Categories
ಬೆಂಗಳೂರು ಮಂಡ್ಯ ಮೈಸೂರು

ಅಪಾಯದ ಮಟ್ಟ ಮೀರಿ ಹರಿಯುತ್ತಿರೋ ಜೀವನದಿ ಕಾವೇರಿ.!

ಅಪಾಯದ ಮಟ್ಟ ಮೀರಿ ಹರಿಯುತ್ತಿರೋ ಜೀವನದಿ ಕಾವೇರಿ.!

– ಸ್ನಾನಘಟ್ಟ ಮುಳುಗಡೆ, ದೇವಸ್ಥಾನಕ್ಕೆ ಜಲದಿಗ್ಬಂಧನ
ನೋಡುಗರ ಕಣ್ಣಿಗೆ ಮದ ನೀಡುತ್ತಿರುವ ನದಿಯ ರುದ್ರ ರಮಣೀಯ ದೃಶ್ಯ

NAMMUR EXPRESS NEWS

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ತಾಲೂಕಿನ ಕೆಆರ್‌ಎಸ್ ಅಣೆಕಟ್ಟು ಭರ್ತಿಯಾಗಿದೆ. ಇನ್ನು ಡ್ಯಾಂನಿಂದ ಒಂದು ಲಕ್ಷ ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಡಲಾಗಿದ್ದು, ಇದರಿಂದ ನಾಡಿನ ಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆ. ಕಾವೇರಿ ನದಿಯ ರುದ್ರ ರಮಣೀಯ ದೃಶ್ಯ ನೋಡುಗರ ಕಣ್ಣಿಗೆ ಮುದ ನೀಡುವಂತಿದೆ.

ನಿಮಿಷಾಂಭ ದೇವಸ್ಥಾನದ ಸ್ನಾನಘಟ್ಟ ಸಂಪೂರ್ಣ ಮುಳುಗಡೆ!

ಒಂದು ಕಡೆ ಕಾವೇರಿ ಪ್ರಕೃತಿಯ ಮಡಿಲಲ್ಲಿ ಸೌಂದರ್ಯ ದೇವತೆ ಹಾಗೆ ಕಾಣುತ್ತಿದ್ದರೆ, ಇನ್ನೊಂದೆಡೆ ಇದೇ ಕಾವೇರಿ ನದಿ ಅಪಾಯಮಟ್ಟ ಮೀರಿ ಹರಿದು ನದಿ ಪಾತ್ರದಲ್ಲಿ ಪ್ರವಾಹದ ಆತಂಕವನ್ನು ತಂದಿದೆ. ಕೆಆರ್‌ಎಸ್‌ ಡ್ಯಾಂನಿಂದ ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಬಿಟ್ಟಿರುವ ಪರಿಣಾಮ ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ ಹಲವು ಘಟನೆಗಳು ಜರುಗಿವೆ. ಒಂದು ಕಡೆ ಕಾವೇರಿ ನದಿ ಪಕ್ಕದ ಅಕ್ಕಪಕ್ಕದ ಜಮೀನುಗಳು ಜಲಾವೃತಗೊಂಡು ಅಲ್ಲಿನ ಬೆಳೆಗಳು ಮುಳುಗಡೆಯಾಗಿವೆ. ಇನ್ನೊಂದೆಡೆ ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನದ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ.

ರಂಗನತಿಟ್ಟು ಪಕ್ಷಿಧಾಮಕ್ಕೂ ಜಲಕಂಟಕ!

ಈ ಹಿನ್ನಲೆ ನದಿಗೆ ಇಳಿಯಲು ಭಕ್ತರಿಗೆ ನಿಷೇಧ ಹೇರಲಾಗಿದೆ. ಶ್ರೀರಂಗಪಟ್ಟಣ ಕೋಟೆ ಗಣಪತಿ ದೇವಸ್ಥಾನ ಕಾವೇರಿ ನದಿಯ ಪ್ರವಾಹದಿಂದ ಮುಳುಗಡೆಯಾಗಿದ್ದು, ವಿಶ್ವೇಶ್ವರನಿಗೆ ಪೂಜೆ ಇಲ್ಲದ ಹಾಗೆ ಆಗಿದೆ. ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಸುಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೂ ಜಲಕಂಟಕ ಎದುರಾಗಿದೆ. ಅಪಾರ ಪ್ರಮಾಣದ ನೀರು ಬರುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟಿನ 25 ನಡುಗಡ್ಡೆಗಳ ಪೈಕಿ ಬಹುತೇಕ ನಡುಗಡ್ಡೆಗಳು ಮುಳುಗಡೆಯಾಗಿವೆ. ಇದರಿಂದ ಇಲ್ಲಿನ ಪಕ್ಷಿ ಸಂಕುಲಗಳಿಗೂ ಸಂಕಷ್ಟ ಎದುರಾಗಿದೆ.
ಇದಲ್ಲದೇ ರಂಗನತಿಟ್ಟಿನ ವಾಕಿಂಗ್ ಪಾಥ್ ಸಹ ನೀರಿನಲ್ಲಿ ಮುಳುಗಡೆಯಾಗಿದೆ. ಈಗಾಗಲೇ ಬೋಟಿಂಗ್ ವ್ಯವಸ್ಥೆ ಸ್ಥಗಿತ ಮಾಡಲಾಗಿದ್ದು, ಪಕ್ಷಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇನ್ನು ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಪ್ರವಾಹದಿಂದ ಆಗಿರುವ ಸಮಸ್ಯೆಗಳ ಸ್ಥಳಕ್ಕೆ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಡಿಸಿ ಡಾ.ಕುಮಾರ, ಜಿಪಂ ಸಿಇಓ ತಸ್ವೀರ್ ಸೇರ್ ಆಸೀಫ್ ಭೇಟಿ ನೀಡಿದರು. ಮುಂದೆ 1.50 ಲಕ್ಷ ಕ್ಯೂಸೆಕ್ ನೀರು ಬಿಟ್ಟರೆ ಮುಂದೆ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಜೊತೆಗೆ ಬೆಳೆ ಹಾನಿ ಪರಿಹಾರದ ಬಗ್ಗೆ ಚಿಂತನೆ ಮಾಡಲಾಯಿತು. ಒಟ್ಟಾರೆ ಕಾವೇರಿ ನದಿ ಭೋರ್ಗರೆತವಾಗಿ ಹರಿಯುತ್ತಿರೋದು ಒಂದು ಕಡೆ ಸಂತಸವಾದರೆ, ಇನ್ನೊಂದೆಡೆ ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕಾವೇರಿಯಿಂದ ಪ್ರವಾಹದ ಸಮಸ್ಯೆಯನ್ನು ಕಾವೇರಿ ಕೊಳ್ಳದ ಜನರು ಎದುರಿಸುತ್ತಿದ್ದಾರೆ.

