Categories
ರಾಷ್ಟ್ರೀಯ ವಾರ್ತೆ

ರಾಹುಲ್ ಗಾಂಧಿಗೆ ತಪ್ಪಿತು ಜೈಲು ಶಿಕ್ಷೆ!?

ರಾಹುಲ್ ಗಾಂಧಿಗೆ ತಪ್ಪಿತು ಜೈಲು ಶಿಕ್ಷೆ!?
– ಸುಪ್ರೀಂಕೋರ್ಟ್ ತಡೆ: ಮತ್ತೆ ಕೇಸ್ ಕುತೂಹಲ
– ಮೋದಿ ಉಪ ನಾಮ ಕುರಿತು ಹೇಳಿಕೆ ಪ್ರಕರಣ

NAMMUR EXPRESS NEWS
ನವ ದೆಹಲಿ: ದೇಶದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್‌ ತಡೆ ನೀಡಿದೆ. ಈ ಮೂಲಕ ರಾಹುಲ್ ಗಾಂಧಿ ಕೊಂಚ ನಿರಾಳರಾಗಿದ್ದಾರೆ. ಕರ್ನಾಟಕದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮೋದಿ ಹೆಸರಿನವರೆಲ್ಲ ಮೋಸಗಾರರೇ ಆಗಿರುತ್ತಾರಲ್ಲ ಏಕೆ ಎಂದು ರಾಹುಲ್ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ ಸೂರತ್‌ ನ್ಯಾಯಾಲಯ ರಾಹುಲ್‌ ಗಾಂಧಿಯವರಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದು, ಈ ಕಾರಣಕ್ಕಾಗಿ ಅವರು ಸಂಸತ್ ಸದಸ್ಯ ಸ್ಥಾನವನ್ನು ಕಳೆದುಕೊಂಡಿದ್ದರು.ಈ ಪ್ರಕರಣದಲ್ಲಿ ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪಿಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿತ್ತು. ನಂತರ ರಾಹುಲ್ ಗಾಂಧಿ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು.
ಮೋದಿ ಉಪ ನಾಮ ಕುರಿತು ಭಾರೀ ಕೋಲಾಹಲ ಸೃಷ್ಟಿ ಮಾಡಿರುವ ಈ ಕೇಸ್ ಈಗ ಟ್ವಿಸ್ಟ್ ಪಡೆದುಕೊಂಡಿದೆ.

ಇದನ್ನೂ ಓದಿ : ಆರಗ ಮೇಲೆ ಸುಮೋಟೋ ಕೇಸ್ ದಾಖಲಿಸಲು ಪಟ್ಟು

HOW TO APPLY : NEET-UG COUNSELLING 2023

Categories
ರಾಷ್ಟ್ರೀಯ ವಾರ್ತೆ

ಹಿಂದೂಗಳಿಗೆ ಕೋರ್ಟ್ ಅಲ್ಲಿ ಜಯ!

ಹಿಂದೂಗಳಿಗೆ ಕೋರ್ಟ್ ಅಲ್ಲಿ ಜಯ!
– ಜ್ಞಾನವಾಪಿ ಮಸೀದಿ ಸರ್ವೆಗೆ ಹೈಕೋರ್ಟ್‌ ಅನುಮತಿ
– ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿ

NAMMUR EXPRESS NEWS
ನವ ದೆಹಲಿ: ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸರ್ವೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದ್ದು, ಈ ಮೂಲಕ ಹಿಂದೂಗಳಿಗೆ ಮತ್ತೊಮ್ಮೆ ಜಯ ದೊರೆತಿದೆ. ಈ ಕುರಿತಂತೆ ಜುಲೈ 27ರಂದು ಎರಡೂ ಕಡೆಯವರ ವಾದ ಆಲಿಸಿದ್ದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇದರ ಮಹತ್ವದ ತೀರ್ಪು ನೀಡಿರುವ ನ್ಯಾಯಾಲಯ, ಜಿಲ್ಲಾ ಸೆಷೆನ್ಸ್ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದು, ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಹಿಂದೂಗಳ ಪರವಾಗಿ ಮಾತನಾಡಿರುವ ಮುಖಂಡ ವಿಷ್ಣು ಶಂಕರ್ ಜೈನ್, ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಮಸೀದಿ ಸಂಕೀರ್ಣದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್ಐ) ಸಮೀಕ್ಷೆಯನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ ಎಂದು ತಿಳಿಸಿದ್ದಾರೆ.

ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಜುಲೈ 21ರ ಆದೇಶವನ್ನು ಪ್ರಶ್ನಿಸಿತ್ತು.ಜುಲೈ 21 ರಂದು ವಾರಣಾಸಿ ಜಿಲ್ಲಾ ನ್ಯಾಯಾಧೀಶ ಎ.ಕೆ. ವಿಶ್ವೇಶ ಅವರು ಮೇ 16, 2023 ರಂದು ನಾಲ್ವರು ಹಿಂದೂ ಮಹಿಳೆಯರು ಸಲ್ಲಿಸಿದ ಅರ್ಜಿಯ ಮೇರೆಗೆ ಜ್ಞಾನವಾಪಿ ಸಂಕೀರ್ಣದ ಎಎಸ್’ಐ ಸಮೀಕ್ಷೆಗೆ ಆದೇಶಿಸಿದರು. ಆದಾಗ್ಯೂ, ಜಿಲ್ಲಾ ನ್ಯಾಯಾಧೀಶರ ಆದೇಶವು ವುಜು ಖಾನಾ (ಅಬ್ಲೂಷನ್ ಕೊಳದ ಪ್ರದೇಶ) ಅನ್ನು ಹೊರತುಪಡಿಸಿತು. ಸಂಕೀರ್ಣವನ್ನು ಉನ್ನತ ನ್ಯಾಯಾಲಯದ ಆದೇಶದ ಮೇರೆಗೆ ಮೊಹರು ಮಾಡಲಾಗಿದೆ.ಈ ಹಿಂದೆ ಅಲಹಾಬಾದ್ ಹೈಕೋರ್ಟ್ ವಾರಣಾಸಿಯ ಜ್ಞಾನವಾಪಿ ಮಸೀದಿಯ ಸಮೀಕ್ಷೆಯನ್ನು ಪ್ರಾರಂಭಿಸದಂತೆ ಆರ್ಕಿಯಾಲಾಜಿಕಲ್ ಸರ್ವೇ ಆಫ್ ಇಂಡಿಯಾ (ಎಎಸ್ಐ) ಗೆ ಸೂಚಿಸಿದ್ದು, ಎಎಸ್‌ಐನಿಂದ ವಿವರವಾದ ವೈಜ್ಞಾನಿಕ ಸಮೀಕ್ಷೆಯನ್ನು ಸುಪ್ರೀಂ ಕೋರ್ಟ್‌ ಜುಲೈ 26 ರ ಸಂಜೆ 5 ರವರೆಗೆ ತಡೆಹಿಡಿದ ನಂತರ ಈ ವಿಷಯದ ವಿಚಾರಣೆ ನಡೆದಿದೆ.

ಇದನ್ನೂ ಓದಿ : ಖರ್ಗೆ ಮೈಬಣ್ಣದ ವಿವಾದ: ಜ್ಞಾನೇಂದ್ರ ಕ್ಷಮೆಗೆ ಕಾಂಗ್ರೆಸ್ ಪಟ್ಟು!

HOW TO APPLY : NEET-UG COUNSELLING 2023

Categories
ರಾಷ್ಟ್ರೀಯ ವಾರ್ತೆ

ಐಟಿ ರಿಟರ್ನ್ಸ್‌ ಸಲ್ಲಿಸದಿದ್ರೆ 5,000 ರೂ. ದಂಡ!

ಐಟಿ ರಿಟರ್ನ್ಸ್‌ ಸಲ್ಲಿಸದಿದ್ರೆ 5,000 ರೂ. ದಂಡ!
– ಜು.31 ಕೊನೆ ದಿನ: 3 ದಿನ ಮಾತ್ರ ಬಾಕಿ
– ಐಟಿ ಮಾಡದಿದ್ರೆ ಲೋನ್ ಸಿಗಲ್ಲ

NAMMUR EXPRESS NEWS
ನವ ದೆಹಲಿ: 2021-22ರ ಆದಾಯಕ್ಕೆ ಸಂಬಂಧಿಸಿದಂತೆ 2022-23ನೇ ಮೌಲ್ಯಮಾಪನ ವರ್ಷದಲ್ಲಿ ಆದಾಯ ತೆರಿಗೆ ರಿಟರ್ನ್ಸ್‌ (ಐಟಿಆರ್‌) ಸಲ್ಲಿಕೆಗೆ ಜು.31 ಕೊನೆಯ ದಿನವಾಗಿದೆ. ಗಡುವು ವಿಸ್ತರಣೆ ಮಾಡಬೇಕು ಎನ್ನುವ ಒತ್ತಾಯಗಳು ಕೇಳಿ ಬಂದಿವೆಯಾದರೂ, ವಿಸ್ತರಣೆ ಮಾಡುವುದಿಲ್ಲ ಎಂದು ಐಟಿ ಇಲಾಖೆ ಈಗಾಗಲೇ ಅನೇಕ ಸಲ ಸ್ಪಷ್ಟಪಡಿಸಿದೆ. ಇದರ ನಡುವೆ ಗಡುವಿನ ದಿನಾಂಕಕ್ಕೆ ಇನ್ನು ಮೂರು ದಿನಗಳಷ್ಟೇ ಬಾಕಿ ಉಳಿದಿವೆ. ಅಂದಹಾಗೇ, ಗಡುವು ಮುಗಿದ ಬಳಿಕವೂ ತಡವಾಗಿ ಈ ವರ್ಷದ ಡಿಸೆಂಬರ್‌ 31ರವರೆಗೂ ಐಟಿಆರ್‌ ದಾಖಲಿಸಲು ಅವಕಾಶವಿರುತ್ತದೆ. ಆದರೆ, ದಂಡ ತೆರಬೇಕಾಗುತ್ತದೆ. ತೆರಿಗೆ ವಿನಾಯಿತಿಯ ಪ್ರಯೋಜನವೂ ತಪ್ಪಲಿದೆ.

ದೊಡ್ಡ ಮೊತ್ತದ ತೆರಿಗೆ ಪಾವತಿದಾರರು ತೆರಿಗೆ ಪಾವತಿಸುವುದರಲ್ಲಿ ತಡವಾದರೆ, ಪಾವತಿಸದ ತೆರಿಗೆಗೆ ಶೇಕಡ 2ರಷ್ಟು ಬಡ್ಡಿಯು ಆಗಸ್ಟ್‌ನಿಂದ ಅನ್ವಯವಾಗಲಿದೆ. ತಡವಾಗಿ ಐಟಿಆರ್‌ ಸಲ್ಲಿಕೆಯಾದರೆ, ಐದು ಲಕ್ಷ ರೂಪಾಯಿ ಆದಾಯಕ್ಕೆ 5,000 ರೂಪಾಯಿಯವರೆಗೂ ದಂಡ ವಿಧಿಸಲಾಗುತ್ತದೆ. ವಾರ್ಷಿಕ ಆದಾಯ ಐದು ಲಕ್ಷ ರೂ.ಗಿಂತಲೂ ಕಡಿಮೆ ಇದ್ದರೆ, ಒಂದು ಸಾವಿರ ರೂಪಾಯಿ ದಂಡ ತೆರಬೇಕಾಗುತ್ತದೆ.

