Categories
ರಾಷ್ಟ್ರೀಯ ವಾರ್ತೆ

ಪಡಿತರ ಚೀಟಿದಾರರಿಗೆ ಒಂದೊಳ್ಳೆ ಅವಕಾಶ!

ಪಡಿತರ ಚೀಟಿದಾರರಿಗೆ ಒಂದೊಳ್ಳೆ ಅವಕಾಶ!

– ರೇಷನ್ ಕಾರ್ಡ್- ಆಧಾರ್ ಜೋಡಣೆಗೆ ಅವಧಿ ವಿಸ್ತರಣೆ
– ಸೆಪ್ಟೆಂಬರ್ 30ರವರೆಗೆ ಸಮಯ: ಏನಿದು ಆದೇಶ?

NAMMUR EXPRESS NEWS
ನವದೆಹಲಿ: ಆಧಾರ್‌ ಮತ್ತು ಪಡಿತರ ಚೀಟಿಯನ್ನು ಲಿಂಕ್ ಮಾಡುವ ಗಡುವನ್ನು ಸರ್ಕಾರ ಮತ್ತೊಮ್ಮೆ ವಿಸ್ತರಿಸಿದೆ. ಈಗ ಪಡಿತರ ಚೀಟಿಯನ್ನು ಆಧಾ‌ರ್ ಕಾರ್ಡೊಂದಿಗೆ ಲಿಂಕ್ ಮಾಡಲು ನಿಮಗೆ ಸೆಪ್ಟೆಂಬರ್ 30ರವರೆಗೆ ಸಮಯ ಸಿಗುತ್ತದೆ.
ಆಧಾರ್ ಮತ್ತು ಪಡಿತರ ಚೀಟಿಯನ್ನು ಲಿಂಕ್ ಮಾಡುವ ಗಡುವನ್ನು ಸರ್ಕಾರ ಮತ್ತೊಮ್ಮೆ ವಿಸ್ತರಿಸಿದೆ. ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡಲು ನಿಮಗೆ ಸೆಪ್ಟೆಂಬರ್ 30 ರವರೆಗೆ ಸಮಯವಿದೆ. ಇಲ್ಲಿಯವರೆಗೆ ಕೊನೆಯ ದಿನಾಂಕ ಜೂನ್ 30 ಆಗಿತ್ತು. ಈ ಬಗ್ಗೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಪಡಿತರ ಚೀಟಿ ಮತ್ತು ಆಧಾರ್ ಅನ್ನು ಆನ್ ಲೈನ್ ನಲ್ಲಿ ಈ ರೀತಿ ಲಿಂಕ್ ಮಾಡಿ

1. ನಿಮ್ಮ ರಾಜ್ಯದ ಅಧಿಕೃತ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪೋರ್ಟಲ್ಗೆ ಭೇಟಿ ನೀಡಿ.
2. ಸಕ್ರಿಯ ಕಾರ್ಡ್ನೊಂದಿಗೆ ಆಧಾರ್ ಲಿಂಕ್ ಆಯ್ಕೆ ಮಾಡಿ.
3. ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿ ಮತ್ತು ನಂತರ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ.
4. ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
5. ಮುಂದುವರಿಯಿರಿ / ಸಲ್ಲಿಸಿ ಬಟನ್ ಆಯ್ಕೆ ಮಾಡಿ.
6. ನೀವು ಈಗ ನಿಮ್ಮ ಮೊಬೈಲ್ ಫೋನ್ಗೆ ಒಟಿಪಿಯನ್ನು ಸ್ವೀಕರಿಸುತ್ತೀರಿ.
7. ಆಧಾರ್ ಪಡಿತರ ಲಿಂಕ್ ಪುಟದಲ್ಲಿ ಒಟಿಪಿಯನ್ನು ನಮೂದಿಸಿ, ಮತ್ತು ಅದಕ್ಕಾಗಿ ನಿಮ್ಮ ವಿನಂತಿಯನ್ನು ಈಗ ಸಲ್ಲಿಸಲಾಗಿದೆ.

Categories
ರಾಷ್ಟ್ರೀಯ ವಾರ್ತೆ

ಐಸ್ ಕ್ರೀಮಿನಲ್ಲಿತ್ತು ಕೈ ಬೆರಳು!

ಐಸ್ ಕ್ರೀಮಿನಲ್ಲಿತ್ತು ಕೈ ಬೆರಳು!

– ಆನ್‌ಲೈನ್‌ನಲ್ಲಿ ಖರೀದಿಸಿದ ಐಸ್‌ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ!
– ಮುಂಬೈ ಅಲ್ಲಿ ಘಟನೆ: ಬಾಯಿಗೆ ಸಿಕ್ಕಾಗಲೇ ಗೊತ್ತಾಗಿದ್ದು!

NAMMUR EXPRESS NEWS
ಮುಂಬೈ :ಐಸ್​ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆಯಾಗಿರುವ ಆಘಾತಕಾರಿ ಘಟನೆ ಮುಂಬೈನಲ್ಲಿ ಬೆಳಕಿಗೆ ಬಂದಿದೆ. ಮಲಾಡ್ ನಿವಾಸಿ ಡಾ.ಒರ್ಲಾಮ್ ಬ್ರಾಂಡನ್ ಸೆರಾವೊ ಅವರು ಆನ್‌ಲೈನ್‌ನಲ್ಲಿ ಐಸ್ ಕ್ರೀಮ್ ಆರ್ಡರ್ ಮಾಡಿದ್ದರು. ಐಸ್‌ ಕ್ರೀಂ ತಿನ್ನುತ್ತಿದ್ದಾ ವೇಳೆ ಐಸ್​ಕ್ರೀಂನಲ್ಲಿ ಮಾನವನ ಬೆರಳು ಪತ್ತೆಯಾಗಿದ್ದು, ಈ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಮೊದಲು ವಾಲ್ನಟ್​ ಎಂದುಕೊಂಡೆವು ಬಳಿಕ ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಇದು ಬೆರಳು ಎಂಬುದು ಅರಿವಾಗಿದೆ ಎಂದಿದ್ದಾರೆ. ನಾನು ಮೂರು ಐಸ್​ಕ್ರೀಂಗಳನ್ನು ಆರ್ಡರ್​ ಮಾಡಿದ್ದೆ, ನಾನು ಬಟರ್​ಸ್ಕಾಚ್​ ಐಸ್​ಕ್ರೀಂ ತಿನ್ನುತ್ತಿದ್ದೆ ಆಗ ಇದ್ದಕ್ಕಿದ್ದಂತೆ ಹಲ್ಲಿಗೇನೋ ತಾಗಿದಂತಾಯಿತು ನಾನು ವಾಲ್ನಟ್ ಅಥವಾ ಚಾಕೊಲೇಟ್​ ಇರಬೇಕು ಎಂದುಕೊಂಡೆ, ಬಳಿಕ ಉಗುಳಿದಾಗ ಅದು ವಾಲ್ನಟ್ ಆಗಿರಲಿಲ್ಲ, ಮನುಷ್ಯನ ಬೆರಳಾಗಿದ್ದು, ಅದನ್ನು ನೋಡಿ ಒಮ್ಮೆ ದಿಗ್ಭ್ರಮೆಗೊಂಡೆ. ನಾನು ವೈದ್ಯೆಯಾಗಿರುವ ಕಾರಣ ಇದು ಹೆಬ್ಬರಳಿನ ಭಾಗ ಎಂಬುದು ನಾನು ಅರ್ಥಮಾಡಿಕೊಂಡೆ ಅದರಲ್ಲಿ ಉಗುರು ಕೂಡ ಇದೆ ಎಂದರು. ನಾನು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದೆ ಎಂದು ವೈದ್ಯೆ ಹೇಳಿದ್ದಾರೆ. ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ, ಐಸ್​​ಕ್ರೀಂ ಬ್ರ್ಯಾಂಡ್​ ವಿರುದ್ಧ ಕಲಬೆರಕೆ ಮತ್ತು ಜನರ ಜೀವಕ್ಕೆ ಅಪಾಯ ತಂದಿರುವ ಆರೋಪದಡಿ ಪ್ರಕರಣ ದಾಖಲಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಬೆರಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ, ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಐಸ್​ಕ್ರೀಂನಲ್ಲಿ ಬೆರಳು ಎಲ್ಲಿಂದ ಬಂತು ಎಂಬುದನ್ನೂ ಪತ್ತೆ ಮಾಡುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. ಆ ಐಸ್ ಕ್ರೀಮ್ ಒಂದು ಹೆಸರಾಂತ ಬ್ರ್ಯಾಂಡ್ ಎಂದು ಹೇಳಲಾಗುತ್ತಿದೆ. ವರದಿ ಬಂದ ನಂತರ ಪೊಲೀಸರು ಮುಂದಿನ ಕ್ರಮಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