Categories
ಮಂಡ್ಯ ಮೈಸೂರು

ಮೈಸೂರು ಟಾಪ್ 3 ನ್ಯೂಸ್..!

ಮೈಸೂರು ಟಾಪ್ 3 ನ್ಯೂಸ್..!

– ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ದಂಪತಿ ಗಂಭೀರ..!
– ಕೆಆರ್ ಎಸ್ ನಿಂದ ನದಿಗೆ ಹರಿದ ನೀರು: ರಂಗನತಿಟ್ಟು ಪಕ್ಷಿಧಾಮದ ದೋಣಿ ವಿಹಾರ ತಾತ್ಕಾಲಿಕ ಬಂದ್
– ಮನೆಯ ಗೋಡೆ ಕುಸಿದು ಗೃಹಿಣಿ ಸಾವು!

NAMMUR EXPRESS NEWS
ಮೈಸೂರು: ಗ್ಯಾಸ್‌ ಟ್ಯಾಂಕರ್‌ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೈಸೂರಿನ ಹೊರ ವಲಯದ ರಿಂಗ್ ರಸ್ತೆಯಲ್ಲಿ ಅಪಘಾತ ನಡೆದಿದೆ. ಚಂದ್ರು ಮತ್ತು ಪ್ರೇಮಾ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ. ಮೈಸೂರಿನ ಕೂರ್ಗಳ್ಳಿ ಗ್ರಾಮದ ನಿವಾಸಿಯಾದ ಈ ದಂಪತಿ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಗ್ಯಾಸ್ ಟ್ಯಾಂಕ‌ರ್ ಬೈಕ್‌ಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಕೆಳಗೆ ಬಿದ್ದ ದಂಪತಿ ಗಂಭೀರ ಗಾಯಗೊಂಡಿದ್ದಾರೆ. ಚಂದ್ರು ಅವರು ಗಂಭೀರ ಗಾಯಗೊಂಡರೆ, ಸಣ್ಣ-ಪುಟ್ಟ ಗಾಯದಿಂದ ಪ್ರೇಮಾ ಪಾರಾಗಿದ್ದಾರೆ.
ಅಪಘಾತದ ರಭಸಕ್ಕೆ ರಸ್ತೆ ಪೂರ್ತಿ ರಕ್ತಸಿಕ್ತವಾಗಿತ್ತು. ಸ್ಥಳಕ್ಕೆ ವಿವಿ ಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿವಿ ಪುರಂ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕೆಆರ್ ಎಸ್ ನಿಂದ ನದಿಗೆ ಹರಿದ ನೀರು: ರಂಗನತಿಟ್ಟು ಪಕ್ಷಿಧಾಮದ ದೋಣಿ ವಿಹಾರ ತಾತ್ಕಾಲಿಕ ಬಂದ್!

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಹೆಚ್ಚಾಗಿ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ರಂಗನತಿಟ್ಟು ಪಕ್ಷಿಧಾಮದ ದೋಣಿ ವಿಹಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇಂದಿನಿಂದ ಮುಂದಿನ ಆದೇಶದವರೆಗೆ ದೋಣಿ ವಿಹಾರ ಬಂದ್‌ ಇರಲಿದೆ. ಪ್ರವಾಸಿಗರಿಗೆ ರಂಗನತಿಟ್ಟು ವೀಕ್ಷಣೆಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಮೈಸೂರು ವನ್ಯಜೀವಿ ವಿಭಾಗ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿ ಅಂಚಿಗೆ ತಲುಪಿದ ಹಿನ್ನೆಲೆಯಲ್ಲಿ ಇಂದು (ಜು.20) ಕಾವೇರಿ ನದಿಗೆ ಸದ್ಯ 10 ಸಾವಿರ ಕ್ಯೂಸೆಕ್‌ ನೀರು ಬಿಡುಗಡೆ ಮಾಡಲಾಗಿದೆ. ಡ್ಯಾಂನ 10 ಕ್ರೆಸ್ಟ್ ಗೇಟ್ ಗಳ ಮೂಲಕ ಹಾಲ್ಗೊರೆಯಂತೆ ನೀರು ರಭಸವಾಗಿ ಹೊರ ಬರುತ್ತಿದೆ. ಸಂಜೆ ವೇಳೆಗೆ ಡ್ಯಾಂ ಹೊರ ಹರಿವಿನ ಪ್ರಮಾಣ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಒಳಹರಿವು ಹೆಚ್ಚಳವಾದರೆ ಹೊರಹರಿವು ಕೂಡ ಹೆಚ್ಚಳವಾಗುವ ಸಾಧ್ಯತೆ ಇದೆ. ಸದ್ಯಕ್ಕೆ 10 ರಿಂದ 25 ಸಾವಿರ ಕ್ಯೂಸೆಕ್ ನೀರನ್ನ ನದಿಗೆ ಬಿಡಲು ತೀರ್ಮಾನ ಮಾಡಲಾಗಿದೆ. ಹೀಗಾಗಿ ಕಾವೇರಿ ನದಿ ಪಾತ್ರದ 92 ಗ್ರಾಮಗಳಲ್ಲಿ ನೆರೆ ಭೀತಿ ಎದುರಾಗಿದೆ. ಪ್ರವಾಸಿ ತಾಣಗಳಲ್ಲೂ ಪ್ರವಾಹದ ಆತಂಕ ಎದುರಾಗಿದೆ. ಹೀಗಾಗಿ ಪ್ರವಾಹ ಪರಿಸ್ಥಿತಿ ಎದುರಿಸಲು ಮಂಡ್ಯ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮಂಡ್ಯ ಜಿಲ್ಲಾಡಳಿತ ಈಗಾಗಲೇ ಕಂಟ್ರೋಲ್ ರೂಂ ಸ್ಥಾಪಿಸಿದೆ.
ಕೆಆರ್‌ಎಸ್‌ ಜಲಾಶಯಕ್ಕೆ ಕಳೆದ ಐದು ದಿನಗಳಲ್ಲಿ 15 ಟಿಎಂಸಿ ನೀರು ಹರಿದು ಬಂದಿದೆ. ಕೆಆರ್‌ಎಸ್‌ ಡ್ಯಾಂನಲ್ಲಿ ಸದ್ಯ 120 ಅಡಿ ನೀರು ಸಂಗ್ರಹವಾಗಿದೆ. ಸಂಪೂರ್ಣ ಭರ್ತಿಗೆ ಕೇವಲ 4 ಅಡಿ ಮಾತ್ರ ಭಾಕಿ ಇದೆ. ಡ್ಯಾಂ ರವಿವಾರ ಸಂಜೆ ವೇಳೆಗೆ ಸಂಪೂರ್ಣ ಭರ್ತಿಯಾಗುವ ಸಾಧ್ಯತೆ ಇದೆ. ಸದ್ಯ ಡ್ಯಾಂಗೆ 51,374 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ.

