Categories
ರಾಜ್ಯ ಹವಾಮಾನ ಸುದ್ದಿ

ಏ.30ರಿಂದ ರಾಜ್ಯದಲ್ಲಿ ಮತ್ತೆ ಮಳೆ ಆರಂಭ

ಏ.30ರಿಂದ ರಾಜ್ಯದಲ್ಲಿ ಮತ್ತೆ ಮಳೆ ಆರಂಭ
– ಶುರುವಾಯ್ತಾ ಪೂರ್ವ ಮುಂಗಾರು?
– ಹವಮಾನ ಇಲಾಖೆ ಮುನ್ಸೂಚನೆ

NAMMUR EXPRESS NEWS
ಕರ್ನಾಟಕದಲ್ಲಿ ಬಿಸಿಲಿನ ಧಗೆ ಏರುತ್ತಿದ್ದು, ಕೆಲವು ದಿನಗಳ ಹಿಂದೆ ರಾಜ್ಯದ ಹಲವೆಡೆ ಮಳೆಯಾಗಿತ್ತು. ಆಮೇಲೆ ವರುಣ ದೇವ ಕಣ್ಮರೆಯಾಗಿದ್ದಾನೆ. ಮಳೆಯಿಲ್ಲದೇ ತಾಪಮಾನ ಹೆಚ್ಚಾಗುತ್ತಿದ್ದು, ಜನರು ಸಂಕಟ ಅನುಭವಿಸುತ್ತಿದ್ದಾರೆ. ಇದರ ನಡುವೆ ಮತ್ತೆ ಏಪ್ರಿಲ್‌ 30ರಿಂದ ರಾಜ್ಯದ ಹಲವೆಡೆ ಮಳೆ ಸುರಿಯುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಏಪ್ರಿಲ್‌ 27, 28 ಮತ್ತು 29ರಂದು ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ. ಏಪ್ರಿಲ್‌ 30 ರಿಂದ ಮೇ 3 ರವರೆಗೆ ರಾಜ್ಯದ ಹಲವೆಡೆ ಮಳೆ ಬರಲಿದೆ ಎಂಬ ಮುನ್ಸೂಚನೆ ಸಿಕ್ಕಿದೆ. ಏಪ್ರಿಲ್‌ 30ರಂದು ಬೀದರ್‌, ಕಲಬುರಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು ಮತ್ತು ಚಿತ್ರದುರ್ಗದ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಮೇ 1ರಂದು ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮೇ 2ರಂದು ಬೀದರ್‌, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ ಮತ್ತಯ ರಾಮನಗರ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗುವ ನಿರೀಕ್ಷೆ ಇದೆ. ಇನ್ನು, ಮೇ 3ರಂದು ಕೊಡಗು, ಮೈಸೂರು, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾಗೂ ಮಂಡ್ಯ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

– ಹಲವು ಜಿಲ್ಲೆಗಳಿಗೆ ಉಷ್ಣ ಅಲೆಯ ಎಚ್ಚರಿಕೆ!

ಮಳೆ ಜೊತೆ ರಾಜ್ಯದಲ್ಲಿ ಉಷ್ಣ ಅಲೆಯ ಎಚ್ಚರಿಕೆಯನ್ನು ಕೂಡ ಹವಾಮಾನ ಇಲಾಖೆ ನೀಡಿದೆ. ಏಪ್ರಿಲ್‌ 30 ರವರೆಗೂ ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೀದರ್‌, ವಿಜಯನಗರ, ಗದಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾವೇರಿ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಹೆಚ್ಚಿನ ಬಿಸಿಲು ಇರುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಅದಲ್ಲದೇ ಮುಂದಿನ ಐದು ದಿನಗಳಲ್ಲಿ ರಾಜ್ಯದ ಗರಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ನಿರೀಕ್ಷೆ ಇದೆ.

Categories
ರಾಜ್ಯ ಹವಾಮಾನ ಸುದ್ದಿ

3 ದಿನ ತೀವ್ರ ಬಿಸಿಗಾಳಿ: ಆಮೇಲೆ ಮಳೆ!

3 ದಿನ ತೀವ್ರ ಬಿಸಿಗಾಳಿ: ಆಮೇಲೆ ಮಳೆ!
– ಹವಾಮಾನ ಇಲಾಖೆ ರೆಡ್ ಅಲರ್ಟ್
– ಕರ್ನಾಟಕದಲ್ಲಿ ಯಾವಾಗ ಹೆಚ್ಚು ಮಳೆ?

