Categories
ಹವಾಮಾನ ಸುದ್ದಿ

ನಾಲ್ಕು ವಾರ ಮಳೆ ಅಲರ್ಟ್!

ನಾಲ್ಕು ವಾರ ಮಳೆ ಅಲರ್ಟ್!
– ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
– ಮಲೆನಾಡು, ಕರಾವಳಿ ಸೇರಿ ಎಲ್ಲಾ ಕಡೆ ಮಳೆ

NAMMUR EXPRESS NEWS
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದೆ. ಇನ್ನು ಸೆಪ್ಟೆಂಬರ್ ತಿಂಗಳು ಆರಂಭದಿಂದ ಇಲ್ಲಿಯವರೆಗೂ ಕರಾವಳಿ ಜಿಲ್ಲೆಗಳ ಕೆಲವೆಡೆ ಹಾಗೂ ಮಲೆನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಾತ್ರ ಆಗಾಗ ಮಳೆ ಸುರಿಯುತ್ತಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಬರೀ ಬಿಸಿಲಿನ ವಾತಾವರಣವೇ ಮುಂದುವರೆದಿದೆ. ಇನ್ನು ಸೆಪ್ಟೆಂಬರ್ ಕೊನೆಯ ವಾರದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಅಲ್ಲದೆ ಕರ್ನಾಟಕದ ಮುಂದಿನ ನಾಲ್ಕು ವಾರಗಳ ಹವಾಮಾನ ವರದಿ ನೀಡಿದ್ದು, ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ತಿಳಿಸಿದೆ.

ಮುಂದಿನ ನಾಲ್ಕು ವಾರಗಳ ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕವಾಗಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಆಗ್ನೇಯ ಭಾರತದಿಂದ ನೈಋತ್ಯ ಮಾನ್ಸೂನ್ ಮುಂದಿನ ವಾರದಿಂದ ಚಲಿಸಲಿದೆ. ಅಕ್ಟೋಬರ್ 2 ರಿಂದ ಮಧ್ಯಭಾರತದಿಂದ ಸಾಗಲಿದೆ. ಅಕ್ಟೋಬರ್ ಕೊನೆಯ ವಾರದವರೆಗೆ ರಾಜ್ಯದಲ್ಲಿ ಮಳೆ ಇರಲಿದ್ದು, ನಂತರ ಮುಂಗಾರು ಮುಕ್ತಾಯವಾಗಲಿದೆ ಎಂದು ಹೇಳಿದೆ. ಅಕ್ಟೋಬರ್ ತಿಂಗಳ ಮೊದಲ ಮೂರು ವಾರಗಳ ಕಾಲ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾದರೆ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

3 ದಿನ ಭಾರೀ ಮಳೆ

ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು, ಮಿಂಚು ಸಹಿತ ಮಳೆ ಮುನ್ಸೂಚನೆ ಇದೆ.
ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರಕ್ಕೂ ಮಳೆ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಪಶ್ಚಿಮ ಭಾಗದಲ್ಲಿ ಹೆಚ್ಚು ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.

Categories
ಹವಾಮಾನ ಸುದ್ದಿ

ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಭಾರೀ ಮಳೆ!

ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಭಾರೀ ಮಳೆ!
-ಮುಂದಿನ 2 ದಿನ ಮಳೆಯಾಗುವ ಸಾಧ್ಯತೆ.
– ಯೆಲ್ಲೋ ಅಲರ್ಟ್ ಘೋಷಣೆ.

NAMMUR EXPRESS NEWS
ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ವೇಳೆ ಗಾಳಿಯ ವೇಗವು ಗಂಟೆಗೆ 30, 40 ಕಿ.ಮೀ ವೇಗದಲ್ಲಿ ಬೀಸಲಿದೆ.

ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಜೋರಾಗಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಅದರಂತೆ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಜೋರಾಗಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಅಲ್ಲೂ ಕೂಡ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Categories
ಹವಾಮಾನ ಸುದ್ದಿ

ಬಿಸಿಲು ನೋಡಿ ಜನರು ಕಂಗಾಲು!