ಮೈಸೂರು ಜಿಲ್ಲೆಯಲ್ಲಿ ಮಳೆಗೆ ಮೊದಲ ಬಲಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ನಿರಂತರ ಮಳೆಗೆ ಮನೆಯ ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹೇಮಲತಾ (22) ಮೃತ ದುರ್ದೈವಿ. ಅವಘಡದಲ್ಲಿ ತಾಯಿ ಮೃತಪಟ್ಟರೆ ಜತೆಗಿದ್ದ ಮಗುವನ್ನು ರಕ್ಷಣೆ ಮಾಡಲಾಗಿದೆ. ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Categories
ಮಂಡ್ಯ

ಮಂಡ್ಯದಲ್ಲಿ ಬಿಜೆಪಿ ಹೋರಾಟ!

ಮಂಡ್ಯದಲ್ಲಿ ಬಿಜೆಪಿ ಹೋರಾಟ!

– ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ದ ಆಕ್ರೋಶ
– ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಎನ್ ಎಸ್ ಇಂದ್ರೇಶ್ ನೇತೃತ್ವದಲ್ಲಿ ಪ್ರತಿಭಟನೆ

NAMMUR EXPRESS NEWS
ಮಂಡ್ಯ: ವಾಲ್ಮೀಕಿ ಅಭಿವೃದ್ಧಿ (ಎಸ್ ಟಿ) ನಿಗಮದ 187 ಕೋಟಿ ರೂ ಗಳನ್ನು ದುರ್ಬಳಕೆ ಮಾಡಿದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ಭ್ರಷ್ಟಾಚಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ ಮಂಡ್ಯ ಜಿಲ್ಲೆಯ ವತಿಯಿಂದ ಸಂಜಯ್ ಸರ್ಕಲ್ ನಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಯಿತು.

ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಡಾ.ಎನ್ ಎಸ್ ಇಂದ್ರೇಶ್ ರವರ ನೇತೃತ್ವದಲ್ಲಿ ಹಾಗೂ ನಿಕಟಪೂರ್ವ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷರಾದ ನಂಜುಂಡೇಗೌಡ ಹಾಗೂ ರಾಜ್ಯ ವಿಶೇಷ ಆಹ್ವಾನಿತ ಪ್ರತಿನಿಧಿ ಡಾ. ಸಿದ್ದರಾಮಯ್ಯ ಜಿ ಹಾಗೂ ಜಿಲ್ಲೆ ರೈತ ಮೋರ್ಚಾ ಅಧ್ಯಕ್ಷರಾದ ಅಶೋಕ್ ಜಯರಾಮ್, ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಆನಂದ್ ಹಾಗೂ ವಿವೇಕ್ ಜಿಲ್ಲಾ ಕಾರ್ಯದರ್ಶಿಯಾದ ರಾಶಿ ಸಿದ್ದರಾಜುಗೌಡ ಸೇರಿ ಎಲ್ಲಾ ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

Categories
ಮಂಡ್ಯ

ಅವಳಿ ಮಕ್ಕಳ ಜೀವ ತೆಗೆದ ಐಸ್‌ಕ್ರೀಂ!

ಅವಳಿ ಮಕ್ಕಳ ಜೀವ ತೆಗೆದ ಐಸ್‌ಕ್ರೀಂ!
– ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ದುರಂತ
– ದಾವಣಗೆರೆ: ಬಿಸ್ಕೆಟ್‌ ತಿಂದು ಮಗು ಆಸ್ಪತ್ರೆಪಾಲು

NAMMUR EXPRESS NEWS
ಮಂಡ್ಯ: ಬೇಸಿಗೆಯಲ್ಲಿ ವಿವಿಧ ಆಹಾರ ಸೇವಿಸಿ ಅಸ್ವಸ್ಥಗೊಳ್ಳುವ ಹಾಗೂ ಮೃತಪಡುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಮಂಡ್ಯ ಹಾಗೂ ದಾವಣಗೆರೆಯಲ್ಲಿ ನಡೆದ ಎರಡು ಪ್ರಕರಣಗಳು ಆತಂಕ ಹುಟ್ಟಿಸಿವೆ.

ಅವಳಿ ಮಕ್ಕಳು ಬಲಿ!

ಐಸ್ ಕ್ರೀಂ ತಿಂದು ಒಂದುವರೆ ವರ್ಷದ ಅವಳಿ ಮಕ್ಕಳು ಮೃತಪಟ್ಟಿದ್ದು, ತಾಯಿ ಅಸ್ವಸ್ಥಗೊಂಡಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿಯಲ್ಲಿ ಈ ದಾರುಣ ಘಟನೆ ನಡೆದಿದೆ. ಗ್ರಾಮದ ಪೂಜಾ ಮತ್ತು ಪ್ರಸನ್ನ ದಂಪತಿಯ ಅವಳಿ ಮಕ್ಕಳು ಮೃತಪಟ್ಟವರು. ಬುಧವಾರ ಸಂಜೆ ಗ್ರಾಮಕ್ಕೆ ಐಸ್‌ಕ್ರೀಂ ಮಾರಲು ಬಂದಿದ್ದ ವ್ಯಕ್ತಿಯಿಂದ ಐಸ್‌ಕ್ರೀಂ ತಾಯಿ ಮತ್ತು ಮಕ್ಕಳು ಖರೀದಿಸಿ ತಿಂದಿದ್ದರು. ನಂತರ ಅಸ್ವಸ್ಥರಾಗಿದ್ದರು. ಮಕ್ಕಳು ಮನೆಯಲ್ಲಿ ಸಾವಿಗೀಡಾದರೆ, ತೀವ್ರ ಅಸ್ವಸ್ಥಗೊಂಡ ತಾಯಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಮಕ್ಕಳ ಮೃತ ದೇಹವನ್ನು ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ತಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ‌ ಕೊಡಿಸಲಾಗುತ್ತಿದೆ. ಐಸ್‌ಕ್ರೀಂ ಮಾರಲು ಬಂದಿದ್ದ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ ನಡೆಯುತ್ತಿದೆ. ಅರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸ್ಮೋಕ್‌ ಬಿಸ್ಕೆಟ್‌ ತಿಂದು ಮಗು ಅಸ್ವಸ್ಥ!