NAMMUR EXPRESS NEWS
ನವದೆಹಲಿ: ದೇಶದಲ್ಲಿ ಮುಂದಿನ ಐದು ದಿನಗಳವರೆಗೆ ಪೂರ್ವ ಮತ್ತು ದಕ್ಷಿಣ ಪೆನಿನ್ಸುಲರ್ ಭಾರತದಲ್ಲಿ ದೀರ್ಘಕಾಲದ ಶಾಖದ ಅಲೆಯನ್ನು ನಿರೀಕ್ಷಿಸಲಾಗಿದೆ. ಮುಂದಿನ ಐದು ದಿನಗಳವರೆಗೆ ಒಡಿಶಾದ ಕರಾವಳಿ, ಗಂಗಾ ಪಶ್ಚಿಮ ಬಂಗಾಳ ಮತ್ತು ಉಪ ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಪ್ರತ್ಯೇಕ ಪ್ರದೇಶಗಳು ಮತ್ತು ಕರ್ನಾಟಕದ ಒಳನಾಡಿನಲ್ಲಿ ತೀವ್ರ ಶಾಖದ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಹಾರ, ಜಾರ್ಖಂಡ್, ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ರಾಯಲಸೀಮಾ ಮತ್ತು ಕರ್ನಾಟಕದ ಕರಾವಳಿಯ ಪ್ರತ್ಯೇಕ ಪ್ರದೇಶಗಳು ಈ ಅವಧಿಯಲ್ಲಿ ಬಿಸಿಗಾಳಿ ಪರಿಸ್ಥಿತಿಗಳಿಗೆ ಸಾಕ್ಷಿಯಾಗುವ ನಿರೀಕ್ಷೆಯಿದೆ.

ಮುಂದಿನ 5 ದಿನಗಳಲ್ಲಿ ಬಿಹಾರ, ಜಾರ್ಖಂಡ್, ಕರಾವಳಿ ಆಂಧ್ರಪ್ರದೇಶ ಮತ್ತು ಯಾಣಂ, ತೆಲಂಗಾಣ, ರಾಯಲಸೀಮಾದ ಪ್ರತ್ಯೇಕ ಪ್ರದೇಶಗಳಲ್ಲಿ ಶಾಖ ತರಂಗ ಪರಿಸ್ಥಿತಿಗಳು; 24 ಮತ್ತು 26 ರಂದು ಕರಾವಳಿ ಕರ್ನಾಟಕ, 24 ಮತ್ತು 25 ರಂದು ತಮಿಳುನಾಡು; 25-28 ನೇ ಅವಧಿಯಲ್ಲಿ ಪೂರ್ವ ಉತ್ತರ ಪ್ರದೇಶ ಮತ್ತು 26-28 ನೇ ಅವಧಿಯಲ್ಲಿ ಪಶ್ಚಿಮ ಉತ್ತರ ಪ್ರದೇಶ; ಏಪ್ರಿಲ್ 27 ಮತ್ತು 28 ರಂದು ಕೊಂಕಣವಾಗಲಿದೆ ಎಂದು ಐಎಂಡಿ ಪ್ರಕಟಣೆಯಲ್ಲಿ ತಿಳಿಸಿದೆ. ಐಎಂಡಿ ಗಂಗಾ ಪಶ್ಚಿಮ ಬಂಗಾಳಕ್ಕೆ ರೆಡ್ ಅಲರ್ಟ್ ನೀಡಿದ್ದು, ಎಲ್ಲಾ ವಯಸ್ಸಿನವರಲ್ಲಿ ಶಾಖದ ಕಾಯಿಲೆಗಳು ಮತ್ತು ಶಾಖದ ಆಘಾತದ ಸಾಧ್ಯತೆಯನ್ನು ಸೂಚಿಸುತ್ತದೆ.

ಇದಲ್ಲದೆ, ಒಡಿಶಾ, ಬಿಹಾರ, ಕರಾವಳಿ ಆಂಧ್ರಪ್ರದೇಶ ಮತ್ತು ಯಾಣಂ, ಕರ್ನಾಟಕದ ಒಳನಾಡು ಮತ್ತು ರಾಯಲಸೀಮಾಕ್ಕೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಅಲ್ಲದೆ, ಏಪ್ರಿಲ್ 26 ರಿಂದ ಏಪ್ರಿಲ್ 28 ರವರೆಗೆ ವಾಯುವ್ಯ ಭಾರತದಲ್ಲಿ ಗುಡುಗು ಮತ್ತು ಮಿಂಚು ಸಹಿತ ಹೊಸ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಈಶಾನ್ಯ ಭಾರತವು ಏಪ್ರಿಲ್ 24, 28 ಮತ್ತು 28 ರಂದು ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿಯೊಂದಿಗೆ ಭಾರಿ ಮಳೆಗೆ ಸಾಕ್ಷಿಯಾಗಲಿದೆ ಎಂದು ಐಎಂಡಿ ತಿಳಿಸಿದೆ.

Categories
ಬೆಂಗಳೂರು ರಾಜ್ಯ ಹವಾಮಾನ ಸುದ್ದಿ

ಈ ವಾರ ಪೂರ್ತಿ ಭಾರೀ ಮಳೆ!?