Categories
ರಾಷ್ಟ್ರೀಯ ವಾರ್ತೆ

ಕುವೈತ್ ನಲ್ಲಿ ಭೀಕರ ಅಗ್ನಿ ದುರಂತಕ್ಕೆ 53 ಮಂದಿ ಬಲಿ!

ಕುವೈತ್ ನಲ್ಲಿ ಭೀಕರ ಅಗ್ನಿ ದುರಂತಕ್ಕೆ 53 ಮಂದಿ ಬಲಿ!

– ಐವರು ಭಾರತೀಯರು ಸೇರಿ 53 ಮಂದಿ ಸಜೀವ ದಹನ
– ಅಕ್ರಮ ಕಟ್ಟಡ ನೆಲಸಮ ಮಾಡಲು ಸರ್ಕಾರದ ಪ್ಲಾನ್

NAMMUR EXPRESS NEWS
ಕುವೈತ್ : ಕುವೈತ್ ನ ಮಂಗಾಫ್ ನಲ್ಲಿ ಬುಧವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಐವರು ಭಾರತೀಯರು ಸೇರಿದಂತೆ ಕನಿಷ್ಠ 53 ಮಂದಿ ಸಜೀವ ದಹನವಾಗಿದ್ದಾರೆ. ಕುವೈತ್‌ ನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 53 ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಸಂತಾಪ ಸೂಚಿಸಿದೆ. ಈ ದುರಂತದಿಂದ ನಾವು ತೀವ್ರ ಆಘಾತಕ್ಕೊಳಗಾಗಿದ್ದೇವೆ ಎಂದು ಇಎಎಂ ಡಾ.ಎಸ್.ಜೈಶಂಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನಮ್ಮ ಆಳವಾದ ಸಂತಾಪಗಳು. ಗಾಯಗೊಂಡವರು ಶೀಘ್ರ ಮತ್ತು ಸಂಪೂರ್ಣ ಚೇತರಿಸಿಕೊಳ್ಳಲಿ ಎಂದು ನಾವು ಬಯಸುತ್ತೇವೆ ಎಂದು ಅವರು ಹೇಳಿದರು.ಘಟನೆಯ ಹಿನ್ನೆಲೆಯಲ್ಲಿ, ಕುವೈತ್‌ ಸರ್ಕಾರ ನಿರ್ಣಾಯಕ ಕ್ರಮ ಕೈಗೊಂಡಿದೆ. ಭವಿಷ್ಯದಲ್ಲಿ ಇಂತಹ ದುರಂತಗಳು ಸಂಭವಿಸದಂತೆ ತಡೆಯುವ ಪ್ರಯತ್ನದಲ್ಲಿ ಅಕ್ರಮ ಕಟ್ಟಡಗಳನ್ನು ದೊಡ್ಡ ಪ್ರಮಾಣದಲ್ಲಿ ನೆಲಸಮ ಮಾಡಲು ಅವರು ಆದೇಶಿಸಿದ್ದಾರೆ.

Categories
ರಾಷ್ಟ್ರೀಯ ವಾರ್ತೆ

ರಾಹುಲ್ ಗಾಂಧಿಗೆ ಶೃದ್ದಾಂಜಲಿ ಪೋಸ್ಟರ್: ಅರೆಸ್ಟ್!

ರಾಹುಲ್ ಗಾಂಧಿಗೆ ಶೃದ್ದಾಂಜಲಿ ಪೋಸ್ಟರ್: ಅರೆಸ್ಟ್!

– ಕಾರ್ಕಳ ಯುವಕನ ವಿರುದ್ಧ ಪ್ರಕರಣ ದಾಖಲು
– ವಿಕೃತ ರಾಜಕೀಯ ತೀಟೆ ತೀರಿಸಿಕೊಂಡ ಯುವಕ!

NAMMUR EXPRESS NEWS
ಕಾರ್ಕಳ : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ , ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯ ಪೋಟೋಕ್ಕೆ ಹೂಮಾಲೆ ಹಾಕಿ, ಅಗರಬತ್ತಿ ಹಚ್ಚಿ ಇಟ್ಟ ಶೃದ್ದಾಂಜಲಿ ಸಲ್ಲಿದ ರೀತಿ ಬಿಂಬಿಸಿದ ಯುವಕನ ವಿರುದ್ದ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಮಂತ್ ಬಾಳಿಗ ಎಂಬಾತ ಪ್ರಕರಣ ಆರೋಪಿಯಾಗಿದ್ದಾನೆ. ಪೋಟೋವನ್ನು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿ ವಿಕೃತ ರಾಜಕೀಯ ತೀಟೆ ತೀರಿಸಿಕೊಂಡ ಹಿನ್ನಲೆ ಕಾಂಗ್ರೆಸ್ ಆತನ ವಿರುದ್ದ ದೂರು ನೀಡಿದೆ
ಸುಮಂತ್ ಬಾಳಿಗ ರಾಜಕೀಯ ವೈಷಮ್ಯದಿಂದ ಮೌಸಮಿ ಅಫಿಷಿಯಲ್ ಎಂಬ ಫೇಶ್ ಬುಕ್ ಪೇಜ್‌ನಲ್ಲಿ ಇರುವ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ಎರಡು ರಾಜಕೀಯ ಪಕ್ಷದ ಮುಖಂಡರ ಸಮುದಾಯದ ನಡುವೆ ವೈರತ್ವವನ್ನು ಬೆಳಸಿ ದ್ವೇಷ ಭಾವನೆ ಹರಡುವ ಉದ್ದೇಶದಿಂದ ಫೋಟೋವನ್ನು ಷೇರ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುತ್ತಾನೆ. ಅದರಿಂದ ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಸುಹಾಸ್ ಕಾವ ಎಂಬವರು ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದರು. ಅದರಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Categories
ರಾಷ್ಟ್ರೀಯ ವಾರ್ತೆ ಶಿಕ್ಷಣ

ಡಿಗ್ರಿ, ಮಾಸ್ಟರ್ ಡಿಗ್ರಿ ನಿಯಮ ಭಾರೀ ಬದಲಾವಣೆ!