ಹೀಗಾಗಿ ದಂಡ ತಪ್ಪಿಸಬೇಕು ಎಂದುಕೊಳ್ಳುವವರು ಶುಕ್ರವಾರವನ್ನೂ ಸೇರಿಸಿ ಮೂರು ದಿನಗಳ ಒಳಗೆ ತಮ್ಮ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಕೆ ಮಾಡಬೇಕಾಗಿದೆ. ತಪ್ಪಿದಲ್ಲಿ ದುಬಾರಿ ಮೊತ್ತದ ದಂಡವನ್ನು ಪಾವತಿಸಬೇಕಾಗುತ್ತದೆ. ಹಾಗಾಗದೇ ಇರಲು ಇದೇ ಜುಲೈ 31ಕ್ಕೂ ಮುನ್ನ ಐಟಿಆರ್‌ ಸಲ್ಲಿಸಿ.

ಅರ್ಧಕ್ಕೂ ಹೆಚ್ಚು ಜನ ಬಾಕಿ :

ಆದಾಯ ತೆರಿಗೆ ಇಲಾಖೆಯ ಪೋರ್ಟಲ್‌ನಲ್ಲಿ ಜುಲೈ 27ರ ವರೆಗಿನ ವಿವರಗಳಿದ್ದು, 3.73 ಕೋಟಿ ಐಟಿಆರ್‌ಗಳು ಸಲ್ಲಿಕೆಯಾಗಿವೆ. ಇದರಲ್ಲಿ 2.93 ಕೋಟಿ ರಿಟರ್ನ್ಸ್‌ಗಳನ್ನು ಖುದ್ದು ತೆರಿಗೆದಾರರು ದೃಢೀಕರಿಸಿದ್ದಾರೆ. ಇದರಲ್ಲಿ 2.18 ಕೋಟಿ ಐಟಿಆರ್‌ಗಳನ್ನು ತೆರಿಗೆ ಇಲಾಖೆಯು ದೃಢೀಕರಿಸಿದೆ. ಈ ತನಕ ಸಲ್ಲಿಕೆಯಾಗಿರುವ ಐಟಿಆರ್‌ಗಳ ಸಂಖ್ಯೆ ಶೇ. 45ಕ್ಕೂ ಕಡಿಮೆ ಇದೆ. ಜುಲೈ 28ರಂದು ಒಂದಿಷ್ಟು ಸಲ್ಲಿಕೆಯಾಗಿದೆ ಎಂದುಕೊಂಡರೂ ಹೆಚ್ಚು ಕಡಿಮೆ ಅರ್ಧದಷ್ಟು ತೆರಿಗೆದಾರರು ಇನ್ನೂ ತಮ್ಮ ಐಟಿಆರ್‌ ಅನ್ನು ಬಾಕಿ ಉಳಿಸಿಕೊಂಡಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಮತ್ತೆ ಸುದ್ದಿ ಮಾಡಿದ ತೀರ್ಥಹಳ್ಳಿ ಪ್ರತೀಕ್ ಗೌಡ ಕೇಸ್!

HOW TO APPLY : NEET-UG COUNSELLING 2023

Categories
ರಾಜಕೀಯ ರಾಷ್ಟ್ರೀಯ ವಾರ್ತೆ

ಚುನಾವಣಾ ರಾಜಕೀಯಕ್ಕೆ ಸೋನಿಯಾ ಗಾಂಧಿ ಗುಡ್‌ಬೈ?!

ಚುನಾವಣಾ ರಾಜಕೀಯಕ್ಕೆ ಸೋನಿಯಾ ಗಾಂಧಿ ಗುಡ್‌ಬೈ?!
– ಕರ್ನಾಟಕದಿಂದಲೇ ರಾಜ್ಯಸಭೆಗೆ ಸ್ಪರ್ಧೆ?
– ಅನಾರೋಗ್ಯ ಕಾರಣ ನೇರ ಸ್ಪರ್ಧೆ ಡೌಟು

NAMMUR EXPRESS NEWS
ಕರ್ನಾಟಕದಲ್ಲಿ ಎಳೆಂಟು ತಿಂಗಳಲ್ಲಿ ನಾಲ್ಕು ಸ್ಥಾನಗಳಿಗೆ ರಾಜ್ಯ ಸಭಾ ಚುನಾವಣೆ ನಡೆಯಬೇಕಿದೆ. ಈ ಬಾರಿ ಮೇಲ್ಮನೆಗೆ ರಾಜ್ಯದಿಂದ ಸೋನಿಯಾ ಗಾಂಧಿಯವರನ್ನು ಆಯ್ಕೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗುತ್ತಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದೆ ಇರಲು ತಿರ್ಮಾನಿಸಿರುವ ಸೋನಿಯಾ ಗಾಂಧಿ ಕರ್ನಾಟಕದಿಂದ ರಾಜ್ಯಸಭಾ ಸದಸ್ಯೆಯಾಗುವಂತೆ ಸಿದ್ದರಾಮಯ್ಯರವರು ಮನವಿ ಮಾಡಿದ್ದಾರೆ ಎಂಬ ಮಾತು ರಾಜಕೀಯವಾಗಿ ಕೇಳಿಬರುತ್ತಿದೆ.