ಈ ವಾರ ಪೂರ್ತಿ ಭಾರೀ ಮಳೆ!?
– ಎಲ್ಲೆಲ್ಲಿ ಮಳೆ?: ಹವಾಮಾನ ಇಲಾಖೆ ಮುನ್ಸೂಚನೆ
– ಮಳೆ ನಡುವೆಯೂ ಹಲವೆಡೆ ತಾಪಮಾನ ಏರಿಕೆ

NAMMUR EXPRESS NEWS
ಬೆಂಗಳೂರು: ಮುಂದಿನ ಒಂದು ವಾರಗಳ ಕಾಲ ಮಳೆ ಅಬ್ಬರವು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಏಪ್ರಿಲ್‌ 22ರಂದು ಒಂದು ಅಥವಾ ಎರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಮುಂದಿನ 5 ದಿನಗಳು ಗರಿಷ್ಟ ಉಷ್ಣಾಂಶದಲ್ಲಿ ಕ್ರಮೇಣ 2-3 ಡಿ.ಸೆ ಏರಿಕೆಯಾಗುವ ಸಾಧ್ಯತೆಯಿದೆ

ಎಲ್ಲೆಲ್ಲಿ ಹೆಚ್ಚು ಮಳೆ?

ಏ.22ರಂದು ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ಬಾಗಲಕೋಟೆ, ಗದಗನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ದಕ್ಷಿಣಒಳನಾಡಿನ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಇನ್ನು ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 36 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

23ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. 24ರಂದು ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. 25ರಿಂದ 27ರವರೆಗೆ ಮಳೆಯು ತಗ್ಗಲಿದ್ದು, ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ.

ತಾಪಮಾನದ ಮುನ್ಸೂಚನೆ

ಏಪ್ರಿಲ್ 22 ರಿಂದ 25ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯಾದ್ಯಂತ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ

Categories
ಬೆಂಗಳೂರು ರಾಜ್ಯ ಹವಾಮಾನ ಸುದ್ದಿ

ಮಳೆ ಅಬ್ಬರ ಶುರು: ಇಂದು ಕೂಡ ಭಾರೀ ಮಳೆ!

ಮಳೆ ಅಬ್ಬರ ಶುರು: ಇಂದು ಕೂಡ ಭಾರೀ ಮಳೆ!
– ಮಲೆನಾಡಲ್ಲಿ ಭಾರೀ ಮಳೆ, ಗಾಳಿಗೆ ಅವಾಂತರ
– ಯಾವ ಯಾವ ಜಿಲ್ಲೆಯಲ್ಲಿ ಮಳೆ ಆಗಮನ?

NAMMUR EXPRESS NEWS
ಬೆಂಗಳೂರು: ರಾಜ್ಯದ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಬೀದರ್, ಹುಬ್ಬಳ್ಳಿ ಧಾರವಾಡ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಏ.19ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾ ಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ವಿಜಯ ನಗರ, ತುಮಕೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Categories
ರಾಜ್ಯ ಹವಾಮಾನ ಸುದ್ದಿ

ಈ ವರ್ಷ ಹೆಚ್ಚು ಮಳೆ ಆಗುತ್ತೆ!

ಈ ವರ್ಷ ಹೆಚ್ಚು ಮಳೆ ಆಗುತ್ತೆ!
– ಹವಾಮಾನ ಇಲಾಖೆ ಹೇಳಿದ್ದೇನು?
– ಬಿಸಿಲಿನಲ್ಲಿ ಬೆಂದವರಿಗೆ ಸಿಹಿ ಸುದ್ದಿ
– ಎಲ್ಲಾ ಜಿಲ್ಲೆಯಲ್ಲೂ ಈ ಸಲ ಉತ್ತಮ ಮಳೆ

NAMMUR EXPRESS NEWS
ಬೆಂಗಳೂರು: ಮಳೆ ಕಾಣದೆ ಕಂಗೆಟ್ಟಿದ್ದ ಕರುನಾಡಿಗೆ ಮುಂಗಾರಿನ ಮುನ್ಸೂಚನೆಯ ಗುಡ್‌ನ್ಯೂಸ್ ಸಿಕ್ಕಿದೆ. ಈ ಬಾರಿ ವಾಡಿಕೆಗಿಂತ ತುಸು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮೂಲಕ ಆತಂಕದಲ್ಲಿರುವ ಜನ ನಿಟ್ಟುಸಿರು ಬಿಡಬಹುದು. ಕರ್ನಾಟಕ ಸೇರಿದಂತೆ ನೈರುತ್ಯ ಭಾರತದಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯಕ್ಕೆ ಮುಂಗಾರು ಜೂನ್-ಸೆಪ್ಟೆಂಬರ್ ಅವಧಿಯಲ್ಲಿ ಸರಾಸರಿ ವಾಡಿಕೆ ಮಳೆ ಪ್ರಮಾಣ 85.2 ಸೆಂಟಿ ಮೀಟರ್‌ನಷ್ಟಿದೆ. ದೀರ್ಘಕಾಲಿನ ಮುಂಗಾರು ಮಳೆ ಮುನ್ಸೂಚನೆ 2024ರ ಅನ್ವಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ.