ಡಿಗ್ರಿ, ಮಾಸ್ಟರ್ ಡಿಗ್ರಿ ನಿಯಮ ಭಾರೀ ಬದಲಾವಣೆ!

– ಇನ್ನು ವರ್ಷಕ್ಕೆ 2 ಬಾರಿ ಕಾಲೇಜಿಗೆ ಪ್ರವೇಶ ಅವಕಾಶ
– ವಿದೇಶಗಳಲ್ಲಿನ ವ್ಯವಸ್ಥೆ ಭಾರತದಲ್ಲೂ ಆರಂಭ
– ಜುಲೈನಲ್ಲಿ ಮೊದಲ, ಜನವರಿಯಲಿ 2ನೇ ಸಲ ಪ್ರವೇಶ

NAMMUR EXPRESS NEWS
ನವ ದೆಹಲಿ : ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈಗ ವಿದೇಶಿ ವಿವಿಗಳ ರೀತಿ ವರ್ಷಕ್ಕೆ 2 ಬಾರಿ ಪ್ರವೇಶವನ್ನು ನೀಡಲು ಅನುಮತಿಸಲಾಗಿದೆ.

ಅಂದರೆ ವರ್ಷಕ್ಕೆ 2 ಪ್ರವೇಶ ಪ್ರಕ್ರಿಯೆಗಳು ಇರಲಿವೆ. ಜುಲೈ-ಆಗಸ್ಟ್‌ನಲ್ಲಿ ಮೊದಲ ಅಡ್ಮಿಷನ್‌ ನಡೆಯಲಿದೆ ಮತ್ತು ಜನವರಿ-ಫೆಬ್ರವರಿಯಲ್ಲಿ 2ನೇ ಹಂತದ ಪ್ರವೇಶ ಪ್ರಕ್ರಿಯೆ ನಡೆಯಲಿದೆ. 2024-25ನೇ ಶೈಕ್ಷಣಿಕ ವರ್ಷದಿಂದ, ಅರ್ಥಾತ್‌ ಇದೇ ವರ್ಷದಿಂದ ಇದು ಆರಂಭವಾಗಲಿದೆ. ಭಾರತೀಯ ವಿವಿಗಳು ವರ್ಷಕ್ಕೆ 2 ಬಾರಿ ಪ್ರವೇಶವನ್ನು ನೀಡಿದರೆ, ಮಂಡಳಿಯ ಫಲಿತಾಂಶಗಳ ಪ್ರಕಟಣೆಯಲ್ಲಿ ವಿಳಂಬ, ಆರೋಗ್ಯ ಸಮಸ್ಯೆಗಳು ಅಥವಾ ವೈಯಕ್ತಿಕ ಕಾರಣಗಳಿಂದ ಜುಲೈ-ಆಗಸ್ಟ್ ನಲ್ಲಿ ಪ್ರವೇಶ ಪಡೆಯಲು ಆಗದ ಅನೇಕ ವಿದ್ಯಾರ್ಥಿಗಳಿಗೆ ನೆರವಾಗಲಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ದ್ವೈವಾರ್ಷಿಕ ವಿಶ್ವವಿದ್ಯಾನಿಲಯ ಪ್ರವೇಶಗಳು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುತ್ತವೆ. ಏಕೆಂದರೆ ಅವರು ಪ್ರಸ್ತುತ ‘ಚಕ್ರ’ದಲ್ಲಿ ಪ್ರವೇಶವನ್ನು ಕಳೆದುಕೊಂಡರೆ, ಪ್ರವೇಶ ಪಡೆಯಲು ಮತ್ತೆ 1 ಪೂರ್ಣ ವರ್ಷ ಕಾಯಬೇಕಾಗಿಲ್ಲ. ದ್ವೈವಾರ್ಷಿಕ ಪ್ರವೇಶದೊಂದಿಗೆ, ಉದ್ಯಮಗಳು ತಮ್ಮ ಕ್ಯಾಂಪಸ್ ನೇಮಕಾತಿಯನ್ನು ವರ್ಷಕ್ಕೆ 2 ಬಾರಿ ಮಾಡಬಹುದು. ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಕಂಪನಿಗಳಿಗೂ ಇದರಿಂದ ನೆರವಾಗಲಿದೆ.

‘ವಿಶ್ವದಾದ್ಯಂತ ವಿಶ್ವವಿದ್ಯಾನಿಲಯಗಳು ಈಗಾಗಲೇ ದ್ವೈವಾರ್ಷಿಕ ಪ್ರವೇಶ ವ್ಯವಸ್ಥೆಯನ್ನು ಅನುಸರಿಸುತ್ತವೆ. ಭಾರತೀಯ ವಿವಿಗಳೂ ಅದನ್ನು ಅಳವಡಿಸಿಕೊಳ್ಳುವ ಕಾರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ನಮ್ಮ ವಿದ್ಯಾರ್ಥಿಗಳಿಗೆ ನೆರವಾಗಲಿದೆ.

ಕಡ್ಡಾಯವಲ್ಲ: ವಿಶ್ವವಿದ್ಯಾನಿಲಯಗಳಿಗೆ ದ್ವೈವಾರ್ಷಿಕ ಪ್ರವೇಶ ವ್ಯವಸ್ಥೆ ಅಳವಡಿಸಿಕೊಳ್ಳುವುದು ಕಡ್ಡಾಯವಲ್ಲ. ಅಗತ್ಯವಿರುವ ಮೂಲಸೌಕರ್ಯ ಮತ್ತು ಬೋಧಕರು ಇದ್ದಲ್ಲಿ ಅವಕಾಶವನ್ನು ಬಳಸಿಕೊಳ್ಳಬಹುದು. ಇನ್ನು ಅಳವಡಿಸಿಕೊಳ್ಳಲು ಬಯಸುವ ಉನ್ನತ ಶಿಕ್ಷಣ ಸಂಸ್ಥೆಗಳು ತಮ್ಮ ಸಂಸ್ಥೆಗಳ ನಿಯಮಗಳಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ.