ದಾವಣಗೆರೆ: ದಾವಣಗೆರೆಯಲ್ಲಿ ನಡೆಯುತ್ತಿದ್ದ ಎಕ್ಸಿಬಿಷನ್‌ನಲ್ಲಿ ಬಾಲಕನೊಬ್ಬ ಸ್ಮೋಕ್‌ ಬಿಸ್ಕೆಟ್‌ ತಿಂದು ಅಸ್ವಸ್ಥನಾಗಿದ್ದಾನೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚೇತರಿಸಿಕೊಂಡಿದ್ದಾನೆ. ದಾವಣಗೆರೆ ನಗರದ ಅರುಣ್ ಸರ್ಕಲ್ ಬಳಿಯ ಎಕ್ಸಿಬಿಷನ್‌ನಲ್ಲಿ ಘಟನೆ ನಡೆದಿದೆ. ಮಕ್ಕಳ ಮನರಂಜನೆಗಾಗಿ ನಡೆಯುತ್ತಿರುವ ಎಕ್ಸಿಬಿಷನ್‌ನ ಸ್ಟಾಲ್ ಒಂದರಲ್ಲಿ ಸ್ಮೋಕ್ ಬಿಸ್ಕೆಟ್ ಕೊಡಲಾಗುತ್ತಿತ್ತು. ಅದನ್ನು ಏಕಾಏಕಿ ಸೇವಿಸಿ ಬಾಲಕ ಅಸ್ವಸ್ಥನಾಗಿದ್ದಾನೆ. ಸ್ಮೋಕ್ ಬಿಸ್ಕೆಟ್ ಸ್ಟಾಲ್ ದೊಡ್ಡವರಿಂದ ಚಿಕ್ಕ‌ ಮಕ್ಕಳವರೆಗೂ ಗಮನ ಸೆಳೆದಿತ್ತು. ಒಂದು ಕಪ್‌ನಲ್ಲಿ 80 ರೂಪಾಯಿಗೆ ಐದು ಚಿಕ್ಕ‌ ಚಿಕ್ಕ ಬಿಸ್ಕೇಟ್ ನೀಡಲಾಗುತ್ತಿತ್ತು. ಹೀಗೆ ಕೊಟ್ಟ ಬಿಸ್ಕೇಟ್ ಅನ್ನು ಮಗು ಒಂದೇ ಸಲ ಬಾಯಿಗೆ ಹಾಕಿಕೊಂಡಿದೆ. ನಂತರ ನುಂಗಲೂ ಆಗದೇ ಉಗಿಯಲೂ ಆಗದೇ ಕಷ್ಟಪಟ್ಟಿದೆ. ಅಸ್ವಸ್ಥಗೊಂಡ ಮಗುವನ್ನು ಕೂಡಲೇ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಗುವಿಗೆ ಚಿಕಿತ್ಸೆ ನೀಡಿದ ನಂತರ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಘಟನೆಯಿಂದ ಆಕ್ರೋಶಗೊಂಡ ಪೋಷಕರು ಎಕ್ಸಿಬಿಷನ್‌ನಲ್ಲಿ ಹಾಕಲಾಗಿದ್ದ ಸ್ಟಾಲ್ ಅನ್ನು ಕಿತ್ತು ಬಿಸಾಕಿದ್ದಾರೆ. ಇಂತಹ ಸ್ಮೋಕ್ ಬಿಸ್ಕೆಟ್ ಅನ್ನು ಮಕ್ಕಳಿಗೆ ಕೊಡಬೇಡಿ ಎಂದು ಎಚ್ಚರಿಸುವ ಆಡಿಯೋ ಹರಿಬಿಟ್ಟಿದ್ದಾರೆ. ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಗೆ ಪಾಲಕರು ದೂರು ನೀಡಿದ್ದಾರೆ.

Categories
ಮಂಡ್ಯ ರಾಜಕೀಯ ರಾಜ್ಯ

ಸುಮಲತಾ ಅಂಬರೀಷ್ ಬಿಜೆಪಿಗೆ ಸೇರ್ಪಡೆ

ಸುಮಲತಾ ಅಂಬರೀಷ್ ಬಿಜೆಪಿಗೆ ಸೇರ್ಪಡೆ
– ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ

NAMMUR EXPRESS NEWS
ಮಂಡ್ಯ : ನಾನು ಈ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್​ ತನಗೆ ಸಿಗುತ್ತದೆ ಎಂದು ಹಾಲಿ ಸಂಸದೆ ಸುಮಲತಾ ಅಂಬರೀಶ್​ ನಿರೀಕ್ಷೆಯಲ್ಲಿದ್ದರು. ಆದರೆ ಕೊನೆ ಹಂತದಲ್ಲಿ ಸುಮಲತಾ ಅಂಬರೀಶ್​ ಅವರಿಗೆ ಟಿಕೆಟ್​ ತಪ್ಪಿದೆ. ಹೀಗಾಗಿ ಸುಮಲತಾ ಅಂಬರೀಶ್​ ಅವರ ಮುಂದಿನ ನಡೆ ಏನು ಎಂಬುವುದು ಯಕ್ಷ ಪ್ರಶ್ನೆಯಾಗಿತ್ತು. ಈ ಪ್ರಶ್ನೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, ನಾನು ಕಾಂಗ್ರೆಸ್​ ಪಕ್ಷಕ್ಕೆ ಹೋಗುವುದಿಲ್ಲ. ನೀವು ಬೇರೆ ಯಾವುದೆ ನಿರ್ಧಾರ ತೆಗೆದುಕೊಳ್ಳಬೇಡಿ ಅಂತ ಸ್ವತಃ ಪ್ರಧಾನಿ ಮೋದಿಯವರು ನನಗೆ ಹೇಳಿದ್ದಾರೆ ಎಂದು ತಿಳಿಸಿದರು.