ರಾಜ್ಯದ ದೀರ್ಘಾವಧಿ ಸರಾಸರಿ ವಾಡಿಕೆ ಮಳೆ ಜೂನ್‌ನಲ್ಲಿ 19.9 ಸೆಂ.ಮೀ, ಜುಲೈನಲ್ಲಿ 27.1 ಸೆಂ.ಮೀ. ಆಗಸ್ಟ್ನಲ್ಲಿ 22 ಸೆಂ.ಮೀ ಹಾಗೂ ಸೆಪ್ಟೆಂಬರ್‌ನಲ್ಲಿ 16.1 ಸೆಂ.ಮೀನಷ್ಟಿದ್ದು, ಒಟ್ಟಾರೆ ರಾಜ್ಯಕ್ಕೆ ಮುಂಗಾರು ಹಂಗಾಮಿನಲ್ಲಿ 85.2 ಸೆಂ.ಮೀ ನಷ್ಟಿದೆ. ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ ವಾರ್ಷಿಕ ಮಳೆಯ 74% ಕೊಡುಗೆ ನೀಡುತ್ತದೆ. ಈ ಬಾರಿ ದೇಶದಲ್ಲಿ ಸರಾಸರಿ 87 ಸೆಂಟಿ ಮೀಟರ್‌ನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Categories
ರಾಜ್ಯ ಹವಾಮಾನ ಸುದ್ದಿ

ಇನ್ನು 3 ದಿನ ಭಾರೀ ಮಳೆ

ಇನ್ನು 3 ದಿನ ಭಾರೀ ಮಳೆ
– ಹವಾಮಾನ ಇಲಾಖೆ ಮುನ್ಸೂಚನೆ
– 2 ದಿನ ಮಳೆ: ಭೂಮಿ ತಣ್ಣಗಾಯ್ತು..!

NAMMUR EXPRESS NEWS
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದ್ದು, ಇತರೆಡೆ ಇನ್ನೂ ಮೂರು ದಿನ ರಾಜ್ಯದಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರದಿಂದ ಮೂರು ದಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏ.17 ರಿಂದ ಮೂರು ದಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಆ ಸಂದರ್ಭದಲ್ಲಿ ರಾಜ್ಯದಲ್ಲಿ ಉಷ್ಣಗಾಳಿಯೂ ತಗ್ಗಲಿದ್ದು, ಮಳೆಗಾಲದ ಅನುಭವ ಕೆಲವೆಡೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ 2 ದಿನ ಮಳೆ ಸುರಿದಿದ್ದರಿಂದ ಎಲ್ಲೆಡೆ ಭೂಮಿ ತಂಪಾಗಿದೆ.

ಎಲ್ಲೆಲ್ಲಿ ಎಷ್ಟು ಮಳೆ?

ಭಾನುವಾರ ಬೆಳಗ್ಗೆ 8:30 ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆ ಆಗುಂಬೆಯಲ್ಲಿ 8 ಸೆಂ.ಮೀ., ಕೊಪ್ಪಳ ಜಿಲ್ಲೆ ತಾವರೆಗೇರಾದಲ್ಲಿ 7 ಸೆಂ.ಮೀ., ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಮತ್ತು ಎನ್.ಆ‌ರ್. ಪುರದಲ್ಲಿ 4 ಸೆಂ.ಮೀ., ಧಾರವಾಡ, ಕೊಪ್ಪಳ ಜಿಲ್ಲೆಯ ಬೇವೂರು, ರಾಯಚೂರು ಜಿಲ್ಲೆಯ ಮುದಗಲ್, ವಿಜಯಪುರ ಜಿಲ್ಲೆಯ ಇಂಡಿ, ಶಿವಮೊಗ್ಗ, ಲಿಂಗನಮಕ್ಕಿ, ಆನವಟ್ಟಿಯಲ್ಲಿ ತಲಾ 3 ಸೆಂ.ಮೀ., ಬೀದ‌ರ್ ಜಿಲ್ಲೆಯ ಔರಾದ್, ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ, ಗದಗ ಜಿಲ್ಲೆಯ ರೋಣ, ಕಲಬುರಗಿ ಜಿಲ್ಲೆಯ ಯಡ್ರಾಮಿ, ಧಾರವಾಡ ಜಿಲ್ಲೆಯ ಕಲಘಟಗಿ, ಶಿವಮೊಗ್ಗ ಜಿಲ್ಲೆಯ ತ್ಯಾಗರ್ತಿ, ಚಿಕ್ಕಮಗಳೂರು ಜಿಲ್ಲೆಯ ಕಳಸ, ಬಳ್ಳಾರಿ ಜಿಲ್ಲೆಯ ಕುಡತಿನಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ತರೀಕೆರೆ, ಶೃಂಗೇರಿಯಲ್ಲಿ ತಲಾ 2 ಸೆಂ.ಮೀ. ಮಳೆಯಾಗಿದೆ.

