Categories
ಉತ್ತರ ಕನ್ನಡ ರಾಜ್ಯ ಹಾವೇರಿ

ಟಾಪ್ 4 ನ್ಯೂಸ್ ಕರ್ನಾಟಕ

ಟಾಪ್ 4 ನ್ಯೂಸ್ ಕರ್ನಾಟಕ

-ಹೋರಿ ಹಬ್ಬದಲ್ಲಿ ಹಾರಿ ಹೋಯ್ತು ಮೂರು ಜೀವ…!!
– ಕುಮಟಾ : ಪೊಲೀಸ್ ಚೆಕ್ ಪೋಸ್ಟ್ ಮೇಲೆ ಹರಿದ ಲಾರಿ..!!
– ಯಾದಗಿರಿ : ನವಜಾತ ಶಿಶು ಅದಲು-ಬದಲು
– ಚಿತ್ರದುರ್ಗ: ವಿದ್ಯಾರ್ಥಿಗೆ ಥಳಿಸಿದ್ದ ಶಿಕ್ಷಕ ಅರೆಸ್ಟ್

NAMMUR EXPRESS NEWS
ಹಾವೇರಿ: ಹಾವೇರಿ ಜಿಲ್ಲೆಯ ಹಲವು ಕಡೆಗಳಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಬುಧವಾರ (ಅ.22) ಹಮ್ಮಿಕೊಂಡಿದ್ದ ‘ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ’ ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಗುದ್ದಿ ಮೂವರು ಮೃತಪಟ್ಟಿದ್ದಾರೆ. ಹಾವೇರಿಯ ದಾನೇಶ್ವರಿನಗರದ ಚಂದ್ರಶೇಖರ ಕೋಡಿಹಳ್ಳಿ (70), ಹಾವೇರಿ ತಾಲ್ಲೂಕಿನ ದೇವಿಹೊಸೂರಿನ ಘನಿಸಾಬ ಮಹಮ್ಮದ್ ಹುಸೇನ್ ಬಂಕಾಪುರ (75) ಹಾಗೂ ಹಾನಗಲ್ ತಾಲ್ಲೂಕಿನ ತಿಳವಳ್ಳಿಯ ಭರತ್ ರಾಮಪ್ಪ ಹಿಂಗಮೇರಿ (24) ಮೃತರು. ಹೆಸ್ಕಾಂನ ನಿವೃತ್ತ ನೌಕರ ಚಂದ್ರಶೇಖರ್ ಕೋಡಿಹಳೊ ಅವರು ಹಾವೇರಿಯ ಹಳೇ ಪಿ.ಬಿ.ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಹಾವೇರಿಯ ವೀರಭದ್ರೇಶ್ವರ ದೇವಸ್ಥಾನ ಎದುರು ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಓಡಿದ ಹೋರಿ, ಹಳೇ ಪಿ.ಬಿ. ರಸ್ತೆಗೆ ಬಂದಿತ್ತು. ಇದೇ ಹೋರಿ, ಚಂದ್ರಶೇಖರ್ ಅವರಿಗೆ ಗುದ್ದಿ ಈ ಅವಘಡ ನಡೆದಿದೆ. ದೇವಿಹೊಸೂರು ಗ್ರಾಮದಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಎತ್ತುಗಳನ್ನು ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಯಲ್ಲಿದ್ದ ಎತ್ತು ಬೆದರಿ ಹೊಂಡದ ಓಣಿಯಲ್ಲಿರುವ ಮನೆಯ ಕಟ್ಟೆ ಮೇಲೆ ಕುಳಿತಿದ್ದ ಘನಿಸಾಬ ಅವರ ಕುತ್ತಿಗೆ ಮತ್ತು ಎದೆಗೆ ಕೊಂಬಿನಿಂದ ತಿವಿದಿತ್ತು. ಅವರನ್ನು ಚಿಕಿತ್ಸೆಗಾಗಿ ಹಾವೇರಿಯ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

– ಕುಮಟಾ : ಪೊಲೀಸ್ ಚೆಕ್ ಪೋಸ್ಟ್ ಮೇಲೆ ಹರಿದ ಲಾರಿ..!!

