- ಹೃದಯಾಘಾತದಿಂದ ವಿಧಿವಶ
- ಕನ್ನಡ ಪತ್ರಿಕೋದ್ಯಮದ ರೆಬೆಲ್ ಸ್ಟಾರ್
ಬೆಂಗಳೂರು: ಕನ್ನಡ ಪತ್ರಿಕೋದ್ಯಮ, ತನಿಖಾ ಮಾಧ್ಯಮದ ಭೀಷ್ಮ, ಬರಹಗಾರ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
62 ವರ್ಷದ ರವಿ ಬೆಳಗೆರೆ( 1958-2020) ಬೆಂಗಳೂರಿನ ಪದ್ಮನಾಭನಗರದಲ್ಲಿರುವ ತಮ್ಮ ಹಾಯ್ ಬೆಂಗಳೂರು ಕಚೇರಿಯಲ್ಲಿ ರಾತ್ರಿ ಊಟ ಮುಗಿಸಿ, ನಿದ್ರೆ ಮಾಡುತ್ತಿದ್ದಾಗ ಅಲ್ಲೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಪತ್ರಿಕೋದ್ಯಮದ ಕಂಡ ಸಾಧಕ ಮರೆಯಾಗಿದ್ದಾನೆ.
ಕನಕಪುರ ಮುಖ್ಯ ರಸ್ತೆಯ ಗುಬ್ಳಾಳದ ಕರಿಶ್ಮಾ ಹಿಲ್ಸ್ನ ರವಿ ಬೆಳಗೆರೆಯವರ ನಿವಾಸದಲ್ಲಿ ಮೃತದೇಹವನ್ನು ಇರಿಸಲಾಗಿದೆ. ರವಿ ಬೆಳಗೆರೆಯವರ ಕನಸಿನ ಕೂಸಾಗಿದ್ದ ಪದ್ಮನಾಭನಗರದ ಪ್ರಾರ್ಥನಾ ಶಾಲೆಯ ಅವರಣಕ್ಕೆ ಮೃತದೇಹವನ್ನು ಶಿಫ್ಟ್ ಮಾಡಲು ಸಿದ್ಧತೆ ನಡೆಸಲಾಗಿದೆ.
ಬನಶಂಕರಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗಿದೆ. ಬ್ರಾಹ್ಮಣ ವಿಧಿವಿಧಾನದ ಪ್ರಕಾರ ಅಂತ್ಯ ಸಂಸ್ಕಾರ ನನಡೆಯಲಿದೆ. ರವಿ ಬೆಳಗೆರೆಯವರು ಮೊದಲ ಪತ್ನಿ ಲಲಿತಾ, ಎರಡನೇ ಪತ್ನಿ ಯಶೋಮತಿ, ನಾಲ್ವರು ಮಕ್ಕಳಾದ ಕರ್ಣ, ಭಾವನಾ ಬೆಳಗೆರೆ, ಚೇತನಾ ಬೆಳಗೆರೆ, ಹಿಮವಂತ ಬೆಳಗೆರೆ ಹಾಗೂ ಮೊಮ್ಮಕ್ಕಳು, ಕುಟುಂಬಸ್ಥರು, ಲಕ್ಷಾಂತರ ಅಭಿಮಾನಿಗಳನ್ನು ಅಗಲಿದ್ದಾರೆ. ಪ್ರಾರ್ಥನಾ ಸ್ಕೂಲ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಾಯ್ ಬೆಂಗಳೂರು ಪತ್ರಿಕೆ ಮೂಲಕ ಕನ್ನಡ ಮಾಧ್ಯಮ ಲೋಕದಲ್ಲಿ ಹೊಸ ಸಾಧನೆ ಮಾಡಿದ್ದರು.
1958ರ ಮಾರ್ಚ್ 15ರಂದು ಬಳ್ಳಾರಿಯಲ್ಲಿ ಜನಿಸಿದ ರವಿ ಬೆಳಗೆರೆ ಲಂಕೇಶ್ ಪತ್ರಿಕೆ, ಸಂಯುಕ್ತ ಕರ್ನಾಟಕ ಮುಂತಾದ ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸಿದ್ದರು. ಬಳಿಕ ಹಾಯ್ ಬೆಂಗಳೂರು ಪತ್ರಿಕೆ, ಓ ಮನಸೇ ಮ್ಯಾಗಜಿನ್ ಪ್ರಕಟಿಸಿದ್ದರು. ಅನೇಕ ಪ್ರಸಿದ್ಧ ಕಾದಂಬರಿಗಳು, ಕತೆಗಳು, ಅನುವಾದಿಗಳು, ಜೀವನಚರಿತ್ರೆಗಳನ್ನು ಬರೆದಿದ್ದಾರೆ.
ನೇರ ಮಾತು ಮೂಲಕ ಪ್ರಸಿದ್ಧರಾದ ಬೆಳಗೆರೆ ಇದೀಗ ನೆನಪಾಗಿ ಉಳಿಯಲಿದ್ದಾರೆ.
ರಾಜ್ಯದ ಎಲ್ಲಾ ಸುದ್ದಿಗಾಗಿ NAMMUR EXPRESS ವೀಕ್ಷಿಸಿ..!