ಏನು ಅನುಕೂಲ?
– ಜುಲೈನಲ್ಲಿ ಕಾಲೇಜಿಗೆ ಸೇರಲು ಆಗದೆ ಇದ್ದರೆ ಜನವರಿಯಲ್ಲಿ ಸೇರಬಹುದು
– ಫಲಿತಾಂಶ ವಿಳಂಬ, ಅನಾರೋಗ್ಯ ಇನ್ನಿತರ ಸಮಸ್ಯೆಗಳಾದಲ್ಲಿ ಅನುಕೂಲ
– ಕಂಪನಿಗಳು ವಿವಿಗಳಲ್ಲಿ ವರ್ಷಕ್ಕೆ 2 ಬಾರಿ ಕ್ಯಾಂಪಸ್‌ ಸಂದರ್ಶನ ಮಾಡಬಹುದು
– ಅಂ.ರಾ.ಮಟ್ಟದಲ್ಲಿ ಸ್ಪರ್ಧಿಸಲು ಭಾರತೀಯ ವಿದ್ಯಾರ್ಥಿಗಳಿಗೆ ಇದರಿಂದ ಅವಕಾಶ
– ಇದು ಕಡ್ಡಾಯವಲ್ಲ, ವಿವಿಗಳು ಅನುಕೂಲವಿದ್ದರೆ ಈ ವ್ಯವಸ್ಥೆ ಜಾರಿಗೆ ತರಬಹುದು

Categories
ರಾಜಕೀಯ ರಾಷ್ಟ್ರೀಯ ವಾರ್ತೆ

ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸಂಘಟನ ಚತುರರ ಸ್ಪರ್ಧೆ.!

ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸಂಘಟನ ಚತುರರ ಸ್ಪರ್ಧೆ.!

– ನಾಲ್ವರು ಘಟಾನುಘಟಿಗಳ ಹೆಸರು ಪ್ರಸ್ತಾವ
– ಯಾರು ಸ್ಪರ್ಧೆಯಲ್ಲಿ ?

NAMMUR EXPRESS NEWS
ಹೊಸದಿಲ್ಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸಂಘಟನ ಚತುರರೆಂದು ಪರಿಗಣಿಸಲಾಗಿರುವ ನಾಲ್ವರು ಪ್ರಭಾವಿ ನಾಯಕರ ಹೆಸರು ಕೇಳಿಬಂದಿದೆ. ಮುಂಚೂಣಿಯಲ್ಲಿ ಕೇಳಿಬರುತ್ತಿರುವ ಹೆಸರು ವಿನೋದ್ ತಾಬ್ಡೆ. ಪ್ರಸ್ತುತ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಆಗಿರುವ ಅವರು ಮಹಾರಾಷ್ಟ್ರದ ಮಾಜಿ ಸಚಿವರು.
ಮತ್ತೊಂದು ಪ್ರಭಾವಿ ಹೆಸರು ಕೆ. ಲಕ್ಷ್ಮಣ್, ಬಿಜೆಪಿ ಒಬಿಸಿ ಮೋರ್ಚಾದ ಮುಖ್ಯಸ್ಥರಾದ ಅವರು ತೆಲಂಗಾಣದಲ್ಲಿ ಪಕ್ಷದ ಅಧ್ಯಕ್ಷರಾಗಿದ್ದರು. ಪ್ರಸಕ್ತ ಪಶ್ಚಿಮ ಬಂಗಾಲ, ತೆಲಂಗಾಣ, ಒಡಿಶಾ ರಾಜ್ಯಗಳ ಬಿಜೆಪಿ ಉಸ್ತುವಾರಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿರುವ ಸುನಿಲ್ ಬನ್ಸಾಲ್ ಹೆಸರೂ ಕೇಳಿಬರುತ್ತಿದೆ. ರಾಜ್ಯಸಭೆಯಲ್ಲಿ ರಾಜಸ್ಥಾನವನ್ನು ಪ್ರತಿನಿಧಿಸುತ್ತಿರುವ ಓಂ ಮಾಥುರ್‌ ಹೆಸರೂ ಕೂಡ ಕೇಳಿಬರುತ್ತಿದೆ.ಈ ಮಧ್ಯೆ ಬಿಜೆಪಿ ಪಕ್ಷದ ಅಧ್ಯಕ್ಷರ ಸ್ಥಾನಕ್ಕೆ ಮೊದಲ ಬಾರಿಗೆ ಮಹಿಳೆಯನ್ನು ಆಯ್ಕೆ ಮಾಡುವ ಚಿಂತನೆಯನ್ನೂ ಹೊಂದಿದೆ ಎನ್ನಲಾಗಿದೆ.

ಯಾರು ಸ್ಪರ್ಧೆಯಲ್ಲಿ ?

-ವಿನೋದ್‌ ತಾಬ್ಡೆ, ಕೆ. ಲಕ್ಷ್ಮಣ್‌, ಬನ್ಸಾಲ್‌, ಮಾಥುರ್‌
-ಮೊದಲ ಬಾರಿಗೆ ಮಹಿಳೆಯ ಆಯ್ಕೆಗೂ ಚಿಂತನೆ

Categories
ಕೃಷಿ ರಾಷ್ಟ್ರೀಯ ವಾರ್ತೆ

ಮೊದಲ ದಿನವೇ ಮೋದಿ ಬಂಪರ್ ಕೊಡುಗೆ

ಮೊದಲ ದಿನವೇ ಮೋದಿ ಬಂಪರ್ ಕೊಡುಗೆ

– ಗ್ರಾಮೀಣ ಭಾಗಗಳಿಗೆ ನೆರವಾಗುವ ಬೃಹತ್ ಯೋಜನೆ ಪ್ರಕಟಿಸಿದ ಪ್ರಧಾನಿ
– ರೈತರಿಗೆ 20000 ಕೋಟಿ ಬಿಡುಗಡೆ, ಬಡವರ 3 ಕೋಟಿ ಮನೆಗಳಿಗೆ ನೆರವು

NAMMUR EXPRESS NEWS
ನವದೆಹಲಿ : ಮೂರನೇ ಅವಧಿಯಲ್ಲಿ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ನರೇಂದ್ರ ಮೋದಿ ಅವರು ದೇಶದ ರೈತಾಪಿ ವರ್ಗ, ಬಡವರು ಮತ್ತು ಮಧ್ಯಮ ವರ್ಗದ ಜನತೆಗೆ ಭರ್ಜರಿ ಕೊಡುಗೆಗಳನ್ನು ಪ್ರಕಟಿಸಿದ್ದಾರೆ. ಪ್ರಧಾನಿ ಮೋದಿ ತಮ್ಮ ಮೊದಲ ಕೊಡುಗೆಯಾಗಿ 9 ಕೋಟಿ ರೈತರಿಗೆ 20000 ಕೋಟಿ ರು. ಮೊತ್ತದ ಪಿಎಂ ಕಿಸಾನ್ ನಿಧಿ ಬಿಡುಗಡೆಗೆ ಸೂಚಿಸಿದ್ದರೆ, ಮತ್ತೊಂದೆಡೆ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಯೋಜನೆಯಡಿ 3 ಕೋಟಿ ಮನೆ ನಿರ್ಮಾಣಕ್ಕೆ ಹಣಕಾಸಿನ ನೆರವು ಪ್ರಕಟಿಸಿದ್ದಾರೆ.