ನಾನು ಆಕಸ್ಮಿಕವಾಗಿ ರಾಜಕೀಯ ಪ್ರವೇಶ ಮಾಡಿದೆ. ಐದು ವರ್ಷಗಳ ಹಿಂದೆ ನನಗೆ ಐತಿಹಾಸಿಕ ಗೆಲುವು ನೀಡಿದ್ರಿ. ನನಗೆ ಐತಿಹಾಸಿಕ ಗೆಲುವು ಕೊಡುಗೆಯಾಗಿ ಕೊಟ್ಟಿದ್ದೀರಿ. ಐದು ವರ್ಷಗಳಲ್ಲಿ ನನ್ನ ಜೊತೆಗಿದ್ದ ಎಲ್ಲರಿಗೂ ವಂದನೆಗಳು. ಜನಸಾಮಾನ್ಯರ ಸಮಸ್ಯೆಗಳ ಪರ ನಾನು ನಿಂತಿದ್ದೇನೆ. ಜಿಲ್ಲೆ ಅಭಿವೃದ್ಧಿ ಮಾಡುವುದಷ್ಟೇ ನನ್ನ ಮನಸ್ಸಿನಲ್ಲಿದ್ದಿದ್ದು. ಕೆಆರ್​ಎಸ್​ ಡ್ಯಾಂ ಸಂರಕ್ಷಣೆ, ಅಕ್ರಮ ಗಣಿಗಾರಿಕೆ ವಿರುದ್ಧ ಯುದ್ಧವನ್ನೇ ಮಾಡಿದ್ದೇನೆ. ಮೈಷುಗರ್​ ಕಾರ್ಖಾನೆಗಾಗಿ ಎರಡು ವರ್ಷ ಹೋರಾಡಿದ್ದೇನೆ ಎಂದು ತಿಳಿಸಿದರು. 2019ರಲ್ಲಿ ಅದೊಂದು ಬೇರೆ ತರಹದ ಸವಾಲಾಗಿತ್ತು. ಈಗ ಬದಲಾದ ಪರಿಸ್ಥಿತಿಯಲ್ಲಿ ಮತ್ತೊಂದು ಸವಾಲು ಎದುರಿಸುತ್ತಿದ್ದೇನೆ. ಕೊನೆಗಳಿಗೆವರೆಗೂ ಬಿಜೆಪಿ ಟಿಕೆಟ್ ಉಳಿಸಿಕೊಳ್ಳಲು ಹೋರಾಟ ಮಾಡಿದೆ. ಬೆಂಗಳೂರು ಉತ್ತರ, ಮೈಸೂರು, ಚಿಕ್ಕಬಳ್ಳಾಪುರ ನಿಂತುಕೊಳ್ಳೊಲು ಹೇಳಿದರು. ನನಗೆ ಬೇರೆ ಬೇರೆ ಕ್ಷೇತ್ರದ ಆಫರ್​ ನೀಡಿದರು. ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗುವುದಿಲ್ಲ. ಗೆದ್ದರು, ಸೋತರು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ ಎಂದರು.

Categories
ಬೆಂಗಳೂರು ಮಂಡ್ಯ ರಾಜಕೀಯ ರಾಜ್ಯ

ಕರ್ನಾಟಕದಲ್ಲಿ ಮತ ಸಮರ ಶುರು!

ಕರ್ನಾಟಕದಲ್ಲಿ ಮತ ಸಮರ ಶುರು!
– ಮೊದಲ ಹಂತದ ಚುನಾವಣೆಗೆ ಮಾ.28ರಂದು ‘ನಾಮಪತ್ರ’ ಸಲ್ಲಿಕೆ
– 14 ಲೋಕಸಭಾ ಕ್ಷೇತ್ರಗಳಲ್ಲಿ ಏ.26ಕ್ಕೆ ಮತದಾನ
– ಜೆಡಿಎಸ್ ಮೂರು ಸ್ಥಾನಗಳಿಗೆ ಟಿಕೆಟ್ ಫೈನಲ್

NAMMUR EXPRESS NEWS
ಬೆಂಗಳೂರು: ಲೋಕಸಭಾ ಸಮರದ ಕಾವು ರಾಜ್ಯದಲ್ಲಿ ಗುರುವಾರದಿಂದ ಆರಂಭಗೊಳ್ಳಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಧಿಸೂಚನೆ ಪ್ರಕಟವಾಗಿದೆ. ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಮಾರ್ಚ್ 28ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಹೇಗೆ?

ನಾಮಪತ್ರ ಸಲ್ಲಿಸಲು ಏಪ್ರಿಲ್, 04 ಕೊನೆಯ ದಿನವಾಗಿದೆ. ಏಪ್ರಿಲ್, 05 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್, 08 ರಂದು ನಾಮಪತ್ರ ವಾಪಸ್ಸು ಪಡೆಯಲು ಕಡೆಯ ದಿನವಾಗಿದೆ. ಏಪ್ರಿಲ್, 26 ರಂದು ಮತದಾನ ನಡೆಯಲಿದ್ದು, ಜೂನ್, 04 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಮಂಡ್ಯದಿಂದ ಎಚ್‌ಡಿಕೆ ಕಣಕ್ಕೆ
– ಹಾಸನಕ್ಕೆ ಪ್ರಜ್ವಲ್ ಕೋಲಾರದಲ್ಲಿ ಮಲ್ಲೇಶ್ ಬಾಬುಗೆ ಟಿಕೆಟ್

ಲೋಕಸಭೆ ಚುನಾವಣೆಗೆ ಜೆಡಿಎಸ್‌ ಪಟ್ಟಿಯ ಕುತೂಹಲಕ್ಕೆ ತೆರೆ ಬಿದ್ದಿದೆ. ಪಕ್ಷದ ನಾಯಕರು, ಕಾರ್ಯಕರ್ತರ ಒತ್ತಡಕ್ಕೆ ಮಣಿದ ಮಾಜಿ ಸಿಎಂ ಕುಮಾರಸ್ವಾಮಿ ಮಂಡ್ಯದಲ್ಲಿ ಕಣಕ್ಕಿಳಿಯಲು ಒಪ್ಪಿದರೆ, ಹಾಸನದಿಂದ ಪ್ರಜ್ವಲ್ ರೇವಣ್ಣ, ಕೋಲಾರದಲ್ಲಿ ಮಲ್ಲೇಶ್ ಬಾಬುಗೆ ಟಿಕೆಟ್ ನೀಡುವ ವಿಚಾರವನ್ನು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಘೋಷಿಸಿದರು.

Categories
ಬೆಂಗಳೂರು ಮಂಡ್ಯ ಮೈಸೂರು

ಕಾವೇರಿದ ಕಾವೇರಿ ಕಿಚ್ಚು..!