ಕರ್ನಾಟಕದ ಮೂರು ಮಂದಿ ರಾಜ್ಯ ಸಭಾ ಸದಸ್ಯರ ಅವಧಿ ಮುಂದಿನ 2024ರ ಏಪ್ರಿಲ್ 2 ರಂದು ಕೊನೆಗೊಳ್ಳಲಿದೆ. ಹೀಗಾಗಿ ಈ ಮೂರೂ ಸ್ಥಾನಗಳಿಗೆ ಪುನಃ ತನ್ನ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಕಾಂಗ್ರೆಸ್ ಮುಂದಾಗಿದೆ. ಅಲ್ಲದೆ ಇದೀಗ 135 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ತನ್ನ ಎಲ್ಲಾ ಮೂರು ಸ್ಥಾನಗಳನ್ನು ಉಳಿಸಿಕೊಳ್ಳುವ ಅವಕಾಶವಿದೆ. ಸೋನಿಯಾ ಗಾಂಧಿ ಅವರೊಂದಿಗೆ ಉತ್ತರ ಪ್ರದೇಶ ಮೂಲದ ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ಮತ್ತು ಕರ್ನಾಟಕದ ಸೈಯದ್ ನಾಸೀರ್ ಹುಸೇನ್ ಅವರನ್ನು ರಾಜ್ಯಸಭೆಗೆ ಮರುನಾಮಕರಣ ಮಾಡಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಸೋನಿಯಾ ಅವರನ್ನು ಕರ್ನಾಟಕದಿಂದ ರಾಜ್ಯಸಭಾ ಸದಸ್ಯೆಯಾಗುವಂತೆ ಸೂಚಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಇತ್ತೀಚೆಗೆ ಸೋನಿಯಾ ಗಾಂಧಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಾಂಧಿ ಕುಟುಂಬದ ಯಾವುದೇ ಸದಸ್ಯರು ಸಂಸತ್ತಿನಲ್ಲಿ ಇರದಂತೆ ನೋಡಿಕೊಳ್ಳಲು ಬಿಜೆಪಿ ಯೋಜಿಸುತ್ತಿರುವುದರಿಂದ, ಕಾಂಗ್ರೆಸ್ ಪಕ್ಷ ಗಾಂಧಿ ಕುಟುಂಬಕ್ಕೆ ಸುರಕ್ಷಿತ ಮಾರ್ಗಗಳನ್ನು ಒದಗಿಸಲು ಯೋಜನೆ ರೂಪಿಸುತ್ತಿದೆ.ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಹಿಮಾಚಲ ಪ್ರದೇಶದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯಿಂದ ಶಿಕ್ಷೆಗೊಳಗಾದ ನಂತರ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವುದರಿಂದ ಇದು ಗಾಂಧಿ ಕುಟುಂಬಕ್ಕೆ ನಿರ್ಣಾಯಕವಾಗಿದೆ ಎಂದು ಹೇಳಿ ಬರುತ್ತಿದೆ.

ಇದನ್ನೂ ಓದಿ : ತೀರ್ಥಹಳ್ಳಿ ಹುಡುಗನ ಅನುಮಾನಾಸ್ಪದ ಸಾವು!

HOW TO APPLY : NEET-UG COUNSELLING 2023

Categories
ರಾಷ್ಟ್ರೀಯ ವಾರ್ತೆ

ಶೀಘ್ರವೇ ಕಡಿಮೆಯಾಗಲಿದೆ ಟೊಮೆಟೊ ಬೆಲೆ!

ಶೀಘ್ರವೇ ಕಡಿಮೆಯಾಗಲಿದೆ ಟೊಮೆಟೊ ಬೆಲೆ!
– ಮಾರುಕಟ್ಟೆಯಲ್ಲಿ 100 ರೂ.ಕೆಜಿಗೆ ಮಾರಾಟ
– ವಿವಿಧ ರಾಜ್ಯಗಳಿಂದ ಬೆಳೆ ಪೂರೈಕೆ

NAMMUR EXPRESS NEWS
ನವದೆಹಲಿ: ಟೊಮ್ಯಾಟೊಗಳ ಚಿಲ್ಲರೆ ಬೆಲೆಯಲ್ಲಿ ಏರಿಕೆಯಾದ ನಂತರ ಮಹಾರಾಷ್ಟ್ರ ಮತ್ತು ಮಧ್ಯ ಪ್ರದೇಶದಿಂದ ಹೊಸ ಬೆಳೆಗಳ ಪೂರೈಕೆಯಲ್ಲಿ ಹೆಚ್ಚಳವನ್ನು ನೋಡಿ ಟೊಮ್ಯಾಟೊಗಳ ಚಿಲ್ಲರೆ ಬೆಲೆಗಳು ಕುಸಿಯುವ ನಿರೀಕ್ಷೆಯಿದೆ ಎಂದು ಸರ್ಕಾರ ಶುಕ್ರವಾರ ಪ್ರಕಟಿಸಿದೆ.

“ಮಹಾರಾಷ್ಟ್ರದ ನಾಸಿಕ್, ನಾರಾಯಣ ಮತ್ತು ಔರಂಗಾಬಾದ್ ಬೆಲ್ಟ್ ಮತ್ತು ಮಧ್ಯಪ್ರದೇಶದಿಂದ ಹೊಸ ಬೆಳೆಯ ಆಗಮನದ ಹೆಚ್ಚಳದೊಂದಿಗೆ ಟೊಮೆಟೊ ಬೆಲೆಗಳು ಕಡಿಮೆಯಾಗುವ ನಿರೀಕ್ಷೆಯಿದೆ” ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಟೊಮೆಟೊ ಬೆಲೆ ಏರಿಕೆಯ ನಂತರ, ಆರಂಭದಲ್ಲಿ ಪ್ರತಿ ಕೆ.ಜಿ.ಗೆ 90 ರೂ.ಗಳ ಚಿಲ್ಲರೆ ದರದಲ್ಲಿ ವಿಲೇವಾರಿ ಮಾಡಲಾಯಿತು, ಇದನ್ನು ಜುಲೈ 16 ರಿಂದ ಪ್ರತಿ ಕೆ.ಜಿ.ಗೆ 80 ರೂ.ಗೆ ಮತ್ತು ಜುಲೈ 20 ರಿಂದ ಪ್ರತಿ ಕೆ.ಜಿ.ಗೆ 70 ರೂ.ಗೆ ಇಳಿಸಲಾಗಿದೆ.

