ಗುಜರಾತ್ನಲ್ಲಿ ವಿಮಾನ ಪತನ: 110 ಮಂದಿ ದುರ್ಮರಣ
* 242 ಪ್ರಯಾಣಿಕರನ್ನು ಹೊತ್ತು ಇಂಗ್ಲೆಂಡ್ಗೆ ಹೊರಟಿದ್ದ ವಿಮಾನ
* 132 ಜನರನ್ನು ರಕ್ಷಣೆ: ಘಟನೆಗೆ ನಿಖರ ಕಾರಣ ತಿಳಿದಿಲ್ಲ
NAMMMUR EXPRESS NEWS
ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನಲ್ಲಿ ವಿಮಾನವೊಂದು ನಿರ್ಮಾಣ ಹಂತದ ಕಟ್ಟಡದ ಮೇಲೆ ಪತನಗೊಂಡಿದೆ. ಅಹಮದಾಬಾದ್ ಏರ್ಪೋರ್ಟ್ ಬಳಿ ಏಕಾಏಕಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. 110 ಮಂದಿ ದುರ್ಮರಣ ಹೊಂದಿದ್ದಾರೆ ಎನ್ನಲಾಗಿದೆ.
ಏರ್ಪೋರ್ಟ್ ಬಳಿ ಮೇಘಾನಿ ನಗರ್ನಲ್ಲಿ ಈ ಘಟನೆ ಸಂಭವಿಸಿದೆ. ಟೇಕ್ ಆಫ್ ಆಗುತ್ತಿದ್ದಂತೆ ವಿಮಾನ ಪತನವಾಗಿದೆ. ಏರ್ ಇಂಡಿಯಾ ವಿಮಾನದಲ್ಲಿ 242 ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ವಿಮಾನದಲ್ಲಿ ಗುಜರಾತ್ನ ಮಾಜಿ ಸಿಎಂ ವಿಜಯ್ ರುಪಾನಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಖಚಿತವಾಗಿದೆ.
242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ AI-171 ವಿಮಾನವು ಇಂಗ್ಲೆಂಡ್ಗೆ ಹೊರಟಿತ್ತು ಆದರೆ ಟೇಕ್ ಆಫ್ ಆದ ಕೆಲವೇ ನಿಮಿಷಗಳ ನಂತರ ವಿಮಾನ ಪತನಗೊಂಡಿದ್ದು, ತಾಂತ್ರಿಕ ದೋಷದಿಂದ ಘಟನೆ ನಡೆದಿದೆ,ಸುಮಾರು 300 ರಿಂದ 600 ಅಡಿ ಎತ್ತರದಿಂದ ವಿಮಾನ ಪತನವಾಗಿದೆ ಎಂದು ಹೇಳಲಾಗುತ್ತಿದೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 217 ವಯಸ್ಕರು,11 ಮಕ್ಕಳು,2 ಶಿಶುಗಳು ಮತ್ತು 53 ಬ್ರಿಟೀಷ್ ಪ್ರಜೆಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಈ ವರೆಗೆ 132 ಜನರನ್ನು ರಕ್ಷಿಸಿ ಆಸ್ಪತ್ರೆ ದಾಖಲಿಸಲಾಗಿದೆ 110 ಮಂದಿ ಮೃತ ಪಟ್ಟ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳವಾಗೋ ಸಾಧ್ಯತೆ ಇದೆ.