ಕಾವೇರಿದ ಕಾವೇರಿ ಕಿಚ್ಚು..!
– ಬೆಂಗಳೂರು, ಮಂಡ್ಯ, ಮೈಸೂರಲ್ಲಿ ಹೋರಾಟ
– ನಿರ್ಮಲಾನಂದ ಶ್ರೀ ಸಾಥ್: ನಾಳೆ ಮಂಡ್ಯ ಬಂದ್?
– ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್

NAMMUR EXPRESS NEWS
ಬೆಂಗಳೂರು : 15 ದಿನಗಳವರೆಗೂ ತಮಿಳುನಾಡಿಗೆ ಪ್ರತಿದಿನ 5000 ಕ್ಯೂಸೆಕ್ ನೀರು ಹರಿಸಲು ರಾಜ್ಯಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಇದೀಗ ಕರುನಾಡಲ್ಲಿ ಕಾವೇರಿ ಕಿಚ್ಚು ಹೆಚ್ಚಿದ್ದು, ಹಲವು ಸಂಘಟನೆಗಳು ತೀವ್ರ ಪ್ರತಿಭಟನೆಗೆ ಮುಂದಾಗಿದೆ. ಕರವೇ ವಿಧಾನ ಸೌಧ ಮುತ್ತಿಗೆಗೆ ಮುಂದಾಗಿದ್ದು ಪೊಲೀಸರು ತಡೆದಿದ್ದಾರೆ. ಈ ಬೆನ್ನಲ್ಲೇ ನಗರದ ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.ಬೆಂಗಳೂರಿನಲ್ಲಿ ಅಹಿತಕರ ಘಟನೆಗಳು ಆಗದಂತೆ ನಗರದ ಪೊಲೀಸರು ಹೈ ಅಲರ್ಟ್ ಆಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ. (ಸೆ.22) ಬೆಳಗ್ಗೆ 11 ಗಂಟೆಯ ನಂತರ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಹಿನ್ನಲೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರ ಭದ್ರತೆ ನಿಯೋಜಿಸಲಾಗಿದೆ.

ಶನಿವಾರ ಮಂಡ್ಯ ಬಂದ್!

ಮಂಡ್ಯ: ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂಬ ಪ್ರಾಧಿಕಾರದ ಆದೇಶಕ್ಕೆ ಸುಪ್ರೀಂಕೋರ್ಟ್‌ನಿಂದ ತಡೆಯಾಜ್ಞೆ ಸಿಗದಿದ್ದರಿಂದ ಆಕ್ರೋಶ ವ್ಯಕ್ತಪಡಿಸಿದ ಗುರುವಾರ ಜಿಲ್ಲೆಯ ವಿವಿಧೆಡೆ ಸಂಘಟನೆಗಳ ಮುಖಂಡರು ಬೀದಿಗಿಳಿದು ಪ್ರತಿಭಟಿಸಿದರು. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸದಸ್ಯರು ಸೆ.23ರಂದು ಮಂಡ್ಯ ಜಿಲ್ಲಾ ಬಂದ್‌ಗೆ ಕರೆ ನೀಡಿದರು.

ನಿರ್ಮಲಾನಂದ ಶ್ರೀ ಸಾಥ್!

ರಾಜ್ಯಕ್ಕೆ ಅನ್ಯಾಯವಾಗಿದೆ. ಕೇಂದ್ರ ಸರಕಾರ ಮಧ್ಯಸ್ಥಿಕೆ ಮಾಡಬೇಕು. ರಾಜ್ಯ ಸರ್ಕಾರ ಕೂಡಲೇ ಕ್ರಮಕ್ಕೆ ಮುಂದಾಗಬೇಕು. ಮಳೆ ಕಡಿಮೆ ಆದರೆ ಈ ಭಾಗದ ಕಥೆ ಏನು? ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀ ಹೇಳಿದ್ದಾರೆ.
ಮಂಡ್ಯದಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ನೀಡಿ ಮಾತನಾಡಿ ಈ ಬಾರಿ ನೀರು ಕೊರತೆ ಇದೆ. ಬೆಳೆ ಹೋಗಲಿ ಜನರಿಗೆ ಕುಡಿಯುವ ನೀರಿಲ್ಲ. ಹಲವು ದಶಕಗಳಿಂದ ಈ ಸಮಸ್ಯೆ ಮುಗಿದಿಲ್ಲ. ಕಾನೂನು ಪಾಲನೆ ನಮ್ಮೆಲ್ಲರ ಕರ್ತವ್ಯ. ಆದರೆ ರಾಜ್ಯಕ್ಕೆ ನ್ಯಾಯ ಸಿಗಬೇಕು ಎಂದರು.

Categories
ಮಂಡ್ಯ

ಮತ್ತೆ ಕಾವೇರಿ ಖ್ಯಾತೆ ಶುರು!

ಮತ್ತೆ ಕಾವೇರಿ ಖ್ಯಾತೆ ಶುರು!
– ತಮಿಳುನಾಡಿಗೆ ನೀರು: ಮಂಡ್ಯದಲ್ಲಿ 21ಕ್ಕೆ ಪ್ರತಿಭಟನೆ
– ರಾಜ್ಯದ ಪರ ರೈತರಿಗಾಗಿ ಹೋರಾಟ: ಸುಮಲತಾ

NAMMUR EXPRESS NEWS
ಮಂಡ್ಯ: ಕೆ.ಆರ್.ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಗಸ್ಟ್ 21ರಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಮುಂದೆ ಒಳ್ಳೆಯವರಾಗಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನೀರಿನ ಲಭ್ಯತೆಯನ್ನು ಚರ್ಚೆ ಮಾಡದೇ ನೀರು ಬಿಟ್ಟಿದ್ದಾರೆ. ಇದರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು. ಈ ಹೋರಾಟಕ್ಕೆ ರೈತ ಸಂಘಟನೆ, ಕನ್ನಡಪರ ಸಂಘಟನೆಗಳು ಆಟೋ, ಚಾಲಕರು ಬೆಂಬಲ ನೀಡುವಂತೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ ನಾರಾಯಣ ಮನವಿ ಮಾಡಿದ್ದಾರೆ.