ಇದನ್ನೂ ಓದಿ : ಕರಾವಳಿಯಲ್ಲಿ ಕೊರಗಜ್ಜನ ಪವಾಡ.!

HOW TO APPLY : NEET-UG COUNSELLING 2023

Categories
ಅಪರಾಧ ರಾಷ್ಟ್ರೀಯ ವಾರ್ತೆ ವೈರಲ್ ವೀಡಿಯೊಗಳು

ಛೇ.. ಎಂಥಾ ನೀಚ ಕೃತ್ಯ…ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿ ಗ್ಯಾಂಗ್ ರೇಪ್!

ಛೇ.. ಎಂಥಾ ನೀಚ ಕೃತ್ಯ…ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿ ಗ್ಯಾಂಗ್ ರೇಪ್!
– ಮಣಿಪುರದಲ್ಲಿ ನಡೆದ ಘಟನೆ: ಭಾರತದಲ್ಲಿ ಏನಾಗ್ತಿದೆ?
– ಸಾಮಾಜಿಕ ಜಾಲತಾಣದಲ್ಲಿ ವೈರಲ್… ಏನಿದು ಘಟನೆ?

NAMMUR EXPRESS NEWS
ಮಣಿಪುರದಲ್ಲಿ ನಡೆದ ಹಿಂಸಾಚಾರ, ಗಲಭೆ, ದಾಳಿಗೆ ಬಹುತೇಕ ರಾಜ್ಯವೇ ಸುಟ್ಟು ಕರಕಲಾಗಿದೆ.ಅನೇಕರು ಪ್ರಾಣ ಕಳೆದುಕೊಂಡಿದ್ದು ಇದೀಗ ಮತ್ತೊಂದು ಘಟನೆ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದೆ. ಇದೀಗ ಮೇ 4 ರಂದು ನಡೆದಿರುವ ಭೀಕರ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮ, ವ್ಯಾಟ್ಸ್ಆ್ಯಪ್‌ಗಳಲ್ಲಿ ಹರಿದಾಡಲು ಆರಂಭಿಸಿದೆ. ಇದರಿಂದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಆರಂಭಗೊಂಡಿದೆ. ಇಬ್ಬರು ಮಹಿಳೆಯರನ್ನು ಕಿಡಿಗೇಡಿಗಳ ಗುಂಪು ಬೆತ್ತಲೇ ಮೆರವಣಿಗೆ ಮಾಡಿಸಿದ್ದಾರೆ. ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದು ಬುಡಕಟ್ಟು ಸಮುದಾಯ ಆರೋಪ ಮಾಡಿದೆ. ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ಇದೀಗ ಮತ್ತೊಂದು ಸುತ್ತಿನ ಹಿಂಸಾಚಾರಕ್ಕೆ ಕಾರಣವಾಗಿದೆ.

ಇಂಪಾಲ್‌ನಿಂದ 35 ಕಿಲೋಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಮಹಿಳೆಯನ್ನು ಆಕ್ರೋಶಿತ ಹಾಗೂ ಕಿಡಿಗೇಡಿಗಳ ಗ್ಯಾಂಗ್ ಬೆತ್ತಲೆಗೊಳಿಸಿದೆ. ಬಳಿಕ ಗಲಭೆಕೋರರು ದಾರಿಯಲ್ಲಿ ಮೆರವಣಿಗೆ ಮಾಡಿಸಿದ್ದಾರೆ. ಮೆರವಣಿಗೆ ವೇಳೆ ಮಹಿಳೆಯರು ಕಣ್ಣೀರಿಡುತ್ತಾ ಪರಿ ಪರಿಯಾಗಿ ಬೇಡಿಕೊಂಡರು ಆಕ್ರೋಶಿತರು ಕೇಳಿಸಿಕೊಂಡಿಲ್ಲ. ಇದರ ಬದಲು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆಬೆತ್ತಲೆಗೊಳಿಸಿದ ಮಹಿಳೆಯರ ಮೇಲೆ ಆಕ್ರೋಶಿತರ ಗುಂಪು ಗ್ಯಾಂಗ್ ರೇಪ್ ಮಾಡಿದೆ ಎಂದು ಬುಡಕಟ್ಟು ಸಮುದಾಯ ಆರೋಪಿಸಿದೆ. ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಮತ್ತೆ ಹಿಂಸಾಚಾರ ಆರಂಭಗೊಂಡಿದೆ.

ಇದನ್ನೂ ಓದಿ : ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ತಯಾರಿ!

HOW TO APPLY : NEET-UG COUNSELLING 2023

Categories
ರಾಷ್ಟ್ರೀಯ ವಾರ್ತೆ

ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಅವರಿಗೆ ಶ್ರೀಲಂಕಾದಲ್ಲಿ ಹೃದಯಾಘಾತ!

ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಅವರಿಗೆ ಶ್ರೀಲಂಕಾದಲ್ಲಿ ಹೃದಯಾಘಾತ!
– ಭಾರತಕ್ಕೆ ಹೆಚ್ಚಿನ ಚಿಕಿತ್ಸೆಗೆ ರವಾನೆ

NAMMUR EXPRESS NEWS
ನವದೆಹಲಿ: ಇಸ್ರೋ ಮಾಜಿ ಅಧ್ಯಕ್ಷ ಮತ್ತು ಹೊಸ ಶಿಕ್ಷಣ ನೀತಿಯ ಕರಡು ಸಮಿತಿಯ ಮುಖ್ಯಸ್ಥ ಕೆ.ಕಸ್ತೂರಿರಂಗನ್ ಅವರಿಗೆ ಶ್ರೀಲಂಕಾದಲ್ಲಿ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆಗಾಗಿ ಬೆಂಗಳೂರಿಗೆ ವಿಮಾನದ ಮೂಲಕ ಕರೆತರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

83ರ ವರ್ಷದ ಕಸ್ತೂರಿರಂಗನ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿಗಳಾಗಿ ಹಾಗೂ ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ರಾಜ್ಯಸಭೆಯ ಮಾಜಿ ಸದಸ್ಯರೂ ಹೌದು.
ಏಪ್ರಿಲ್ 2004ರಿಂದ 2009ರವರೆಗೆ ಬೆಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್‌ ಅಡ್ವಾನ್ಸ್‌ ಸ್ಟಡೀಸ್‌ನ ನಿರ್ದೇಶಕರಾಗಿದ್ದರು.

ಇದನ್ನೂ ಓದಿ : ಯಾವ ಊರಲ್ಲಿ ಜು.9ಕ್ಕೆ ಅಡಿಕೆ ದರ ಎಷ್ಟು ?

[embedyt] https://www.youtube.com/watch?v=-UejHxlYBXg%5B/embedyt%5D

HOW TO APPLY : NEET-UG COUNSELLING 2023

Categories
ರಾಷ್ಟ್ರೀಯ ವಾರ್ತೆ

ಭತ್ತದ ಗದ್ದೆಯಲ್ಲಿ ನಾಟಿ ಮಾಡಿದ ರಾಹುಲ್ ಗಾಂಧಿ!

ಭತ್ತದ ಗದ್ದೆಯಲ್ಲಿ ನಾಟಿ ಮಾಡಿದ ರಾಹುಲ್ ಗಾಂಧಿ!
– ಮಾರ್ಗಮಧ್ಯೆ ಕಾರಿನಿಂದ ಇಳಿದು ನಾಟಿ ಮಾಡಿದರು
– ಟ್ರ್ಯಾಕ್ಟರ್ ಚಲಾಯಿಸಿ ಗಮನ ಸೆಳೆದ ರಾಹುಲ್

NAMMUR EXPRESS NEWS
ಚಂಡೀಗಢ: ದೇಶದಲ್ಲಿ ಮಳೆಗಾಲ ಆರಂಭವಾಗಿದ್ದು, ಕೃಷಿ ಚಟುವಟಿಕೆ ಜೋರಾಗಿದೆ. ಈ ನಡುವೆ ಯುವ ನಾಯಕ ರಾಹುಲ್ ಗಾಂಧಿ ಶನಿವಾರ ಬೆಳ್ಳಂಬೆಳಗ್ಗೆ ಹರಿಯಾಣದ ಸೋನಿಪತ್‌ನ ಮದೀನಾ ಗ್ರಾಮಕ್ಕೆ ಭೇಟಿ ನೀಡಿದ್ದುಅಲ್ಲಿ ರೈತರೊಂದಿಗೆ ಗದ್ದೆಗಿಳಿದು ಭತ್ತದ ನಾಟಿ ಮಾಡಿದ್ದಾರೆ.
ಹಿಮಾಚಲ ಪ್ರದೇಶಕ್ಕೆ ಹೋಗುತ್ತಿದ್ದ ರಾಹುಲ್ ಗಾಂಧಿ ಭತ್ತದ ಗದ್ದೆಯಲ್ಲಿ ರೈತರು ನಾಟಿ ಮಾಡುತ್ತಿರುವುದನ್ನು ಕಂಡಿದ್ದಾರೆ. ಈ ವೇಳೆ ಕಾರು ನಿಲ್ಲಿಸಿ, ಹಳ್ಳಿ ಹುಡುಗನಂತೆ ಮೊಣಕಾಲುದ್ದಕ್ಕೆ ಪ್ಯಾಂಟ್ ಮಡಿಸಿಕೊಂಡು ರೈತರೊಂದಿಗೆ ಗದ್ದೆಗಿಳಿದು ಅವರಿಗೆ ನಾಟಿ ಮಾಡಲು ಸಹಾಯ ಮಾಡಿದ್ದಾರೆ.

