Categories
death ಮಂಡ್ಯ

ತಿಥಿ ಸಿನಿಮಾ ಗಡ್ಡಪ್ಪ ಖ್ಯಾತಿಯ ಚನ್ನೇಗೌಡ ನಿಧನ

ತಿಥಿ ಸಿನಿಮಾ ಗಡ್ಡಪ್ಪ ಖ್ಯಾತಿಯ ಚನ್ನೇಗೌಡ ನಿಧನ

* ಅಸ್ತಮಾ,ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಗಡ್ಡಪ್ಪ
* ತಿಥಿ ಸಿನಿಮಾ ನಟನೆಗೆ ಅಂತರರಾಷ್ಟ್ರೀಯ ಪ್ರಶಸ್ತಿ

NAMMMUR EXPRESS NEWS
ಮಂಡ್ಯ : ತಿಥಿ ಸಿನಿಮಾ ಮೂಲಕ ಗಡ್ಡಪ್ಪ ಎಂದೇ ಹೆಸರುವಾಸಿಯಾದ ಮಂಡ್ಯದ ಚನ್ನೇಗೌಡ (89) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ತಾಲೂಕಿನ ನೊದೆ ಕೊಪ್ಪಲು ಗ್ರಾಮದಲ್ಲಿ ನಿಧನ ಹೊಂದಿದ ಚನ್ನೇಗೌಡ ಅವರು ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು, ತಿಂಗಳ ಹಿಂದೆ ಬಿದ್ದು ಸೊಂಟ ಪೆಟ್ಟಾಗಿ, ಆಪರೇಷನ್ ಕೂಡ ಆಗಿತ್ತು.ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಂಜೆ ಸ್ವಗ್ರಾಮ ನೊದೆಕೊಪ್ಪಲು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೃತರ ಪುತ್ರಿ ಶೋಭಾ ಮಾಹಿತಿ ನೀಡಿದ್ದಾರೆ.
ಗಡ್ಡಪ್ಪ ಎಂದು ಖ್ಯಾತಿ ಪಡೆದಿರುವ ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದ ಗಡ್ಡಪ್ಪ ಮೂಲ ಹೆಸರು ಚನ್ನೇಗೌಡ ಆದ್ರೂ ಗಡ್ಡಪ್ಪ ಅಂತಲೇ ಕರೆಸಿಕೊಳ್ಳುತ್ತಿದ್ದರು. ತಿಥಿ, ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿ ಸುಮಾರು 8 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

* ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ಗಡ್ಡಪ್ಪ
2016ರಲ್ಲಿ ರಾಮ್ ರೆಡ್ಡಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ತಿಥಿ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಮಂಡ್ಯದ ಸಾಮಾನ್ಯ ವ್ಯಕ್ತಿ ಚನ್ನೇಗೌಡರು ಬಳಿಕ ಗಡ್ಡಪ್ಪ ಎಂದೇ ಪ್ರಸಿದ್ಧರಾದರು. ಮೇಕಪ್ ಇಲ್ಲದೇ, ಸಾಮಾನ್ಯವಾಗಿ ನಟಿಸಿದ್ದ ಅವರ ನಟನೆ ಜನರಿಗೆ ಬಹಳ ಇಷ್ಟವಾಗಿತ್ತು. ಈ ಸಿನಿಮಾಗೆ ಅಂತರರಾಷ್ಟ್ರೀಯ ಪ್ರಶಸ್ತಿ ಕೂಡಾ ಬಂದಿತ್ತು.

Categories
ಮಂಡ್ಯ

ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಬಲಿ..!!

ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಬಲಿ..!!
– ಮಿಮ್ಸ್ ಆಸ್ಪತ್ರೆ ಎದುರು ರಸ್ತೆಯಲ್ಲೇ ಮಗು ಶವವಿಟ್ಟು ಗೋಳಾಟ

NAMMUR EXPRESS NEWS
ಮಂಡ್ಯ: ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮಗು ಬಲಿಯಾಗಿರೋ ಮನಕಲಕುವ ಘಟನೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬಳಿ ನಡೆದಿದೆ. ಮೂರೂವರೆ ವರ್ಷದ ಹೃತೀಕ್ಷ ಮೃತ ಮಗು. ವಾಣಿ-ಅಶೋಕ್ ಎಂಬುವವರ ಮಗು ಮೃತಪಟ್ಟಿದೆ. ಮಗಳನ್ನು ಕಳೆದುಕೊಂಡ ದಂಪತಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೊರವನಹಳ್ಳಿಯ ನಿವಾಸಿ. ಹೃತೀಕ್ಷಾಗೆ ನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ಮಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಆದ್ರೆ ಇದೇ ವೇಳೆ ಹೆಲ್ಮೆಟ್ ತಪಾಸಣೆಗೆಂದು ಪೊಲೀಸರು ಬೈಕ್ ಅಡ್ಡಗಟ್ಟಿದ್ದಾರೆ. ಇದೇ ವೇಳೆ ಬೈಕ್​ನಲ್ಲಿದ್ದ ತಂದೆ, ತಾಯಿ ಹಾಗೂ ಮಗು ಆಯಾ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಪರಿಣಾಮ ಮಗಳ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಪರಿಣಾಮ ತೀವ್ರ ರಕ್ತಸ್ರವಾದಿಂದ ಮಗು ಸ್ಥಳದಲ್ಲೇ ಜೀವಬಿಟ್ಟಿದೆ. ಇನ್ನೂ, ಮುದ್ದಾದ ಮಗುವನ್ನು ಕಳೆದುಕೊಂಡು ಪೋಷಕರು ಮಿಮ್ಸ್ ಆಸ್ಪತ್ರೆ ಎದುರು ರಸ್ತೆಯಲ್ಲೇ ಶವವಿಟ್ಟು ಅಳುತ್ತಿದ್ದಾರೆ. ಪೊಲೀಸರ ನಡೆಗೆ ಸಾರ್ವಜನಿಕರ ಆಕ್ರೋಶ ಹೊರ ಹಾಕುತ್ತಿದ್ದಾರೆ.

Categories
ಮಂಡ್ಯ

ಕನ್ನಡ ಹಬ್ಬಕ್ಕೆ ಸಕ್ಕರೆ ನಾಡು ಮಂಡ್ಯ ಸಜ್ಜು!

ಕನ್ನಡ ಹಬ್ಬಕ್ಕೆ ಸಕ್ಕರೆ ನಾಡು ಮಂಡ್ಯ ಸಜ್ಜು!
– ಡಿ.20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
– ಸಕ್ಕರೆನಾಡು ಮಂಡ್ಯ ಲಕ್ಷಾಂತರ ಜನರ ಆತಿಥ್ಯಕ್ಕೆ ಸಜ್ಜು
– ದಸರಾ ಮಾದರಿ ವಿದ್ಯುತ್ ದೀಪಾಲಂಕಾರದ ಮೆರಗು