– ಕಿಸಾನ್‌ ನಿಧಿ

ಭಾನುವಾರವಷ್ಟೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ನರೇಂದ್ರ ಮೋದಿ ಸೋಮವಾರ ತಮ್ಮ ಮೊದಲ ಕಡತಕ್ಕೆ ಸಹಿ ಹಾಕಿದ್ದು, ಸುಮಾರು 9.3 ಕೋಟಿ ರೈತರಿಗೆ ಅನುಕೂಲವಾಗಲಿರುವ 20,000 ಕೋಟಿ ರು. ಮೊತ್ತದ ‘ಪಿಎಂ ಕಿಸಾನ್ ನಿಧಿ’ ನಿಧಿಯ 17 ನೇ ಕಂತಿನ ಬಿಡುಗಡೆಗೆ ಅಧಿಕಾರಿಗಳಿಗೆ ಅಧಿಕಾರ ನೀಡಿದ್ದಾರೆ. ಹಣ ಬಿಡುಗಡೆಗೆ ಸಹಿ ಹಾಕಿದ ನಂತರ ಹೇಳಿಕೆ ನೀಡಿರುವ ಮೋದಿ, ‘ನಮ್ಮದು ‘ಕಿಸಾನ್ ಕಲ್ಯಾಣ’ಕ್ಕೆ (ರೈತರ ಕಲ್ಯಾಣ) ಸಂಪೂರ್ಣ ಬದ್ಧವಾಗಿರುವ ಸರ್ಕಾರ. ಆದ್ದರಿಂದ, ಅಧಿಕಾರ ವಹಿಸಿಕೊಂಡ ಮೇಲೆ ಸಹಿ ಮಾಡಿದ ಮೊದಲ ಕಡತವು ಇದಕ್ಕೆ ಸಂಬಂಧಿಸಿದೆ ಎಂಬುದು ಸೂಕ್ತವಾಗಿದೆ’ ಎಂದು ಹರ್ಷಿಸಿದ್ದಾರೆ. ‘ಮುಂದಿನ ದಿನಗಳಲ್ಲಿ ನಾವು ರೈತರು ಮತ್ತು ಕೃಷಿ ಕ್ಷೇತ್ರಕ್ಕಾಗಿ ಇನ್ನಷ್ಟು ಕೆಲಸ ಮಾಡಬೇಕೆಂದು ಬಯಸುತ್ತೇವೆ. ಈ ನಿರ್ಧಾರವು, ಇತ್ತೀಚಿನ ಚುನಾವಣೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ನಾವು ಕೊಂಚ ಹಿನ್ನಡೆ ಕಂಡರೂ ಗೆಲುವಿನ ನಂತರ ರೈತರ ಕಲ್ಯಾಣಕ್ಕೆ ಎನ್‌ಡಿಎ ಹೊಂದಿರುವ ಬದ್ಧತೆ ಸೂಚಿಸುತ್ತದೆ’ ಎಂದಿದ್ದಾರೆ. ಇದು ರೈತರಿಗೆ ವರ್ಷಕ್ಕೆ ತಲಾ 6 ಸಾವಿರ ರು. ನೀಡುವ (ಪ್ರತಿ 4 ತಿಂಗಳಿಗೆ 2 ಸಾವಿರ ರು.) ಯೋಜನೆ ಆಗಿದ್ದು, ಮೋದಿ-2 ಸರ್ಕಾರದಲ್ಲಿ ಜಾರಿಗೆ ಬಂದಿತ್ತು.

– 3 ಕೋಟಿ ಮನೆ:

ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಸರ್ಕಾರದ ಪಾಲಿನ ನೆರವು ನೀಡಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ. ‘ಇತ್ತೀಚಿನ ದಿನಗಳಲ್ಲಿ ಮನೆ ನಿರ್ಮಿಸುವ ಅರ್ಹ ಕುಟುಂಬಗಳ ಸಂಖ್ಯೆ ಹೆಚ್ಚಿದೆ. ಹೀಗಾಗಿ ಕುಟುಂಬಗಳು ಮನೆ ನಿರ್ಮಾಣದ ಖರ್ಚು ವೆಚ್ಚವನ್ನು ಸರಿದೂಗಿಸಲು ಇನ್ನೂ ಹೆಚ್ಚುವರಿಯಾಗಿ 3 ಕೋಟಿ ಗ್ರಾಮೀಣ ಹಾಗೂ ನಗರ ಕುಟುಂಬಗಳ ಮನೆಗೆ ನೆರವು ನೀಡಲು ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿತು’ ಎಂದು ಅಧಿಕಾರಿಗಳು ಹೇಳಿದ್ದಾರೆ. ಪಿಎಂಎವೈ ಅನ್ನು 2015-16ರಿಂದ ಜಾರಿಗೊಳಿಸಲಾಗಿದ್ದು, ಅರ್ಹ ಗ್ರಾಮೀಣ ಮತ್ತು ನಗರ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳೊಂದಿಗೆ ಮನೆಗಳನ್ನು ನಿರ್ಮಿಸಲು ಸಹಾಯ ಮಾಡಲು ಸಹಾಯ ಮಾಡುತ್ತದೆ. ಪಿಎಂಎವೈ ಅಡಿಯಲ್ಲಿ, ಕಳೆದ 10 ವರ್ಷಗಳಲ್ಲಿ ವಸತಿ ಯೋಜನೆಗಳ ಅಡಿಯಲ್ಲಿ ಅರ್ಹ ಬಡ ಕುಟುಂಬಗಳಿಗೆ ಒಟ್ಟು 4.21 ಕೋಟಿ ಮನೆಗಳನ್ನು ಪೂರ್ಣಗೊಳಿಸಲಾಗಿದೆ. ಈ ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಎಲ್ಲಾ ಮನೆಗಳಿಗೆ ಮೂಲಭೂತ ಅವಶ್ಯಕತೆಗಳಾದ ಶೌಚಾಲಯಗಳು, ಎಲ್‌ಪಿಜಿ ಸಂಪರ್ಕ, ವಿದ್ಯುತ್ ಸಂಪರ್ಕ, ನಲ್ಲಿ ಸಂಪರ್ಕವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಮೂಲಕ ಒದಗಿಸಲಾಗುತ್ತದೆ.

Categories
ರಾಜಕೀಯ ರಾಜ್ಯ ರಾಷ್ಟ್ರೀಯ ವಾರ್ತೆ

ಮೋದಿ ಸರ್ಕಾರದಲ್ಲಿ ಕರ್ನಾಟಕಕ್ಕೆ ಬಂಪ‌ರ್.!