ಒಂದೆಡೆ ಆಪರೇಷನ್ ಹಸ್ತ ಜೋರಾಗುತ್ತಿದ್ದು ಈ ಕಡೆ ಕಾವೇರಿ ಹೋರಾಟವನ್ನು ಬಿಜೆಪಿ ದಾಳ ಮಾಡಿಕೊಳ್ಳಲು ಮುಂದಾಗಿದೆ.ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಆ.21ರಂದು ಮಂಡ್ಯದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಯಲಿದೆ. ಇದು ಯಾರ ವಿರುದ್ಧದ ಪ್ರತಿಭಟನೆ ಅಲ್ಲ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ಕರ್ನಾಟಕ ಸರ್ಕಾರದ ತಮಿಳುನಾಡು ಪರ ನಿರ್ಧಾರದಿಂದ ನಮ್ಮ ರೈತರಿಗೆ ಅನ್ಯಾಯವಾಗಬಾರದು ಎಂದು ಈ ಹೋರಾಟ ನಡೆಯುತ್ತಿದೆ. ಕಾವೇರಿ ವಿಚಾರವಾಗಿ ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ್ದೇನೆ ಎಂದರು. ಕಾವೇರಿ ನೀರಿನ ಅವಶ್ಯಕತೆ ಇರುವ ಎಲ್ಲರೂ ಈ ಹೋರಾಟದಲ್ಲಿ ಭಾಗಿಯಾಗಬೇಕು, ಸರ್ಕಾರ ಒಳ್ಳೆಯ ಹೆಜ್ಜೆ ಹಾಕಬೇಕು, ಹೀಗೆ ಬಿಟ್ಟರೆ ಮುಂದೆ ಕುಡಿಯುವ ನೀರಿನ ಸಮಸ್ಯೆ ಆಗುತ್ತದೆ. ನಾವು ಯಾರ ವಿರುದ್ಧವೂ ಹೋರಾಟ ಮಾಡುತಿಲ್ಲ ರೈತರ ಪರ ಹೋರಾಟ ಮಾಡುತ್ತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ : ತೀರ್ಥಹಳ್ಳಿಯಲ್ಲಿ ಗಾಂಜಾ ಹೊಡೆದವರು ಅರೆಸ್ಟ್!?

[embedyt] https://www.youtube.com/watch?v=6xcRyzTIs_U%5B/embedyt%5D

Categories
ಮಂಡ್ಯ

30 ಮಂದಿ ಮರಣ ಹೊಂದಿದ್ರೂ ವಿಸಿ ನಾಲೆಗಿಲ್ಲ ತಡೆಗೋಡೆ!

30 ಮಂದಿ ಮರಣ ಹೊಂದಿದ್ರೂ ವಿಸಿ ನಾಲೆಗಿಲ್ಲ ತಡೆಗೋಡೆ!
– ನಾಲೆಗೆ ಬಿದ್ದ ಕಾರು: 4 ಮಂದಿ ಮಹಿಳೆಯರ ದುರ್ಮರಣ
– ರಾಜ್ಯದಲ್ಲಿ ದಿನವೂ ಹೆಚ್ಚಿದ ಅಪಘಾತದ ಮರಣ ಮೃದಂಗ

NAMMUR EXPRESS NEWS
ಮಂಡ್ಯ: ( Mandya ) ಮಂಡ್ಯದ ವಿಸಿ ನಾಲೆಗೆ ಕಾರು ಬಿದ್ದು 4 ಮಂದಿ ಮೃತ ಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿಯಲ್ಲಿ ನಡೆದಿದ್ದು, ದೇವರ ಕಾರ್ಯಕ್ಕೆ ಆಹ್ವಾನ ನೀಡಲು ಹೋದವರು ದೇವರ ಪಾದ ಸೇರಿದ್ದಾರೆ. ಇದೀಗ ಗ್ರಾಮದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ ಮೃತರ ಕುಟುಂಬಕ್ಕೆ ತಲಾ 2.5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಇದೇ ವಿಸಿ ನಾಲೆಗೆ ಬಸ್ ಬಿದ್ದು ಕೆಲ ವರ್ಷಗಳ ಹಿಂದೆ 30 ಮಂದಿ ಮೃತಪಟ್ಟಿದ್ದರು. ಅಲ್ಲದೆ ಪ್ರತಿ ವರ್ಷವೂ ಅನೇಕ ಅಪಘಾತ ಸಂಭವಿಸಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.

ನಾಲ್ವರು ಮಹಿಳೆಯರ ಸಾವು.!

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿಯಲ್ಲಿ ಕಾಲೊಂದು ವಿಸಿ ನಾಲಿಗೆ ಬಿದ್ದು ನಾಲ್ವರು ಮಹಿಳೆಯರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಮೃತರು ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಗೊರವನಹಳ್ಳಿಯ ಸಂಜನಾ (17), ಮಮತಾ (45), ಮಹಾದೇವಿ (55), ರೇಖಾ (36) ಎಂದು ತಿಳಿದುಬಂದಿದೆ. ಇನ್ನೂ ಕಾರಿನಲ್ಲಿದ್ದ ಚಾಲಕ ಮನೋಜ್ ಪ್ರಾಣ ಅಪಾಯದಿಂದ ಪಾರಾಗಿದ್ದಾರೆ

ಆದಿಚುಂಚನಗಿರಿಯಲ್ಲಿ ಏರ್ಪಡಿಸಿದ್ದ ದೇವತಾ ಕಾರ್ಯಕ್ಕೆ ಆಹ್ವಾನಿಸಲು ಗೊರವನಹಳ್ಳಿಯಿಂದ ದೊಡ್ಡ ಮುಲಗೂಡು ಗ್ರಾಮಕ್ಕೆ ಇವರು ಹೋಗುತ್ತಿದ್ದರು ಎಂದು ತಿಳಿದುಬಂದಿದೆ.ರಾತ್ರಿ 8ರ ಸುಮಾರಿಗೆ ಗಾಮನಹಳ್ಳಿ ಗ್ರಾಮದ ನಾಳೆ ಏರಿಯ ತಿರುವಿನಲ್ಲಿ ಕಬ್ಬಿಣದ ತಾತ್ಕಾಲಿಕ ತಡೆಗೋಡೆಗೆ ಗುದ್ದಿ ಕಾರು ನಾಲೆಗೆ ಉರುಳಿ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗ್ರಾಮಸ್ಥರು ಅದರಲ್ಲಿದ್ದವರನ್ನು ಮೇಲೆತ್ತುವ ಪ್ರಯತ್ನ ಮಾಡಿದರು. ಅಷ್ಟರಲ್ಲಿ ನಾಲ್ವರು ಮೃತಪಟ್ಟಿದ್ದು ಚಾಲಕನನ್ನು ರಕ್ಷಿಸುವಲ್ಲಿ ಗ್ರಾಮಸ್ಥರು ಯಶಸ್ವಿಯಾಗಿದ್ದಾರೆಸ್ಥಳಕ್ಕೆ ಅರಕೆರೆ ಠಾಣೆ ಪೊಲೀಸರು ಭೇಟಿ ನೀಡಿದ್ದರು.
ತಡೆಗೋಡೆ ನಿರ್ಮಾಣ, ಕುಟುಂಬಕ್ಕೆ ತಲಾ 50 ಸಾವಿರ ಪರಿಹಾರವನ್ನು ಸಚಿವ ಚಲುವರಾಯಸ್ವಾಮಿ ಘೋಷಿಸಿದ್ದಾರೆ. ಮಿಮ್ಸ್ ಅಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಮತ್ತೆ ಸುದ್ದಿ ಮಾಡಿದ ತೀರ್ಥಹಳ್ಳಿ ಪ್ರತೀಕ್ ಗೌಡ ಕೇಸ್!