ಕುಮಟಾ : ರಾಷ್ಟ್ರೀಯ ಹೆದ್ದಾರಿ 66 ರ ಕುಮಟಾ-ಅಂಕೋಲ ಹೆದ್ದಾರಿಯಲ್ಲಿ ಸರಕು ತುಂಬಿಕೊಂಡು ಬಂದ ಲಾರಿ ನಿಯಂತ್ರಣ ತಪ್ಪಿ ನೇರವಾಗಿ ಪೊಲೀಸ್ ಚೆಕ್‌ಪೋಸ್ಟ್ ಮೇಲೆ ಹರಿದು ಬಿದ್ದಿದ್ದು, ಚೆಕ್ ಪೋಸ್ಟ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಅತೀ ವೇಗದಲ್ಲಿ ಬಂದ ಲಾರಿ ಚಾಲಕನ ನಿದ್ದೆ ಗಣ್ಣಿನಲ್ಲಿ ನಿಯಂತ್ರಣ ತಪ್ಪಿದ ಪರಿಣಾಮ ಈ ಘಟನೆ ನಡೆದಿದ್ದು, ಚೆಕ್ ಪೋಸ್ಟ್ ಬಳಿಯೇ ಇದ್ದ ಪೊಲೀಸರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ,ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿ ಪೂರ್ಣ ಗೊಂಡಿಲ್ಲ ದ್ವಿಮುಖ ರಸ್ತೆ ನಿರ್ಮಾಣವಾಗಿದ್ದು ಒಂದು ಭಾಗ ಬಂದ್ ಮಾಡಲಾಗಿದೆ. ಆದರೇ ವೇಗವಾಗಿ ಬರುವ ವಾಹನಗಳಿಗೆ ಈ ರಸ್ತೆಯಲ್ಲಿ ಸಾಗುವಾಗ ಸಮರ್ಪಕ ನಾಮಫಲಕ ಇಲ್ಲದ ಕಾರಣ ಗೊಂದಲಕ್ಕೆ ಒಳಗಾಗುವ ಸವಾರರು ಈ ಭಾಗದಲ್ಲಿ ಹೇಗೆಬೇಕೋ ಹಾಗೆ ನುಗ್ಗುತಿದ್ದಾರೆ. ಹೀಗಾಗಿ ಈ ರೀತಿಯ ಘಟನೆ ನಡೆಯುತಿದ್ದು , ಈ ಅಪಘಾತಗಳಿಗೆ IRB ಕಂಪನಿ ನೇರ ಹೊಣೆ ಎಂಬುದು ಸ್ಥಳೀಯರ ಆರೋಪ. ಸಧ್ಯ ಘಟನೆ ಸಂಬಂಧ ಗೋಕರ್ಣ ಪೊಲೀಸರು ದೂರು ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

– ಯಾದಗಿರಿ : ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನವಜಾತ ಶಿಶು ಅದಲು-ಬದಲು..!!

ಯಾದಗಿರಿ: ಯಾದಗಿರಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅಲ್ಲಿನ ನರ್ಸ್ ನವಜಾತ ಶಿಶುಗಳನ್ನು ಅದಲು-ಬದಲು ಮಾಡಿದ ಆರೋಪ ಕೇಳಿ ಬಂದಿದೆ. ನಗರದ ಮಹಿಳೆಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ರಾತ್ರಿ ಆಕೆಗೆ ಹೆರಿಗೆಯಾಗಿದ್ದು ಹೆಣ್ಣು ಮಗುವಾದರೂ, ಗೀತಾ ಎಂಬ ನರ್ಸ್ ‘ನಿಮಗೆ ಗಂಡು ಮಗು ಜನಿಸಿದೆ’ ಎಂದು ತಿಳಿಸಿದ್ದರು. ಆದರೆ, ತಾಯಿ ಕಾರ್ಡ್‌ನಲ್ಲಿ ಹೆಣ್ಣು ಮಗು ಅಂತ ನಮೂದು ಮಾಡಲಾಗಿತ್ತು. ಬಳಿಕ ಕುಟುಂಬಸ್ಥರು ಜಿಲ್ಲಾ ಸರ್ಜನ್ ಕಚೇರಿಗೆ ಆಗಮಿಸಿ, ದೂರು ನೀಡಿದರು. ಬಳಿಕ ನೈಟ್ ಡ್ಯೂಟಿಯಲ್ಲಿದ್ದ ನರ್ಸ್ ಗೀತಾಳನ್ನು ಕರೆಸಿದ ಜಿಲ್ಲಾ ಸರ್ಜನ್‌ ವಿಚಾರಣೆ ನಡೆಸಿದಾಗ ಅಜಾಗರೂಕತೆಯಿಂದ ಈ ರೀತಿಯಾಗಿದೆ ಎಂದು ತಿಳಿದು ಬಂದಿತು.