ಕಾಂಗ್ರೆಸ್ ಮುಖಂಡರೂ ಸಹ ರೈತರೊಂದಿಗೆ ಸೇರಿಕೊಂಡು ಟ್ರ್ಯಾಕ್ಟರ್ ಮೂಲಕ ಗದ್ದೆ ಉಳುಮೆ ಮಾಡಿ ಭತ್ತದ ನಾಟಿಗೆ ಸಹಕರಿಸಿದ್ದಾರೆ.ಬಳಿಕ ರೈತರೊಂದಿಗೆ ಸಂವಾದ ನಡೆಸಿ, ಕಷ್ಟ ಸುಖ ವಿಚಾರಿಸಿದ್ದಾರೆ.
2024ರ ಲೋಕಸಭೆ ಚುನಾವಣೆ ಹಿನ್ನೆಲೆಯ ಭರ್ಜರಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿರುವ ರಾಹುಲ್ ಗಾಂಧಿ ಸಮಾಜದ ಎಲ್ಲ ಹಂತದ ಜನರನ್ನ ಭೇಟಿಯಾಗುತ್ತಿದ್ದಾರೆ. ಇತ್ತೀಚೆಗಷ್ಟೇ ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಬೈಕ್ ಮೆಕ್ಯಾನಿಕ್ ಕಾರ್ಯಾಗಾರಕ್ಕೆ ಭೇಟಿ ನೀಡಿದ್ದರು. ವರ್ಕ್‌ಶಾಪ್‌ನಲ್ಲಿ ಮೆಕ್ಯಾನಿಕ್‌ಗಳೊಂದಿಗೆ ಸಂಭಾಷಣೆ ನಡೆಸಿದ್ದರು. ಈ ವೇಳೆ ಮೋಟಾರ್ ಸೈಕಲ್‌ಗಳನ್ನು ರಿಪೇರಿ ಮಾಡೋದನ್ನ ಪ್ರಯತ್ನಿಸಿದ್ದರು.

ಕರ್ನಾಟಕದಲ್ಲಿ ಸರ್ಕಾರಿ ಬಸ್ಸಲ್ಲಿ ಪಯಣಿಸಿದ್ದರು!

ಕರ್ನಾಟಕದಲ್ಲೂ ರಾಹುಲ್ ಗಾಂಧಿ ಬಸ್ಸಿನಲ್ಲಿ ಕುಳಿತು ಮಹಿಳಾ ಪ್ರಯಾಣಿಕರೊಂದಿಗೆ, ವಿದ್ಯಾರ್ಥಿಗಳೊಂದಿಗೆ ಹಾಗೂ ಸ್ವಿಗ್ಗಿ ಡೆಲಿವರಿ ಬಾಯ್ಸ್ಗಳೊಂದಿಗೆ ಸಂವಾದ ನಡೆಸಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ್ದರು.

ಇದನ್ನೂ ಓದಿ : ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷವರೆಗೆ ಸಾಲ!

[embedyt] https://www.youtube.com/watch?v=-UejHxlYBXg%5B/embedyt%5D

HOW TO APPLY : NEET-UG COUNSELLING 2023

Categories
ರಾಜಕೀಯ ರಾಷ್ಟ್ರೀಯ ವಾರ್ತೆ

ರಾಹುಲ್ ಗಾಂಧಿಗೆ 2 ವರ್ಷ ಶಿಕ್ಷೆ!?

ರಾಹುಲ್ ಗಾಂಧಿಗೆ 2 ವರ್ಷ ಶಿಕ್ಷೆ!?
– ಮಾನನಷ್ಟ ಪ್ರಕರಣ: ನ್ಯಾಯಾಲಯದಲ್ಲಿ ರಾಹುಲ್ ಗಾಂಧಿಗೆ ಹಿನ್ನಡೆ
– ಕರ್ನಾಟಕದಲ್ಲಿ ಮೋದಿ ಎಂಬುವರು ಕಳ್ಳರು ಎಂಬ ಹೇಳಿಕೆ ವಿವಾದ
– ಲೋಕಸಭೆ ಸದಸ್ಯತ್ವದಿಂದಲೂ ಅನರ್ಹ

NAMMUR EXPRESS NEWS
ನವ ದೆಹಲಿ: ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಶಿಕ್ಷೆಯ ವಿರುದ್ಧ ನ್ಯಾಯಾಲಯ ಶುಕ್ರವಾರ ಪ್ರಕಟಿಸಿದೆ.
ಮೋದಿ ಉಪನಾಮಕ್ಕೆ ಮಾನನಷ್ಟ ಮೊದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ರಾಹುಲ್ ಗಾಂಧಿ) ಗೆ ಸೆಷನ್ಸ್ ನೀಡಿದ ಎರಡು ವರ್ಷದ ಶಿಕ್ಷೆಯನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು, ಕೆಳ ನ್ಯಾಯಾಲಯ ನೀಡಿದ ತೀರ್ಪನ್ನು ಗುಜರಾತ್ ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಬೆಳಗಿಗೆ ಗಾಂಧಿಗೆ ಹಿನ್ನಡೆಯಾದಂತೆ ಆಗಿದೆ. ಈ ಹಿಂದೆ ಮಾರ್ಚ್ 23ರಂದು ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು.

ಇದರ ವಿರುದ್ಧ ರಾಹುಲ್ ಗಾಂಧಿ ಮೆಟ್ಟಿಲೇರಿದ್ದರು.
ಗುಜರಾತ್ ನ್ಯಾಯಾಲಯ ರಾಹುಲ್ ಗಾಂಧಿಯವರ ಅರ್ಜಿಯನ್ನು ವಜಾಗೊಳಿಸಿದೆ. ಈ ನಿರ್ಧಾರದ ಎಲ್ಲಾ ಕಾಂಗ್ರೆಸ್ ಮುಖ್ಯಸ್ಥರು ಮತ್ತು ಕಾರ್ಯಕರ್ತರ ಪಕ್ಷದ ಕೇಂದ್ರ ಕಚೇರಿಗೆ ಆಗಮಿಸುವಂತೆ ಸೂಚನೆ ನೀಡಿದರು. ಗುಜರಾತ್ ಹೈಕೋರ್ಟ್ನ ನ್ಯಾಯಮೂರ್ತಿ ಹೇಮಂತ್ ಪ್ರಚಕ್ ಅವರ ಏಕ ಪೀಠ ಈ ಕುರಿತು ತೀರ್ಪು ನೀಡಿದೆ. ಮಾರ್ಚ್ 23 ರಂದು ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು. ಇದೀಗ ಸೂರತ್ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ.