– ಮಲೆನಾಡು ಭಾಗದಲ್ಲಿ ಮಳೆ

ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಐದು ತಿಂಗಳ ಬಳಿಕ ಜಿಲ್ಲೆಯ ವಿವಿಧೆಡೆ ಶನಿವಾರ ಸಂಜೆ ಬಿರುಗಾಳಿ, ಗುಡುಗು ಸಿಡಿಲು ಸಹಿತ ಸಾಧಾರಣದಿಂದ ಧಾರಾಕಾರವಾಗಿ ಮಳೆ ಸುರಿದಿದೆ. ತೀರ್ಥಹಳ್ಳಿ, ಕೊಪ್ಪ, ಶೃಂಗೇರಿ, ಸಾಗರ, ಜೋಗ್‌ಫಾಲ್ಸ್, ಆನಂದಪುರ, ರಿಪ್ಪನ್‌ಪೇಟೆ, ಶಿಕಾರಿಪುರ, ಶಿರಾಳಕೊಪ್ಪ, ಆನವಟ್ಟಿ ಸುತ್ತಮುತ್ತ ಧಾರಾಕಾರ ಮಳೆಯಾದರೆ, ಶಿವಮೊಗ್ಗ, ಹೊಸನಗರ, ಸೊರಬ ತಾಲೂಕಿನ ವಿವಿಧೆಡೆ ಸಾಧಾರಣ ಮಳೆಯಾಗಿದೆ. ವರ್ಷದ ಮೊದಲ ಮಳೆಯು ಭೂಮಿ ಮತ್ತು ಜನತೆಗೆ ತಂಪೆರೆದಿದೆ. ಮೂರು ತಿಂಗಳ ಸುಡು ಬಿಸಿಲಿನಿಂದ ಜನರು ಮಳೆಯ ನಿರೀಕ್ಷೆಯಲ್ಲಿದ್ದರು. ತೋಟಗಳಿಗೂ ಜೀವ ಬಂದಂತಾಗಿದ್ದು ಕೊಳವೆ ಬಾವಿಗಳ ಯಂತ್ರಗಳಿಗೂ ವಿಶ್ರಾಂತಿ ಸಿಕ್ಕಿದೆ.

Categories
ಮಲ್ನಾಡ್ ರಾಜ್ಯ ಹವಾಮಾನ ಸುದ್ದಿ

ಯುಗಾದಿ ಹಬ್ಬಕ್ಕೆ ಮಳೆ!

ಯುಗಾದಿ ಹಬ್ಬಕ್ಕೆ ಮಳೆ!
– ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ
– ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
– ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

NAMMUR EXPRESS NEWS
ಬೆಂಗಳೂರು : ಇಂದಿನಿಂದ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಾವಣಗೆರೆ, ತುಮಕೂರು, ಬಾಗಲಕೋಟೆ, ಬೀದರ್, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಕರಾವಳಿ, ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯಾಗಲಿದೆ. ಇಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

– ಈ ಜಿಲ್ಲೆಗಳಲ್ಲಿ ನಾಳೆ ಮಳೆ ಸಾಧ್ಯತೆ

ಏಪ್ರಿಲ್ 9 ರಂದು ದಕ್ಷಿಣ ಕನ್ನಡ, ಉಡುಪಿ, ಬೀದ‌ರ್, ಕಲಬುರಗಿ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Categories
ರಾಜ್ಯ ಹವಾಮಾನ ಸುದ್ದಿ

ಹೇಗಿದೆ ಈ ವರ್ಷದ ಮಳೆಗಾಲ?

ಹೇಗಿದೆ ಈ ವರ್ಷದ ಮಳೆಗಾಲ?
– 2024ರ ಮಳೆ ನಕ್ಷತ್ರಗಳು ಯಾವುದು?
– ಭರ್ಜರಿ ಮುಂಗಾರು ಮಳೆ ಮುನ್ಸೂಚನೆ

NAMMUR EXPRESS NEWS
ರಾಜ್ಯದಲ್ಲಿ ಎಲ್ಲೆಡೆ ಬರಗಾಲ ತಾಂಡವವಾಡುತ್ತಿದೆ. ರಣ ಬಿಸಿಲು ಜನ-ಜಾನುವಾರುಗಳ ಜೀವ ಹಿಂಡುತ್ತಿದೆ. ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ರಾಜ್ಯದ ಅಲ್ಲಲ್ಲಿ ಬೇಸಿಗೆ ಮಳೆ ಹನಿಯುತ್ತಿದೆಯಾದರೂ ತಾಪಮಾನ ಮಾತ್ರ 42 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದೆ. ಹಾಗಿದ್ದರೆ, ಮಳೆಗಾಲ ಯಾವಾಗ ಆರಂಭವಾದೀತು? ಬಿಸಿಲಿನ ಆರ್ಭಟಕ್ಕೆ ಬಾಯಿ ತೆರೆದಿರುವ ಭೂಮಿಯ ಒಡಲು ಯಾವಾಗ ತಂಪುಗೊಂಡೀತು? ನೀರಿನ ಹಾಹಾಕಾರಕ್ಕೆ ಕೊನೆ ಯಾವಾಗ? ಎಂಬ ಹಲವು ಪ್ರಶ್ನೆಗಳು ಜನಮನದಲ್ಲಿ ಚರ್ಚೆಯಾಗುತ್ತಿವೆ.