ವಿದ್ಯಾರ್ಥಿಗೆ ಥಳಿಸಿದ್ದ ಶಿಕ್ಷಕ ಅರೆಸ್ಟ್!

ವಿದ್ಯಾರ್ಥಿ ಮೇಲೆ ಮನಸ್ಸೋ ಇಚ್ಛೆ ಥಳಿಸಿ, ಕಾಲಿನಿಂದ ಒದ್ದು, ಅಮಾನವೀಯವಾಗಿ ವರ್ತಿಸಿದ್ದ ಶಿಕ್ಷಕ ಕೊನೆಗೂ ಅರೆಸ್ಟ್ ಆಗಿದ್ದಾನೆ. ಚಿತ್ರದುರ್ಗ ಜಿಲ್ಲೆ‌ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದಾಧ್ಯಯನ ಶಾಲೆಯಲ್ಲಿ 9 ವರ್ಷದ ಬಾಲಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಚಿತ್ರದುರ್ಗ ಜಿಲ್ಲೆ‌ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಸಂಸ್ಕೃತ ವೇದಾಧ್ಯಯನ ಶಾಲೆಯಲ್ಲಿ ಶಿಕ್ಷಕ ವೀರೇಶ್ ಹೀರೇಮಠ್ ಎಂಬಾತ ತಲೆ, ಬೆನ್ನ ಮೇಲೆ ಹೊಡೆದು, ಕಾಲಿನಿಂದ ಹೀನಾಯವಾಗಿ ಒದ್ದು ರಾಕ್ಷಸನಂತೆ ವರ್ತಿಸಿದ್ದ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿತ್ತು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಸರ್ಕಾರದ ಪ್ರಮುಖರು ಶಿಕ್ಷಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಕಲಬುರಗಿಯಲ್ಲಿ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಆರೋಪಿ ಶಿಕ್ಷಕ ಅರೆಸ್ಟ್, ನ್ಯಾಯಾಂಗ ಬಂಧನ
ವೇದಾಧ್ಯಯನ ಶಾಲೆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪಿ ಶಿಕ್ಷಕನನ್ನು ಅರೆಸ್ಟ್ ಮಾಡಲಾಗಿದೆ. ಕಲಬುರಗಿಯಲ್ಲಿ ಶಿಕ್ಷಕ ವಿರೇಶ್ ಹೀರೇಮಠ್‌ನನ್ನು ಬಂಧಿಸಲಾಗಿದೆ. ಕಾರ್ಯಾಚರಣೆ ನಡೆಸಿ ಚಿತ್ರದುರ್ಗ ಪೊಲೀಸರು, ಆತನನ್ನು ಬಂಧಿಸಿ ನಾಯಕನಹಟ್ಟಿಗೆ ಕರೆತಂದರು. ಬಳಿಕ ಚಳ್ಳಕೆರೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯ್ತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿ ವೀರೇಶ್ ಹೀರೇಮಠ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಆದೇಶಿಸಿದರು. ಇದೀಗ ಆರೋಪಿಯನ್ನು ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

