯವೂ ಇದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಹತ್ತಾರು ಹಳ್ಳಿಗಳಲ್ಲಿ ಭಾನುವಾರ ರಾತ್ರಿಯಿಂದ ಭೂಮಿಯ ಅಂತರಾಳದಿಂದ ವಿಚಿತ್ರ ಸದ್ದು ಕೇಳಿಬರುತ್ತಿದೆ. ಆ ಸದ್ದಿಗೆ ಭೂಮಿಯೇ ಗಡ ಗಡ ನಡುಗುತ್ತಿದೆ. ಇದ್ರಿಂದ ಜನರಿಗೆ ಭೂಕಂಪನದ ಅನುಭವ ಆಗುತ್ತಿದೆ. ರಾತ್ರಿ 8 ಗಂಟೆಯಿಂದ ಸಣ್ಣ ಪ್ರಮಾಣದಲ್ಲಿ ಆರಂಭವಾದ ಸದ್ದು ರಾತ್ರಿ 9.30 ಹಾಗೂ 9.45 ರಲ್ಲಿ ಬಹಳಷ್ಟು ಜೋರಾಗಿ ಕೇಳಿಬಂದಿದೆ. ಇದರಿಂದ ಭೂಮಿಯೇ ಅಲುಗಾಡಿದ ಅನುಭವ ಆಗಿ ಮನೆಯಲ್ಲಿದ್ದವರೆಲ್ಲಾ ಕೀರಾಚಾಡುತ್ತಾ ಹೊರಗೆ ಬಂದಿದ್ದಾರೆ. ಮನೆಯಲ್ಲಿದ್ದ ಪಾತ್ರೆ ಸಾಮಾನುಗಳಲ್ಲೆವೂ ಅಲುಗಾಡತೊಡಗಿವೆ. ಮಕ್ಕಳು ಭಯಭೀತರಾಗಿ ಚೀರಾಡಿ ಕಣ್ಣೀರು ಹಾಕಿದ್ದಾರೆ. ದಿಕ್ಕು ತೋಚದ ಜನ ಇಡೀ ರಾತ್ರಿ ಮನೆಯ ಹೊರಭಾಗದಲ್ಲೇ ಕಾಲ ಕಳೆದು ಜಾಗರಣೆ ಮಾಡಿದ್ದಾರೆ.
ಬಾಗೇಪಲ್ಲಿ ತಾಲ್ಲೂಕಿನ ಪೆದ್ದತುಂಕೇಪಲ್ಲಿ, ಕದಿರನ್ನಗಾರಪಲ್ಲಿ, ದಾಸಯ್ಯಗಾರಪಲ್ಲಿ, ಟೆಂಕಮಾಕಲಪಲ್ಲಿ, ಲಘುಮದ್ದೇಪಲ್ಲಿ. ಮದ್ದಲಖಾನೆ, ಗುರಾಲದಿನ್ನೆ, ಈರಗಂಟಪಲ್ಲಿ, ಶಂಕವಾರಂಪಲ್ಲಿ ಸೇರಿದಂತೆ ಇನ್ನೂ ಹಲವು ಗ್ರಾಮಗಳಲ್ಲಿ ಈ ರೀತಿಯ ಅನುಭವ ಆಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇದೇ ಮೊದಲಲ್ಲ. ಈ ಹಿಂದೆಯೂ ಚಿಕ್ಕಬಳ್ಳಾಪುರ ತಾಲ್ಲೂಕಿನ ಬಂಡಹಳ್ಳಿ ಹಾಗೂ ಚಿಂತಾಮಣಿ ತಾಲ್ಲೂಕಿನ ಮಿಟ್ಟಹಳ್ಳಿ ಸೇರಿ ಹಲವು ಗ್ರಾಮಗಳಲ್ಲಿ ಇದೇ ರೀತಿಯ ಸದ್ದು ಭೂಮಿ ಕಂಪಿಸಿದ ಅನುಭವಗಳಾಗಿದ್ದವು. ಕೆಲವು ಬಾರಿ 3.0 ತೀವ್ರತೆಯ ಭೂಕಂಪನ ಸಹ ವರದಿಯಾಗಿತ್ತು.