HOW TO APPLY : NEET-UG COUNSELLING 2023

Categories
ಮಂಡ್ಯ

ತಾನು ಎಸ್‌ಐ ಆಗಿದ್ದ ಠಾಣೆಯಲ್ಲೇ ಮಗಳಿಗೆ ಅಧಿಕಾರ ಕೊಟ್ಟ ತಂದೆ!

ತಾನು ಎಸ್‌ಐ ಆಗಿದ್ದ ಠಾಣೆಯಲ್ಲೇ ಮಗಳಿಗೆ ಅಧಿಕಾರ ಕೊಟ್ಟ ತಂದೆ!
– ಮಂಡ್ಯ ಠಾಣೆಯಲ್ಲಿ ಅಪ್ಪ ಮಗಳ ಸೇವೆಗೆ ಜನರ ಸಾಕ್ಷಿ
– ಅಪ್ಪನ ವರ್ಗಾವಣೆ, ಮಗಳಿಗೆ ಅಧಿಕಾರ ಹಸ್ತಾಂತರ

NAMMUR EXPRESS NEWS
ಮಂಡ್ಯ: ತಾನು ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಠಾಣೆಯಲ್ಲಿ ತನ್ನ ಮಗಳಿಗೇ ಅಧಿಕಾರ ಹಸ್ತಾಂತರ ಮಾಡಿದ ಅಪರೂಪದ ಘಟನೆ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಏನಿದು ಘಟನೆ?:

ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಎಸ್‌ಐ ಆಗಿದ್ದ ಬಿ.ಎಸ್.ವೆಂಕಟೇಶ್ ಅವರು ತನ್ನ ಮಗಳೂ ಆದ ನೂತನ ಎಸ್‌ಐ ಬಿ.ವಿ.ವರ್ಷಾ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದ್ದು ಇದಕ್ಕೆ ಠಾಣೆಯ ಸಿಬ್ಬಂದಿ ಸಾಕ್ಷಿಯಾಗಿದ್ದರು. ಮಾತ್ರವಲ್ಲದೆ ಸಿಬ್ಬಂದಿ ಮತ್ತು ಅಲ್ಲಿಗೆ ಆಗಮಿಸಿದ ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು. ತಂದೆ ಮಗಳ ಪೊಲೀಸ್ ಸೇವೆಗೆ ಎಲ್ಲರ ಮೆಚ್ಚುಗೆ ವ್ಯಕ್ತಪಡಿಸಿದರು.

ವೆಂಕಟೇಶ್ ಅವರು ತುಮಕೂರು ಜಿಲ್ಲೆ ಹುಲಿಯೂರು ದುರ್ಗದವರು. 16 ವರ್ಷಗಳ ಕಾಲ ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಪಾಕಿಸ್ತಾನ, ಚೀನಾ, ಬಾಂಗ್ಲಾದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸಿದ ಜತೆಗೆ ಕಾರ್ಗಿಲ್ ಯುದ್ಧದಲ್ಲೂ ಭಾಗಿಯಾಗಿದ್ದ ಹೆಗ್ಗಳಿಕೆಯನ್ನು ಹೊಂದಿದ್ದಾರೆ.

ಮಿಲಿಟರಿ ಸೇವೆಯಿಂದ ನಿವೃತ್ತರಾದ ಬಳಿಕ ಪಿಎಸ್‌ಐ ಪರೀಕ್ಷೆ ಪಡೆದು ಮಿಲಿಟರಿ ಕೋಟಾದಡಿ 2010ರ ಬ್ಯಾಚ್‌ನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ 2ನೇ ವೃತ್ತಿ ಜೀವನ ಆರಂಭಿಸಿದ್ದರು. ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಯ ಹಲವೆಡೆ ಕರ್ತವ್ಯ ನಿರ್ವಹಿಸಿ, ಮತ್ತೆ ಮಂಡ್ಯಕ್ಕೆ ಬಂದು ಸೆಂಟ್ರಲ್ ಠಾಣೆಗೆ ಒಂದೂವರೆ ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

2022ರ ಬ್ಯಾಚ್‌ನಲ್ಲಿ ಪಿಎಸ್‌ಐ ಆಗಿರುವ ವರ್ಷಾ ಅವರು ಕಲುಬುರಗಿಯಲ್ಲಿ ತರಬೇತಿ ಮುಗಿಸಿ, ಮಂಡ್ಯದಲ್ಲೇ 1 ವರ್ಷ ಪ್ರೊಬೆಷನರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಈಗ ಅವರ ಮೊದಲ ನಿಯೋಜನೆ ಕೂಡ ಮಂಡ್ಯದಲ್ಲೇ ಆಗಿದೆ. ಅದೂ ಕೂಡ ಅದೃಷ್ಟವೆಂಬಂತೆ ತನ್ನ ತಂದೆ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಗೆ ಸಿಕ್ಕಿದೆ. ಅಂತೆಯೇ ಅವರು ಠಾಣೆಯಲ್ಲಿ ಮಂಗಳವಾರ ತಂದೆಯಿಂದಲೇ ಅಧಿಕಾರ ಪಡೆದುಕೊಂಡು ಪೊಲೀಸ್ ವೃತ್ತಿಜೀವನ ಆರಂಭಿಸಿದ್ದಾರೆ.

ಇದನ್ನೂ ಓದಿ : ಗೃಹಜ್ಯೋತಿ ಅರ್ಜಿ ನೋಂದಣಿಗೆ ಹೊಸ ಲಿಂಕ್!

HOW TO APPLY : NEET-UG COUNSELLING 2023

Tunga college thirthahalli