Categories
agumbe ಉಡುಪಿ ಉತ್ತರ ಕನ್ನಡ ಕಡೂರು ಕರಾವಳಿ ಕಲಬುರಗಿ ಕಾರವಾರ ಕಾರ್ಕಳ ಕುಂದಾಪುರ ಕೊಪ್ಪ ಗದಗ ಚಿಕ್ಕಬಳ್ಳಾಪುರ ಚಿಕ್ಕಮಗಳೂರು ತೀರ್ಥಹಳ್ಳಿ ತುಮಕೂರು ದಕ್ಷಿಣ ಕನ್ನಡ ಪುತ್ತೂರು ಬೆಂಗಳೂರು ಬೆಳಗಾವಿ ಬೆಳ್ತಂಗಡಿ ಮಂಗಳೂರು ಮಲ್ನಾಡ್ ಮುಲ್ಕಿ ಮೈಸೂರು ರಾಜ್ಯ ವಿಜಯನಗರ ವಿಜಯಪುರ ಶಿವಮೊಗ್ಗ ಶೃಂಗೇರಿ ಸಾಗರ ಹಾವೇರಿ ಹಾಸನ ಹೊಸನಗರ

ಅಯ್ಯೋ ದೇವ್ರೇ..ಈ ವಾರವೂ ಮಳೆ!

ಅಯ್ಯೋ ದೇವ್ರೇ..ಈ ವಾರವೂ ಮಳೆ!
– ಚಂಡಮಾರುತದ ಪ್ರಭಾವದಿಂದ ಭಾರಿ ಮಳೆ ಸಾಧ್ಯತೆ
– ಅಕ್ಟೋಬರ್ 8ರವರೆಗೂ ಗಾಳಿ ಜತೆಗೆ ಮಳೆ ಅಲರ್ಟ್
– ದಸರಾಕ್ಕೂ ಮಳೆ ಅಡ್ಡಿ: ಅಡಿಕೆ ಬೆಳೆಗೆ ಸಂಕಷ್ಟ

 

NAMMUR EXPRESS NEWS
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಂಡಿದೆ. ಇದರಿಂದಾಗಿ ಕರ್ನಾಟಕ, ಒಡಿಶಾ, ಆಂಧ್ರಪ್ರದೇಶ ಸೇರಿ ಹಲವೆಡೆ ಮಳೆಯಾಗಲಿದೆ. ಈಗಾಗಲೇ ಕಳೆದ 6 ತಿಂಗಳಿಂದ ವಾಡಿಕೆಗಿಂತ ಹೆಚ್ಚು ಮಳೆ ಆಗಿದ್ದು, ರೈತರು ಹೈರಾಣಾಗಿದ್ದಾರೆ. ಇದೀಗ ಮತ್ತೆ ಮೋಡ, ಮಳೆ ಜನ ಜೀವನಕ್ಕೆ ಭಾರೀ ತೊಂದರೆ ಆಗಿದೆ.
ಚಂಡಮಾರುತದ ಪ್ರಭಾವದಿಂದಾಗಿ ಕರಾವಳಿಯಲ್ಲಿ ಗಂಟೆಗೆ 40 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಂಡಮಾರುತ ಪ್ರಭಾವ ಕರ್ನಾಟಕದ ಮೇಲೂ ಆಗಲಿದ್ದು, ಅಕ್ಟೋಬರ್ 8ರವರೆಗೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.
ಯಲ್ಲಾಪುರದಲ್ಲಿ ಭಾರಿ ಮಳೆಯಾಗಿದೆ, ಹೊನ್ನಾವರ, ಆಗುಂಬೆ, ಅಂಕೋಲಾ, ಕ್ಯಾಸಲ್​ರಾಕ್, ಗೇರುಸೊಪ್ಪ, ಮಂಕಿ, ಕದ್ರಾ, ಕಾರವಾರ, ಕೋಟಾ, ಕೊಟ್ಟಿಗೆಹಾರ, ಕುಮಟಾ, ಕುಂದಾಪುರ, ಲೋಂಡಾ, ಮಂಗಳೂರು, ಮುಂಡಗೋಡಿನಲ್ಲಿ ಮಳೆಯಾಗಿದೆ.
ಅಡಿಕೆ ಸೀಸನ್ ಆಗಿರುವುದರಿಂದ ಅಡಿಕೆ ಬೆಳೆ ಗಾರರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಈ ಬಾರಿ ದಸರಾಕ್ಕೂ ಮಳೆ ಹಲವೆಡೆ ಅಡ್ಡಿ ಮಾಡಿದೆ.