ಲೋಕಸಭೆ ಸದಸ್ಯತ್ವದಿಂದ ಅನರ್ಹ :

ಈ ಹಿಂದೆ ಶಿಕ್ಷೆ ಪ್ರಕಟವಾದ ಬಳಿಕ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು. ಆದರೆ ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು ಸಿಕ್ಕಿದೆ. ಅವರು ಏಪ್ರಿಲ್ 3 ಕ್ಕೆ ತಮ್ಮ ಶಿಕ್ಷೆಯ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. 2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ತಮ್ಮ ಭಾಷಣದಲ್ಲಿ ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ ಎಂದು ಹೇಳಿದ್ದರು. ಈ ಕುರಿತು ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಕೋಲಾರದಲ್ಲಿ ನಡೆದ ಕಾರ್ಯಕ್ರಮ!:

2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದಚುನಾವಣಾ ಪ್ರಚಾರದಲ್ಲಿ “ರಾಹುಲ್ ಗಾಂಧಿ, ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಎಲ್ಲಾ ಉಪನಾಮಗಳು ಒಂದೇ ರೀತಿ ಇದೆ, ಎಲ್ಲಾ ಕಳ್ಳರ ಉಪನಾಮ ಮೋದಿ ಏಕೆ?” ಎಂದು ಹೇಳಿದ್ದರು.

ಇದನ್ನೂ ಓದಿ : ಅಡಿಕೆ ದರ ಎಷ್ಟಿದೆ..ಕಾಳು ಮೆಣಸು ದರ ಎಷ್ಟು?

[embedyt] https://www.youtube.com/watch?v=-UejHxlYBXg%5B/embedyt%5D

HOW TO APPLY : NEET-UG COUNSELLING 2023

Categories
ರಾಷ್ಟ್ರೀಯ ವಾರ್ತೆ

ಮೋದಿ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ!?

ಮೋದಿ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ!?
– ಜುಲೈ 3ಕ್ಕೆ ಕೇಂದ್ರ ಮಂತ್ರಿ ಮಂಡಲದ ಸಭೆ
– ಮೋದಿ, ಅಮಿತ್ ಶಾ,ನಡ್ದಾ ನಡುವೆ ಸಭೆ
– ಕರ್ನಾಟಕದಲ್ಲೂ ಭಾರೀ ಬದಲಾವಣೆ ಸಾಧ್ಯತೆ?

NAMMUR EXPRESS NEWS
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜುಲೈ 3ರಂದು ಕೇಂದ್ರ ಮಂತ್ರಿ ಮಂಡಲ ಸಭೆ ಕರೆದಿದ್ದು ಸಚಿವ ಸ್ಥಾನದಲ್ಲಿ ಬದಲಾವಣೆ ಆಗುವ ಸಾಧ್ಯತೆಗಳಿವೆ.
ಮೋದಿಯವರು ಬಿಜೆಪಿಯ ಉನ್ನತ ನಾಯಕರೊಂದಿಗೆ ತೀವ್ರ ಸಮಾಲೋಚನೆ ನಡೆಸಿದ ಒಂದು ದಿನದ ನಂತರ ಈ ಬೆಳವಣಿಗೆಯಾಗಿದ್ದು, ಮಂತ್ರಿಮಂಡಲದ ಪುನರ್ ರಚನೆಯ ಊಹಾಪೋಹಗಳಿಗೆ ಕಾರಣವಾಗಿದೆ. ಸೆಪ್ಟೆಂಬರ್‌ನಲ್ಲಿ ಜಿ 20 ಶೃಂಗಸಭೆ ನಡೆದ ಪ್ರಗತಿ ಮೈದಾನದಲ್ಲಿನ ನೂತನ ಕನ್ವೆನ್ಷನ್ ಸೆಂಟರ್‌ನಲ್ಲಿ ಜುಲೈ 3 ರ ಸಭೆ ನಡೆಯುವ ಸಾಧ್ಯತೆಯಿದೆ. ಮೋದಿ ಅವರು ಬುಧವಾರ ಮತ್ತು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಇತರರೊಂದಿಗೆ ಮ್ಯಾರಥಾನ್ ಸಭೆಗಳನ್ನು ನಡೆಸಿದರು. ಸಭೆಯಲ್ಲಿ ನಡ್ಡಾ ಭಾಗವಹಿಸಿದ್ದರಿಂದ ಈ ವರ್ಷಾಂತ್ಯದಲ್ಲಿ ನಡೆಯಲಿರುವ ಪ್ರಮುಖ ವಿಧಾನಸಭಾ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆಗೆ ಪಕ್ಷ ಸಜ್ಜಾಗುತ್ತಿರುವಾಗ, ರಾಜ್ಯ ಮಟ್ಟಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ಬದಲಾವಣೆಗಳ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ.

ಕಳೆದ ಕೆಲವು ದಿನಗಳಿಂದ ಶಾ, ನಡ್ಡಾ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ಸಾಂಸ್ಥಿಕ ಮತ್ತು ರಾಜಕೀಯ ವಿಷಯಗಳ ಕುರಿತು ಹಲವು ಸುತ್ತಿನ ಚರ್ಚೆ ನಡೆಸಿದ್ದಾರೆ. ಈ ವರ್ಷದ ಕೊನೆಯಲ್ಲಿ ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಚುನಾವಣೆಗಳು ನಡೆಯಲಿವೆ. ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಕೆಲವು ದಿನಗಳ ಮುನ್ನ ಸಚಿವರ ಮಂಡಳಿ ಸಭೆ ನಡೆಯುತ್ತಿದೆ.

ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!!

HOW TO APPLY : NEET-UG COUNSELLING 2023