NAMMUR EXPRESS NEWS
ಮಂಡ್ಯ : ಬರೋಬ್ಬರಿ ಮೂರು ದಶಕಗಳ ಬಳಿಕ ಕಾತರದಿಂದ ಕಾಯುತ್ತಿದ್ದ ದಿನಕ್ಕೆ ಕ್ಷಣಗಣನೆ ಆರಂಭವಾಗಿದೆ. ಡಿ.20ರಿಂದ 22ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆನಾಡು ಮಂಡ್ಯ ಸಜ್ಜಾಗಿದೆ. ಲಕ್ಷಾಂತರ ಜನರು ಭಾಗಿಯಾಗುವ ಕನ್ನಡದ ಹಬ್ಬಕ್ಕೆ ಅಂತಿಮ ಹಂತದ ಸಿದ್ಧತೆ ನಡೆದಿವೆ. ಮಂಡ್ಯ ನಗರದ 6 ಕಿ.ಮೀ. ದೂರದ ಹೊರವಲಯದಲ್ಲಿ 70 ಎಕರೆ ವಿಸ್ತೀರ್ಣದಲ್ಲಿ ಅಕ್ಷರಜಾತ್ರೆ ಮೇಲೈಸಲಿದೆ. ಸಮ್ಮೇಳನಕ್ಕೆ ದೀಪಾಲಂಕಾರ ಮೆರುಗು ನೀಡಲಿದೆ. ದಸರಾ ಮಾದರಿ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ. ಬೆಂಗಳೂರು- ಮೈಸೂರು ಹೆದ್ದಾರಿ, ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರವಿರಲಿದೆ.
ಇನ್ನು ಸಮ್ಮೇಳನದ ಕರ್ತವ್ಯಕ್ಕೆಂದು ನಿಯೋಜನೆಗೊಂಡಿರುವ ಪೊಲೀಸ್ ಸಿಬ್ಬಂದಿ ಸೇರಿ ಸರ್ಕಾರಿ ಅಧಿಕಾರಿ, ನೌಕರರು ಬುಧವಾರ ರಾತ್ರಿಯೇ ಮಂಡ್ಯಕ್ಕೆ ಆಗಮಿಸಿದ್ದಾರೆ. ನೋಂದಾಯಿತ ಪ್ರತಿನಿಧಿಗಳಿಗೂ ಸೌಕರ್ಯ ಕಲ್ಪಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಹಲವು ಹೊಸತನಗಳಿಗೆ ಮಂಡ್ಯ ಸಾಹಿತ್ಯ ಸಮ್ಮೇಳನ ಸಾಕ್ಷಿಯಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಕಸಾಪ ಅಧ್ಯಕ್ಷ ಮಹೇಶ ಜೋಶಿ ಅವರೊಂದಿಗೆ ಸಿದ್ಧತೆ ಪರಿಶೀಲಿಸಿ ಮಾತನಾಡಿದ ಅವರು, 55 ವಸ್ತು ಪ್ರದರ್ಶನ, 350 ವಾಣಿಜ್ಯ ಮತ್ತು 450 ಪುಸ್ತಕ ಮಳಿಗೆ ತೆರೆಯಲಾಗುತ್ತಿದೆ. ಸಾರ್ವಜನಿಕರಿಗೆ ಊಟ ಬಡಿಸಲು 100 ಕೌಂಟರ್, ನೋಂದಾಯಿತ ಪ್ರತಿನಿಧಿಗಳಿಗೆ 40 ಕೌಂಟ‌ರ್ ತೆರೆಯಲಾಗಿದ್ದು, ಎಲ್ಲರಿಗೂ ಒಂದೇ ಊಟದ ಮೆನು ಇರಲಿದೆ ಎಂದರು.

ಕೆಆರ್‌ಎಸ್‌ ಡ್ಯಾಂ ಮಾದರಿ ಪ್ರವೇಶದ್ವಾರ!

ಸಮ್ಮೇಳನದ ವೇದಿಕೆ ಸ್ಥಳದಲ್ಲಿ ಕೆ.ಆರ್.ಎಸ್ ಅಣೆಕಟ್ಟೆ ಮಾದರಿಯ ಆಕರ್ಷಕ ಪ್ರವೇಶದ್ವಾರವನ್ನು ನಿರ್ಮಾಣ ಮಾಡಲಾಗಿದೆ. ಪ್ರಧಾನ ವೇದಿಕೆಯ ಈ ಪ್ರವೇಶ ದ್ವಾರದ ವಿನ್ಯಾಸವು 40 ಅಡಿ ಎತ್ತರ ಮತ್ತು ಬರೋಬ್ಬರಿ 300 ಅಡಿ ಅಗಲ ಒಳಗೊಂಡಿದೆ. ಸಮ್ಮೇಳನಕ್ಕೆ ಲಕ್ಷಾಂತರ ಜನರು ಆಗಮಿಸುವ ಹಿನ್ನೆಲೆಯಲ್ಲಿ ಪ್ರವೇಶ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ಬಾಗಿಲುಗಳನ್ನು ಅಳವಡಿಸಲಾಗಿದೆ. ಈ ಬಾಗಿಲುಗಳು 2020 ಚದರ ಅಡಿ ವಿಸ್ತೀರ್ಣವನ್ನು ಹೊಂದಿವೆ. ಗೊ.ರು.ಚ. ಅವರಿಗೆ ವಿಶೇಷ ಆತಿಥ್ಯ: 87ನೇ ನುಡಿಜಾತ್ರೆಯ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ ಅವರು ಡಿ.19ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ. ಸಂಜೆ 4.30ಕ್ಕೆ ನಗರದ ಹೊರವಲಯದಲ್ಲಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಅದ್ದೂರಿಯಾಗಿ ಸ್ವಾಗತಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂತೆಯೇ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ನಿವಾಸಕ್ಕೆ ಕರೆದೊಯ್ದು ವಿಶೇಷ ಆತಿಥ್ಯ ನೀಡಲಾಗುವುದು. ಡಿ.20ರಂದು ಬೆಳಗ್ಗೆ 7 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ.

ರಾಜ್ಯದ ಮೂಲೆ ಮೂಲೆಯಿಂದ ಜನ

ರಾಜ್ಯದ ಮೂಲೆ ಮೂಲೆಯಿಂದ ಸಾಹಿತ್ಯ ಪ್ರೇಮಿಗಳು ಮಂಡ್ಯಕ್ಕೆ ತೆರಳಲಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ.

Categories
ಮಂಡ್ಯ

ಮಂಡ್ಯ: ಅನ್ನದಾತರಿಗಾಗಿ ‘ರೈತರ ಶಾಲೆ’ ಆರಂಭ

ಮಂಡ್ಯ: ಅನ್ನದಾತರಿಗಾಗಿ ‘ರೈತರ ಶಾಲೆ’ ಆರಂಭ
– ರೈತರಿಗಾಗಿ ಭಾರತದಲ್ಲೇ ಇದೆ ಮೊದಲು!
– ಶಿಕ್ಷಣದ ಜೊತೆಗೆ ತರಬೇತಿ ಶಿಬಿರಕ್ಕೆ ವ್ಯವಸ್ಥೆ