Categories
ಹಾವೇರಿ

ಪುನೀತ್‌ ನೆನಪಿಗೆ ಗುಡಿ ನಿರ್ಮಿಸಿದ ಅಭಿಮಾನಿ!

ಪುನೀತ್‌ ನೆನಪಿಗೆ ಗುಡಿ ನಿರ್ಮಿಸಿದ ಅಭಿಮಾನಿ!
* 9 ಲಕ್ಷ ರೂ.ವೆಚ್ಚದಲ್ಲಿ ಗುಡಿ ನಿರ್ಮಿಸಿದ ಹಾವೇರಿ ಅಭಿಮಾನಿ
* ಉದ್ಘಾಟನೆಗೆ ಬಂದ ಅಶ್ವಿನಿ ಪುನೀತ್ ರಾಜ್‌ಕುಮಾರ್
* ಅಭಿಮಾನಿಯ ಕಾರ್ಯಕ್ಕೆ ಧನ್ಯವಾದ ಸಲ್ಲಿಸಿ ಕಣ್ಣೀರು

NAMMUR EXPRESS NEWS
ಹಾವೇರಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನು ಅಗಲಿ 3 ವರ್ಷಗಳಾದ್ರೂ ಇನ್ನು ಕೂಡ ಅವರ ಅಭಿಮಾನಿಗಳು ಮಾತ್ರ ಅವರನ್ನು ಪ್ರತಿ ದಿನ ನೆನಪು ಮಾಡಿಕೊಳ್ಳುತ್ತಲೇ ಇದ್ದಾರೆ. ಬೇರೆ ಬೇರೆ ರೀತಿಯಲ್ಲಿ ಅಪ್ಪುವಿನ ಅಭಿಮಾನಿಗಳು ಅವರ ಮೇಲಿನ ಪ್ರೀತಿ,ಅಭಿಮಾನವನ್ನು ಇಂದಿಗೂ ವ್ಯಕ್ತಪಡಿಸುತ್ತಲೇ ಇದ್ದಾರೆ.
ಹೀಗಿರುವಾಗಲೇ ಹಾವೇರಿಯಲ್ಲೊಬ್ಬರು ಅಭಿಮಾನಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮೇಲಿನ ತಮ್ಮ ಅಭಿಮಾನವನ್ನು ವಿಭಿನ್ನವಾಗಿ ವ್ಯಕ್ತಪಡಿಸಿದ್ದಾರೆ. ಹಾವೇರಿಯ ಯಲಗಚ್ಚ ಗ್ರಾಮದ ಪ್ರಕಾಶ್ ಎಂಬುವರು ತಮ್ಮ ನೆಚ್ಚಿನ ನಟ ಪುನೀತ್‌ಗಾಗಿ ಗುಡಿಯೊಂದನ್ನು ನಿರ್ಮಿಸಿದ್ದಾರೆ.
ಹೌದು..ಹಾವೇರಿಯ ಯಲಗಚ್ಚ ಗ್ರಾಮದಲ್ಲಿ ಪ್ರಕಾಶ್‌ರವರು ತಮ್ಮ ಪ್ರೀತಿಯ ನಟ ಅಪ್ಪುವಿಗಾಗಿ ಗುಡಿ ನಿರ್ಮಾಣ ಮಾಡಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಗುಡಿಯನ್ನು ಲೋಕಾರ್ಪಣೆಗೊಳಿಸಲಾಗಿದೆ. ಪುನೀತ್ ಅವರ ಧರ್ಮಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಗುಡಿಯನ್ನು ಉದ್ಘಾಟಿಸಿದ್ದು. ಗುಡಿಯನ್ನು ಸುಮಾರು 9 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.
ಗುಡಿಯ ಉದ್ಘಾಟನೆಗಾಗಿ ಯಲಗಚ್ಚ ಗ್ರಾಮಕ್ಕೆ ಬಂದ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಅದ್ಧೂರಿ ಮೆರವಣಿಗೆ ಮೂಲಕ ಗ್ರಾಮಸ್ಥರು ಕರೆ ತಂದರು. ಯಲಗಚ್ಚ ಗ್ರಾಮದಲ್ಲಿ ಅಭಿಮಾನಿಗಳಿಂದ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಭರ್ಜರಿ ಸ್ವಾಗತ ದೊರಕಿತು. ಪವರ್ ಸ್ಟಾರ್ ಗುಡಿ ನೋಡಲು ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದರು. ರಾಜ್ಯದ ಬೇರೆ ಬೇರೆ ಭಾಗಗಳಿಂದ ಅಭಿಮಾನಿಗಳು ಆಗಮಿಸಿದ್ದು,ಇದೇ ವೇಳೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಪುನೀತ್ ಅವರ ಅಭಿಮಾನಿ ಪ್ರಕಾಶ್ ಅವರ ಮಗಳಿಗೆ ಅಪೇಕ್ಷಾ ಎಂದು ನಾಮಕರಣ ಮಾಡಿದರು.
ಗುಡಿಯನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಅಭಿಮಾನಿ ಪ್ರಕಾಶ್ ತಮ್ಮ ಜಾಗದಲ್ಲೇ ಗುಡಿ ನಿರ್ಮಾಣ ಮಾಡಿದ್ದಕ್ಕೆ ನನಗೆ ಖುಷಿಯಾಗುತ್ತಿದೆ. ಅವರು ಗುಡಿ ನಿರ್ಮಾಣ ಮಾಡಿದ್ದು ನಮ್ಮ ಪುಣ್ಯ,ನಾವು, ನಮ್ಮ ಕುಟುಂಬ‌, ಗುಡಿ ನಿರ್ಮಿಸಿದ ಅಭಿಮಾನಿ ಪ್ರಕಾಶ್ ಅವರಿಗೆ ಚಿರ ಋಣಿಯಾಗಿರುತ್ತೇವೆ ಎಂದು ಹೇಳಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾವುಕರಾದರು.