– ಭರ್ಜರಿ ಮುಂಗಾರು ಮಳೆ ಮುನ್ಸೂಚನೆ

ಸಾಮಾನ್ಯವಾಗಿ ಅಶ್ವಿನಿ ಮಳೆ ವರ್ಷದ ಮೊದಲ ಮಳೆಯಾದರೂ ಅಪ್ಪಟ ಮಳೆಗಾಲ ಆರಂಭವಾಗುವುದು ಜೂನ್ ಮೊದಲ ವಾರದಲ್ಲಿ. ‘ಆರಿದ್ರಾ’ ಮಳೆಯಿಂದ ಮುಂಗಾರು ಮಳೆ ಶುರುವಾಗುತ್ತದೆ. ಆರಿದ್ರಾದಿಂದ ವಿಶಾಖದ ವರೆಗೂ ಮಳೆಗಾಲವಿರುತ್ತದೆ. ಹವಾಮಾನ ಇಲಾಖೆ ಈ ವರ್ಷ ಮುಂಗಾರು ಮಳೆ ಉತ್ತಮವಾಗಲಿದೆ ಎಂಬ ಮಾಹಿತಿ ನೀಡಿದೆ. ಮಧ್ಯಮ-ಶ್ರೇಣಿಯ ಹವಾಮಾನ ಮುನ್ಸೂಚನೆಯ ಯೂರೋಪಿಯನ್‌ ಕೇಂದ್ರವು ಕರ್ನಾಟಕದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಮಾಹಿತಿ ಆಧರಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರವು’ ಬಾರಿಯ ಮುಂಗಾರು ಮುನ್ನೋಟ ಚೆನ್ನಾಗಿದೆ. ಕರ್ನಾಟಕದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ’ ಎಂದು ಮಾಹಿತಿ ಹಂಚಿಕೊಂಡಿದೆ.

– ಮಳೆ ನಕ್ಷತ್ರಗಳ ಮಾಹಿತಿ

ಅನಾದಿ ಕಾಲದಿಂದಲೂ ನಮ್ಮ ಪೂರ್ವಜರು ಮಳೆ ನಕ್ಷತ್ರಗಳ ಲೆಕ್ಕಾಚಾರದ ಆಧಾರದ ಮೇಲೆ ಇಂತಿಷ್ಟೇ ಮಳೆ ಆಗಬಹುದು ಎಂದು ನಿರ್ಣಯಿಸುತ್ತ ಬಂದಿದ್ದಾರೆ. ನಮ್ಮ ಪಂಚಾಂಗಗಳಲ್ಲಿ ಮಳೆ ನಕ್ಷತ್ರಗಳ ಉಲ್ಲೇಖವಿದೆ. ಜ್ಯೋತಿಷ್ಯಶಾಸ್ತ್ರವು 16 ಮಳೆ ನಕ್ಷತ್ರಗಳನ್ನು ಗುರುತಿಸಿದೆ. ಇದರಲ್ಲಿ ಮೊದಲ 5 ನಕ್ಷತ್ರಗಳು ಬೇಸಿಗೆ ಮಳೆಗಳಾಗಿದ್ದು: ಮಳೆ ಬರುವ ಸಾಧ್ಯತೆ ಅಷ್ಟಾಗಿ ಇರುವುದಿಲ್ಲ. ಪಂಚಾಂಗದ ಪ್ರಕಾರ ಜೂನ್ ತಿಂಗಳ ಮೊದಲ ವಾರ ಅಪ್ಪಟ ಮಳೆಗಾಲ ಆರಂಭವಾಗುತ್ತದೆ. ಉಳಿದ 11 ನಕ್ಷತ್ರಗಳಾದ ಆರಿದ್ರಾ, ಪುನರ್ವಸು, ಪುಷ್ಯ ಆಶ್ಲೇಷ, ಮಖ, ಪುಬ್ಬ ಉತ್ತರ, ಹಸ್ತ, ಚಿತ್ತ, ಸ್ವಾತಿ ಹಾಗೂ ವಿಶಾಖ ನಕ್ಷತ್ರಗಳು ಅಪ್ಪಟ ಮಳೆ ನಕ್ಷತ್ರಗಳೆಂದು ಗುರುತಿಸಲ್ಪಟ್ಟಿವೆ.

2024ರ ಮಳೆ ನಕ್ಷತ್ರಗಳು

2024ನೇ ಸಾಲಿನಲ್ಲಿ 16 ಮಳೆ ನಕ್ಷತ್ರಗಳ ಪೈಕಿ ಯಾವ್ಯಾವ ಮಳೆ ಯಾವ್ಯಾವ ದಿನಾಂಕಗಳAದು ಆರಂಭವಾಗುತ್ತದೆ. ಯಾವ ಪ್ರಮಾಣದಲ್ಲಿ ಮಳೆ ಸುರಿಯುತ್ತದೆ ಎಂಬ ಮಾಹಿತಿ ಇಲ್ಲಿದೆ …