ಬಿಸಿಲು ನೋಡಿ ಜನರು ಕಂಗಾಲು!
– ಆ. 20ರಿಂದ ಮತ್ತೆ ಮಳೆ: ಮುಂಗಾರು ಚುರುಕು
– ಕರಾವಳಿಯಲ್ಲಿ ಆ.16ರಿಂದಲೇ ಮಳೆ
– ಎಲ್ಲೆಲ್ಲಿ ಮಳೆ: ಇಲ್ಲಿದೆ ಮಾಹಿತಿ

NAMMUR EXPRESS NEWS
ಬೆಂಗಳೂರು: ಈಗಿನ ಬಿಸಿಲು ನೋಡಿದರೆ ಇದು ಮಳೆಗಾಲವೋ ಅಥವಾ ಬೇಸಿಗೆ ಕಾಲವೋ ಎಂಬ ಗೊಂದಲ ಜನರಲ್ಲಿ ಮೂಡುತ್ತಿದೆ. ಒಂದು ಕಡೆ ಬಿಸಿಲಿನ ಹೊಡೆತಕ್ಕೆ ಸ್ವಲ್ಪ ನೀರು ಆಗಿದ್ದ ನದಿ ತೊರೆಗಳು ಬತ್ತಿ ಹೋಗಿವೆ. ಇದೀಗ ಮತ್ತೆ ಮುಂಗಾರು ಚುರುಕು ಆಗಲಿದೆ. 20ರಿಂದ ಮುಂಗಾರು ಚುರುಕಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ.

ಕರಾವಳಿಯಲ್ಲಿ 16ರಿಂದಲೇ ಚುರುಕು

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆ ಹೆಚ್ಚಾಗಲಿದ್ದು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಆಗಸ್ಟ್ 20ರ ನಂತರ ಮಳೆಯಾಗಲಿದೆ. ಮುನಿರಾಬಾದ್, ಹೊಸಪೇಟೆ, ರಾಯಚೂರು, ಸಿಂಧನೂರಿನಲ್ಲಿ ಮಳೆಯಾಗಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ. ರಾಜ್ಯದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುತ್ತಿದ್ದರೂ ವಾಡಿಕೆ ಪ್ರಮಾಣದ ಮಳೆಯಾಗುತ್ತಿಲ್ಲ. ಕಳೆದ ನಾಲೈದು ವರ್ಷಗಳಿಂದ ಆಗಸ್ಟ್ ತಿಂಗಳಿನಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿತ್ತು. ಈ ವರ್ಷ ಮುಂಗಾರು ದುರ್ಬಲಗೊಂಡು ಮಳೆ ಕೊರತೆ ಎದುರಿಸುವಂತಾಗಿದೆ.

ಇದನ್ನೂ ಓದಿ : ಜನರ ಕಿವಿಗೆ ಹೂ ಮುಡಿಸುತ್ತಿರುವ ಕಾಂಗ್ರೆಸ್ ಸರ್ಕಾರ!

[embedyt] https://www.youtube.com/watch?v=p9w93rFeg28%5B/embedyt%5D

Categories
ಹವಾಮಾನ ಸುದ್ದಿ

3 ದಿನ ಭಾರೀ ಮಳೆ ಅಲರ್ಟ್!

3 ದಿನ ಭಾರೀ ಮಳೆ ಅಲರ್ಟ್!
– ಕರಾವಳಿ, ಮಲೆನಾಡು ಸೇರಿ ರಾಜ್ಯದಲ್ಲಿ ಭಾರೀ ಮಳೆ
– ಶಾಲೆ, ಪಿಯು ಕಾಲೇಜಿಗೆ ರಜೆ: ಹಲವು ಮಂದಿ ಸಾವು
– ನದಿಗಳ ನೀರು ಹೆಚ್ಚಳ: ರಾಜಧಾನಿಯಲ್ಲಿ ಮಳೆ

NAMMUR EXPRESS NEWS
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡಲ್ಲಿ ಭಾರೀ ಮಳೆ ಆಗುತ್ತಿದ್ದು ಅಪಾಯದತ್ತ ಕರುನಾಡು ತಲುಪಿದೆ.
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ರಾಜ್ಯದಲ್ಲಿ ಮಳೆ ಕಾರಣ ಈವರೆಗೆ ಸುಮಾರು 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಹಾವೇರಿಯಲ್ಲಿ ಸಿದ್ದರಾಮಯ್ಯ ನೆರೆ ವೀಕ್ಷಣೆ ಮಾಡಿದ್ದಾರೆ.

ಮಲೆನಾಡಲ್ಲಿ ಭಾರೀ ಮಳೆ ಅವಾಂತರ!

ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ, ಕೆಮ್ಮಣ್ಣು ಗುಂಡಿ ಭಾಗದಲ್ಲಿ ಹಲವು ಕಡೆ ಗುಡ್ಡ ಕುಸಿದಿದೆ. ಮೂಡಿಗೆರೆಯ ಸಾಲುಮನೆ ಶಿವಣ್ಣ ಎಂಬುವರ ಮನೆ ಕುಸಿದಿದೆ. ಶಿವಮೊಗ್ಗ ಜಿಲ್ಲೆ ಸಾಗರ, ಹೊಸನಗರ, ತೀರ್ಥಹಳ್ಳಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ತುಂಗಾ, ವರದಾ, ಭದ್ರ, ಶರಾವತಿ ನದಿ ಅಪಾಯ ಮಟ್ಟದಲ್ಲಿ ಸುರಿಯುತ್ತಿದೆ.

ಮಧ್ಯ ಕರ್ನಾಟಕದಲ್ಲಿ ಇಬ್ಬರು ಮಕ್ಕಳು ಬಲಿ

ದಾವಣಗೆರೆ, ಹಾವೇರಿಯಲ್ಲಿ ಇಬ್ಬರು ಮಕ್ಕಳು ಸಾವನ್ನು ಕಂಡಿವೆ. ಇನ್ನು ವಿಜಯಪುರ ಶಿವಪುರದಲ್ಲೂ ಓರ್ವ ಅಜ್ಜಿ ಮೃತಪಟ್ಟಿದ್ದಾಳೆ. ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಒಂದೆರಡು ಕಡೆ ಭಾರಿ ಮಳೆ ಸಾಧ್ಯತೆ ಇದ್ದು, ಈ ಹಿನ್ನೆಲೆ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಬಾರೀ ಮಳೆ ಸಾಧ್ಯತೆ ಇದ್ದು, ಕರಾವಳಿಗೆ ಮಂಗಳವಾರ ರೆಡ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬುಧವಾರ ಮತ್ತು ಗುರುವಾರ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ,ಚಿಕ್ಕಮಗಳೂರು, ಕೊಡಗು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಹಾಸನ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬುಧವಾರದಿಂದ 4 ದಿನಗಳ ಕಾಲ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ 5 ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜಧಾನಿಯಲ್ಲೂ ಭಾರೀ ಮಳೆ!

ರಾಜಧಾನಿ ಬೆಂಗಳೂರಲ್ಲೂ ಕಳೆದ 3-4 ದಿನಗಳಿಂದ ಭಾರೀ ಮಳೆ ಆಗುತ್ತಿದೆ. ಹೀಗೆ ಮಳೆ ಮುಂದುವರಿದಲ್ಲಿ ಭಾರೀ ಅನಾಹುತ ಸಂಭವಿಸಲಿದೆ. ಮಳೆ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಕಂಡು ಬರುತ್ತಿದೆ.

ಇದನ್ನೂ ಓದಿ : ತೀರ್ಥಹಳ್ಳಿ ಹುಡುಗನ ಅನುಮಾನಾಸ್ಪದ ಸಾವು!

HOW TO APPLY : NEET-UG COUNSELLING 2023

Categories
ಕರಾವಳಿ ಮಲ್ನಾಡ್ ಹವಾಮಾನ ಸುದ್ದಿ

ಅಂತೂ ಶುರುವಾಯ್ತು ಮಳೆ – ಕರಾವಳಿ, ಮಲೆನಾಡಿಗೆ ಅಲರ್ಟ್

ಅಂತೂ ಶುರುವಾಯ್ತು ಮಳೆ..!
– ಕರಾವಳಿ, ಮಲೆನಾಡು ಸೇರಿ ಎಲ್ಲೆಡೆ ಮಳೆ ಆರಂಭ
– ಕರಾವಳಿ, ಮಲೆನಾಡಿಗೆ ಅಲರ್ಟ್

NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ನಿಧಾನಕ್ಕೆ ಮಳೆ ಸೆಟ್ ಆಗುತ್ತಿದೆ. ಕಳೆದೊಂದು ವಾರದಿಂದ
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ವಾರದಿಂದ ಉತ್ತಮ ಮಳೆಯಾಗುತ್ತಿದೆ. ಆದ್ರೆ ಈ ಬಾರಿ ಮಲೆನಾಡಲ್ಲಿ ಇನ್ನು ಮಳೆ ಶುರುವಾಗಿಲ್ಲ. ಬೆಂಗಳೂರಲ್ಲಿ ಮಳೆ ಹೆಚ್ಚೇ ಸುರಿಯುತ್ತಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 5ರವರೆಗೂ ವರುಣನ ಆರ್ಭಟ ಹೆಚ್ಚಾಗಲಿದೆ. ಹೀಗಾಗಿ ಜುಲೈ 6 ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಯಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಜುಲೈ 3ರಂದು ಭಾರಿ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳ ಪೈಕಿ ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಭಾರೀ ಮಳೆ ಸುರಿದಿದೆ. ಅಂಕೋಲಾ, ಗೋಕರ್ಣ, ಕುಮಟಾದಲ್ಲಿ ತಲಾ 9 ಸೆಂ.ಮೀ, ಮಳೆಯಾಗಿದ್ದರೆ, ಹೊನ್ನಾವರದಲ್ಲಿ 8 ಸೆಂ.ಮೀ., ಶಿರಾಲಿ, ಕಾರವಾರದಲ್ಲಿ ತಲಾ 7 ಸೆಂ.ಮೀ., ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ 6 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ.
ಜುಲೈ 3ರವರೆಗೆ ಕರಾವಳಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದ್ದರೆ, ಜುಲೈ 4 ಮತ್ತು 5 ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರುವಂತೆ ಎಚ್ಚರಿಕೆ ವಹಿಸಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿ ಈಗಾಗಲೇ ಸೂಚಿಸಿದೆ.
ಮಲೆನಾಡಲ್ಲಿಯೂ ಮಳೆ ಎಚ್ಚರಿಕೆ ಇದೆ.

ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!!

HOW TO APPLY : NEET-UG COUNSELLING 2023

Categories
ಹವಾಮಾನ ಸುದ್ದಿ

ಜುಲೈ 3 ರವರೆಗೆ ಭಾರೀ ಮಳೆ!

ಜುಲೈ 3 ರವರೆಗೆ ಭಾರೀ ಮಳೆ!

– ಕರಾವಳಿಯಲ್ಲಿ ಮಳೆ ಆರ್ಭಟ: ಎಚ್ಚರ ಎಚ್ಚರ
– ಕರಾವಳಿಯಲ್ಲಿ ಎಲ್ಲೋ ಅಲರ್ಟ್
– ಮಲೆನಾಡಲ್ಲೂ ಮಳೆ ಸಾಧ್ಯತೆ

NAMMUR EXPRESS NEWS
ಬೆಂಗಳೂರು: ರಾಜ್ಯದ ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಜೂನ್ 30 ರಿಂದ  ಜುಲೈ 03ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೊ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರು, ಕೊಡಗು, ವಿಜಯನಗರ ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ಮತ್ತು ಶಿವಮೊಗ್ಗ ಉತ್ತರ ಒಳನಾಡಿನ ಚಾಮರಾಜನಗರ, ಕೋಲಾರ, ಬೀದರ್, ಕಲಬುರಗಿ, ವಿಜಯಪುರ, ಮೈಸೂರು, ರಾಮನಗರ, ಹಾಸನ, ಕೊಪ್ಪಳ, ರಾಯಚೂರು, ಧಾರವಾಡ,ಬೆಳಗಾವಿ, ಹಾವೇರಿ, ಗದಗ, ಯಾದಗಿರಿ ಮತ್ತು ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬುಧವಾರ ರಾತ್ರಿಯಿಂದ ಗುರುವಾರ ಬೆಳಗ್ಗೆವರೆಗೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ 7 ಸೆಂ.ಮೀ, ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್‌ರಾಕ್‌ನಲ್ಲಿ 6 ಸೆಂ.ಮೀ, ಉತ್ತರ ಕನ್ನಡ ಜಿಲ್ಲೆಯ ಶಿರಾಲಿ, ಗೋಕರ್ಣ, ಅಂಕೋಲಾ, ಕಾರವಾರದಲ್ಲಿ ತಲಾ 5 ಹಾಗೂ ಕದ್ರಾ, ಹೊನ್ನಾವರ ಮತ್ತು ಕುಮಟಾದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.

ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!!

HOW TO APPLY : NEET-UG COUNSELLING 2023