Categories
ಹಾವೇರಿ

ಭದ್ರಾವತಿಯ 13 ಮಂದಿ ಅಪಘಾತಕ್ಕೆ ಬಲಿ!

ಭದ್ರಾವತಿಯ 13 ಮಂದಿ ಅಪಘಾತಕ್ಕೆ ಬಲಿ!

– ಹಾವೇರಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: 13 ಮಂದಿ ದುರ್ಮರಣ
– ಬಳ್ಳಾರಿ : ನಿಂತಿದ್ದ ಲಾರಿಗೆ ಟೆಂಪೋ ಟ್ರಾಕ್ಸ್ ಡಿಕ್ಕಿ
– ಓರ್ವ ಸಾವು 10 ಕ್ಕೂ ಹೆಚ್ಚು ಮಂದಿಗೆ ಗಾಯ!

NAMMUR EXPRESS NEWS
ಹಾವೇರಿ: ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ. ಮೃತರು ಪರಶುರಾಮ್​​(45), ಭಾಗ್ಯ(40), ನಾಗೇಶ(50), ವಿಶಾಲಾಕ್ಷಿ(40), ಅರ್ಪಿತಾ(18), ಸುಭದ್ರಾ ಬಾಯಿ(65), ಪುಣ್ಯ(50), ಮಂಜುಳಾಬಾಯಿ, ಚಾಲಕ ಆದರ್ಶ್(23), ಮಾನಸ(24), ರೂಪಾ(40), ಮಂಜುಳಾ(50) ಎಂದು ಗುರುತಿಸಲಾಗಿದೆ.
ಇವರು ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.
ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.