ಬೇಸಿಗೆ ಮಳೆ ನಕ್ಷತ್ರಗಳು

1. ಅಶ್ವಿನಿ ಮಳೆ: ದಿನಾಂಕ-13-4-2024 ಸಾಮಾನ್ಯ ಮಳೆ

2. ಭರಣಿ ಮಳೆ: ದಿನಾಂಕ-27-4-2024 ಸಾಮಾನ್ಯ ಮಳೆ

3. ಕೃತಿಕಾ ಮಳೆ: ದಿನಾಂಕ-11-5-2024 ಉತ್ತಮ ಮಳೆ

4. ರೋಹಿಣಿ ಮಳೆ: ದಿನಾಂಕ-24-5-2024 ಸಾಮಾನ್ಯ ಮಳೆ

5. ಮೃಗಶಿರ ಮಳೆ: ದಿನಾಂಕ 07-06-2024 ಸಾಮಾನ್ಯ ಮಳೆ

ಅಪ್ಪಟ ಮಳೆ ನಕ್ಷತ್ರಗಳು

1. ಆರಿದ್ರಾ ಮಳೆ: ದಿನಾಂಕ 21-06-2024 ಸಾಮಾನ್ಯ ಮಳೆ

2. ಪುನರ್ವಸು ಮಳೆ: ದಿನಾಂಕ 05-7-2024 ಸಾಮಾನ್ಯ ಮಳೆ

3. ಪುಷ್ಯ ಮಳೆ: ದಿನಾಂಕ-19-7-2024 ಉತ್ತಮ ಮಳೆ

4. ಆಶ್ಲೇಷ ಮಳೆ: ದಿನಾಂಕ-02-08-2024 ಸಾಮಾನ್ಯ ಮಳೆ

5. ಮಾಘೆ ಮಳೆ: ದಿನಾಂಕ 16-08-2024 ಉತ್ತಮ ಮಳೆ

6. ಹುಬ್ಬಮಳೆ: ದಿನಾಂಕ-30-8-2024 ಸಾಮಾನ್ಯ ಮಳೆ

7. ಉತ್ತರ ಮಳೆ: ದಿನಾಂಕ-13-09-2024 ಸಾಮಾನ್ಯ ಮಳೆ

8. ಹಸ್ತ ಮಳೆ: ದಿನಾಂಕ-26-09-2024 ಉತ್ತಮ ಮಳೆ

9. ಚಿತ್ತ ಮಳೆ: ದಿನಾಂಕ-10-10-2024 ಉತ್ತಮ ಮಳೆ

10. ಸ್ವಾತಿ ಮಳೆ: ದಿನಾಂಕ-23-10-2024 ಸಾಮಾನ್ಯ ಮಳೆ

11. ವಿಶಾಖ ಮಳೆ: ದಿನಾಂಕ-6-11-2024 ಸಾಮಾನ್ಯ ಮಳೆ

ಹೀಗೆ ಮೇಲ್ಕಾಣಿಸಿದ ದಿನಾಂಕಗಳಂದು ಆಯಾಯ ಮಳೆ ನಕ್ಷತ್ರಗಳು ಆರಂಭವಾಗಲಿದ್ದು: ಈ ಮಳೆಗಳು ಸುರಿಯುವ ಪ್ರಮಾಣದಲ್ಲಿ ಏರಿಳಿತವಾಗಬಹುದು ಎಂದು ಪಂಚಾಂಗದಲ್ಲಿ ನಮೂದಿಸಲಾಗಿದೆ.

Categories
ಮಂಗಳೂರು ರಾಜ್ಯ ಹವಾಮಾನ ಸುದ್ದಿ

ಎಪ್ರಿಲ್ – ಜೂನ್ ತನಕ ರಾಜ್ಯದ ಹಲವಡೆ ತಾಪಮಾನ ಏರಿಕೆ ಸಂಭವ..!

ಎಪ್ರಿಲ್ – ಜೂನ್ ತನಕ ರಾಜ್ಯದ ಹಲವಡೆ ತಾಪಮಾನ ಏರಿಕೆ ಸಂಭವ..!
– ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

NAMMUR EXPRESS NEWS
ಮಂಗಳೂರು: ಈ ವರ್ಷದ ಬೇಸಿಗೆಯಲ್ಲಿ ಎಪ್ರಿಲ್‌ನಿಂದ ಜೂನ್ ತನಕ ರಾಜ್ಯದ ಹಲವಡೆ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಎ.2 ರಿಂದ 14 ದಿನಗಳ ಕಾಲ ಬಿಸಿಗಾಳಿ ಸಾಧ್ಯತೆಗಳಿದ್ದು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಾದ ಚಿತ್ರದುರ್ಗ ಗದಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆ ಗಳಲ್ಲಿ ಬಿಸಿಗಾಳಿ ಕಾಣಿಸಿಕೊಳ್ಳಲಿದೆ. ಬಿಸಿಗಾಳಿ ಸಂದರ್ಭಗಳಲ್ಲಿ ಅತ್ಯಧಿಕ ತಾಪಮಾನವು ವೃದ್ಧರು, ಮಕ್ಕಳು ಹಾಗೂ ಆನಾರೋಗ್ಯಪೀಡಿತರ ಮೇಲೆ ಪರಿಣಾಮ ಬೀರಲಿದ್ದು, ಮುಖ್ಯವಾಗಿ ಶಾಖದೊತ್ತಡ, ನಿರ್ಜಲೀಕರಣ ಆಯಾಸ ಕಂಡು ಬರಲಿದೆ. ಮೂಲ ಸೌಕರ್ಯಗಳಾದ ವಿದ್ಯುತ್ ಸರಬರಾಜು ಮತ್ತು ಸಾರಿಗೆ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದೆ.