ಮೋದಿ ಸರ್ಕಾರದಲ್ಲಿ ಕರ್ನಾಟಕಕ್ಕೆ ಬಂಪ‌ರ್.!
– ರಾಜ್ಯ ಬಿಜೆಪಿ ನಾಯಕರ ಲೆಕ್ಕಾಚಾರ ಉಲ್ಟಾ ಪಲ್ಟಾ
– ರಾಜ್ಯಕ್ಕೆ ಹೊಸ ಹೊಸ ಯೋಜನೆಗಳ ನಿರೀಕ್ಷೆ
– ಜಾತಿ, ರಾಜಕೀಯ ಲೆಕ್ಕಾಚಾರ ಏನು…?!

NAMMUR EXPRESS NEWS
ಬೆಂಗಳೂರು: ನರೇಂದ್ರ ಮೋದಿ ನೇತೃತ್ವದಲ್ಲಿ ಮೂರನೇ ಬಾರಿಗೆ ಎನ್‌ಡಿಎ ಅಧಿಕಾರಕ್ಕೆ ಬಂದಿದೆ.
ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ಮೋದಿ ಹಾಗೂ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕರ್ನಾಟಕದಿಂದ ಐವರಿಗೆ ಅಧಿಕಾರ ದೊರಕಿದೆ. ಈ ಹಿಂದಿನ ಸರ್ಕಾರದಲ್ಲಿ ಕರ್ನಾಟಕದಿಂದ ಮಂತ್ರಿಗಳಾಗಿ ನಿರ್ಮಲಾ ಸೀತಾರಾಮನ್‌, ಪ್ರಲ್ಜಾದ ಜೋಶಿ, ಶೋಭಾ ಕರಂದ್ಲಾಜೆ ಮತ್ತೊಂದು ಬಾರಿ ಅವಕಾಶ ಪಡೆದುಕೊಂಡಿದ್ಧಾರೆ. ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಮಿತ್ರ ಪಕ್ಷ ಜೆಡಿಎಸ್‌ ಕೋಟಾದಲ್ಲಿ ಸಚಿವರಾದರೆ, ಮಾಜಿ ಸಚಿವ ಹಾಗೂ ತುಮಕೂರು ಕ್ಷೇತ್ರದಿಂದ ಸಂಸದರಾಗಿರುವ ವಿ.ಸೋಮಣ್ಣ ಅವರು ಕೇಂದ್ರದಲ್ಲಿ ಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದಾರೆ. ಆದರೆ ಇನ್ನು ಖಾತೆ ಹಂಚಿಕೆ ಆಗಿಲ್ಲ.
ಶೋಭಾ ಕರಂದ್ಲಾಜೆ ಹಾಗೂ ಸೋಮಣ್ಣ ಅವರು ರಾಜ್ಯ ಸಚಿವರಾದರೆ ಇನ್ನು ಮೂವರು ಸಂಪುಟ ದರ್ಜೆ ಸಚಿವರು. ಇನ್ನು ಶೋಭಾ, ಸೋಮಣ್ಣ ಅವರಿಗೆ ಮಣೆ ಹಾಕಿರುವುದು ರಾಜ್ಯ ಬಿಜೆಪಿ ನಾಯಕರ ಅಚ್ಚರಿಗೆ ಕಾರಣವಾಗಿದ್ದು, ಬಿಜೆಪಿ ನಾಯಕರ ಲೆಕ್ಕಾಚಾರ ತಪ್ಪಿದೆ.
ಒಕ್ಕಲಿಗ ಸಮುದಾಯದಲ್ಲಿ ಶೋಭಾ ಕರಂದ್ಲಾಜೆ, ಬ್ರಾಹ್ಮಣ ಸಮುದಾಯದಲ್ಲಿ ಪ್ರಹ್ಲಾದ್ ಜೋಶಿ, ಲಿಂಗಾಯತ ಸಮುದಾಯದಲ್ಲಿ ವಿ. ಸೋಮಣ್ಣ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಉಳಿದಂತೆ ಕರ್ನಾಟಕದ ಪ್ರಾದೇಶಿಕ ಪಕ್ಷವಾಗಿ ಎನ್‌ಡಿಎ ಮೈತ್ರಿಕೂಟ ಸೇರ್ಪಡೆಯಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಚಿವ ಸ್ಥಾನ (ಒಕ್ಕಲಿಗ ಸಮುದಾಯ) ನೀಡಲಾಗಿದೆ. ಉಳಿದಂತೆ ಕರ್ನಾಟಕದಿಂದ ರಾಜ್ಯಸಭಾ ಸದಸ್ಯೆಯಾಗಿ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನ ನೀಡಲಾಗುತ್ತದೆ. ರಾಜ್ಯಕ್ಕೆ ಹೆಚ್ಚಿನ ಯೋಜನೆ ಬರುವ ನಿರೀಕ್ಷೆ ಇದೆ.
ನಿರ್ಮಲಾ ಸೀತಾರಾಮನ್ ಹಾಗೂ ಶೋಭಾ ಕರಂದ್ಲಾಜೆಗೆ ಮತ್ತೆ ಸಚಿವ ಸ್ಥಾನ ಸಿಗಬಹುದು ಎಂಬ ಊಹಿಸಿರಲಿಲ್ಲ. ಆದ್ರೆ, ಕೊನೆ ಕ್ಷಣದಲ್ಲಿ ಶೋಭಾ, ಕುಮಾರಣ್ಣ, ಸೋಮಣ್ಣ, ಜೋಶಿ, ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕದಿಂದ ಸಚಿವ ಸ್ಥಾನ ನೀಡಲಾಗುತ್ತಿದೆ. ಈ ಪೈಕಿ ಸೋಮಣ್ಣ, ಶೋಭಾ ಅವರಿಗೆ ಮಣೆ ಹಾಕಿರುವುದರಿಂದ ರಾಜ್ಯ ನಾಯಕರು ಶಾಕ್ ಆಗಿದ್ದಾರೆ.
ಲಿಂಗಾಯತ ಸಮುದಾಯದ ರೇಸ್ ನಲ್ಲಿ ಹಿರಿಯ ನಾಯಕರಾದ ಜಗದೀಶ್‌ ಶೆಟ್ಟರ್‌ ಹಾಗೂ ಬಸವರಾಜ ಬೊಮ್ಮಾಯಿ, ಪಿಸಿ ಗದ್ದಿ ಗೌಡರ್ ಮುಂಚೂಣಿಯಲ್ಲಿ ಇದ್ದರು. ಮೂವರು ಪ್ರಮುಖ ಸಂಸದರು ಆಕಾಂಕ್ಷಿಗಳಿದರೂ ಸಹ ವಿ.ಸೋಮಣ್ಣ ಅವರಿಗೆ ಹೈಕಮಾಂಡ್‌ ಮಣೆ ಹಾಕಿರುವುದು ಅಚ್ಚರಿಗೆ ಕಾರಣವಾಗಿದೆ.
ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಬಿಎಸ್​ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಅವರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆಗಳಿದ್ದವು. ಅಲ್ಲದೇ ತಮ್ಮ ಪುತ್ರನಿಗೆ ಈ ಬಾರಿ ಕೇಂದ್ರ ಸಚಿವ ಸ್ಥಾನ ನೀಡಬೇಕೆಂದು ಖುದ್ದು ಯಡಿಯೂರಪ್ಪ ಅವರು ಲಾಬಿ ನಡೆಸಿದ್ದರು. ಆದ್ರೆ, ಹೈಕಮಾಂಡ್​ ಯಡಿಯೂರಪ್ಪ ಬೇಡಿಕೆಗೆ ಮನ್ನಣೆ ನೀಡಿಲ್ಲ.
ಯಾವೊಬ್ಬ ದಲಿತ ಸಂಸದಗೂ ಸಚಿವ ಸ್ಥಾನ ಸಿಕ್ಕಿಲ್ಲ. ಒಬಿಸಿ ಕೋಟಾದಲ್ಲಿ ಸಚಿವ ಸ್ಥಾನದ ಆಸೆಯಲ್ಲಿ ಇದ್ದ ಕೋಟಾ ಶ್ರೀನಿವಾಸ ಪ್ರಸಾದ್ ಮತ್ತು ಪಿ.ಸಿ. ಮೋಹನ್ ಅವರಿಗೂ ಅದೃಷ್ಟ ಒಲಿದಿಲ್ಲ.