NAMMUR EXPRESS NEWS
ಮಂಡ್ಯ: ಯುವಜನತೆ ನಗರಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು ಮತ್ತು ವಿದ್ಯಾವಂತರನ್ನು ವ್ಯವಸಾಯದೆಡೆಗೆ ಆಕರ್ಷಿಸಲು, ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ರೈತರಿಗಾಗಿ ‘ರೈತರ ಶಾಲೆ’ ತೆರೆಯಲು ಶಿಕ್ಷಕರ ಗುಂಪೊಂದು ಮುಂದಾಗಿದೆ. ಕೃಷಿಯಲ್ಲಿ ತೊಡಗಿರುವವರನ್ನು ಮತ್ತು ಅದನ್ನು ವೃತ್ತಿಯಾಗಿ ಅಥವಾ ಹವ್ಯಾಸವಾಗಿ ತೆಗೆದುಕೊಳ್ಳಲು ಉತ್ಸುಕರಾಗಿರುವವರನ್ನು ಸಬಲೀಕರಣಗೊಳಿಸುವುದು ಇದರ ಪ್ರಮುಖ ಉದ್ದೇಶವಾಗಿದೆ. ಮಂಡ್ಯದ ಉಪನ್ಯಾಸಕ ಸತ್ಯಮೂರ್ತಿ ಅವರ ನೇತೃತ್ವದಲ್ಲಿ ಏಳು ಸದಸ್ಯರ ಗುಂಪು, ರೈತ ಕುಟುಂಬದ ಎಲ್ಲ ಶಿಕ್ಷಕರು, ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಕಳೆದ ವರ್ಷದ ಬರ ಹಾಗೂ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ರೈತರ ಸಂಕಷ್ಟಗಳನ್ನು ನೋಡಿ ಮತ್ತು ವಿವಿಧ ಸಮಸ್ಯೆಗಳನ್ನು ಪರಿಗಣಿಸಿ ಶಾಲೆಯನ್ನು ತೆರೆಯಲು ನಿರ್ಧರಿಸಿದರು. ಕೃಷಿಯನ್ನು ಲಾಭದಾಯಕವಾಗಿಸುವುದು ಮತ್ತು ರೈತರನ್ನು ಎಲ್ಲಾ ರೀತಿಯಲ್ಲಿಯೂ ಸ್ವಾವಲಂಬಿಗಳನ್ನಾಗಿ ಮಾಡುವುದು ಈ ತಂಡದ ಪ್ರಮುಖ ಉದ್ದೇಶವಾಗಿದೆ. ಯುವಕರು ಉದ್ಯೋಗ ಅರಸಿ ಹಳ್ಳಿಗಳಿಂದ ನಗರಗಳಿಗೆ ವಲಸೆ ಹೋಗುವುದನ್ನು ಹಾಗೂ ರೈತರು ತಮ್ಮ ಭೂಮಿಯನ್ನು ಮಾರಾಟ ಮಾಡುವುದನ್ನು ತಡೆಯಲು ಇದು ಸಹಾಯ ಮಾಡುತ್ತದೆ. ಈ ತಂಡವು 200ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದೆ. ಕೃಷಿ ತಜ್ಞರು ಮತ್ತು ಪ್ರಗತಿಪರ ರೈತರಿಂದ ಅವರಿಗೆ ನೆರವು ಕೊಡಿಸಲು ಮುಂದಾಗಿದೆ. ರೈತರಿಗೆ ಶಿಕ್ಷಣ ನೀಡುವುದರ ಹೊರತಾಗಿ, ತರಬೇತಿ ಶಿಬಿರಗಳು, ಕ್ಷೇತ್ರ ಭೇಟಿ ಮತ್ತು ‘ರೈತರ ಶಾಲೆ’ಯಲ್ಲಿ ತಜ್ಞರಿಂದ ಅಧಿವೇಶನಗಳನ್ನು ನಡೆಸಲು ತಂಡ ಉತ್ಸುಕವಾಗಿದೆ. ಕೆಂಪೇಗೌಡ ಒಕ್ಕಲಿಗರ ವೆಲ್‌ಫೇರ್‌ ಗ್ರೂಪ್‌’ ರಚಿಸಿದ ಬಳಿಕ ರೈತರ ಶಾಲೆಗೆ ಇತ್ತೀಚೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಶಾಲೆಯು ಇಸ್ರೇಲ್ ಸೇರಿದಂತೆ ವಿವಿಧ ದೇಶಗಳ ರೈತರ ಯಶಸ್ಸಿನ ಕಥೆಗಳನ್ನು ಪ್ರದರ್ಶಿಸುತ್ತದೆ. ಆಲಕೆರೆಯಲ್ಲಿ ಎರಡು ತಿಂಗಳಲ್ಲಿ ಸೆಮಿನಾರ್ ಹಾಲ್ ಮತ್ತು ಕೆಲವು ತರಗತಿ ಕೊಠಡಿಗಳು ಸಿದ್ಧಗೊಳ್ಳಲಿವೆ. ರಾಜ್ಯಾದ್ಯಂತ ಇಂತಹ ಹಲವು ಶಾಲೆಗಳನ್ನು ತೆರೆಯುವ ಯೋಜನೆ ಒಳಗೊಂಡಿದೆ ಎಂದು ಮಂಡ್ಯದ ಉಪನ್ಯಾಸಕ ಸತ್ಯಮೂರ್ತಿ ತಿಳಿಸಿದ್ದಾರೆ. ರೈತರು ಕೃಷಿ ಮಾರ್ಗದರ್ಶನಕ್ಕಾಗಿ ಶಾಲೆಗೆ ತೆರಳಲು ಮುಕ್ತರಾಗಿದ್ದಾರೆ. “ನಾವು ಕೃಷಿಯಲ್ಲಿ ಉತ್ಸುಕರಾಗಿರುವ ಟೆಕ್ಕಿಗಳು ಸೇರಿದಂತೆ ಯುವಕರಿಗೆ ಮಾರ್ಗದರ್ಶನ ನೀಡುತ್ತೇವೆ” ಎಂದು ಅವರು ಹೇಳಿದರು.

ಉಪನ್ಯಾಸಕರಾದ ಪ್ರದೀಪ್ ಕುಮಾರ್ ಮಾತನಾಡಿ, ಗುಂಪು 500 ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಬೀಜಗಳನ್ನು ವಿತರಿಸಿದೆ ಮತ್ತು ಅವುಗಳನ್ನು ಭವಿಷ್ಯಕ್ಕಾಗಿ ಸಂರಕ್ಷಿಸಲು ಅವರನ್ನು ಪ್ರೋತ್ಸಾಹಿಸುತ್ತಿದೆ. ಬೀಜಗಳಿಗಾಗಿ ಬಹುರಾಷ್ಟ್ರೀಯ ಕಂಪನಿಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಇದು ಅವರಿಗೆ ಸಹಾಯ ಮಾಡುತ್ತದೆ. ರೈತರು ಉದ್ಯೋಗ ಅರಸಿ ಸಮೀಪದ ಪಟ್ಟಣಗಳು ​​ಮತ್ತು ನಗರಗಳಿಗೆ ವಲಸೆ ಹೋಗಿರುವುದರಿಂದ ಆಲಕೆರೆ ಮತ್ತು ಕೀಲಾರ ಗ್ರಾಮಗಳಲ್ಲಿ ಅನೇಕ ಮನೆಗಳಿಗೆ ಬೀಗ ಹಾಕಲಾಗಿದೆ. ಅವರು ಮರಳಿ ಬಂದು ಕೃಷಿಯನ್ನು ಪುನರಾರಂಭಿಸಬೇಕೆಂದು ನಾವು ಆಶಯವಾಗಿದೆ ಎಂದು ಹೇಳಿದರು. ಭತ್ತ ಕಟಾವು ಮಾಡುವ ಯಂತ್ರ ಮತ್ತು ಇತರೆ ಕೃಷಿ ಉಪಕರಣಗಳನ್ನು ರೈತರಿಗೆ ಅತ್ಯಲ್ಪ ಬಾಡಿಗೆಗೆ ನೀಡುವ ಯೋಜನೆಯನ್ನು ಹೊಂದಿದ್ದೇವೆ. ಸಾವಯವ ಮತ್ತು ನೈಸರ್ಗಿಕ ಕೃಷಿಯನ್ನು ಕೈಗೊಳ್ಳಲು ಪ್ರೋತ್ಸಾಹಿಸಲು ಮತ್ತು ರಸಗೊಬ್ಬರ ಮತ್ತು ಕೀಟನಾಶಕಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಶಾಲೆಯು ಪ್ರಗತಿಪರ ರೈತರ ಪಟ್ಟಿಯನ್ನು ಸಿದ್ಧಪಡಿಸಿದೆ ಎಂದು ಅವರು ವಿವರಿಸಿದ್ದಾರೆ.