ಟಿಟಿ ವಾಹನದಲ್ಲಿದ್ದ ಒಟ್ಟು 15 ಜನರೂ ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಒಂಬತ್ತು ಮಹಿಳೆಯರು, ಎರಡು ಪುಟ್ಟ ಕಂದಮ್ಮಗಳು, ಇಬ್ಬರು ಗಂಡು ಮಕ್ಕಳು, ಡ್ರೈವರ್ ಮೃತ ದುರ್ದೈವಿಗಳು. ಮೃತ ದೇಹಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ರಾವಾನೆ ಮಾಡಲಾಗಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿದ್ದಾರೆ.

ಬಳ್ಳಾರಿ : ನಿಂತಿದ್ದ ಲಾರಿಗೆ ಟೆಂಪೋ ಟ್ರಾಕ್ಸ್ ಡಿಕ್ಕಿ
– ಓರ್ವ ಸಾವು 10 ಕ್ಕೂ ಹೆಚ್ಚು ಮಂದಿಗೆ ಗಾಯ!

ಬಳ್ಳಾರಿ: ನಿಂತಿದ್ದ ಲಾರಿಗೆ ಟೆಂಪೋ ಟ್ರಾಕ್ಸ್ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಮೃತ ದುರ್ದೈವಿ ಕೃಷ್ಟಪ್ಪ(62) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 10 ಜನಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟೆಂಪೋ ಟ್ರಾಕ್ಸಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಕಲುಬುರಗಿಯಲ್ಲಿ ನಿಶ್ಚಿತಾರ್ಥ ಮುಗಿಸಿಕೊಂಡು ಚಿಕ್ಕಬಳ್ಳಾಪುರದ ಆರೋಡಿ ಗ್ರಾಮಕ್ಕೆ ತೆರಳುತ್ತಿದ್ದರು. ಟಿಟಿಯೊಳಗೆ ಇಬ್ಬರು ಮಕ್ಕಳು ಸೇರಿದಂತೆ 16 ಜನ ಪ್ರಯಾಣಿಸುತ್ತಿದ್ದರು. ಈತ್ತ ಗಂಗಾವತಿಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಕೆಟ್ಟು ನಿಂತಿತ್ತು. ಹೀಗೆ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಟಿಟಿ ನಜ್ಜು- ಗುಜ್ಜಾಗಿದ್ದು, ಇಬ್ಬರು ಸಿಲುಕಿಕೊಂಡಿದ್ದರು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಟಿಟಿಯಲ್ಲಿ ಸಿಲುಕಿಕೊಂಡಿದ್ದವರನ್ನ ಹೊರ ತೆಗೆಯಲು ಹರಸಾಹಸ ಪಟ್ಟರು.
ಈ ಸಂಬಂಧ ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Categories
ಹಾವೇರಿ

ಸರ್ಕಾರಿ ಬಸ್ಸಲ್ಲಿ ಕೋತಿ ಜಾಲಿ ರೈಡ್!

ಸರ್ಕಾರಿ ಬಸ್ಸಲ್ಲಿ ಕೋತಿ ಜಾಲಿ ರೈಡ್!
– ವಿಂಡೋ ಸೀಟ್‌ನಲ್ಲಿ 30 ಕಿ.ಮೀ ಟ್ರಾವೆಲ್
– ತಣ್ಣಗೆ ಬೀಸುತ್ತಿದ್ದ ಗಾಳಿ ಸವಿಯುತ್ತಾ ಎಂಜಾಯ್