Categories
ಚುನಾವಣಾ ಸುದ್ದಿ ರಾಜಕೀಯ ರಾಷ್ಟ್ರೀಯ ವಾರ್ತೆ

ಮೋದಿ ಪದಗ್ರಹಣಕ್ಕೆ ದೇಶದ ಕಾತುರ!

ಮೋದಿ ಪದಗ್ರಹಣಕ್ಕೆ ದೇಶದ ಕಾತುರ!

– ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮ: ಭಾರೀ ಪೊಲೀಸ್‌ ಬಂದೋಬಸ್ತ್

NAMMUR EXPRESS NEWS
ನವದೆಹಲಿ: ಜೂನ್ 9 ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಲುವಾಗಿ ಭಾರೀ ಭದ್ರತೆ ಕಲ್ಪಿಸಲು ಸಿದ್ಧತೆ ನಡೆದಿದೆ.

ರಾಷ್ಟ್ರಪತಿ ಭವನದ ಸುತ್ತ ಅರೆಸೇನಾ ಪಡೆ ಸಿಬ್ಬಂದಿ, ಎನ್‌ಎಸ್‌ಜಿ ಕಮಾಂಡೋಗಳು, ಡ್ರೋನ್ ಗಳು ಮತ್ತು ಸೈಪರ್‌ಗಳ ಬಹು ಹಂತದ ಭದ್ರತೆಯನ್ನು ಕಲ್ಪಿಸಲಾಗಿದೆ ಎಂದು ದೆಹಲಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.
ಸಾರ್ಕ್ (ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘ) ರಾಷ್ಟ್ರಗಳ ಗಣ್ಯರನ್ನು ಸಮಾರಂಭಕ್ಕೆ ಆಹ್ವಾನಿಸಿರುವುದರಿಂದ ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.

ಪ್ರಮಾಣ ವಚನದಲ್ಲಿ ಪಾಲ್ಗೊಳ್ಳುವ ಗಣ್ಯರಿಗೆ ಅವರ ಹೋಟೆಲ್‌ಗಳಿಂದ ರಾಷ್ಟ್ರಪತಿ ಭವನಕ್ಕೆ ತೆರಳಲು ಮತ್ತು ಹಿಂತಿರುಗಲು ನಿಗದಿತ ಮಾರ್ಗವನ್ನು ಸೂಚಿಸಲಾಗುತ್ತದೆ.

ಬಾಂಗ್ಲಾದೇಶ, ಶ್ರೀಲಂಕಾ, ಭೂತಾನ್, ನೇಪಾಳ, ಮಾರಿಷಸ್ ಮತ್ತು ಸೆಶೆಲ್ಸ್‌ನ ಉನ್ನತ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ನಗರದ ಲೀಲಾ, ತಾಜ್, ಐಟಿಸಿ ಮೌರ್ಯ, ಕ್ಲಾರಿಡ್ಜಸ್ ಮತ್ತು ಒಬೆರಾಯ್ ಹೋಟೆಲ್‌ಗಳಲ್ಲಿ ಈಗಾಗಲೇ ಭದ್ರತೆ ಕೈಗೊಳ್ಳಲಾಗಿದೆ. ರಾಷ್ಟ್ರಪತಿ ಭವನದ ಆವರಣದ ಒಳಗೆ ಮತ್ತು ಹೊರಗೆ ಮೂರು ಹಂತದ ಭದ್ರತೆಯನ್ನು ಹೊಂದಿರುತ್ತದೆ. ದೆಹಲಿ ಪೊಲೀಸ್‌ ಸಿಬ್ಬಂದಿಯನ್ನು ಹೊರ ಆವರಣದಲ್ಲಿ ನಿಯೋಜಿಸಲಾಗುವುದು ಮತ್ತು ಅರೆಸೇನಾ ಸಿಬ್ಬಂದಿಯನ್ನು ಭವನದ ಆಂತರಿಕ ಭದ್ರತೆಗೆ ನಿಯೋಜಿಸಲಾಗಿದೆ. ದೆಹಲಿ ಸಶಸ್ತ್ರ ಪೊಲೀಸ್‌ (ಡಿಎಪಿ) ಜವಾನರು ಸೇರಿದಂತೆ ಸುಮಾರು 2500 ಪೊಲೀಸ್‌ ಸಿಬ್ಬಂದಿಯನ್ನು ಸ್ಥಳದ ಸುತ್ತಲೂ ನಿಯೋಜಿಸಲು ಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Categories
ಮಂಗಳೂರು ರಾಜ್ಯ ರಾಷ್ಟ್ರೀಯ ವಾರ್ತೆ

ಟಾಪ್ 3 ನ್ಯೂಸ್

ಟಾಪ್ 3 ನ್ಯೂಸ್

– ರಾಹುಲ್ ಗಾಂಧಿಗೆ 75 ಲಕ್ಷ ಶೂರಿಟಿ ಕೊಟ್ಟ ಡಿಕೆ ಸುರೇಶ್!
– ಚಂದನ್ ಶೆಟ್ಟಿ – ನಿವೇದಿತಾ ಡೈವೋರ್ಸ್
– ಲೋಕ ಸಭೆಗೆ ಅಟ್ಯಾಕ್ ಭೀತಿ: ಅರೆಸ್ಟ್!