Categories
ಮಂಡ್ಯ

ನಾಗಮಂಗಲ ಗಲಭೆ: ನಿಷೇಧಾಜ್ಞೆ!

ನಾಗಮಂಗಲ ಗಲಭೆ: ನಿಷೇಧಾಜ್ಞೆ!
– ಪ್ರಮುಖ ಆರೋಪಿಗಳಿಗೆ ನ್ಯಾಯಾಂಗ ಬಂಧನ
– ಎರಡು ಕಡೆಯ 150ಕ್ಕೂ ಹೆಚ್ಚು ಮಂದಿ ಅರೆಸ್ಟ್:
– ಇನ್ಸ್ಪೆಕ್ಟರ್ ಅಮಾನತು ಮಾಡಿ ಐಜಿಪಿ ಆದೇಶ
– ಗಲಭೆ ನಡೆದ ಗ್ರಾಮದಲ್ಲಿ ನೀರವ ಮೌನ

NAMMUR EXPRESS NEWS
ನಾಗಮಂಗಲ: ಮಂಡ್ಯ ಜಿಲ್ಲೆ ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಗಣಪತಿ ಮಂಟಪ ಇದ್ದ ಬದ್ರಿಕೊಪ್ಪಿನಲ್ಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬದ್ರಿಕೊಪ್ಪಲು ಹೆಬ್ಬಾಗಿಲಿನಲ್ಲಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಬಂಧನದ ಭೀತಿಯಿಂದ ಇಲ್ಲಿನ ಯುವಕರು ಗ್ರಾಮವನ್ನೇ ತೊರೆದು ಹೋಗುತ್ತಿದ್ದಾರೆ. ಹೀಗಾಗಿ, ಬದ್ರಿಕೊಪ್ಪಲು ಗ್ರಾಮ ಬಿಕೋ ಎನ್ನುತ್ತಿದೆ.
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ದರ್ಗಾ ಬಳಿ ನಡೆದ ಗಲಭೆಯಲ್ಲಿ 20ಕ್ಕೂ ಅಧಿಕ ಅಂಗಡಿಗಳನ್ನು ಧ್ವಂಸ ಮಾಡಲಾಗಿತ್ತು. ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು. ಹಿಂದೂಗಳ ಗುಂಪು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಗಣಪತಿ ವಿಸರ್ಜನೆಗೆ ತೆರಳುತ್ತಿದ್ದಂತೆ ಮುಸ್ಲಿಮರ ಗುಂಪು ಲ್ಲಾಹು ಅ್‌ರ್ ಘೋಷಣೆ ಕೂಗಿ ಗಲಾಟೆಯೆಬ್ಬಿಸಿದ್ದರು. ಬಳಿಕ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಇದೀಗ ಇಡೀ ಗ್ರಾಮದಲ್ಲಿ ಮೌನ ಆವರಿಸಿದೆ.

52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಗಣಪತಿ ಮೆರವಣಿಗೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನಾಗಮಂಗಲ ಸಿವಿಲ್ ನ್ಯಾಯಾಲಯ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳನ್ನು ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದರು. ಸದ್ಯ ಆರೋಪಿಗಳನ್ನು ಮಂಡ್ಯ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.
ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 150 ಆರೋಪಿಗಳ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. 30 ಮುಸ್ಲಿಂ ಯುವಕರು ಮತ್ತು 23 ಹಿಂದೂ ಯುವಕರನ್ನು ಬಂಧಿಸಲಾಗಿದ್ದು ಇನ್ನು ತಲೆಮರೆಸಿಕೊಂಡಿರುವ 97 ಜನರಿಗೆ ಶೋಧ ನಡೆಸಿದ್ದಾರೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ.

20ಕ್ಕೂ ಹೆಚ್ಚು ಅಂಗಡಿಗಳು ಭಸ್ಮ,ಅಶೋಕ್‌ ಅವರನ್ನು ಅಮಾನತು ಮಾಡಿ ಐಜಿಪಿ ಆದೇಶ!

ನಾಗಮಂಗಲ ಪಟ್ಟಣದ ಮಂಡ್ಯ ರಸ್ತೆ, ಮೈಸೂರು ರಸ್ತೆ, ಮರಿಯಪ್ಪ ವೃತ್ತ, ಕೊಳದ ಬೀದಿ ಸೇರಿದಂತೆ ಹೆದ್ದಾರಿಯ ಹಲವೆಡೆ ಚಪ್ಪಲಿ ಅಂಗಡಿ, ಬಟ್ಟೆ ಅಂಗಡಿ, ಪಾತ್ರೆ ಅಂಗಡಿ, ಬೈಕ್‌ ಶೋರೂಂ, ಟೈಲ‌ರ್ ಅಂಗಡಿ, ಕೋಳಿ ಅಂಗಡಿ, ಹಣ್ಣಿನ ಅಂಗಡಿ, ಗ್ಯಾರೇಜ್, ಟೈ‌ರ್ ಅಂಗಡಿ ಸೇರಿದಂತೆ ವಿವಿಧ ಬಗೆಯ 20ಕ್ಕೂ ಹೆಚ್ಚು ಅಂಗಡಿ ಮಳಿಗೆಗಳಿಗೆ ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಸುಟ್ಟು ಕರಕಲಾಗಿವೆ.
ಅಮಾಯಕರನ್ನು, ಗಣೇಶ ಪೂಜೆ ಮಾಡಿ ಬಂದು ಮನೆಯಲ್ಲಿ ಮಲಗಿದ್ದವರನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಮಹಿಳೆಯರು ಆರೋಪಿಸಿದ್ದಾರೆ. ಪೊಲೀಸ್‌ ಠಾಣೆಗಳ ಮುಂದೆ ಬಂದು ಪ್ರತಿಭಟನೆ ಮಾಡುತ್ತಿದ್ದಾರೆ.
ಗಲಭೆ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲ ಪಟ್ಟಣ ಪೊಲೀಸ್ ಇನ್ಸ್ ಪೆಕ್ಟ‌ರ್ ಅಶೋಕ್‌ ಅವರನ್ನು ಅಮಾನತು ಮಾಡಿ ಐಜಿಪಿ ಆದೇಶ ಹೊರಡಿಸಿದ್ದಾರೆ.

ಜೈಲುಪಾಲಾದ ಪುತ್ರ,ಸುದ್ದಿ ಕೇಳಿ ಕುಸಿದು ಬಿದ್ದ ತಾಯಿ!

ಗಲಭೆ ಪ್ರಕರಣದಲ್ಲಿ ತನ್ನ ಪುತ್ರ ಜೈಲುಪಾಲಾಗಿು ಸುದ್ದಿ ತಿಳಿು ತಾಯಿ ಕುಸಿದು ಬಿದ್ದಿುವ ಘಟನೆ ನಡೆದಿದೆ.
ತನ್ನ ಪುತ್ರ ಜೈಲುಪಾಲಾದ ಎಂದು ನೊಂದ ತಾಯಿ ನಾಗಮಂಗಲ ಕೋರ್ಟ್‌ ಮುಂಭಾಗವೇ ಕುಸಿದು ಬಿದ್ದದ್ದು, ಮತ್ತೊಂದೆಡೆ ತಮ್ಮ ಮಕ್ಕಳು ಜೈಲು ಸೇರಿರುವುದನ್ನು ನೋಡಿ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.

