- ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ವಜಾ
ಬೆಂಗಳೂರು: ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಅವರಿಗೆ ಜೈಲು ಫಿಕ್ಸ್ ಆಗಿದೆ. ಏಕೆಂದರೆ ಅವರು ಹಾಕಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ, ರಾಹುಲ್, ರವಿ ಶಂಕರ್, ಲೂಮ್ ಪೆಪ್ಪರ್ ಸೇರಿ ಆರು ಜನರು ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿದ್ದರು. ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಈ ಮೂಲಕ ಡ್ರಗ್ಸ್ ದಂಧೆಕೋರರಿಗೆ ನಡುಕ ಶುರುವಾಗಿದೆ.
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ, ರಾಹುಲ್ , ರವಿಶಂಕರ್, ಲೂಮ್ ಪೆಪ್ಪರ್ ಸೇರಿ ಆರು ಜನರು ಜಾಮೀನು ಕೋರಿ ಹೈಕೋರ್ಟ್?ಗೆ ಅರ್ಜಿ ಸಲ್ಲಿದ್ದರು. ನ್ಯಾಯಮೂರ್ತಿ ಶ್ರೀನಿವಾಸ್? ಹರೀಶ್? ಕುಮಾರ್ ಅವರನ್ನು ಒಳಗೊಂಡಿರುವ ಏಕಸದಸ್ಯ ಪೀಠ, ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಈ ಹಿಂದೆ ಕೂಡ ಇವರ ಜಾಮೀನು ಅರ್ಜಿ ವಿಚಾರಣಾ ನ್ಯಾಯಾಲಯ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ನಟಿಯರಿಬ್ಬರು ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಗಳ ವಿಚಾರಣೆ ನಡೆಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಈ ಮಧ್ಯೆ ಸಿಸಿಬಿ ನಟಿ ಮಣಿಯರಿಗೆ ಜಾಮೀನು ನೀಡದಂತೆ ಜಾಮೀನು ನೀಡದಂತೆ ಮನವಿ ಮಾಡಿತ್ತು. ಮಂಗಳವಾರ ಹೈಕೋರ್ಟ್ ತೀರ್ಪು ನೀಡಿದ್ದು ಜಾಮೀನು ವಜಾ ಮಾಡಿದೆ.