ಈ ಸವಾಲುಗಳನ್ನು ಎದುರಿಸಲು ಅಧಿಕಾರಿಗಳು ಪೂರ್ವಭಾವಿ ಕ್ರಮ ಕೈಗೊಳ್ಳುವುದು ಅಗತ್ಯ. ಬಿಸಿಗಾಳಿ ಪರಿಣಾಮಗಳನ್ನು ನಿವಾರಿಸಲು ಕಾರ್ಯತಂತ್ರಗಳನ್ನು ರೂಪಿಸಬೇಕಾಗಿದೆ. ಸಾರ್ವಜನಿಕ ಆರೋಗ್ಯವನ್ನು ಕಾಪಾಡಲು ಮತ್ತು ಬಿಸಿಗಾಳಿಯ ಪ್ರತಿಕೂಲ ಪರಿಣಾಮಗಳನ್ನು ಕಡಿಮೆ ಮಾಡಲು ಇಂತಹ ಪ್ರಯತ್ನ ಅತ್ಯಗತ್ಯ ಎಂದು ಇಲಾಖೆ ಸಲಹೆ ನೀಡಿದೆ.

ಗರಿಷ್ಠ ತಾಪಮಾನ : 2024ರ ಎಪ್ರಿಲ್ ತಿಂಗಳಲ್ಲಿ ಗರಿಷ್ಠ ತಾಪಮಾನ ರಾಜ್ಯದ ಹಲವೆಡೆ ವಾಡಿಕೆಗಿಂತ ಅಧಿಕವಾಗಿರುವ ಮತ್ತು ಕನಿಷ್ಠ ತಾಪಮಾನವು ಅಧಿಕವಾಗುವ ಸಾಧ್ಯತೆ ಇದೆ.

ಮಳೆ ಮುನ್ಸೂಚನೆ : ರಾಜ್ಯದ ಉತ್ತರ ಒಳನಾಡಿನ ಜಿಲ್ಲೆ ಗಳಲ್ಲಿ ವಾಡಿಕೆಗಿಂತಾ ಅಧಿಕ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆ ಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Categories
ಬೆಂಗಳೂರು ರಾಜ್ಯ ಹವಾಮಾನ ಸುದ್ದಿ

ರಾಜ್ಯದ ಹಲವೆಡೆ ಮಳೆ ಆರ್ಭಟ..!

ರಾಜ್ಯದ ಹಲವೆಡೆ ಮಳೆ ಆರ್ಭಟ..!
– ಸಿಡಿಲು ಬಡಿದು ಕುರಿಗಾಹಿ ಸಾವು
– ಮಾ.20ರಿಂದ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಸೂಚನೆ

NAMMUR EXPRESS NEWS
ಬೆಂಗಳೂರು: ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯಂತೆ ರಾಜ್ಯದ ಹಲವು ಕಡೆ ಮಳೆಯಾಗಿದೆ. ಸಿಡಿಲಿಗೆ ಕುರಿಗಾಹಿ ಬಲಿಯಾಗಿದ್ದಾರೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಲವು ಕಡೆ ಬಿರುಗಾಳಿ ಸಹಿತ ಮಳೆಯಾಗಿದೆ, ಕಿಷ್ಟಪುರ ಗ್ರಾಮದಲ್ಲಿ ಸಿಡಿಲು ಬಡಿದು ಕುರಿಗಾಹಿ ಶಾಂತಕುಮಾರ(30) ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಕಿಷ್ಟಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಮಳೆಯಿಂದ ಆಶ್ರಯ ಪಡೆಯಲು ಮರದ ಕೆಳಗೆ ನಿಂತಿದ್ದಾಗ ಘಟನೆ ನಡೆದಿದ್ದು, ಕಿಷ್ಟಪುರ ಗ್ರಾಮದ ಕುರಿಗಾಹಿ ಶಾಂತಕುಮಾರ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಮುಧೋಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಡಗು ಜಿಲ್ಲೆಯ ವಿವಿಧ ಕಡೆಗಳಲ್ಲಿ ಸೋಮವಾರ ಮಳೆಯಾಗಿದೆ. ಭಾರಿ ಬಿಸಿಲಿನ ವಾತಾವರಣದ ನಡುವೆ ಮಳೆಯಾಗಿದ್ದು ಕೊಡಗಿನ ಕುಂಜಿಲಗೇರಿ, ಬೊಳ್ಳುಮಾಡು, ದುಬಾರೆ, ಸಿದ್ದಾಪುರ, ಒಂಟಿಯಂಗಡಿ, ಚೆಯ್ಯಂಡಾಣೆ ಮೊದಲಾದ ಕಡೆ ಉತ್ತಮ ಮಳೆಯಾಗಿದ್ದು, ಜನರಿಗೆ ಸಂತಸ ತಂದಿದೆ. ಕಾಫಿ ಫಸಲಿಗೆ ಹೂವು ಅರಳಲು ಈ ವೇಳೆ ಮಳೆ ಅಗತ್ಯವಾಗಿತ್ತು. ಮಾ. 20ರಿಂದ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.