ಪ್ರಮೋದ್ ಮುತಾಲಿಕ್ ಭೇಟಿ ರದ್ದು

ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳದ ನಾಯಕ ಪ್ರಮೋದ್ ಮುತಾಲಿಕ್ ಇಂದು ನಾಗಮಂಗಲಕ್ಕೆ ಆಗಮಿಸುವುದಾಗಿ ತಿಳಿಸಿದ್ದರು. ಆದರೆ, ಅವರಿಗೆ ನಾಗಮಂಗಲಕ್ಕೆ ಬಾರದಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಹೀಗಾಗಿ, ಇಂದು ನಾಗಮಂಗಲದಲ್ಲಿ ಗಲಭೆ ನಡೆದ ಸ್ಥಳಕ್ಕೆ ಬರುವ ಪ್ಲಾನ್ ಹಾಕಿಕೊಂಡಿದ್ದ ಮುತಾಲಿಕ್ ತಮ್ಮ ಭೇಟಿಯನ್ನು ರದ್ದುಪಡಿಸಿದ್ದಾರೆ.

Categories
ಮಂಡ್ಯ

ಮಂಡ್ಯದ ನಾಗಮಂಗಲದಲ್ಲಿ ಗಲಭೆ!

ಮಂಡ್ಯದ ನಾಗಮಂಗಲದಲ್ಲಿ ಗಲಭೆ!
– ಗಣೇಶ ಮೆರವಣಿಗೆ ವೇಳೆ ಗಲಾಟೆ:ನಿಷೇಧಾಜ್ಞೆ
– ಶಾಲೆ, ಕಾಲೇಜುಗಳಿಗೆ ರಜೆ: ಏನಿದು ಘಟನೆ?
– ಅನ್ಯ ಕೋಮಿನ ಯುವಕರಿಂದ ಅಂಗಡಿಗಳಿಗೆ ಬೆಂಕಿ
– ಇಂದು ನಾಗಮಂಗಲ ಬಂದ್: ಭಾರೀ ಪೊಲೀಸ್ ಬಂದೋಬಸ್ತ್

NAMMUR EXPRESS NEWS
ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಬುಧವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕೋಮುಗಲಭೆ ಉಂಟಾಗಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸಂಜೆ 6.30ರ ವೇಳೆಗೆ ಗಣೇಶನ ವಿಸರ್ಜನಾ ಮೆರವಣಿಗೆ ಆರಂಭವಾಗಿದೆ. ನಾಗಮಂಗಲ ಪಟ್ಟಣದ ಬದರಿಕೊಪ್ಪಲಿನಲ್ಲಿ ಕಳೆದ 5 ದಿನಗಳ ಹಿಂದೆ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಬುಧವಾರ ಸಂಜೆ ಅದ್ಧೂರಿಯಾಗಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಂಡಿದ್ದರು.ಪಟಾಕಿ ಸಿಡಿಸುತ್ತಾ, ಡೊಳ್ಳು, ತಮಟೆ, ಡಿಜೆ ಸೌಂಡ್‌ನೊಂದಿಗೆ ಹಿಂದೂಗಳು ಗಣೇಶನ ಮೂರ್ತಿ ವಿಸರ್ಜನೆಗೆ ಮೆರವಣಿಗೆ ಹೊರಟಿದ್ದರು.

ಮಸೀದಿ ರಸ್ತೆಗೆ ತೆರಳುತ್ತಿದ್ದ ಮೆರವಣಿಗೆಗೆ ತಡೆ

ಬದರಿಕೊಪ್ಪಲಿನಿಂದ ಹೊರಟ ಗಣೇಶನ ಿಸರ್ಜನ ಮೆರವಣಿಗೆ ಮಡ್ಯ ಸರ್ಕಲ್ ಮಾರ್ಗವಾಗಿ ತೆರಳಿತ್ತು. ಯಾ ಅಲ್ಲಾ ಮಸೀದಿ ಮತ್ತು ದರ್ಗಾ ಮುಂಭಾಗದ ರಸ್ತೆಯತ್ತ ಮೆರವಣಿಗೆ ಹೊರಟಿತ್ತು. ಆದರೆ ನಾಗಮಂಗಲದ ಮಂಡ್ಯ ಸರ್ಕಲ್ ಬಳಿಯೇ ಕೆಲ ಅನ್ಯಕೋಮಿನ ಯುವಕರು ಮೆರವಣಿಗೆಗೆ ತಡೆಯೊಡ್ಡಿದ್ದಾರೆ. ಮಸೀದಿ ಮುಂದೆ ಡಿಜೆ ಸೌಂಡ್‌, ತಮಟೆ, ಡೊಳ್ಳು ಬಾರಿಸದಂತೆ ಕ್ಯಾತೆ ತೆಗಿದ್ದಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದೆ. ಅನ್ಯಕೋಮಿನ ಯುವಕರ ಕ್ಯಾತೆಗೆ ಕೇರ್ ಮಾಡದ ಗಣೇಶನ ವಿಸರ್ಜನಾ ತಂಡ, ಮೈಸೂರು ರಸ್ತೆಯಲ್ಲಿರುವ ಯಾ ಅಲ್ಲಾ ಮಸೀದಿ ಮತ್ತು ದರ್ಗಾ ಮುಂಭಾಗದ ರಸ್ತೆಯಲ್ಲಿ ಮೆರವಣಿಗೆ ಹೊರಟಿದೆ. ಡಿಜೆ ಸೌಂಡ್ ಜತೆ ಡೊಳ್ಳು, ತಮಟೆ ಸದ್ದಿನೊಂದಿಗೆ ಪಟಾಕಿ ಸಿಡಿಸುತ್ತಾ ಸಂಭ್ರಮದಿಂದ ಹೆಜ್ಜೆ ಹಾಕಿದೆ. ಇನ್ನೇನು ಮಸೀದಿಯಿಂದ ಸ್ವಲ್ಪ ದೂರ ಇದೆ ಎನ್ನುವಾಗ ಅನ್ಯಕೋಮಿನ ಯುವಕರು ಏಕಾಏಕಿ ಗಣೇಶ ವಿಸರ್ಜನಾ ಮೆರವಣಿಗೆಯತ್ತ ಕಲ್ಲು ತೂರಾಟ ನಡೆಸಿದ್ದಾರೆ. ಕಟ್ಟಡದ ಮೇಲೆ ನಿಂತುಕೊಂಡು ಸಹ ಮನಬಂದಂತೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಗಲಾಟೆ ಶುರುವಾಗಿದೆ. ಹಿಂದೂಗಳು ಮತ್ತು ಅನ್ಯಕೋಮಿನ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟ ನಡೆದಿದೆ. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಸಿಗೊಳಿಸಿದ್ದಾರೆ. ನಂತರ ಕಲ್ಲುತೂರಾಟ ನಡೆಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಹಿಂದೂಗಳು ನಾಗಮಂಗಲ ಪೊಲೀಸ್ ಠಾಣೆ ಮುಂದೆಯೇ ಗಣೇಶನ ವಿಗ್ರಹವನ್ನಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ಅಂಗಡಿಗಳಿಗೆ ಬೆಂಕಿ