NAMMUR EXPRESS NEWS
ಹಾವೇರಿ: ಮಂಗನಾಟಕ್ಕೆ ಮನಸೋಲದವರು ಯಾರಿದ್ದಾರೆ? ಅದೆಷ್ಟೇ ಕಿಟಲೆ ಮಾಡಲಿ, ಮಂಗಗಳ ಬುದ್ದಿಗೆ ಎಲ್ಲರೂ ತಲೆಬಾಗಲೇಬೇಕು. ಅವುಗಳ ಆಟ-ತುಂಟಾಟವು ನಮ್ಮಲ್ಲಿ ಸಿಟ್ಟು ತರಿಸುವುದಕ್ಕಿಂತ ನಗು ತರಿಸುವುದೇ ಹೆಚ್ಚು. ಸದ್ಯ ಹಾವೇರಿಯಲ್ಲಿ ಫ್ರೀ ಬಸ್ ಹತ್ತಿದ ಕೋತಿಯೊಂದು ಯಾರ ಭಯವಿಲ್ಲದೇ ಬಸ್‌ನಲ್ಲಿ ಪ್ರಯಾಣಿಕರೊಂದಿಗೆ ಜಾಲಿ ರೈಡಿಂಗ್ ಮಾಡಿದೆ. ಹಾವೇರಿಯಿಂದ ಹಿರೇಕೆರೂರಿಗೆ ಹೊರಟಿದ್ದ ಸಾರಿಗೆ ಬಸ್ ಹತ್ತಿದ ಕೋತಿಯು ಬಸ್ ಕೊನೆಯ ಸೀಟ್‌ಗೆ ಹೋಗಿ ವಿಂಡೋ ಸೀಟ್‌ನಲ್ಲಿ ಕುಳಿತು ಪ್ರಯಾಣಿಸಿದೆ. ಡ್ರೈವರ್ ಏನಾದರೂ ಬ್ರೇಕ್ ಹಾಕಿದಾಗ ಬಿದ್ದು ಬಿಟ್ಟರೆ ಎಂದು ಬಲಗೈಯಲ್ಲಿ ಕಂಬಿಯನ್ನು ಗಟ್ಟಿ ಹಿಡಿದು ಕೊಂಡಿತ್ತು.ಶಾಲಾ ಮಕ್ಕಳು ಬಿಟ್ಟುಕೊಟ್ಟ ವಿಂಡೋ ಸೀಟ್‌ನಲ್ಲೇ ಭದ್ರವಾಗಿ ಕುಳಿತ ಕೋತಿ ಸುಮಾರು 30 ಕಿ.ಮೀ ದೂರದವರೆಗೆ ಬಸ್‌ನಲ್ಲಿ ಪ್ರಯಾಣ ಮಾಡಿದೆ. ಜನರಿಂದ ತುಂಬಿ ತುಳುಕುತ್ತಿದ್ದ ಬಸ್‌ನಲ್ಲಿ ಭಯವಿಲ್ಲದೆ ಪ್ರಯಾಣಿಸಿದೆ.

ಬಸ್‌ನಲ್ಲಿ ಮಂಗನ ಜಾಲಿ ರೈಡ್‌ ಕಂಡು ಜನರು ಖುಷಿಯಾದರು. ಪಕ್ಕದಲ್ಲಿದ್ದ ಪ್ರಯಾಣಿಕರು ಮಂಗನ ರೈಡಿಂಗ್‌ನನ್ನು ಸೆರೆಯಿಡಿದರು. ಕೋತಿ ಪ್ರಯಾಣದಲ್ಲಿ ಜನರು ಬಾಳೆ ಹಣ್ಣು ಬಿಸ್ಕೆಟ್ ನೀಡಿದ್ದಾರೆ. ಆದರೆ ಅದ್ಯಾವುದನ್ನು ಸ್ವೀಕರಿಸಿದ ಕೋತಿ, ತನ್ನ ಪ್ರಯಾಣವನ್ನು ಆನಂದಿಸಿದೆ. ರಸ್ತೆಯಲ್ಲಿ ಹೋಗುವವರನ್ನು ನೋಡುತ್ತಾ ತಣ್ಣಗೆ ಬೀಸುತ್ತಿದ್ದ ಗಾಳಿಯನ್ನು ಸವಿಯುತ್ತಾ ಎಂಜಾಯ್ ಮಾಡಿದೆ. ಮರದಿಂದ ಮರಕ್ಕೆ ಜಿಗಿಯುತ್ತಿದ್ದ ಮಂಗನ, ಬಸ್ ಪ್ರಯಾಣಕ್ಕೆ ಜನರು ಖುಷಿಯಿಂದ ಕಾಮೆಂಟ್ ಮಾಡಿದ್ದಾರೆ.