NAMMUR EXPRESS NEWS
ಬೆಂಗಳೂರು: ಭ್ರಷ್ಟಾಚಾರ ಕುರಿತು ದಿನಪತ್ರಿಕೆಗಳಿಗೆ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬೆಂಗಳೂರಿನ 42ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಷರತ್ತು ಬದ್ಧ ಜಾಮೀನು ನೀಡಿದೆ. ಜೊತೆಗೆ ಮುಂದಿನ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿದೆ. ಮಾಜಿ ಸಂಸದ ಡಿ.ಕೆ.ಸುರೇಶ್ ಅವರು 75 ಲಕ್ಷ ಮೌಲ್ಯದ ಆಸ್ತಿದ ದಾಖಲೆಯನ್ನ ಶ್ಯೂರಿಟಿ ಆಗಿ ನೀಡಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಕೋರ್ಟ್‌ಗೆ ಖುದ್ದು ಹಾಜರಾಗಲು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದರು. ಕೋರ್ಟ್ ವಿಚಾರಣೆಗೆ ಹಾಜರಾಗಲು ರಾಹುಲ್ ಸಹಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಸಮನ್ಸ್‌ ಜಾರಿ ಮಾಡಿತ್ತು. ಜೂ.1ರಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಖುದ್ದು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದರು. ರಾಹುಲ್‌ಗಾಂಧಿ 3ನೇ ಸಮನ್ಸ್‌ಗೂ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಾಧೀಶರು ವಿಚಾರಣೆಯನ್ನು ಜೂ.7ಕ್ಕೆ ಮುಂದೂಡಿದ್ದರು. ಇಂದು ವಿಚಾರಣೆಗೆ ಹಾಜರಾದ ರಾಹುಲ್ ಗೆ ಕೋರ್ಟ್ ಕಂಡೀಷನಲ್ ಬೇಲ್ ನೀಡಿದೆ. ಬೇಲ್‌ ಪಡೆದ ರಾಹುಲ್ ಮತ್ತೆ ದೆಹಲಿಗೆ ವಾಪಸ್ಸಾಗಿದ್ದಾರೆ.

ನಕಲಿ ಆಧಾ‌ರ್ ಕಾರ್ಡ್ ಬಳಸಿ ಸಂಸತ್‌ ಎಂಟ್ರಿಗೆ ಯತ್ನ..!

ಸಂಸತ್ ನುಗ್ಗಿ ಯುವಕರು ಸ್ಮೋಕ್ ಬಾಂಬ್ ಸಿಡಿಸಿ ದಾಂದಲೆ ನಡೆಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅಂತಹದ್ದೇ ಒಂದು ಘಟನೆ ಸ್ವಲ್ಪದರಲ್ಲೇ ತಪ್ಪಿದೆ. ನಕಲಿ ಆಧಾರ್ ಕಾರ್ಡ್ ಬಳಸಿ ಸಂಸತ್‌ ಭವನಕ್ಕೆ ಎಂಟ್ರಿ ಕೊಡಲು ಯತ್ನಿಸಿದ್ದ ಮೂವರನ್ನು ಭದ್ರತಾ ಪಡೆ ಅರೆಸ್ಟ್ ಮಾಡಿದೆ. ಇನ್ನು ಬಂಧಿತರನ್ನು ಖಾಸಿಂ, ಮೋನೀಶ್ ಮತ್ತಿ ಸೋಯೆಬ್ ಎಂದು ಗುರುತಿಸಲಾಗಿದೆ.

ಗುರುವಾರ ಭದ್ರತಾ ಸಿಬ್ಬಂದಿ ನಿತ್ಯ ನಡೆಸುವಂತೆ ತಪಾಸಣೆ ವೇಳೆ ಈ ಮೂರು ಕಾರ್ಮಿಕರು ನಕಲಿ ಆಧಾರ್ ಕಾರ್ಡ್ ಹೊಂದಿರುವುದು ಪತ್ತೆಯಾಗಿದೆ. ಸಂಸತ್ ಭವನದ ಎದುರು ನಿಯೋಜನೆಗೊಂಡಿರುವ CISF ಭದ್ರತಾ ಸಿಬ್ಬಂದಿ ಮೂವರನ್ನು ತಪಾಸಣೆ ನಡೆಸಿದಾಗ ಇವರ ಬಳಿ ನಕಲಿ ಆಧಾರ್ ಕಾರ್ಡ್ ಇರುವುದು ಕಂಡು ಬಂದಿದ್ದು, ತಕ್ಷಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಆರೋಪಿಗಳ ವಿರುದ್ಧ ಫೋರ್ಜರಿ ಮತ್ತು ವಂಚನೆ ಪ್ರಕರಣ ದಾಖಲಿಸಿ ತನಿಖೆಗೊಳಪಡಿಸಲಾಗಿದೆ. ಇದರ ಬೆನ್ನಲ್ಲೇ CISF ಸಿಬ್ಬಂದಿ ಹಾಗೂ ದಿಲ್ಲಿ ಪೊಲೀಸರು ಸಂಸತ್ ಭವನದ ಸಂಪೂರ್ಣ ಭದ್ರತೆಯನ್ನು ಮರುಪರಿಶೀಲಿಸಿದ್ದಾರೆ.

ಇನ್ನು ಈ ಮೂವರು ನೌಕರರು ಡೀ ವೀ ಪ್ರಾಜೆಕ್ಟ್ ಲಿಮಿಟೆಡ್‌ ನಿಯೋಜಿಸಿರುವ ಗುತ್ತಿಗೆ ನೌಕರರಾಗಿದ್ದು, ಇವರು ಸಂಸತ್ ಭವನದ ಒಳಗೆ ಕಟ್ಟಡ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಐಪಿಸಿ ಸೆಕ್ಷನ್‌ಗಳು 465 (ನಕಲಿ), 419 (ವ್ಯಕ್ತಿತ್ವದಿಂದ ವಂಚನೆ), 120B (ಅಪರಾಧದ ಪಿತೂರಿ), 471 (ನಕಲಿ ದಾಖಲೆಯನ್ನು ಅಸಲಿ ಎಂದು ಬಳಸುವುದು), ಮತ್ತು 468 (ವಂಚನೆಯ ಉದ್ದೇಶಕ್ಕಾಗಿ ನಕಲಿ) ಅಡಿಯಲ್ಲಿ ಮೂವರ ಮೇಲೂ ಎಫ್ ಐಆರ್ ದಾಖಲಿಸಲಾಗಿದೆ.

ವಿಚ್ಛೇದನ ಪಡೆದ ಚಂದನ್ ಶೆಟ್ಟಿ, ನಿವೇದಿತಾ ಗೌಡ?

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಕ್ಯೂಟ್ ಜೋಡಿ ಎನಿಸಿಕೊಂಡಿರುವ ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ ಅವರು ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ . ವೃತ್ತಿಜೀವನದ ಒಳಿತಿನ ದೃಷ್ಟಿಯಿಂದ ಅವರು ಡಿವೋರ್ಸ್ ಪಡೆಯಲು ನಿರ್ಧರಿಸಿದ್ದಾರೆ.

ಗಾಯಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಸಂಸಾರದಲ್ಲಿ ಬಿರುಕು ಮೂಡಿದೆ. ಜೂ 7ಕ್ಕೆ ಅವರು ಡೈವೋರ್ಸ್ ಅರ್ಜಿ ಸಲ್ಲಿಸಿದ್ದು, ಅವರು ಡಿವೋರ್ಸ್ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.