ನಾಗಮಂಗಲ ಪೊಲೀಸ್ ಠಾಣೆ ಮುಂದೆ ಹಿಂದೂಗಳು ಪ್ರತಿಭಟನೆ ನಡೆಸಿ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆದರೆ, ಇದಾದ ಸ್ವಲ್ಪಹೊತ್ತಿನಲ್ಲೇ, ಅಂದರೆ ರಾತ್ರಿ 10 ಗಂಟೆ ಸುಮಾರಿಗೆ ನಾಗಮಂಗಲದ ಮಂಡ್ಯ ಸರ್ಕಲ್‌ನಲ್ಲಿ ದುಷ್ಕೃತ್ಯವೇ ನಡೆದುಹೋಗಿದೆ. ಅನ್ಯಕೋಮಿನ ಯುವಕರ ಗುಂಪು ಸಿಕ್ಕಸಿಕ್ಕ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ಪೆಟ್ರೋಲ್ ಬಾಂಬ್‌ಗಳನ್ನು ತೂರಿದೆ. ಗುಜರಿ ಅಂಗಡಿಯೊಂದು ಧಗಧಗಿಸಿ ಉರಿಯಿತು. ಬೈಕ್ ಶೋರೂಂ ಒಂದನ್ನು ಧ್ವಂಸಗೊಳಿಸಲಾಯಿತು. ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದು ಹೊತ್ತಿ ಉರಿದವು. ಕೆಲವು ಕಿಡಿಗೇಡಿಗಳು ರಸ್ತೆಯ್ಲೇ ಾಗು, ರಾಡ್, ತಲ್ವಾರ್‌ಗಳನ್ನು ಝಳಪಿಸುತ್ತಾ ಅಟ್ಟಹಾಸ ಪ್ರದರ್ಶಿಸಿದ್ದಾರೆ. ರಸ್ತೆಯಲ್ಲೇ ಬರುತ್ತಿದ್ದ ವಾಹನಗಳ ಮೇಲೆ ದಾಳಿ ಮಾಡಿದ್ದಾರೆ. ಪೊಲೀಸರು ಕಿಡಿಗೇಡಿಗಳಿಂದ ಲಾಂಗ್ ಸೇರಿ ಇತರೆ ಮಾರಕಾಸ್ತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಅಗ್ನಿಶಾಮಕ ವಾಹನಗಳಿಂದ ಬೆಂಕಿ ಶಮನ

ಬೆಂಕಿ ಹಚ್ಚಿದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್, ಮಂಡ್ಯ ಜಿಲ್ಲಾ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಸ್ಥಿತಿ ಹತೋಟಿಯಲ್ಲಿದ್ದು ಸೆಪ್ಟೆಂಬರ್ 14ರವರೆಗೆ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಹೇರಲಾಗಿದೆ.

ಇಂದು ನಾಗಮಂಗಲ ಬಂದ್

ಶಾಲಾ-ಕಾಲೇಜುಗಳಿಗೆ ರಜೆ ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಮುಂಜಾಗ್ರತಾ ಕ್ರಮವಾಗಿ ಇಂದು ನಾಗಮಂಗಲದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಘಟನೆ ಖಂಡಿಸಿ ವಿಶ್ವ ಹಿಂದೂ ಪರಿಷತ್‌ ಸಂಘಟನೆ ಇಂದು ನಾಗಮಂಗಲ ಬಂದ್‌ಗೆ ಕರೆ ಕೊಟ್ಟಿದೆ.

Categories
ಮಂಡ್ಯ

ಮಕ್ಕಳ ಲವ್ ಕೇಸ್: ಬಾಲಕಿ ಆತ್ಮಹತ್ಯೆ!

ಮಕ್ಕಳ ಲವ್ ಕೇಸ್: ಬಾಲಕಿ ಆತ್ಮಹತ್ಯೆ!
– ಲವ್ ಮಾಡುವಂತೆ ಅಪ್ರಾಪ್ತ ಬಾಲಕರಿಂದ ಕಿರುಕುಳ
– ಮನನೊಂದ ಬಾಲಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

NAMMUR EXPRESS NEWS
ಮಂಡ್ಯ: ಕಾಲ ಕೆಟ್ಟು ಹೋಗಿದೆ. ಮೊಬೈಲ್, ಸಾಮಾಜಿಕ ಜಾಲ ತಾಣಗಳ ಅತೀ ಬಳಕೆ ಇಂದಿನ ವಿದ್ಯಾರ್ಥಿಗಳು, ಯುವ ಸಮುದಾಯವನ್ನು ಹಾಳು ಮಾಡುತ್ತಿದೆ ಎಂಬ ಆತಂಕದ ನಡುವೆ ಮಂಡ್ಯದಲ್ಲಿ ನಡೆದ ಈ ಘಟನೆ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಹೌದು. ಅಪ್ರಾಪ್ತ ಬಾಲಕರಿಂದ ಕಿರುಕುಳ ಹಿನ್ನಲೆ 15 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿ ಗುರುತಿಸಲಾಗಿದೆ. (15) ಎಂದು ಬಾಲಕಿಯನ್ನು ಪ್ರೀತಿಸುವ ವಿಚಾರವಾಗಿ ಯುವಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಾಲಕಿಗೆ ಪ್ರೀತಿಸುವಂತೆ ಕೂಡ ಬಾಲಕರು ಒತ್ತಾಯ ಮಾಡಿದ್ದಾರೆ. ಇವರ ಮಾತಿನ ಚಕಮಕಿಯ ಆಡಿಯೋ ವೈರಲ್ ಆಗಿದೆ.
ಅಷ್ಟೇ ಅಲ್ಲ, ಅದನ್ನು ಮೃತ ಬಾಲಕಿಯ ತಾಯಿಯ ವಾಟ್ಸಪ್‌ಗೂ ಬಾಲಕರು ಕಳುಹಿಸಿದ್ದಾರೆ. ಇದರಿಂದ ಮನನೊಂದು ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದದಾಳ. ಘಟನೆ ನಂತರ ಅಪ್ರಾಪ್ತ ಬಾಲಕರು ಪರಾರಿಯಾಗಿದ್ದು, ಈ ಬಗ್ಗೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಕಾಣೆಯಾಗಿರುವ ಬಾಲಕರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Categories
ಮಂಡ್ಯ

ಮಂಡ್ಯ ನಗರಸಭೆ ಗದ್ದುಗೆ ‘ಜೆಡಿಎಸ್‌-ಬಿಜೆಪಿ’ ಮೈತ್ರಿ ಪಾಲು!

ಮಂಡ್ಯ ನಗರಸಭೆ ಗದ್ದುಗೆ ‘ಜೆಡಿಎಸ್‌-ಬಿಜೆಪಿ’ ಮೈತ್ರಿ ಪಾಲು!
• ಅಧಿಕಾರ ಹಿಡಿಯಲು ಎರಡು ಪಕ್ಷದವರಿಂದ ತಂತ್ರ-ಪ್ರತಿತಂತ್ರ
• ಜೆಡಿಎಸ್‌-ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ!

NAMMUR EXPRESS NEWS
ಮಂಡ್ಯ: ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಆ.28ರಂದು ನಡೆದ ಚುನಾವಣೆಯಲ್ಲಿ ಮಂಡ್ಯ ನಗರಸಭೆ ಗದ್ದುಗೆ ಜೆಡಿಎಸ್‌-ಬಿಜೆಪಿ ಮೈತ್ರಿ ಪಾಲಾಗಿದೆ.
ಎರಡನೇ ಅವಧಿಗೆ ಅಧ್ಯಕ್ಷರಾಗಿ ನಾಗೇಶ್, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆಯಾಗಿದ್ದಾರೆ. ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನ, ಚುನಾವಣೆಯಲ್ಲಿ ಮಂಡ್ಯ ನಗರಸಭೆ ಗದ್ದುಗೆ ಜೆಡಿಎಸ್‌-ಬಿಜೆಪಿ ಮೈತ್ರಿ ಪಾಲಾಗಿದೆ.
ಮಂಡ್ಯ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನದ ಚುನಾವಣೆಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ನಾಗೇಶ್, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆಯಾದರು. ಅಧಿಕಾರ ಹಿಡಿಯಲು ಎರಡು ಪಕ್ಷದವರಿಂದ ತಂತ್ರ-ಪ್ರತಿತಂತ್ರ ರೂಪಿಸಲಾಗಿತ್ತು.
ಕಾಂಗ್ರೆಸ್ಸಿಗೆ ಸೆಡ್ಡು ಹೊಡೆದ ಸಂಸದ ಹಾಗೂ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ರಿವರ್ಸ್ ಆಪರೇಷನ್ ಮಾಡಿ ಕಾಂಗ್ರೆಸ್ಸಿನ ಓರ್ವ ಸದಸ್ಯನನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡು ಮಂಡ್ಯ ನಗರಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಜೆಡಿಎಸ್‌-ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
ಮಂಡ್ಯ ನಗರಸಭೆ ಗದ್ದುಗೆ ಜೆಡಿಎಸ್‌-ಬಿಜೆಪಿ ಮೈತ್ರಿ ಪಾಲಾಗುತ್ತಿದ್ದಂತೆ ಜೆಡಿಎಸ್‌-ಬಿಜೆಪಿ ಕಾರ್ಯಕರ್ತರು ಪಟಾಿ ಸಿಿಸಿ‌ ಸಂಭ್ರಮಿಸಿದರು. ಈ ವೇಳೆ ಸಂಸದ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಜೈಕಾರ ಕೂಗಿ ಹರ್ಷ ವ್ಯಕ್ತಪಡಿಸಿದ್ದಾರೆ.

Categories
ಮಂಡ್ಯ

ಅಪಾಯದ ಮಟ್ಟ ಮೀರಿ ಹರಿಯುತ್ತಿರೋ ಜೀವನದಿ ಕಾವೇರಿ.!

ಅಪಾಯದ ಮಟ್ಟ ಮೀರಿ ಹರಿಯುತ್ತಿರೋ ಜೀವನದಿ ಕಾವೇರಿ.!

– ಸ್ನಾನಘಟ್ಟ ಮುಳುಗಡೆ, ದೇವಸ್ಥಾನಕ್ಕೆ ಜಲದಿಗ್ಬಂಧನ
– ನೋಡುಗರ ಕಣ್ಣಿಗೆ ಮದ ನೀಡುತ್ತಿರುವ ನದಿಯ ರುದ್ರ ರಮಣೀಯ ದೃಶ್ಯ

NAMMUR EXPRESS NEWS

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ತಾಲೂಕಿನ ಕೆಆರ್‌ಎಸ್ ಅಣೆಕಟ್ಟು ಭರ್ತಿಯಾಗಿದೆ. ಇನ್ನು ಡ್ಯಾಂನಿಂದ ಒಂದು ಲಕ್ಷ ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಡಲಾಗಿದ್ದು, ಇದರಿಂದ ನಾಡಿನ ಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆ. ಕಾವೇರಿ ನದಿಯ ರುದ್ರ ರಮಣೀಯ ದೃಶ್ಯ ನೋಡುಗರ ಕಣ್ಣಿಗೆ ಮುದ ನೀಡುವಂತಿದೆ.

ನಿಮಿಷಾಂಭ ದೇವಸ್ಥಾನದ ಸ್ನಾನಘಟ್ಟ ಸಂಪೂರ್ಣ ಮುಳುಗಡೆ!

ಒಂದು ಕಡೆ ಕಾವೇರಿ ಪ್ರಕೃತಿಯ ಮಡಿಲಲ್ಲಿ ಸೌಂದರ್ಯ ದೇವತೆ ಹಾಗೆ ಕಾಣುತ್ತಿದ್ದರೆ, ಇನ್ನೊಂದೆಡೆ ಇದೇ ಕಾವೇರಿ ನದಿ ಅಪಾಯಮಟ್ಟ ಮೀರಿ ಹರಿದು ನದಿ ಪಾತ್ರದಲ್ಲಿ ಪ್ರವಾಹದ ಆತಂಕವನ್ನು ತಂದಿದೆ. ಕೆಆರ್‌ಎಸ್‌ ಡ್ಯಾಂನಿಂದ ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಬಿಟ್ಟಿರುವ ಪರಿಣಾಮ ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ ಹಲವು ಘಟನೆಗಳು ಜರುಗಿವೆ. ಒಂದು ಕಡೆ ಕಾವೇರಿ ನದಿ ಪಕ್ಕದ ಅಕ್ಕಪಕ್ಕದ ಜಮೀನುಗಳು ಜಲಾವೃತಗೊಂಡು ಅಲ್ಲಿನ ಬೆಳೆಗಳು ಮುಳುಗಡೆಯಾಗಿವೆ. ಇನ್ನೊಂದೆಡೆ ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನದ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ.

ರಂಗನತಿಟ್ಟು ಪಕ್ಷಿಧಾಮಕ್ಕೂ ಜಲಕಂಟಕ!

ಈ ಹಿನ್ನಲೆ ನದಿಗೆ ಇಳಿಯಲು ಭಕ್ತರಿಗೆ ನಿಷೇಧ ಹೇರಲಾಗಿದೆ. ಶ್ರೀರಂಗಪಟ್ಟಣ ಕೋಟೆ ಗಣಪತಿ ದೇವಸ್ಥಾನ ಕಾವೇರಿ ನದಿಯ ಪ್ರವಾಹದಿಂದ ಮುಳುಗಡೆಯಾಗಿದ್ದು, ವಿಶ್ವೇಶ್ವರನಿಗೆ ಪೂಜೆ ಇಲ್ಲದ ಹಾಗೆ ಆಗಿದೆ. ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಸುಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೂ ಜಲಕಂಟಕ ಎದುರಾಗಿದೆ. ಅಪಾರ ಪ್ರಮಾಣದ ನೀರು ಬರುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟಿನ 25 ನಡುಗಡ್ಡೆಗಳ ಪೈಕಿ ಬಹುತೇಕ ನಡುಗಡ್ಡೆಗಳು ಮುಳುಗಡೆಯಾಗಿವೆ. ಇದರಿಂದ ಇಲ್ಲಿನ ಪಕ್ಷಿ ಸಂಕುಲಗಳಿಗೂ ಸಂಕಷ್ಟ ಎದುರಾಗಿದೆ. ಇದಲ್ಲದೇ ರಂಗನತಿಟ್ಟಿನ ವಾಕಿಂಗ್ ಪಾಥ್ ಸಹ ನೀರಿನಲ್ಲಿ ಮುಳುಗಡೆಯಾಗಿದೆ. ಈಗಾಗಲೇ ಬೋಟಿಂಗ್ ವ್ಯವಸ್ಥೆ ಸ್ಥಗಿತ ಮಾಡಲಾಗಿದ್ದು, ಪಕ್ಷಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇನ್ನು ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಪ್ರವಾಹದಿಂದ ಆಗಿರುವ ಸಮಸ್ಯೆಗಳ ಸ್ಥಳಕ್ಕೆ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಡಿಸಿ ಡಾ.ಕುಮಾರ, ಜಿಪಂ ಸಿಇಓ ತಸ್ವೀರ್ ಸೇರ್ ಆಸೀಫ್ ಭೇಟಿ ನೀಡಿದರು. ಮುಂದೆ 1.50 ಲಕ್ಷ ಕ್ಯೂಸೆಕ್ ನೀರು ಬಿಟ್ಟರೆ ಮುಂದೆ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಜೊತೆಗೆ ಬೆಳೆ ಹಾನಿ ಪರಿಹಾರದ ಬಗ್ಗೆ ಚಿಂತನೆ ಮಾಡಲಾಯಿತು. ಒಟ್ಟಾರೆ ಕಾವೇರಿ ನದಿ ಭೋರ್ಗರೆತವಾಗಿ ಹರಿಯುತ್ತಿರೋದು ಒಂದು ಕಡೆ ಸಂತಸವಾದರೆ, ಇನ್ನೊಂದೆಡೆ ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕಾವೇರಿಯಿಂದ ಪ್ರವಾಹದ ಸಮಸ್ಯೆಯನ್ನು ಕಾವೇರಿ ಕೊಳ್ಳದ ಜನರು ಎದುರಿಸುತ್ತಿದ್ದಾರೆ.

Categories
ಮಂಡ್ಯ

ಅಪಾಯದ ಮಟ್ಟ ಮೀರಿ ಹರಿಯುತ್ತಿರೋ ಜೀವನದಿ ಕಾವೇರಿ.!

ಅಪಾಯದ ಮಟ್ಟ ಮೀರಿ ಹರಿಯುತ್ತಿರೋ ಜೀವನದಿ ಕಾವೇರಿ.!
– ಸ್ನಾನಘಟ್ಟ ಮುಳುಗಡೆ, ದೇವಸ್ಥಾನಕ್ಕೆ ಜಲದಿಗ್ಬಂಧನ
– ನೋಡುಗರ ಕಣ್ಣಿಗೆ ಮದ ನೀಡುತ್ತಿರುವ ನದಿಯ ರುದ್ರ ರಮಣೀಯ ದೃಶ್ಯ

NAMMUR EXPRESS NEWS
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ತಾಲೂಕಿನ ಕೆಆರ್‌ಎಸ್ ಅಣೆಕಟ್ಟು ಭರ್ತಿಯಾಗಿದೆ. ಇನ್ನು ಡ್ಯಾಂನಿಂದ ಒಂದು ಲಕ್ಷ ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಡಲಾಗಿದ್ದು, ಇದರಿಂದ ನಾಡಿನ ಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆ. ಕಾವೇರಿ ನದಿಯ ರುದ್ರ ರಮಣೀಯ ದೃಶ್ಯ ನೋಡುಗರ ಕಣ್ಣಿಗೆ ಮುದ ನೀಡುವಂತಿದೆ.

ನಿಮಿಷಾಂಭ ದೇವಸ್ಥಾನದ ಸ್ನಾನಘಟ್ಟ ಸಂಪೂರ್ಣ ಮುಳುಗಡೆ!

ಒಂದು ಕಡೆ ಕಾವೇರಿ ಪ್ರಕೃತಿಯ ಮಡಿಲಲ್ಲಿ ಸೌಂದರ್ಯ ದೇವತೆ ಹಾಗೆ ಕಾಣುತ್ತಿದ್ದರೆ, ಇನ್ನೊಂದೆಡೆ ಇದೇ ಕಾವೇರಿ ನದಿ ಅಪಾಯಮಟ್ಟ ಮೀರಿ ಹರಿದು ನದಿ ಪಾತ್ರದಲ್ಲಿ ಪ್ರವಾಹದ ಆತಂಕವನ್ನು ತಂದಿದೆ. ಕೆಆರ್‌ಎಸ್‌ ಡ್ಯಾಂನಿಂದ ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಬಿಟ್ಟಿರುವ ಪರಿಣಾಮ ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ ಹಲವು ಘಟನೆಗಳು ಜರುಗಿವೆ. ಒಂದು ಕಡೆ ಕಾವೇರಿ ನದಿ ಪಕ್ಕದ ಅಕ್ಕಪಕ್ಕದ ಜಮೀನುಗಳು ಜಲಾವೃತಗೊಂಡು ಅಲ್ಲಿನ ಬೆಳೆಗಳು ಮುಳುಗಡೆಯಾಗಿವೆ. ಇನ್ನೊಂದೆಡೆ ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನದ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ.

ರಂಗನತಿಟ್ಟು ಪಕ್ಷಿಧಾಮಕ್ಕೂ ಜಲಕಂಟಕ!

ಈ ಹಿನ್ನಲೆ ನದಿಗೆ ಇಳಿಯಲು ಭಕ್ತರಿಗೆ ನಿಷೇಧ ಹೇರಲಾಗಿದೆ. ಶ್ರೀರಂಗಪಟ್ಟಣ ಕೋಟೆ ಗಣಪತಿ ದೇವಸ್ಥಾನ ಕಾವೇರಿ ನದಿಯ ಪ್ರವಾಹದಿಂದ ಮುಳುಗಡೆಯಾಗಿದ್ದು, ವಿಶ್ವೇಶ್ವರನಿಗೆ ಪೂಜೆ ಇಲ್ಲದ ಹಾಗೆ ಆಗಿದೆ. ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಸುಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೂ ಜಲಕಂಟಕ ಎದುರಾಗಿದೆ. ಅಪಾರ ಪ್ರಮಾಣದ ನೀರು ಬರುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟಿನ 25 ನಡುಗಡ್ಡೆಗಳ ಪೈಕಿ ಬಹುತೇಕ ನಡುಗಡ್ಡೆಗಳು ಮುಳುಗಡೆಯಾಗಿವೆ. ಇದರಿಂದ ಇಲ್ಲಿನ ಪಕ್ಷಿ ಸಂಕುಲಗಳಿಗೂ ಸಂಕಷ್ಟ ಎದುರಾಗಿದೆ.

ಇದಲ್ಲದೇ ರಂಗನತಿಟ್ಟಿನ ವಾಕಿಂಗ್ ಪಾಥ್ ಸಹ ನೀರಿನಲ್ಲಿ ಮುಳುಗಡೆಯಾಗಿದೆ. ಈಗಾಗಲೇ ಬೋಟಿಂಗ್ ವ್ಯವಸ್ಥೆ ಸ್ಥಗಿತ ಮಾಡಲಾಗಿದ್ದು, ಪಕ್ಷಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇನ್ನು ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಪ್ರವಾಹದಿಂದ ಆಗಿರುವ ಸಮಸ್ಯೆಗಳ ಸ್ಥಳಕ್ಕೆ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಡಿಸಿ ಡಾ.ಕುಮಾರ, ಜಿಪಂ ಸಿಇಓ ತಸ್ವೀರ್ ಸೇರ್ ಆಸೀಫ್ ಭೇಟಿ ನೀಡಿದರು. ಮುಂದೆ 1.50 ಲಕ್ಷ ಕ್ಯೂಸೆಕ್ ನೀರು ಬಿಟ್ಟರೆ ಮುಂದೆ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಜೊತೆಗೆ ಬೆಳೆ ಹಾನಿ ಪರಿಹಾರದ ಬಗ್ಗೆ ಚಿಂತನೆ ಮಾಡಲಾಯಿತು. ಒಟ್ಟಾರೆ ಕಾವೇರಿ ನದಿ ಭೋರ್ಗರೆತವಾಗಿ ಹರಿಯುತ್ತಿರೋದು ಒಂದು ಕಡೆ ಸಂತಸವಾದರೆ, ಇನ್ನೊಂದೆಡೆ ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕಾವೇರಿಯಿಂದ ಪ್ರವಾಹದ ಸಮಸ್ಯೆಯನ್ನು ಕಾವೇರಿ ಕೊಳ್ಳದ ಜನರು ಎದುರಿಸುತ್ತಿದ್ದಾರೆ.